India vs New Zealand: ಇಶಾನ್ ಕಿಶನ್ ಮಾಡಿದ ರನೌಟ್ ಕಂಡು ಫೀಲ್ಡಿಂಗ್ ಕೋಚ್​ಗೆ ರಾಹುಲ್ ದ್ರಾವಿಡ್ ಮಾಡಿದ್ದೇನು ನೋಡಿ

Rahul Dravid: ಇಶಾನ್ ಕಿಶನ್ ಅವರು ನ್ಯೂಜಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟನರ್ ಅವರನ್ನು ಅದ್ಭುತವಾಗಿ ರನೌಟ್ ಮಾಡಿ ಪೆವಿಲಿಯನ್​ಗೆ ಅಟ್ಟಿದರು. ಈ ಸಂದರ್ಭ ಕೋಚ್ ದ್ರಾವಿಡ್ ಅವರು ಫೀಲ್ಡಿಂಗ್ ಕೋಚ್ ಅವರನ್ನು ಏನು ಮಾಡಿದರು ನೋಡಿ.

India vs New Zealand: ಇಶಾನ್ ಕಿಶನ್ ಮಾಡಿದ ರನೌಟ್ ಕಂಡು ಫೀಲ್ಡಿಂಗ್ ಕೋಚ್​ಗೆ ರಾಹುಲ್ ದ್ರಾವಿಡ್ ಮಾಡಿದ್ದೇನು ನೋಡಿ
Rahul dravid and Ishan Kishan Runout
Follow us
TV9 Web
| Updated By: Vinay Bhat

Updated on: Nov 23, 2021 | 10:47 AM

ಟೀಮ್ ಇಂಡಿಯಾದ (Team India) ನೂತನ ಕೋಚ್ ಆಗಿ ಅಧಿಕಾರ ಸ್ವೀಕರಿಸಿ ಆಡಿದ ಚೊಚ್ಚಲ ಸರಣಿಯಲ್ಲೇ ರಾಹುಲ್ ದ್ರಾವಿಡ್ (Rahul Dravid) ಮೋಡಿ ಮಾಡಿದ್ದಾರೆ. ಪರಿಪೂರ್ಣ ನಾಯಕನಾಗಿ ರೋಹಿತ್ ಶರ್ಮಾ (Rohit Sharma) ಅವರಿಗೆ ಕೂಡ ಯಶಸ್ಸು ಸಿಕ್ಕಿದೆ. ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಮೂರನ್ನೂ ಗೆದ್ದು ಬೀಗಿದ ಭಾರತ (India vs New Zealand) ವೈಟ್​ವಾಷ್ ಸಾಧನೆ ಮಾಡಿತು. ಅದರಲ್ಲೂ ಭಾನುವಾರ ಮುಕ್ತಾಯಗೊಂಡ ಅಂತಿಮ ಮೂರನೇ ಟಿ20 ಪಂದ್ಯದಲ್ಲಿ ರೋಹಿತ್ ಪಡೆ ಬ್ಯಾಟಿಂಗ್ – ಬೌಲಿಂಗ್​ನಲ್ಲಿ ಮಾತ್ರವಲ್ಲದೆ ಫೀಲ್ಡಿಂಗ್​ನಲ್ಲೂ ಭರ್ಜರಿ ಪ್ರದರ್ಶನ ತೋರಿತು. ಪ್ರಮುಖವಾಗಿ ಇಶಾನ್ ಕಿಶನ್ (Ishan Kishan) ಅವರು ನ್ಯೂಜಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟನರ್ (Mitchell Santer) ಅವರನ್ನು ಅದ್ಭುತವಾಗಿ ರನೌಟ್ ಮಾಡಿ ಪೆವಿಲಿಯನ್​ಗೆ ಅಟ್ಟಿದರು. ಈ ಸಂದರ್ಭ ಕೋಚ್ ದ್ರಾವಿಡ್ ಅವರು ಫೀಲ್ಡಿಂಗ್ ಕೋಚ್ (Team India Fielding Coach) ಅವರನ್ನು ಏನು ಮಾಡಿದರು ನೋಡಿ.

ಈ ಪಂದ್ಯದಲ್ಲಿ ಮೊದಲು ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ತಂಡದ ಬೃಹತ್‌ ಮೊತ್ತಕ್ಕೆ ಬೇಕಾದ ಭದ್ರ ಬುನಾದಿ ಹಾಕಿದ ನಾಯಕ ರೋಹಿತ್‌ ಕೇವಲ 31 ಎಸೆತಗಳಲ್ಲಿ 56 ರನ್‌ ಸಿಡಿಸಿದರು. ಯುವ ಓಪನರ್‌ ಇಶಾನ್‌ ಕಿಶನ್‌ (29) ಜೊತೆಗೂಡಿ ಮೊದಲ ವಿಕೆಟ್‌ಗೆ 38 ಎಸೆತಗಳಲ್ಲಿ 69 ರನ್‌ಗಳ ಜೊತೆಯಾಟವಾಡಿದರು. ಇನಿಂಗ್ಸ್‌ ಮಧ್ಯದಲ್ಲಿ ಕಿವೀಸ್‌ ಸ್ಪಿನ್ನರ್‌ಗಳ ಎದುರು ಭಾರತೀಯ ಬ್ಯಾಟ್ಸ್‌ಮನ್‌ಗಳು ಕೊಂಚ ತಡಬಡಾಯಿಸಿದರು. ಆದರೂ, ರನ್‌ರೇಟ್‌ ಕಾಯ್ದುಕೊಂಡ ಭಾರತ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 184 ರನ್‌ಗಳ ದೊಡ್ಡ ಮೊತ್ತ ದಾಖಲಿಸಿತು.

ಗೆಲುವಿಗೆ 185 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ನ್ಯೂಜಿಲೆಂಡ್‌ ಭಾರತ ತಂಡದ ಶಿಸ್ತಿನ ಬೌಲಿಂಗ್‌ ಎದುರು ತಬ್ಬಿಬ್ಬಾಗಿ 17.2 ಓವರ್‌ಗಳಲ್ಲಿ 111 ರನ್‌ಗಳಿಗೆ ಆಲ್‌ಔಟ್‌ ಆಯಿತು. ಇದರ ನಡುವೆ ನ್ಯೂಜಿಲೆಂಡ್ ನಾಯಕ ಮಿಚೆಲ್ ಸ್ಯಾಂಟನರ್ ಔಟ್ ಆಗಿದ್ದು ಮನಮೋಹಕವಾಗಿತ್ತು. ವಿಕೆಟ್ ಕೀಪರ್- ಬ್ಯಾಟರ್ ಇಶಾನ್ ಕಿಶನ್ ಅವರು ತಮ್ಮ ಅದ್ಭುತ ಫೀಲ್ಡಿಂಗ್ ಮೂಲಕ ಸ್ಯಾಂಟನರ್​​ರನ್ನು ರನೌಟ್ ಮಾಡಿ ಪೆವಿಲಿಯನ್​ಗೆ ಅಟ್ಟಿದರು.

ಈ ಸಂದರ್ಭ ಡಗೌಟ್​ನಲ್ಲಿ ಕುಳಿತಿದ್ದ ಕೋಚ್ ರಾಹುಲ್ ದ್ರಾವಿಡ್ ಅವರು ಈ ರನೌಟ್ ಕಂಡು ದಂಗಾದರು. ಇದರ ಕ್ರೆಡಿಟ್ ಅನ್ನು ಫೀಲ್ಡಿಂಗ್ ಕೋಚ್ ಟಿ ದಿಲೀಪ್ ಅವರಿಗೆ ನೀಡಿದರು. ದ್ರಾವಿಡ್ ಅವರು ದಿಲೀಪ್ ಅವರ ಬೆನ್ನು ತಟ್ಟಿ ಪ್ರಶಂಶಿಸಿದರು. ದಿಲೀಪ್ ಟೀಮ್ ಇಂಡಿಯಾದ ನೂತನ ಫೀಲ್ಡಿಂಗ್ ಕೋಚ್ ಆಗಿದ್ದಾರೆ.

ಟಿ20 ಗುಂಗಿನಿಂದ ಹೊರಬಂದಿರುವ ಟೀಮ್ ಇಂಡಿಯಾ ಟೆಸ್ಟ್ ಕ್ರಿಕೆಟ್​ಗೆ ಮತ್ತೆ ಮರಳುತ್ತಿದೆ. ಇಂಗ್ಲೆಂಡ್ ವಿರುದ್ಧದ ಅಪೂರ್ಣ ಟೆಸ್ಟ್ ಸರಣಿಯ ಬಳಿಕ ಭಾರತ ಈಗ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನು ಆಡಲು ಸಜ್ಜಾಗಿದೆ. ಇದೇ ನವೆಂಬರ್ ನವೆಂಬರ್ 25 ರಿಂದ ಕಾನ್ಪುರದಲ್ಲಿ ಇಂಡೋ- ಕಿವೀಸ್ ನಡುವಣ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ.

India vs New Zealand Test: ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿ ಭಾರತದ ಈ 3 ಆಟಗಾರರಿಗೆ ಕೊನೇ ಚಾನ್ಸ್

IPL 2022 Auction: ಮೆಗಾ ಹರಾಜಿಗೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್​ನ ಬಹುದೊಡ್ಡ ನಿರ್ಧಾರ ರಿವೀಲ್ ಮಾಡಿದ ಆರ್. ಅಶ್ವಿನ್

(Rahul Dravid awe of Ishan Kishans direct throw and applauded fielding coach T Dilip in India vs New Zealand Match)

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ