AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Dravid: ಟಿ20 ವಿಶ್ವಕಪ್​ನೊಂದಿಗೆ ಗುಡ್ ಬೈ: ರಾಹುಲ್ ದ್ರಾವಿಡ್

T20 World Cup 2024: ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಜೂನ್ 5 ರಂದು ಅಭಿಯಾನ ಆರಂಭಿಸಲಿದೆ. ಬುಧವಾರ ನ್ಯೂಯಾರ್ಕ್​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತ ತಂಡವು ಐರ್ಲೆಂಡ್ ತಂಡವನ್ನು ಎದುರಿಸಲಿದೆ. ಹಾಗೆಯೇ ಜೂನ್ 9 ರಂದು ನಡೆಯಲಿರುವ ಹೈವೋಲ್ಟೆಜ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಸೆಣಸಲಿದೆ.

Rahul Dravid: ಟಿ20 ವಿಶ್ವಕಪ್​ನೊಂದಿಗೆ ಗುಡ್ ಬೈ: ರಾಹುಲ್ ದ್ರಾವಿಡ್
Rahul Dravid
ಝಾಹಿರ್ ಯೂಸುಫ್
|

Updated on: Jun 04, 2024 | 8:29 AM

Share

ಈ ಬಾರಿಯ ಟಿ20 ವಿಶ್ವಕಪ್​ ಮುಕ್ತಾಯದೊಂದಿಗೆ ಟೀಮ್ ಇಂಡಿಯಾ (Team India) ಕೋಚ್ ಸ್ಥಾನದಿಂದ ಕೆಳಗಿಳಿಯುವುದಾಗಿ ರಾಹುಲ್ ದ್ರಾವಿಡ್ (Rahul Dravid) ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದ್ರಾವಿಡ್, ಈ ವಿಶ್ವಕಪ್​ನೊಂದಿಗೆ ನನ್ನ ಕಾರ್ಯಾವಧಿ ಮುಗಿಯಲಿದ್ದು, ಇದಾಗ್ಯೂ ಮತ್ತೊಮ್ಮೆ ಮುಖ್ಯ ಕೋಚ್ ಸ್ಥಾನಕ್ಕೆ ಅರ್ಜಿ ಸಲ್ಲಿಸುವುದಿಲ್ಲ ಎಂದು ದೃಢಪಡಿಸಿದ್ದಾರೆ.

ಇದರೊಂದಿಗೆ ಟೀಮ್ ಇಂಡಿಯಾ ಜೊತೆಗಿನ ರಾಹುಲ್​ ದ್ರಾವಿಡ್ ಅವರ ನಂಟು ಈ ಬಾರಿಯ ಟಿ20 ವಿಶ್ವಕಪ್​ನೊಂದಿಗೆ ಮುಗಿಯಲಿದೆ. ನವೆಂಬರ್ 2021 ರಲ್ಲಿ ದ್ರಾವಿಡ್ ಭಾರತ ತಂಡದ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದರು. ಇದಾದ ಬಳಿಕ ಟೀಮ್ ಇಂಡಿಯಾ ಹಲವು ಸರಣಿಗಳಲ್ಲಿ ಜಯ ಸಾಧಿಸಿತ್ತು.

ಇದಾಗ್ಯೂ ಐಸಿಸಿ ಟೂರ್ನಿ ಗೆಲ್ಲಲಾಗಲಿಲ್ಲ. ಇದರ ನಡುವೆ ಭಾರತ ತಂಡವು 2022 ರಲ್ಲಿ ಟಿ20 ವಿಶ್ವಕಪ್, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ಆಡಿದೆ. ಹಾಗೆಯೇ 2023 ರಲ್ಲಿ ಏಕದಿನ ವಿಶ್ವಕಪ್​ನಲ್ಲಿ ಫೈನಲ್ ಕಣಕ್ಕಿಳಿದಿದೆ. ಆದರೆ ರಾಹುಲ್​ ದ್ರಾವಿಡ್ ಕೋಚಿಂಗ್​​ನಲ್ಲಿ ಟೀಮ್ ಇಂಡಿಯಾಗೆ ಐಸಿಸಿ ಟ್ರೋಫಿ ಎತ್ತಿ ಹಿಡಿಯಲು ಸಾಧ್ಯವಾಗಿಲ್ಲ.

ಇದನ್ನೂ ಓದಿ: Aaron Jones: ಆರೋನ್ ಅಬ್ಬರಕ್ಕೆ ಯುವರಾಜ್ ಸಿಂಗ್ ದಾಖಲೆ ಧೂಳೀಪಟ

ಈ ಬಾರಿಯ ಟಿ20 ವಿಶ್ವಕಪ್​ನೊಂದಿಗೆ ರಾಹುಲ್ ದ್ರಾವಿಡ್ ಅವರ ಕೋಚಿಂಗ್ ಕೆರಿಯರ್ ಮುಗಿಯಲಿದೆ. ಹೀಗಾಗಿ ಐಸಿಸಿ ಟ್ರೋಫಿ ಗೆಲ್ಲಲು ಇದುವೇ ಕೊನೆಯ ಅವಕಾಶ. ಅದರಂತೆ ಟಿ20 ವಿಶ್ವಕಪ್​ನೊಂದಿಗೆ ಟೀಮ್ ಇಂಡಿಯಾ ಆಟಗಾರರು ರಾಹುಲ್ ದ್ರಾವಿಡ್​ಗೆ ಬೀಳ್ಕೊಡಲಿದ್ದಾರಾ ಕಾದು ನೋಡಬೇಕಿದೆ.

ಟೀಮ್ ಇಂಡಿಯಾದ ವೇಳಾಪಟ್ಟಿ ಇಲ್ಲಿದೆ:

ದಿನಾಂಕ ಪಂದ್ಯಗಳು ಸಮಯ (IST) ಸ್ಥಳ
05-ಜೂನ್-24 ಭಾರತ vs ಐರ್ಲೆಂಡ್ 8:00 PM  ನ್ಯೂಯಾರ್ಕ್​
09-ಜೂನ್-24 ಭಾರತ vs ಪಾಕಿಸ್ತಾನ್ 8:00 PM ನ್ಯೂಯಾರ್ಕ್​
12-ಜೂನ್-24 ಭಾರತ vs ಯುಎಸ್​ಎ 8:00 PM ನ್ಯೂಯಾರ್ಕ್​
15-ಜೂನ್-24 ಭಾರತ vs ಕೆನಡಾ 8:00 PM  ಫ್ಲೋರಿಡಾ

ಭಾರತ ಟಿ20​ ವಿಶ್ವಕಪ್ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.

ಮೀಸಲು ಆಟಗಾರರು: ಶುಭ್​ಮನ್ ಗಿಲ್, ಅವೇಶ್ ಖಾನ್, ರಿಂಕು ಸಿಂಗ್, ಖಲೀಲ್ ಅಹ್ಮದ್.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ