Virat Kohli: ವಿರಾಟ್ ಕೊಹ್ಲಿಯನ್ನು ಸಮಾಧಾನ ಮಾಡಿದ ರಾಹುಲ್ ದ್ರಾವಿಡ್: ವಿಡಿಯೋ ನೋಡಿ
T20 World Cup 2024: ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ವಿರಾಟ್ ಕೊಹ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದಾರೆ. 7 ಪಂದ್ಯಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದಿರುವ ಕಿಂಗ್ ಕೊಹ್ಲಿ ಈವರೆಗೆ ಕಲೆಹಾಕಿರುವುದು ಕೇವಲ 75 ರನ್ಗಳು ಮಾತ್ರ. ಇದೀಗ ಟೀಮ್ ಇಂಡಿಯಾ ಫೈನಲ್ಗೆ ಪ್ರವೇಶಿಸಿದ್ದು, ಅಂತಿಮ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಬ್ಬರಿಸುವ ವಿಶ್ವಾಸದಲ್ಲಿದ್ದಾರೆ.
T20 World Cup 2024: ಟಿ20 ವಿಶ್ವಕಪ್ನಲ್ಲಿ ವಿರಾಟ್ ಕೊಹ್ಲಿಯ ಕಳಪೆ ಫಾರ್ಮ್ ಮುಂದುವರೆದಿದೆ. ಕಳೆದ ಆರು ಪಂದ್ಯಗಳಲ್ಲಿ ವಿಫಲರಾಗಿದ್ದ ಕೊಹ್ಲಿ ಸೆಮಿಫೈನಲ್ ಪಂದ್ಯದಲ್ಲಿ ಅಬ್ಬರಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲೂ ವಿರಾಟ್ ಕೊಹ್ಲಿ ಮುಗ್ಗರಿಸಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಕೊಹ್ಲಿ ಕೇವಲ 9 ರನ್ಗಳಿಸಿ ಕ್ಲೀನ್ ಬೌಲ್ಡ್ ಆಗಿದ್ದರು. ಇತ್ತ ನಿರ್ಣಾಯಕ ಪಂದ್ಯದಲ್ಲಿ ಬೇಗನೆ ವಿಕೆಟ್ ಒಪ್ಪಿಸಿದ ಬೇಸರದಲ್ಲಿ ವಿರಾಟ್ ಕೊಹ್ಲಿ ಡ್ರೆಸ್ಸಿಂಗ್ ರೂಮ್ ಬಳಿ ಕೂತಿದ್ದರು.
ಈ ವೇಳೆ ವಿರಾಟ್ ಕೊಹ್ಲಿ ಬಳಿ ಆಗಮಿಸಿದ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಸಮಾಧಾನ ಪಡಿಸುತ್ತಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ದ್ರಾವಿಡ್ ಅವರ ಈ ನಡಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
ವಿರಾಟ್ ಕೊಹ್ಲಿ – ರಾಹುಲ್ ದ್ರಾವಿಡ್ ವಿಡಿಯೋ:
Rahul dravid went to Virat as he was looking broken after that dismissal, can’t see him like this man 💔 #INDvsENG pic.twitter.com/X0nPoSdF5s
— a v i (@973Kohli) June 27, 2024
ಟೀಮ್ ಇಂಡಿಯಾಗೆ ಫೈನಲ್ಗೆ ಎಂಟ್ರಿ:
ಗಯಾನಾದಲ್ಲಿ ನಡೆದ ದ್ವಿತೀಯ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಭಾರತವನ್ನು ಬ್ಯಾಟಿಂಗ್ಗೆ ಆಹ್ವಾನಿಸಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ (57) ಅರ್ಧಶತಕ ಬಾರಿಸಿ ಮಿಂಚಿದರು. ಇನ್ನು ಸೂರ್ಯಕುಮಾರ್ ಯಾದವ್ 47 ರನ್ಗಳ ಕೊಡುಗೆ ನೀಡಿದರು. ಈ ಮೂಲಕ ಟೀಮ್ ಇಂಡಿಯಾ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 171 ರನ್ ಕಲೆಹಾಕಿತು.
172 ರನ್ಗಳ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡವು 16.4 ಓವರ್ಗಳಲ್ಲಿ 103 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 68 ರನ್ಗಳ ಭರ್ಜರಿ ಜಯದೊಂದಿಗೆ ಟಿ20 ವಿಶ್ವಕಪ್ನ ಫೈನಲ್ಗೆ ಎಂಟ್ರಿ ಕೊಟ್ಟಿದೆ.
ಇದನ್ನೂ ಓದಿ: Rohit Sharma: ರೋಹಿತ್ ಶರ್ಮಾ ಸಿಕ್ಸ್ಬ್ಬರಕ್ಕೆ ಕ್ರಿಸ್ ಗೇಲ್ ದಾಖಲೆ ಧೂಳೀಪಟ
ಫೈನಲ್ ಪಂದ್ಯ ಯಾವಾಗ?
ಶನಿವಾರ (ಜೂನ್ 29) ನಡೆಯಲಿರುವ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಶುರುವಾಗಲಿದೆ.