ಪಾಂಡ್ಯ ಬ್ರದರ್ಸ್​ ಕನಸನ್ನು ನುಚ್ಚು ನೂರು ಮಾಡಿದ ರಹಾನೆ- ಅಯ್ಯರ್; ಫೈನಲ್​ಗೇರಿದ ಮುಂಬೈ

Syed Mushtaq Ali Trophy 2024: ಮುಂಬೈ ತಂಡವು ಸಯ್ಯದ್ ಮುಷ್ಟಾಕ್ ಅಲಿ ಟಿ20 ಟ್ರೋಫಿಯ ಸೆಮಿಫೈನಲ್‌ನಲ್ಲಿ ಬರೋಡಾವನ್ನು 6 ವಿಕೆಟ್‌ಗಳಿಂದ ಸೋಲಿಸಿ ಫೈನಲ್‌ಗೆ ಪ್ರವೇಶಿಸಿದೆ. ಅಜಿಂಕ್ಯ ರಹಾನೆ ಅವರ 98 ರನ್‌ಗಳ ಅದ್ಭುತ ಇನ್ನಿಂಗ್ಸ್ ಮತ್ತು ಶ್ರೇಯಸ್ ಅಯ್ಯರ್ ಅವರ 46 ರನ್‌ಗಳ ಸಹಾಯದಿಂದ ಮುಂಬೈ 164 ರನ್‌ಗಳ ಗುರಿಯನ್ನು ಸುಲಭವಾಗಿ ಸಾಧಿಸಿತು.

ಪಾಂಡ್ಯ ಬ್ರದರ್ಸ್​ ಕನಸನ್ನು ನುಚ್ಚು ನೂರು ಮಾಡಿದ ರಹಾನೆ- ಅಯ್ಯರ್; ಫೈನಲ್​ಗೇರಿದ ಮುಂಬೈ
ಮುಂಬೈ ತಂಡ
Follow us
ಪೃಥ್ವಿಶಂಕರ
|

Updated on:Dec 13, 2024 | 3:15 PM

ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ಪೃಥ್ವಿ ಶಾ ಅವರಂತಹ ಸ್ಟಾರ್​ ಬ್ಯಾಟ್ಸ್‌ಮನ್‌ಗಳಿಂದ ಕಂಗೊಳಿಸುತ್ತಿರುವ ಮುಂಬೈ ತಂಡ, ಸೈಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿಯ ಸೆಮಿಫೈನಲ್‌ ಪಂದ್ಯದಲ್ಲಿ ಪಾಂಡ್ಯ ಬ್ರದರ್ಸ್ ನೇತೃತ್ವದ ಬರೋಡಾ ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿದೆ. ಈ ಮೂಲಕ ಮುಂಬೈ ತಂಡ ಎರಡನೇ ಬಾರಿಗೆ ಈ ಟ್ರೋಫಿಯ ಫೈನಲ್ ತಲುಪಿದೆ. ಈ ಹಿಂದೆ 2022-23ರಲ್ಲಿ ಮೊದಲ ಬಾರಿಗೆ ಫೈನಲ್ ತಲುಪಿದ್ದ ಮುಂಬೈ ತಂಡ ಚೊಚ್ಚಲ ಬಾರಿಗೆ ಚಾಂಪಿಯನ್ ಆಗಿತ್ತು. ಇತ್ತ ಮುಂಬೈ ವಿರುದ್ಧ ಸೋತಿರುವ ಬರೋಡಾ ತಂಡ ಆರನೇ ಬಾರಿಗೆ ಫೈನಲ್ ಆಡುವ ಅವಕಾಶದಿಂದ ವಂಚಿತವಾಗಿದೆ.

ಮಿಂಚಿದ ರಹಾನೆ, ಫೈನಲ್​ಗೆ ಮುಂಬೈ

ಉಭಯ ತಂಡಗಳ ನಡುವೆ ನಡೆದ ಈ ಸೆಮಿಫೈನಲ್ ಪಂದ್ಯದಲ್ಲಿ ಮುಂಬೈ ಗೆಲುವಿನಲ್ಲಿ ಅಜಿಂಕ್ಯ ರಹಾನೆ ಅವರ ಪಾತ್ರ ಅಪಾರವಾಗಿತ್ತು. ಈ ಪಂದ್ಯದಲ್ಲೂ ತಮ್ಮ ಅಮೋಘ ಫಾರ್ಮ್ ಮುಂದುವರೆಸಿದ ರಹಾನೆ ಮೊದಲಿಗೆ, ಅಯ್ಯರ್ ಅವರೊಂದಿಗೆ ಎರಡನೇ ವಿಕೆಟ್‌ಗೆ 88 ರನ್‌ಗಳ ಜೊತೆಯಾಟವನ್ನು ಮಾಡಿದರು. ಇದರ ಜೊತೆಗೆ ತಂಡದ ಸ್ಕೋರ್ ಅನ್ನು 118 ರನ್‌ಗಳಿಗೆ ಕೊಂಡೊಯ್ದರು. ಈ ವೇಳೆ ರಹಾನೆ 56 ಎಸೆತಗಳಲ್ಲಿ 11 ಬೌಂಡರಿ ಹಾಗೂ 5 ಸಿಕ್ಸರ್‌ಗಳ ನೆರವಿನಿಂದ 98 ರನ್ ಗಳಿಸಿ ಕೇವಲ 2 ರನ್​ಗಳಿಂದ ಶತಕವಂಚಿತಾದರು.

ರಹಾನೆ ಜೊತೆ ಉತ್ತಮ ಜೊತೆಯಾಟ ಕಟ್ಟಿದ ಶ್ರೇಯಸ್ ಅಯ್ಯರ್ ಕೂಡಲೇ 30 ಎಸೆತಗಳಲ್ಲಿ 46 ರನ್​ಗಳ ಕಾಣಿಕೆ ನೀಡಿದರು. ಇದರಲ್ಲಿ 4 ಬೌಂಡರಿ ಮತ್ತು 3 ಸಿಕ್ಸರ್‌ಗಳು ಸೇರಿದ್ದವು. ಇತ್ತ ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ ಸೆಮಿಫೈನಲ್‌ನಲ್ಲಿಯೂ ವಿಫಲರಾದರು. ಅಂತಿಮವಾಗಿ ಮುಂಬೈ ತಂಡ 17.2 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 164 ರನ್ ಗಳಿಸಿತು. ಹೀಗಾಗಿ ಪಂದ್ಯವನ್ನು 6 ವಿಕೆಟ್‌ಗಳಿಂದ ಗೆದ್ದುಕೊಂಡಿತು.

158 ರನ್​ಗಳ ಗುರಿ ನೀಡಿದ ಬರೋಡಾ

ಇದಕ್ಕೂ ಮುನ್ನ ಮೊದಲು ಬ್ಯಾಟ್ ಮಾಡಿದ ಬರೋಡಾ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 158 ರನ್ ಗಳಿಸಿತು. ಬರೋಡಾ ಪರ ಕೃನಾಲ್ ಪಾಂಡ್ಯ 30 ರನ್ ಗಳಿಸಿದರು. ಆದರೆ ತಂಡದ ಸ್ಟಾರ್ ಬ್ಯಾಟರ್ ಹಾರ್ದಿಕ್ ಪಾಂಡ್ಯ ಈ ಮಹತ್ವದ ಪಂದ್ಯದಲ್ಲಿ ಎರಡಂಕಿಯನ್ನು ಮುಟ್ಟಲಿಲ್ಲ. ಹಾರ್ದಿಕ್ ಕೇವಲ 5 ರನ್ ಗಳಿಸಲಷ್ಟೇ ಶಕ್ತರಾದರು. ಶಿವಾಲಿಕ್ ಶರ್ಮಾ 36 ರನ್ ಗಳಿಸಿ ಬರೋಡಾ ಪರ ಅಗ್ರ ಸ್ಕೋರರ್ ಎನಿಸಿಕೊಂಡರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:12 pm, Fri, 13 December 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ