Rahul Dravid: ಕಷ್ಟಪಟ್ಟು ಗಳಿಸಿದ ಅಂಕ ಕಳೆದುಕೊಂಡಾಗ ನೋವಾಗುತ್ತೆ..!

India vs South Africa: ಟೀಮ್ ಇಂಡಿಯಾ ಸೆಂಚುರಿಯನ್​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ನಿಗದಿತ ಸಮಯಕ್ಕಿಂತ ಒಂದು ಓವರ್ ಹಿಂದಿತ್ತು. ಇದರ ನಂತರ, ತಂಡದ ಎಲ್ಲಾ ಆಟಗಾರರಿಗೆ ಅವರ ಪಂದ್ಯ ಶುಲ್ಕದ ಶೇಕಡಾ 20 ರಷ್ಟು ದಂಡ ವಿಧಿಸಲಾಯಿತು.

Rahul Dravid: ಕಷ್ಟಪಟ್ಟು ಗಳಿಸಿದ ಅಂಕ ಕಳೆದುಕೊಂಡಾಗ ನೋವಾಗುತ್ತೆ..!
Rahul Dravid
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jan 02, 2022 | 10:22 PM

ಭಾರತ ತಂಡವು ದಕ್ಷಿಣ ಆಫ್ರಿಕಾ ವಿರುದ್ದ ಮೊದಲ ಟೆಸ್ಟ್ ಪಂದ್ಯದಲ್ಲಿ 113 ರನ್​ಗಳ ಭರ್ಜರಿ ಜಯ ಸಾಧಿಸಿತ್ತು. ಇದಾಗ್ಯೂ ನಿಧಾನಗತಿಯ ಓವರ್ ರೇಟ್‌ಗಾಗಿ ಟೀಮ್ ಇಂಡಿಯಾ ದಂಡ ಪಾವತಿಸಬೇಕಾಯಿತು. ಅಷ್ಟೇ ಅಲ್ಲದೆ ಭಾರತ ತಂಡ ಮಾಡಿದ ಈ ತಪ್ಪಿನಿಂದಾಗಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಟೇಬಲ್‌ನಿಂದ ಒಂದು ಅಂಕವನ್ನು ಕಳೆದುಕೊಂಡಿತು. ಈ ಬಗ್ಗೆ ಮಾತನಾಡಿರುವ ಟೀಮ್ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ಕಷ್ಟಪಟ್ಟು ಗಳಿಸಿರುವ ಅಂಕಗಳನ್ನು ಕಳೆದುಕೊಳ್ಳುವುದು ನಿಜಕ್ಕೂ ನಿರಾಶಾದಾಯಕ ಎಂದಿದ್ದಾರೆ.

ಐಸಿಸಿ ಆಟದ ವೇಗವನ್ನು ಹೆಚ್ಚಿಸಲು ಪ್ರಯತ್ನಿಸುತ್ತಿದೆ. ಆದರೆ ಕೋಚ್ ಆಗಿ ಇಂತಹ ನಿರ್ಧಾರಗಳು ಕಠಿಣ ಎಂದೇ ಹೇಳಬಹುದು. ಐಸಿಸಿ ಪಂದ್ಯವನ್ನು ಸಮತೋಲನವಾಗಿ ಕೊಂಡೊಯ್ಯುವ ಮಾರ್ಗದಲ್ಲಿ ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ ಇಂತಹ ನಿಯಮಗಳು ಸರಿ ಎಂದೇ ಹೇಳಬಹುದು. ಅಷ್ಟೇ ಅಲ್ಲದೆ ಇದು ನಾವು ಉತ್ತಮಗೊಳ್ಳಬೇಕಾದ ಕ್ಷೇತ್ರ ಎಂಬುದು ಅರಿವಾಗಿದೆ ಎಂದು ದ್ರಾವಿಡ್ ತಿಳಿಸಿದರು.

ಓವರ್ ರೇಟ್​ ನಿಯಮಗಳು ಎಲ್ಲರಿಗೂ ಒಂದೇ ಆಗಿದೆ. ಆದರೆ ಸಾಗರೋತ್ತರದಲ್ಲಿ ಕಷ್ಟಪಟ್ಟು ಗಳಿಸಿದ ಅಂಕವನ್ನು ಕಳೆದುಕೊಳ್ಳುವುದು ನಿರಾಶಾದಾಯಕವಾಗಿದೆ ಎಂದು ದ್ರಾವಿಡ್ ಹೇಳಿದರು. ನಾವು ಇದನ್ನು ಅರ್ಥಮಾಡಿಕೊಂಡಿದ್ದೇವೆ. ಹೀಗಾಗಿ ವಿದೇಶಿ ಪಿಚ್​ಗಳಲ್ಲಿ ಉತ್ತಮವಾಗಲು ಪ್ರಯತ್ನಿಸುತ್ತಿದ್ದೇವೆ. ಈ ಕಾರಣದಿಂದ ಮುಂದೆ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್ ಫೈನಲ್‌ ಕೈ ತಪ್ಪಿದರೆ, ಅದಕ್ಕಿಂತ ದೊಡ್ಡ ನಿರಾಸೆ ಮತ್ತೊಂದಿರಲ್ಲ ಎಂದು ಟೀಮ್ ಇಂಡಿಯಾ ಕೋಚ್ ತಿಳಿಸಿದರು.

ಟೀಮ್ ಇಂಡಿಯಾ ಸೆಂಚುರಿಯನ್​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ನಿಗದಿತ ಸಮಯಕ್ಕಿಂತ ಒಂದು ಓವರ್ ಹಿಂದಿತ್ತು. ಇದರ ನಂತರ, ತಂಡದ ಎಲ್ಲಾ ಆಟಗಾರರಿಗೆ ಅವರ ಪಂದ್ಯ ಶುಲ್ಕದ ಶೇಕಡಾ 20 ರಷ್ಟು ದಂಡ ವಿಧಿಸಲಾಯಿತು. ಅಷ್ಟೇ ಅಲ್ಲದೆ ಸ್ಲೋ ಓವರ್​ ರೇಟ್ ನಿಮಯದಂತೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಟೇಬಲ್‌ನಿಂದ ಒಂದು ಅಂಕವನ್ನು ಕಡಿತಗೊಳಿಸಲಾಯಿತು. ಈ ಹಿಂದೆ ಇಂಗ್ಲೆಂಡ್ ವಿರುದ್ದದ ಟೆಸ್ಟ್ ಪಂದ್ಯದ ವೇಳೆ ಕೂಡ ಟೀಮ್ ಇಂಡಿಯಾ ಸ್ಲೋ ಓವರ್ ರೇಟ್ ಕಾರಣ ಒಂದು ಅಂಕವನ್ನು ಕಳೆದುಕೊಂಡಿತು. ಹೀಗಾಗಿ 2ನೇ ಟೆಸ್ಟ್ ಪಂದ್ಯದ ವೇಳೆ ಈ ಬಗ್ಗೆ ಹೆಚ್ಚಿನ ಗಮನಹರಿಸಬೇಕೆಂದು ಟೀಮ್ ಇಂಡಿಯಾ ಕೋಚ್ ಆಟಗಾರರಿಗೆ ವಿಶೇಷ ಸೂಚನೆ ನೀಡಿದ್ದಾರೆ.

ಭಾರತ-ದಕ್ಷಿಣ ಆಫ್ರಿಕಾ ನಡುವಣ 2ನೇ ಟೆಸ್ಟ್ ಪಂದ್ಯವು ಜೋಹಾನ್ಸ್​ಬರ್ಗ್​ನ ವಂಡಾರರ್ಸ್​ ಸ್ಟೇಡಿಯಂನಲ್ಲಿ ಸೋಮವಾರದಿಂದ ಶುರುವಾಗಲಿದ್ದು, ಈ ಪಂದ್ಯದಲ್ಲಿ ಭಾರತ ಗೆದ್ದರೆ ಸೌತ್ ಆಫ್ರಿಕಾ ವಿರುದ್ದ ಸರಣಿ ಗೆದ್ದ ದಾಖಲೆ ನಿರ್ಮಿಸಲಿದೆ.

ಇದನ್ನೂ ಓದಿ:  Team India: ಟೀಮ್ ಇಂಡಿಯಾ ಗೆದ್ದರೆ ಇತಿಹಾಸ: ಕೊಹ್ಲಿ ಪಾಲಿಗೆ ಹೊಸ ದಾಖಲೆ..!

ಇದನ್ನೂ ಓದಿ:  Ravindra Jadeja: ಸ್ಟಾರ್ ಆಲ್​ರೌಂಡರ್ ಜಡೇಜಾರನ್ನು ಆಯ್ಕೆ ಮಾಡದಿರಲು ಇದುವೇ ಕಾರಣ..!

ಇದನ್ನೂ ಓದಿ: Rohit Sharma: ಫಿಟ್​ನೆಸ್​ ಅಥವಾ ಇನ್ನೇನಾದರೂ? ರೋಹಿತ್ ಶರ್ಮಾ ಕೈ ಬಿಡಲು ಕಾರಣವೇನು?

ಇದನ್ನೂ ಓದಿ: IPL 2022: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್​ಸಿಬಿ ನಾಯಕ

(Rahul Dravid ‘disappointed’ with losing points for slow over-rate)

Published On - 10:21 pm, Sun, 2 January 22

ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?