AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Dravid: ನೀವು ಟೀಮ್ ಇಂಡಿಯಾದ ಖಾಯಂ ಕೋಚ್ ಆಗ್ತೀರಾ? ಈ ಬಗ್ಗೆ ದ್ರಾವಿಡ್ ಹೇಳಿದ್ದೇನು?

Team India Coach Rahul Dravid: ಸದ್ಯ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (NCA) ನಿರ್ದೇಶಕರಾಗಿರುವ ದ್ರಾವಿಡ್, ಭಾರತ ಅಂಡರ್ -19 ತಂಡ ಮತ್ತು ಭಾರತ ಎ ತಂಡಕ್ಕೂ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದಾರೆ.

Rahul Dravid: ನೀವು ಟೀಮ್ ಇಂಡಿಯಾದ ಖಾಯಂ ಕೋಚ್ ಆಗ್ತೀರಾ? ಈ ಬಗ್ಗೆ ದ್ರಾವಿಡ್ ಹೇಳಿದ್ದೇನು?
Rahul Dravid-Ravi Shastri
TV9 Web
| Updated By: ಝಾಹಿರ್ ಯೂಸುಫ್|

Updated on: Jul 30, 2021 | 2:52 PM

Share

ಶ್ರೀಲಂಕಾ ಸರಣಿಯಲ್ಲಿ ( India vs Sri Lanka ) ಟೀಮ್ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ( Rahul Dravid ) ಸಾರಥ್ಯವಹಿಸಿದ್ದರು. ಅಷ್ಟೇ ಅಲ್ಲದೆ ಯುವ ಪಡೆಯೊಂದಿಗೆ ಲಂಕಾ ವಿರುದ್ದ ಏಕದಿನ ಸರಣಿಯನ್ನು ಗೆದ್ದುಕೊಂಡಿದ್ದರು. ಇದೀಗ ಶ್ರೀಲಂಕಾ ಸರಣಿ ಮುಕ್ತಾಯವಾಗುತ್ತಿದ್ದಂತೆ ದ್ರಾವಿಡ್ ಅವರ ಮುಂದಿನ ನಡೆಯೇನು ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ತಾತ್ಕಾಲಿಕ ಕೋಚ್ ಆಗಿ ಕಾರ್ಯನಿರ್ವಹಿಸಿರುವ ದ್ರಾವಿಡ್ ಅವರ ಕಾರ್ಯ ವೈಖರಿಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗಿವೆ. ಹೀಗಾಗಿ ಅವರು ಟೀಮ್ ಇಂಡಿಯಾದ ( Team India ) ಪೂರ್ಣ ಪ್ರಮಾಣದ ಕೋಚ್ ಆಗಲಿದ್ದಾರಾ ಎಂಬುದೇ ಇದೀಗ ಕುತೂಹಲ.

ಅತ್ತ ಟೀಮ್ ಇಂಡಿಯಾ ಕೋಚ್ ಆಗಿರುವ ರವಿಶಾಸ್ತ್ರಿ ಅವರ ಅವಧಿಯು ಟಿ20 ವಿಶ್ವಕಪ್​ನೊಂದಿಗೆ ಕೊನೆಗೊಳ್ಳಲಿದೆ. ಹೀಗಾಗಿ ಅವರ ಸ್ಥಾನಕ್ಕೆ ಬಿಸಿಸಿಐ ರಾಹುಲ್ ದ್ರಾವಿಡ್​ ಅವರನ್ನು ನೇಮಕ ಮಾಡಿಕೊಳ್ಳಲಿದ್ದಾರೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿವೆ. ಈ ಬಗ್ಗೆ ಪ್ರತಿಕಾಗೋಷ್ಠಿಯಲ್ಲಿ ಖುದ್ದು ದ್ರಾವಿಡ್ ಅವರನ್ನೇ ಕೇಳಲಾಗಿದ್ದು, ಆ ವೇಳೆ ನಾನಿನ್ನೂ ಟೀಮ್ ಇಂಡಿಯಾದ ಕೋಚಿಂಗ್ ಹುದ್ದೆ ಯೋಚಿಸಿಲ್ಲ ಎಂದಿದ್ದಾರೆ ದಿ ವಾಲ್.

ಇದೇ ವೇಳೆ ಶ್ರೀಲಂಕಾ ಪ್ರವಾಸದಲ್ಲಿ ತರಬೇತುದಾರನ ಜವಾಬ್ದಾರಿಯನ್ನು ಆನಂದಿಸಿರುವುದಾಗಿ ದ್ರಾವಿಡ್ ತಿಳಿಸಿದರು. ಇನ್ನು ಭವಿಷ್ಯದಲ್ಲಿ ಟೀಮ್ ಇಂಡಿಯಾಗೆ ನೀವು ಕೋಚ್ ಬಯಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ರಾಹುಲ್, ನನ್ನ ಕೆಲಸವನ್ನು ನಾನು ಪ್ರಾಮಾಣಿಕ ಮಾಡಿದ್ದೇನೆ. ಆ ಬಗ್ಗೆ ನನಗೆ ಸಂತೋಷವಾಗಿದೆ. ನನ್ನ ಮಟ್ಟಿಗೆ, ಶ್ರೀಲಂಕಾ ಪ್ರವಾಸವನ್ನು ಹೊರತುಪಡಿಸಿ ಬೇರೆ ಯಾವುದೇ ಆಲೋಚನೆಯನ್ನು ನಾನು ಮಾಡಿಲ್ಲ ಎಂದರು. ಈ ಮೂಲಕ ಟೀಮ್ ಇಂಡಿಯಾ ಕೋಚ್ ಹುದ್ದೆಗೆ ಶಿಫಾರಸ್ಸು ಮಾಡಿದರೆ ಆ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಾಗಿ ರಾಹುಲ್ ದ್ರಾವಿಡ್ ಪರೋಕ್ಷವಾಗಿ ತಿಳಿಸಿದ್ದಾರೆ.

ಸದ್ಯ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (NCA) ನಿರ್ದೇಶಕರಾಗಿರುವ ದ್ರಾವಿಡ್, ಭಾರತ ಅಂಡರ್ -19 ತಂಡ ಮತ್ತು ಭಾರತ ಎ ತಂಡಕ್ಕೂ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಇನ್ನು ಚೊಚ್ಚಲ ಬಾರಿ ಹಿರಿಯ ತಂಡಕ್ಕೆ ಕೋಚ್ ಆಗಿ ಆಯ್ಕೆಯಾದ ದ್ರಾವಿಡ್ ಶ್ರೀಲಂಕಾ ಸರಣಿ ಮೂಲಕ ಮತ್ತೊಮ್ಮೆ ತಮ್ಮ ಕಾರ್ಯ ವೈಖರಿಯನ್ನು ತೆರೆದಿಟ್ಟಿದ್ದಾರೆ. ಲಂಕಾ ವಿರುದ್ದ ಏಕದಿನ ಸರಣಿಯನ್ನು ಟೀಮ್ ಇಂಡಿಯಾ 2-1 ಅಂತರದಲ್ಲಿ ಗೆದ್ದುಕೊಂಡಿದೆ. ಹಾಗೆಯೇ ಅನುಭವಿ ಆಟಗಾರರ ಅನುಪಸ್ಥಿತಿಯಲ್ಲಿ ಟಿ20 ಸರಣಿಯಲ್ಲಿ ಭಾರತ ತಂಡ 1-2 ಅಂತರದಿಂದ ಸೋಲುಂಡಿದೆ. ಇದಾಗ್ಯೂ ಯುವ ಪಡೆಯನ್ನು ಕಣಕ್ಕಿಳಿಸಿ ಪ್ರಯೋಗ ಮಾಡಿರುವ ದ್ರಾವಿಡ್ ಅವರ ನಡೆಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ಮದ್ಯಪಾನ ಮಾಡಿ ಶತಕ ಸಿಡಿಸಿದ್ದ ಗ್ಯಾರಿ ಸೋಬರ್ಸ್​..!

ಇದನ್ನೂ ಓದಿ: ಸೂರ್ಯಕುಮಾರ್ ಯಾದವ್​ಗೆ ಅವಕಾಶ ಕೈತಪ್ಪುವ ಆತಂಕ

(Rahul Dravid comments on permanent Team India coach job)

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!