AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್ ಟೆಸ್ಟ್ ತಂಡಕ್ಕೆ ರಾಹುಲ್ ದ್ರಾವಿಡ್ ಹೊಸ ಕೋಚ್? 

Rahul Dravid: ಕೇವಲ ಬ್ಯಾಟಿಂಗ್‌ನಲ್ಲಿ ಮಾತ್ರವಲ್ಲದೆ, ಕೋಚಿಂಗ್‌ನಲ್ಲೂ 'ದಿ ವಾಲ್' ಆಗಿ ನಿಂತು ಭಾರತೀಯ ಕ್ರಿಕೆಟ್‌ನ ದಿಕ್ಕನ್ನೇ ಬದಲಿಸಿದ ಶ್ರೇಷ್ಠ ಮಾರ್ಗದರ್ಶಕ ರಾಹುಲ್ ದ್ರಾವಿಡ್. ಭಾರತೀಯ ಯುವ ಕ್ರಿಕೆಟಿಗರನ್ನು ಬೆಳೆಸುವ ನಿಟ್ಟಿನಲ್ಲಿ ಅಂಡರ್-19 ಮತ್ತು ಇಂಡಿಯಾ-ಎ ತಂಡಗಳಿಂದ ಆರಂಭವಾದ ಇವರ ಕೋಚಿಂಗ್ ಜರ್ನಿ, ತದನಂತರ ಭಾರತ ತಂಡಕ್ಕೆ 2024ರ ಟಿ20 ವಿಶ್ವಕಪ್ ಟ್ರೋಫಿ ಗೆಲ್ಲಿಸಿಕೊಡುವುದರೊಂದಿಗೆ ಮುಕ್ತಾಯಗೊಂಡಿತ್ತು. ಇದೀಗ ಅದೇ ದ್ರಾವಿಡ್ ಅವರ ಯಶಸ್ವಿ ಕೋಚಿಂಗ್‌ಗೆ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಮೂಲಕ ಮತ್ತೊಂದು ಹೊಸ ಆಯಾಮ ಸಿಗುವ ಸಾಧ್ಯತೆಯಿದೆ.

ಇಂಗ್ಲೆಂಡ್ ಟೆಸ್ಟ್ ತಂಡಕ್ಕೆ ರಾಹುಲ್ ದ್ರಾವಿಡ್ ಹೊಸ ಕೋಚ್? 
Rahul Dravid
ಝಾಹಿರ್ ಯೂಸುಫ್
|

Updated on: Jul 13, 2026 | 10:10 AM

Share

ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ 1-2 ಅಂತರದ ಆಘಾತಕಾರಿ ಸೋಲಿನ ಬೆನ್ನಲ್ಲೇ, ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ECB) ಮುಖ್ಯ ಕೋಚ್ ಬ್ರೆಂಡನ್ ಮೆಕಲಮ್ ಅವರನ್ನು ಟೆಸ್ಟ್ ಕೋಚಿಂಗ್ ಹುದ್ದೆಯಿಂದ ವಜಾಗೊಳಿಸಿದೆ. ಮೆಕಲಮ್ ನಿರ್ಗಮನದಿಂದ ತೆರವಾಗಿರುವ ಈ ಪ್ರತಿಷ್ಠಿತ ಸ್ಥಾನಕ್ಕೆ ಭಾರತೀಯ ಕ್ರಿಕೆಟ್ ದಂತಕಥೆ, ‘ದಿ ವಾಲ್’ ಖ್ಯಾತಿಯ ರಾಹುಲ್ ದ್ರಾವಿಡ್ ಅವರ ಹೆಸರು ಮುಂಚೂಣಿಗೆ ಬಂದಿದೆ.

ಬ್ರಿಟಿಷ್ ಪತ್ರಿಕೆ ದಿ ಡೈಲಿ ಟೆಲಿಗ್ರಾಫ್ ವರದಿಯ ಪ್ರಕಾರ, ಇಂಗ್ಲೆಂಡ್ ಮಂಡಳಿ ಸಿದ್ಧಪಡಿಸಿರುವ ಶಾರ್ಟ್‌ಲಿಸ್ಟ್‌ನಲ್ಲಿ ರಾಹುಲ್ ದ್ರಾವಿಡ್ ಅವರ ಹೆಸರು ಮುಂಚೂಣಿಯಲ್ಲಿ ಕಾಣಿಸಿಕೊಂಡಿದೆ. ಹೀಗಾಗಿ ಭಾರತೀಯ ಲೆಜೆಂಡ್ ಆಂಗ್ಲರ ಪಡೆಯ ಕೋಚ್ ಆಗಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ ಎಂದು ತಿಳಿಸಿದೆ.

ದ್ರಾವಿಡ್ ಮೇಲೇಕೆ ಇಂಗ್ಲೆಂಡ್ ಕಣ್ಣು?

ರಾಹುಲ್ ದ್ರಾವಿಡ್ ಕ್ಲಾಸಿಕ್ ಟೆಸ್ಟ್ ಕ್ರಿಕೆಟಿಗ. ಅಷ್ಟೇ ಅಲ್ಲದೆ ಈ ಹಿಂದೆ ಕೋಚ್ ಆಗಿ ಭಾರತ ತಂಡವನ್ನು ಟೆಸ್ಟ್​ನಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್​ ಫೈನಲ್​ಗೆ ಮುನ್ನಡೆಸಿದ್ದರು.

ಅವರ ಶಿಸ್ತುಬದ್ಧ ನಡೆ, ಗಂಭೀರ ಯೋಜನೆಗಳು ಮತ್ತು ಯುವ ಆಟಗಾರರನ್ನು ಬೆಳೆಸುವ ಕಲೆ ಇಂಗ್ಲೆಂಡ್ ಮಂಡಳಿಗೆ ಭಾರಿ ಆಕರ್ಷಕವಾಗಿ ಕಂಡಿದೆ.

ಇತ್ತೀಚಿನ ದಿನಗಳಲ್ಲಿ ಸತತ ಸೋಲಿನಿಂದ ಕಂಗೆಟ್ಟಿರುವ ಇಂಗ್ಲೆಂಡ್ ಟೆಸ್ಟ್ ತಂಡಕ್ಕೆ ರಾಹುಲ್ ದ್ರಾವಿಡ್ ಅವರ ರಕ್ಷಣಾತ್ಮಕ ಮತ್ತು ತಾಂತ್ರಿಕ ಮಾರ್ಗದರ್ಶನ ಅಗತ್ಯವಿದೆ ಎಂದು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಭಾವಿಸಿದೆ.

ದ್ರಾವಿಡ್ ಅಂಗಳದಲ್ಲಿ ಚೆಂಡು!

ವರದಿಗಳ ಪ್ರಕಾರ, ರಾಹುಲ್ ದ್ರಾವಿಡ್ ಅವರಿಗೆ ಸದ್ಯಕ್ಕೆ ಯಾವುದೇ ಪೂರ್ಣ ಪ್ರಮಾಣದ ರಾಷ್ಟ್ರೀಯ ಕೋಚಿಂಗ್ ಜವಾಬ್ದಾರಿ ವಹಿಸಿಕೊಳ್ಳಲು ಇಷ್ಟವಿಲ್ಲ. ಆದರೆ, ಇಂಗ್ಲೆಂಡ್‌ನ ವಿಭಜಿತ ಕೋಚಿಂಗ್ ವ್ಯವಸ್ಥೆ ಅವರಿಗೆ ಸೂಕ್ತವಾಗಬಹುದು.

ಬ್ರೆಂಡನ್ ಮೆಕಲಮ್ ಇಂಗ್ಲೆಂಡ್ ವೈಟ್-ಬಾಲ್ (ಏಕದಿನ, ಟಿ20) ತಂಡಕ್ಕೆ ಕೋಚ್ ಆಗಿ ಮುಂದುವರಿಯಲಿದ್ದು, ಕೇವಲ ಟೆಸ್ಟ್ ತಂಡಕ್ಕೆ ಮಾತ್ರ ಹೊಸ ಕೋಚ್ ಹುಡುಕಾಟ ನಡೆಯುತ್ತಿದೆ. ಹೀಗಾಗಿ ರಾಹುಲ್ ದ್ರಾವಿಡ್ ಅವರಿಗೆ ವರ್ಷದ ಬಹುಪಾಲು ಸಮಯ ಮನೆಯಲ್ಲೇ ಕಳೆಯಲು ಮತ್ತು ತಮ್ಮ ನೆಚ್ಚಿನ ಟೆಸ್ಟ್ ಕ್ರಿಕೆಟ್‌ಗೆ ಮಾತ್ರ ಕೊಡುಗೆ ನೀಡಲು ಉತ್ತಮ ಅವಕಾಶ ಸಿಗಲಿದೆ. ಹೀಗಾಗಿ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್​ನ ಈ ಆಫರ್​ ಅನ್ನು ಒಪ್ಪಿಕೊಂಡರೂ ಅಚ್ಚರಿಪಡಬೇಕಿಲ್ಲ.

ಇದನ್ನೂ ಓದಿ: ವಾಟ್ ಎ ಕ್ಯಾಚ್: ರಾಕೆಟ್ ವೇಗದಲ್ಲಿ ಬಂದ ಚೆಂಡನ್ನು ಹಿಡಿದ ರಿಚಾ ಘೋಷ್

ಆ್ಯಶಸ್​ಗೂ ಮುನ್ನ ಹೊಸ ಕೋಚ್:

ಮುಂದಿನ ವರ್ಷ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧ ಪ್ರತಿಷ್ಠಿತ ಆ್ಯಶಸ್ ಸರಣಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್​ ಶೀಘ್ರದಲ್ಲೇ ಹೊಸ ಕೋಚ್ ಹೆಸರನ್ನು ಅಂತಿಮಗೊಳಿಸಲಿದೆ. ರಾಹುಲ್ ದ್ರಾವಿಡ್ ಈ ಆಫರ್ ಒಪ್ಪಿಕೊಂಡರೆ, ಅದು ವಿಶ್ವ ಕ್ರಿಕೆಟ್‌ನ ಅತ್ಯಂತ ರೋಚಕ ತಿರುವುಗಳಲ್ಲಿ ಒಂದಾಗಲಿದೆ. ಅಲ್ಲದೆ ದ್ರಾವಿಡ್​ ಎಂಟ್ರಿಯಿಂದ ಅತ್ತ ಆ್ಯಶಸ್ ಸರಣಿಗೂ ಮುನ್ನವೇ ಆಸ್ಟ್ರೇಲಿಯಾಗೆ ಚಿಂತೆ ಶುರುವಾಗಲಿದೆ.

Follow Us
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ