Virat Kohli: ವಿರಾಟ್ ಕೊಹ್ಲಿಯನ್ನು ಸಮಾಧಾನ ಮಾಡಿದ ರಾಹುಲ್ ದ್ರಾವಿಡ್: ವಿಡಿಯೋ ನೋಡಿ

|

Updated on: Jun 28, 2024 | 10:30 AM

T20 World Cup 2024: ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ವಿರಾಟ್ ಕೊಹ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದಾರೆ. 7 ಪಂದ್ಯಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದಿರುವ ಕಿಂಗ್ ಕೊಹ್ಲಿ ಈವರೆಗೆ ಕಲೆಹಾಕಿರುವುದು ಕೇವಲ 75 ರನ್​ಗಳು ಮಾತ್ರ. ಇದೀಗ ಟೀಮ್ ಇಂಡಿಯಾ ಫೈನಲ್​ಗೆ ಪ್ರವೇಶಿಸಿದ್ದು, ಅಂತಿಮ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಬ್ಬರಿಸುವ ವಿಶ್ವಾಸದಲ್ಲಿದ್ದಾರೆ.

Virat Kohli: ವಿರಾಟ್ ಕೊಹ್ಲಿಯನ್ನು ಸಮಾಧಾನ ಮಾಡಿದ ರಾಹುಲ್ ದ್ರಾವಿಡ್: ವಿಡಿಯೋ ನೋಡಿ
Virat Kohli - Rahul Dravid
Follow us on

T20 World Cup 2024: ಟಿ20 ವಿಶ್ವಕಪ್​ನಲ್ಲಿ ವಿರಾಟ್ ಕೊಹ್ಲಿಯ ಕಳಪೆ ಫಾರ್ಮ್ ಮುಂದುವರೆದಿದೆ. ಕಳೆದ ಆರು ಪಂದ್ಯಗಳಲ್ಲಿ ವಿಫಲರಾಗಿದ್ದ ಕೊಹ್ಲಿ ಸೆಮಿಫೈನಲ್ ಪಂದ್ಯದಲ್ಲಿ ಅಬ್ಬರಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲೂ ವಿರಾಟ್ ಕೊಹ್ಲಿ ಮುಗ್ಗರಿಸಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಕೊಹ್ಲಿ ಕೇವಲ 9 ರನ್​ಗಳಿಸಿ ಕ್ಲೀನ್ ಬೌಲ್ಡ್ ಆಗಿದ್ದರು. ಇತ್ತ ನಿರ್ಣಾಯಕ ಪಂದ್ಯದಲ್ಲಿ ಬೇಗನೆ ವಿಕೆಟ್ ಒಪ್ಪಿಸಿದ ಬೇಸರದಲ್ಲಿ ವಿರಾಟ್ ಕೊಹ್ಲಿ ಡ್ರೆಸ್ಸಿಂಗ್ ರೂಮ್ ಬಳಿ ಕೂತಿದ್ದರು.

ಈ ವೇಳೆ ವಿರಾಟ್ ಕೊಹ್ಲಿ ಬಳಿ ಆಗಮಿಸಿದ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಸಮಾಧಾನ ಪಡಿಸುತ್ತಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ದ್ರಾವಿಡ್ ಅವರ ಈ ನಡಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ವಿರಾಟ್ ಕೊಹ್ಲಿ – ರಾಹುಲ್ ದ್ರಾವಿಡ್ ವಿಡಿಯೋ:

ಟೀಮ್ ಇಂಡಿಯಾಗೆ ಫೈನಲ್​ಗೆ ಎಂಟ್ರಿ:

ಗಯಾನಾದಲ್ಲಿ ನಡೆದ ದ್ವಿತೀಯ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಭಾರತವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ (57) ಅರ್ಧಶತಕ ಬಾರಿಸಿ ಮಿಂಚಿದರು. ಇನ್ನು ಸೂರ್ಯಕುಮಾರ್ ಯಾದವ್ 47 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 171 ರನ್ ಕಲೆಹಾಕಿತು.

172 ರನ್​ಗಳ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡವು 16.4 ಓವರ್​ಗಳಲ್ಲಿ 103 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 68 ರನ್​ಗಳ ಭರ್ಜರಿ ಜಯದೊಂದಿಗೆ ಟಿ20 ವಿಶ್ವಕಪ್​ನ ಫೈನಲ್​​ಗೆ ಎಂಟ್ರಿ ಕೊಟ್ಟಿದೆ.

ಇದನ್ನೂ ಓದಿ: Rohit Sharma: ರೋಹಿತ್ ಶರ್ಮಾ ಸಿಕ್ಸ್​ಬ್ಬರಕ್ಕೆ ಕ್ರಿಸ್ ಗೇಲ್ ದಾಖಲೆ ಧೂಳೀಪಟ

ಫೈನಲ್ ಪಂದ್ಯ ಯಾವಾಗ?

ಶನಿವಾರ (ಜೂನ್ 29) ನಡೆಯಲಿರುವ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಶುರುವಾಗಲಿದೆ.