ಅಹಮದಾಬಾದ್​ನ ಬೀದಿಯಲ್ಲಿದ್ದ ನಿರ್ಗತಿಕರಿಗೆ ಹಣ ನೀಡಿದ ಅಫ್ಘಾನ್‌ ಕ್ರಿಕೆಟಿಗ

Rahmanullah Gurbaz: ಸದ್ಯ ವಿಶ್ವಕಪ್​ ಮುಗಿಸಿ ತೆರಳಿರುವ ರಹಮಾನುಲ್ಲಾ ಗುರ್ಬಾಝ್ ಮುಂಬರುವ ಐಪಿಎಲ್​ಗಾಗಿ ಮತ್ತೆ ಭಾರತಕ್ಕೆ ಬರಲಿದ್ದಾರೆ ಎನ್ನಬಹುದು. ಏಕೆಂದರೆ ಅಫ್ಘಾನಿಸ್ತಾನ್ ತಂಡದ ಈ ಯುವ ದಾಂಡಿಗ ಕೊಲ್ಕತ್ತಾ ನೈಟ್​ ರೈಡರ್ಸ್ ತಂಡದಲ್ಲಿದ್ದು, ಮುಂಬರುವ ಸೀಸನ್​ನಲ್ಲೂ ಕೆಕೆಆರ್ ಪರ ಕಣಕ್ಕಿಳಿಯುವ ಸಾಧ್ಯತೆಯಿದೆ.

ಅಹಮದಾಬಾದ್​ನ ಬೀದಿಯಲ್ಲಿದ್ದ ನಿರ್ಗತಿಕರಿಗೆ ಹಣ ನೀಡಿದ ಅಫ್ಘಾನ್‌ ಕ್ರಿಕೆಟಿಗ
Rahmanullah Gurbaz
Follow us
TV9 Web
| Updated By: ಝಾಹಿರ್ ಯೂಸುಫ್

Updated on:Nov 13, 2023 | 8:54 PM

ಅಫ್ಘಾನಿಸ್ತಾನ್ ತಂಡದ ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಝ್ ನಿರ್ಗತಿಕರಿಗೆ ಸಹಾಯ ಮಾಡುವ ಮೂಲಕ ಇದೀಗ ಎಲ್ಲರ ಹೃದಯ ಗೆದ್ದಿದ್ದಾರೆ. ಗುಜರಾತ್​ನ ಅಹಮದಾಬಾದ್​ನಲ್ಲಿ ಸೌತ್ ಆಫ್ರಿಕಾ ವಿರುದ್ಧ ಅಫ್ಘಾನಿಸ್ತಾನ್ ತನ್ನ ಕೊನೆಯ ಪಂದ್ಯವಾಡಿತ್ತು. ಮರುದಿನ ಮುಂಜಾನೆ ರಹಮಾನುಲ್ಲಾ ಗುರ್ಬಾಝ್ ಅಹಮದಾಬಾದ್​ನ ಪ್ರಮುಖ ಬೀದಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಬೆಳಿಗ್ಗಿನ ಜಾವ 3 ಗಂಟೆಗೆ ಅಹಮದಾಬಾದ್​ನ ಬೀದಿ ಬದಿಯಲ್ಲಿ ಮಲಗಿದ್ದ ನಿರ್ಗತಿಕರಿಗೆ ರಹಮಾನುಲ್ಲಾ ಗುರ್ಬಾಝ್ ಹಣ ಹಂಚಿದ್ದಾರೆ. ಎಲ್ಲರೂ ಗಾಢ ನಿದ್ದೆಯಲ್ಲಿದ್ದ ವೇಳೆ ಗುರ್ಬಾಝ್ ಅವರ ಬಳಿ ಹಣವನ್ನಿಟ್ಟು ತೆರಳಿದ್ದಾರೆ. ಈ ವಿಡಿಯೋವನ್ನು ವ್ಯಕ್ತಿಯೊಬ್ಬರು ಕ್ಯಾಮೆರಾದಲ್ಲಿ ಸೆರೆ ಹಿಡಿದು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.

ಇದೀಗ ಅಫ್ಘಾನ್ ಆಟಗಾರನ ಮಾನವೀಯ ಗುಣದ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ರಹಮಾನುಲ್ಲಾ ಗುರ್ಬಾಝ್ ನಡೆಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ವಿಶೇಷ ಎಂದರೆ ಈ ವಿಡಿಯೋವನ್ನು ರಹಮಾನುಲ್ಲಾ ಗುರ್ಬಾಝ್ ಅವರಿಗೆ ತಿಳಿಯದಂತೆ ಚಿತ್ರೀಕರಿಸಲಾಗಿದೆ. ಇದರಿಂದಾಗಿ ಅಫ್ಘಾನ್ ಆಟಗಾರನ ಮಾನವೀಯತೆ ಬೆಳಕಿಗೆ ಬಂದಿದೆ.

ಇತ್ತ ಭಾರತದಲ್ಲಿ ಕ್ರಿಕೆಟ್ ಆಡಲು ಬಂದು ಇಲ್ಲಿನ ಬಡವರಿಗೆ ಸಹಾಯ ಮಾಡಿ ತೆರಳಿರುವ ರಹಮಾನುಲ್ಲಾ ಗುರ್ಬಾಝ್ ಅವರ ಮಾನವೀಯತೆಗೆ ಇದೀಗ ಭಾರತೀಯರು ಹಾಡಿ ಹೊಗಳುತ್ತಿರುವುದು ವಿಶೇಷ.

ಸದ್ಯ ವಿಶ್ವಕಪ್​ ಮುಗಿಸಿ ತೆರಳಿರುವ ರಹಮಾನುಲ್ಲಾ ಗುರ್ಬಾಝ್ ಮುಂಬರುವ ಐಪಿಎಲ್​ಗಾಗಿ ಮತ್ತೆ ಭಾರತಕ್ಕೆ ಬರಲಿದ್ದಾರೆ ಎನ್ನಬಹುದು. ಏಕೆಂದರೆ ಅಫ್ಘಾನಿಸ್ತಾನ್ ತಂಡದ ಈ ಯುವ ದಾಂಡಿಗ ಕೊಲ್ಕತ್ತಾ ನೈಟ್​ ರೈಡರ್ಸ್ ತಂಡದಲ್ಲಿದ್ದು, ಮುಂಬರುವ ಸೀಸನ್​ನಲ್ಲೂ ಕೆಕೆಆರ್ ಪರ ಕಣಕ್ಕಿಳಿಯುವ ಸಾಧ್ಯತೆಯಿದೆ.

ಇದನ್ನೂ ಓದಿ: ಧೋನಿಯ 18 ವರ್ಷದ ಹಿಂದಿನ ದಾಖಲೆ ಮುರಿದ ಗುರ್ಬಾಝ್

ಒಟ್ಟಿನಲ್ಲಿ ಈ ಬಾರಿಯ ವಿಶ್ವಕಪ್​ನಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಅಫ್ಘಾನಿಸ್ತಾನ್ ತಂಡ ಭಾರತೀಯ ಕ್ರಿಕೆಟ್ ಪ್ರೇಮಿಗಳ ಮನಗೆದ್ದಿದ್ದರು. ಇದೀಗ ಅದೇ ತಂಡದ ಆಟಗಾರನ ಮಾನವೀಯ ಮೌಲ್ಯಗಳನ್ನು ಸಾರುವ ಮೂಲಕ ಭಾರತೀಯರ ಹೃದಯ ಗೆದ್ದಿದ್ದಾರೆ.

Published On - 8:28 pm, Mon, 13 November 23

Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ