ಐಪಿಎಲ್​ನಲ್ಲಿ ಸಿಕ್ಕಿಲ್ಲ ಚಾನ್ಸ್: ಇದೀಗ ಸ್ಪೋಟಕ ಶತಕ ಸಿಡಿಸಿ ಮಿಂಚಿದ ಯುವ ಬ್ಯಾಟ್ಸ್​ಮನ್..!

Rahmanullah Gurbaz: ಗುರ್ಬಾಜ್ ಅವರ ಈ ಭರ್ಜರಿ ಬ್ಯಾಟಿಂಗ್​ನಲ್ಲಿ 10 ಸಿಕ್ಸರ್ ಹಾಗೂ 7 ಬೌಂಡರಿಗಳು ಮೂಡಿಬಂದಿತ್ತು. ಅಂದರೆ ಕೇವಲ ಸಿಕ್ಸರ್ ಮತ್ತು ಬೌಂಡರಿಗಳೊಂದಿಗೆ 88 ರನ್ ಗಳಿಸಿದ್ದರು.

ಐಪಿಎಲ್​ನಲ್ಲಿ ಸಿಕ್ಕಿಲ್ಲ ಚಾನ್ಸ್: ಇದೀಗ ಸ್ಪೋಟಕ ಶತಕ ಸಿಡಿಸಿ ಮಿಂಚಿದ ಯುವ ಬ್ಯಾಟ್ಸ್​ಮನ್..!
Rahmanullah Gurbaz
Edited By:

Updated on: Aug 01, 2022 | 1:23 PM

ಐಪಿಎಲ್​ 2022 ರಲ್ಲಿ ಇಡೀ ಸೀಸನ್​ ಬೆಂಚ್ ಕಾದ ಆಟಗಾರರಲ್ಲಿ ಅಫ್ಘಾನಿಸ್ತಾನದ ರಹಮಾನುಲ್ಲಾ ಗುರ್ಬಾಜ್ (Rahmanullah Gurbaz)  ಕೂಡ ಒಬ್ಬರು. ಗುಜರಾತ್ ಟೈಟಾನ್ಸ್ ತಂಡದಿಂದ ಜೇಸನ್ ರಾಯ್ ಹೊರಗುಳಿದ ಕಾರಣ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಗುರ್ಬಾಜ್ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಈ ಯುವ ಆಟಗಾರನಿಗೆ ಒಂದೇ ಒಂದು ಅವಕಾಶ ನೀಡಿರಲಿಲ್ಲ. ಆದರೀಗ ಸ್ಪೋಟಕ ಶತಕದೊಂದಿಗೆ ತಾನೆಂತಹ ಬ್ಯಾಟ್ಸ್​ಮನ್ ಎಂಬುದನ್ನು ರಹಮಾನುಲ್ಲಾ ಗುರ್ಬಾಜ್ ನಿರೂಪಿಸಿದ್ದಾರೆ.

ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಶಪಗಿಜಾ ಕ್ರಿಕೆಟ್ ಲೀಗ್‌ನಲ್ಲಿ ನಡೆದ ಹಿಂದೂಕುಶ್ ಸ್ಟಾರ್ಸ್ ಹಾಗೂ ಕಾಬೂಲ್ ಈಗಲ್ಸ್ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಈಗಲ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡ ಗುರ್ಬಾಜ್ ಟಾಸ್ ಸೋತಿದ್ದರು. ಅತ್ತ ಮೊದಲು ಬ್ಯಾಟ್ ಮಾಡಿದ ಹಿಂದೂಕುಶ್ ಸ್ಟಾರ್ಸ್ 20 ಓವರ್​ಗಳಲ್ಲಿ 182 ರನ್ ಕಲೆಹಾಕಿತು. ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಕಾಬೂಲ್ ಈಗಲ್ಸ್ ಪರ ನಾಯಕ ಗುರ್ಬಾಜ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.

ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಗುರ್ಬಾಜ್ ಕೇವಲ 19 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ವೇಳೆ 5 ಸಿಕ್ಸರ್ ಮತ್ತು 3 ಬೌಂಡರಿಗಳನ್ನು ಬಾರಿಸಿದ್ದರು. ಅರ್ಧಶತಕದ ಬಳಿಕ ತಮ್ಮ ಸ್ಪೋಟಕ ಬ್ಯಾಟಿಂಗ್ ಅನ್ನು ಮುಂದುವರೆಸಿದರು. ಇದರ ಫಲವಾಗಿ ಕೇವಲ 40 ಎಸೆತಗಳಲ್ಲಿ ಸಿಡಿಲಬ್ಬರದ ಶತಕ ಮೂಡಿಬಂತು. ಅಲ್ಲದೆ ಕೇವಲ 48 ಎಸೆತಗಳಲ್ಲಿ ಅಜೇಯ 121 ರನ್ ಬಾರಿಸುವ ಮೂಲಕ 13.5 ಓವರ್​ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದರು.

ಇದನ್ನೂ ಓದಿ
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

 

ಗುರ್ಬಾಜ್ ಅವರ ಈ ಭರ್ಜರಿ ಬ್ಯಾಟಿಂಗ್​ನಲ್ಲಿ 10 ಸಿಕ್ಸರ್ ಹಾಗೂ 7 ಬೌಂಡರಿಗಳು ಮೂಡಿಬಂದಿತ್ತು. ಅಂದರೆ ಕೇವಲ ಸಿಕ್ಸರ್ ಮತ್ತು ಬೌಂಡರಿಗಳೊಂದಿಗೆ 88 ರನ್ ಗಳಿಸಿದ್ದರು. ಇದರೊಂದಿಗೆ ಅಫ್ಘಾನಿಸ್ತಾನದಲ್ಲಿ ಟಿ20 ಲೀಗ್​ನಲ್ಲಿ ಅತ್ಯುತ್ತಮ ಇನ್ನಿಂಗ್ಸ್ ಆಡಿದ ದಾಖಲೆಯನ್ನು ಗುರ್ಬಾಜ್ ತಮ್ಮದಾಗಿಸಿಕೊಂಡರು. ಈ ಹಿಂದೆ 2019 ರಲ್ಲಿ ಕಾಬೂಲ್ ಈಗಲ್ಸ್ ಪರ ಕರೀಮ್ ಜನ್ನತ್ತ್ 120 ರನ್ ಗಳಿಸಿದ್ದು ದಾಖಲೆಯಾಗಿತ್ತು. ಇದೀಗ ಕೇವಲ 48 ಎಸೆತಗಳಲ್ಲಿ 121 ರನ್​ ಬಾರಿಸುವ ಮೂಲಕ ರಹಮಾನುಲ್ಲಾ ಗುರ್ಬಾಜ್ ಹೊಸ ದಾಖಲೆ ನಿರ್ಮಿಸಿದ್ದಾರೆ.