AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ನೆಚ್ಚಿನ ಬ್ಯಾಟಿಂಗ್ ಪಾಲುದಾರ’; ರಹಾನೆ ನಿವೃತ್ತಿ ಬಗ್ಗೆ ಕೊಹ್ಲಿ ಹೇಳಿದ್ದಿದು

Ajinkya Rahane Retires: ಭಾರತ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಅಜಿಂಕ್ಯ ರಹಾನೆ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯಲು ಹೆಣಗಾಡುತ್ತಿದ್ದ ರಹಾನೆಗೆ ಅವಕಾಶ ಸಿಗಲಿಲ್ಲ. ತಮ್ಮ 38ನೇ ವಯಸ್ಸಿನಲ್ಲಿ ರಹಾನೆ ಈ ನಿರ್ಧಾರ ಕೈಗೊಂಡಿದ್ದಾರೆ. ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ ಸೇರಿದಂತೆ ಹಲವು ದಿಗ್ಗಜರು ರಹಾನೆ ಅವರ ಅದ್ಭುತ ವೃತ್ತಿಜೀವನಕ್ಕೆ ಶುಭಾಶಯ ಕೋರಿದ್ದಾರೆ.

‘ನನ್ನ ನೆಚ್ಚಿನ ಬ್ಯಾಟಿಂಗ್ ಪಾಲುದಾರ’; ರಹಾನೆ ನಿವೃತ್ತಿ ಬಗ್ಗೆ ಕೊಹ್ಲಿ ಹೇಳಿದ್ದಿದು
Kohli, Rahane
ಪೃಥ್ವಿಶಂಕರ
|

Updated on: Jul 30, 2026 | 10:46 PM

Share

ಭಾರತ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಅಜಿಂಕ್ಯ ರಹಾನೆ (Ajinkya Rahane) ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಟೀಂ ಇಂಡಿಯಾದಲ್ಲಿ (Team India) ಸ್ಥಾನ ಪಡೆಯಲು ಹೆಣಗಾಡುತ್ತಿದ್ದ ರಹಾನೆಗೆ ಯಾವುದೇ ಸ್ಥಾನ ಸಿಗಲಿಲ್ಲ. ಹೀಗಾಗಿ ರಹಾನೆ ತಮ್ಮ ಭವಿಷ್ಯವನ್ನು ಪರಿಗಣಿಸಿ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದಾರೆ. ಅಜಿಂಕ್ಯ ರಹಾನೆ ಭಾರತದ ಪರ 85 ಟೆಸ್ಟ್ ಪಂದ್ಯಗಳನ್ನು ಆಡಿದ್ದು 6 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದರು. ದೇಶೀಯ ಕ್ರಿಕೆಟ್‌ನಲ್ಲಿ ಮುಂಬೈ ಪರ ಆಡಿದ ಅಜಿಂಕ್ಯ ರಹಾನೆ ಹಲವು ವರ್ಷಗಳ ಕಾಲ ಕ್ರಿಕೆಟ್ ಆಡಿದ ನಂತರ ತಮ್ಮ 38 ನೇ ವಯಸ್ಸಿನಲ್ಲಿ ಕ್ರಿಕೆಟ್ ನಿಲ್ಲಿಸಲು ನಿರ್ಧರಿಸಿದ್ದಾರೆ. ರಹಾನೆ ನಿವೃತ್ತಿಯ ಬಗ್ಗೆ ಟೀಂ ಇಂಡಿಯಾದ ದಿಗ್ಗಜ ಕ್ರಿಕೆಟಿಗರು ಏನು ಹೇಳಿದ್ದಾರೆ ಎಂಬುದನ್ನು ನೋಡುವುದಾದರೆ..

ಅದ್ಭುತ ವೃತ್ತಿಜೀವನಕ್ಕೆ ಅಭಿನಂದನೆಗಳು

ರಹಾನೆ ನಿವೃತ್ತಿಯ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಸಚಿನ್ ತೆಂಡೂಲ್ಕರ್, ‘ನಿಮ್ಮ ಗಮನಾರ್ಹ ವೃತ್ತಿಜೀವನಕ್ಕೆ ಅಭಿನಂದನೆಗಳು. ಅಜಿಂಕ್ಯ, ನಾವು ಮೊದಲ ಬಾರಿಗೆ ಮುಂಬೈ ಪರ ಬ್ಯಾಟಿಂಗ್ ಮಾಡಿದಾಗ, ಅವಕಾಶಗಳ ಹಿಂದೆ ಓಡದ ವ್ಯಕ್ತಿಯನ್ನು ನಾನು ನಿನ್ನಲ್ಲಿ ನೋಡಿದೆ. ತಂಡಕ್ಕಾಗಿ ಕಷ್ಟಪಟ್ಟು ಕೆಲಸ ಮಾಡಲು ನೀವು ಸಿದ್ಧರಿದ್ದರಿಂದ ಅವಕಾಶಗಳು ನಿನ್ನನ್ನು ಅರಸಿ ಬರುತ್ತಿದ್ದವು. ತಾಳ್ಮೆ ಆಕ್ರಮಣಶೀಲತೆಗೆ ವಿರುದ್ಧವಲ್ಲ ಎಂದು ನೀನು ತೋರಿಸಿದ್ದೀಯ. ತಾಳ್ಮೆಯು ತಂಡಕ್ಕೆ ನಿರ್ಭೀತರಾಗಿರಲು ಆತ್ಮವಿಶ್ವಾಸವನ್ನು ನೀಡುವಂತದ್ದು. ನಿಮ್ಮ ಅದ್ಭುತ ವೃತ್ತಿಜೀವನಕ್ಕೆ ಅಭಿನಂದನೆಗಳು’ ಎಂದಿದ್ದಾರೆ.

ನನ್ನ ನೆಚ್ಚಿನ ಬ್ಯಾಟಿಂಗ್ ಪಾಲುದಾರ

ಇತ್ತ ರಹಾನೆ ಜೊತೆ ಆಡಿದ ವಿರಾಟ್ ಕೊಹ್ಲಿ ಕೂಡ ಎಕ್ಸ್​ನಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಂಡಿದ್ದು, ‘ಜಿಂಕ್ಸ್, ಅದ್ಭುತ ವೃತ್ತಿಜೀವನಕ್ಕೆ ಅಭಿನಂದನೆಗಳು, ಸ್ನೇಹಿತ. ನೀವು ಭಾರತೀಯ ಕ್ರಿಕೆಟ್‌ಗಾಗಿ ಅದ್ಭುತ ಕೆಲಸ ಮಾಡಿದ್ದೀರಿ, ಮತ್ತು ನಿಮ್ಮ ಪ್ರಯಾಣದ ಬಗ್ಗೆ ನೀವು ಹೆಮ್ಮೆಪಡಬೇಕು. ಸ್ಲಿಪ್ಸ್‌ನಲ್ಲಿ ಅತ್ಯಂತ ವಿಶ್ವಾಸಾರ್ಹ ಫೀಲ್ಡರ್ ಮತ್ತು ಟೆಸ್ಟ್‌ನಲ್ಲಿ ನನ್ನ ನೆಚ್ಚಿನ ಬ್ಯಾಟಿಂಗ್ ಪಾಲುದಾರ. ದೇವರು ನಿಮ್ಮನ್ನು ಆಶೀರ್ವದಿಸಲಿ’ ಎಂದು ಬರೆದುಕೊಂಡಿದ್ದಾರೆ.

ಸ್ಮರಣೀಯ ಕ್ಷಣಗಳಿಗಾಗಿ ಧನ್ಯವಾದಗಳು

ಬಿಸಿಸಿಐ ಕೂಡ ರಹಾನೆಯ ವೃತ್ತಿಜೀವನಕ್ಕೆ ಅಭಿನಂದನೆ ಸಲ್ಲಿಸಿದ್ದು, ‘ ಅದ್ಭುತ ವೃತ್ತಿಜೀವನ ಕೊನೆಗೊಳುತ್ತಿದೆ. ಭಾರತೀಯ ಕ್ರಿಕೆಟ್‌ಗೆ ನಿಮ್ಮ ಮಹತ್ವದ ಕೊಡುಗೆಗಾಗಿ ಮತ್ತು ಶಾಶ್ವತವಾಗಿ ನೆನಪಿನಲ್ಲಿ ಉಳಿಯುವ ಎಲ್ಲಾ ಸ್ಮರಣೀಯ ಕ್ಷಣಗಳಿಗಾಗಿ ಧನ್ಯವಾದಗಳು. ನಿಮ್ಮ ಮುಂದಿನ ಪ್ರಯಾಣಕ್ಕೆ ಶುಭಾಶಯಗಳು’ ಎಂದು ಬರೆದುಕೊಂಡಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ವೀರಶೈವ ಲಿಂಗಾಯತ ಸ್ವಾಮೀಜಿಗಳಿಗೆ ಅಗೌರವ ಆರೋಪಕ್ಕೆ ಸ್ಪಷ್ಟನೆ ನೀಡಿದ ಡಿಕೆಶಿ
ವೀರಶೈವ ಲಿಂಗಾಯತ ಸ್ವಾಮೀಜಿಗಳಿಗೆ ಅಗೌರವ ಆರೋಪಕ್ಕೆ ಸ್ಪಷ್ಟನೆ ನೀಡಿದ ಡಿಕೆಶಿ
ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಅಸ್ತವ್ಯಸ್ತ
ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಅಸ್ತವ್ಯಸ್ತ
ಹುಬ್ಬಳ್ಳಿಯ ಜೈನ ಮಂದಿರಗಳಲ್ಲೇ ಪದೇ ಪದೇ ಕಳ್ಳತನ: ಸಮುದಾಯದಿಂದ ಆಕ್ರೋಶ
ಹುಬ್ಬಳ್ಳಿಯ ಜೈನ ಮಂದಿರಗಳಲ್ಲೇ ಪದೇ ಪದೇ ಕಳ್ಳತನ: ಸಮುದಾಯದಿಂದ ಆಕ್ರೋಶ
ಹಿಂದೂ ಮಹಾಗಣಪತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್!
ಹಿಂದೂ ಮಹಾಗಣಪತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್!
ಪಾವಗಡದಲ್ಲಿ ವರುಣಾರ್ಭಟ: ಬೃಹತ್ ಮರ ಧರೆಗುರುಳಿ ಸಂಚಾರಕ್ಕೆ ಅಡಚಣೆ
ಪಾವಗಡದಲ್ಲಿ ವರುಣಾರ್ಭಟ: ಬೃಹತ್ ಮರ ಧರೆಗುರುಳಿ ಸಂಚಾರಕ್ಕೆ ಅಡಚಣೆ
ನಕಲಿ ಔಷಧಿಗಳನ್ನು ವಿತರಿಸಿದ ಫಾರ್ಮಸಿಗಳಿಗೆ ಎಸ್​ಐಟಿ ಶಾಕ್
ನಕಲಿ ಔಷಧಿಗಳನ್ನು ವಿತರಿಸಿದ ಫಾರ್ಮಸಿಗಳಿಗೆ ಎಸ್​ಐಟಿ ಶಾಕ್
ಆಕಾಶವಾಣಿ ಭವನದ ಬಳಿ ರಾಹುಲ್, ಪ್ರಿಯಾಂಕಾರನ್ನು ತಡೆದ ದೆಹಲಿ ಪೊಲೀಸರು
ಆಕಾಶವಾಣಿ ಭವನದ ಬಳಿ ರಾಹುಲ್, ಪ್ರಿಯಾಂಕಾರನ್ನು ತಡೆದ ದೆಹಲಿ ಪೊಲೀಸರು
ರಾಜ್ಯ ಸರ್ಕಾರದ ವಿರುದ್ಧ ಗವರ್ನರ್​​ಗೆ ಬಿಜೆಪಿ-ಜೆಡಿಎಸ್​​ ನಿಯೋಗದಿಂದ ದೂರು
ರಾಜ್ಯ ಸರ್ಕಾರದ ವಿರುದ್ಧ ಗವರ್ನರ್​​ಗೆ ಬಿಜೆಪಿ-ಜೆಡಿಎಸ್​​ ನಿಯೋಗದಿಂದ ದೂರು
ಫ್ಲೈದುಬೈ ವಿಮಾನ ಘಟನೆ: ಇರಾನ್ ವಿರುದ್ಧ ಟ್ರಂಪ್ ಗಂಭೀರ ಆರೋಪ
ಫ್ಲೈದುಬೈ ವಿಮಾನ ಘಟನೆ: ಇರಾನ್ ವಿರುದ್ಧ ಟ್ರಂಪ್ ಗಂಭೀರ ಆರೋಪ
ಕಾರವಾರ ಕ್ರಿಮ್ಸ್ ಹಾಸ್ಟೆಲ್ ಅವ್ಯವಸ್ಥೆ: ವೈದ್ಯಕೀಯ ವಿದ್ಯಾರ್ಥಿಗಳ ಪರದಾಟ!
ಕಾರವಾರ ಕ್ರಿಮ್ಸ್ ಹಾಸ್ಟೆಲ್ ಅವ್ಯವಸ್ಥೆ: ವೈದ್ಯಕೀಯ ವಿದ್ಯಾರ್ಥಿಗಳ ಪರದಾಟ!