VIDEO: ಸಿರಾಜ್ಗೆ ವಿಕೆಟ್: ಕೋಚ್ ದ್ರಾವಿಡ್ ಆಕ್ರಮಣಕಾರಿ ಸಂಭ್ರಮ
India vs Australia 1st Test: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್ ದಾಳಿಗೆ ತತ್ತರಿಸಿತು. ಪರಿಣಾಮ ಮೊದಲ ಇನಿಂಗ್ಸ್ನಲ್ಲಿ ಕೇವಲ 177 ರನ್ಗಳಿಗೆ ಆಸ್ಟ್ರೇಲಿಯಾ ತಂಡ ಆಲೌಟ್ ಆಗಿದೆ.
India vs Australia 1st Test: ನಾಗ್ಪುರದ ವಿದರ್ಭ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ-ಆಸ್ಟ್ರೇಲಿಯಾ (IND vs AUS) ನಡುವಣ ಮೊದಲ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು. ಆದರೆ 2ನೇ ಓವರ್ನಲ್ಲೇ ಮೊಹಮ್ಮದ್ ಸಿರಾಜ್ ಆಸೀಸ್ ಪಡೆಗೆ ಶಾಕ್ ನೀಡಿದ್ದರು. ಮೊದಲ ಓವರ್ ಎಸೆದ ಮೊಹಮ್ಮದ್ ಶಮಿ ಅತ್ಯುತ್ತಮ ದಾಳಿ ಸಂಘಟಿಸಿದ್ದರು. ಇದಾದ ಬಳಿಕ 2ನೇ ಓವರ್ ಎಸೆದ ಮೊಹಮ್ಮದ್ ಸಿರಾಜ್ ಉಸ್ಮಾನ್ ಖ್ವಾಜಾರನ್ನು ಎಲ್ಬಿ ಬಲೆಗೆ ಬೀಸಿದರು.
ಕೆಳ ಹಂತದಲ್ಲಿ ಬಂದ ಸಿರಾಜ್ ಚೆಂಡನ್ನು ಗುರುತಿಸುವಲ್ಲಿ ಆಸೀಸ್ ಬ್ಯಾಟರ್ ಎಡವಿದರು. ಇತ್ತ ಎಲ್ಬಿಡಬ್ಲ್ಯೂಗೆ ಮನವಿ ಸಲ್ಲಿಸಿದರೂ ಅಂಪೈರ್ ಔಟ್ ನೀಡಿರಲಿಲ್ಲ. ಹೀಗಾಗಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಡಿಆರ್ಎಸ್ ಮೊರೆ ಹೋದರು.
ಇತ್ತ ಟೀಮ್ ಇಂಡಿಯಾ ಆಟಗಾರರು ಮೂರನೇ ಅಂಪೈರ್ನ ತೀರ್ಪನ್ನು ಕುತೂಹಲದಿಂದ ಕಾಯುತ್ತಿದ್ದರು. ರಿಪ್ಲೇ ಪರಿಶೀಲಿಸಿದ ಥರ್ಡ್ ಅಂಪೈರ್ ಔಟ್ ಎಂದು ತೀರ್ಪಿತ್ತರು. ಇದನ್ನು ನೋಡಿ ಟೀಮ್ ಇಂಡಿಯಾ ಆಟಗಾರರು ಸಂಭ್ರಮಿಸಲಾರಂಭಿಸಿದರು. ಮತ್ತೊಂದೆಡೆ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಕೂಡ ಅಂತಹದೊಂದು ಆರಂಭವನ್ನು ಎದುರು ನೋಡಿದ್ದರು. ಹೀಗಾಗಿಯೇ ಸಿರಾಜ್ಗೆ ವಿಕೆಟ್ ಸಿಗುತ್ತಿದ್ದಂತೆ ಆಕ್ರಮಣಕಾರಿಯಾಗಿ ಸಂಭ್ರಮಿಸಿದರು. ಇದೀಗ ಶಾಂತ ಸ್ವಭಾವದ ರಾಹುಲ್ ದ್ರಾವಿಡ್ ಅವರ ಆಕ್ರಮಣಕಾರಿ ಸಂಭ್ರಮದ ವಿಡಿಯೋ ವೈರಲ್ ಆಗಿದೆ.
Gooood Morning ?
?: @StarSportsIndia pic.twitter.com/bQP3yFEHa1
— Washington Sundar (@Sundarwashi5) February 9, 2023
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್ ದಾಳಿಗೆ ತತ್ತರಿಸಿತು. ಪರಿಣಾಮ ಮೊದಲ ಇನಿಂಗ್ಸ್ನಲ್ಲಿ ಕೇವಲ 177 ರನ್ಗಳಿಗೆ ಆಸ್ಟ್ರೇಲಿಯಾ ತಂಡ ಆಲೌಟ್ ಆಗಿದೆ. ಟೀಮ್ ಇಂಡಿಯಾ ಪರ ಜಡೇಜಾ 5 ವಿಕೆಟ್ ಪಡೆದರೆ, ಅಶ್ವಿನ್ 3 ವಿಕೆಟ್ ಕಬಳಿಸಿ ಮಿಂಚಿದರು.
ಇದಾದ ಬಳಿಕ ಪ್ರಥಮ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಮೊದಲ ದಿನದಾಟದ ಮುಕ್ತಾಯಕ್ಕೆ 1 ವಿಕೆಟ್ ಕಳೆದುಕೊಂಡು 77 ರನ್ ಕಲೆಹಾಕಿದೆ. ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ 20 ರನ್ಗಳಿಸಿ ಔಟಾದರೆ, ರೋಹಿತ್ ಶರ್ಮಾ (56) ಹಾಗೂ ಅಶ್ವಿನ್ (0) 2ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
ಇದನ್ನೂ ಓದಿ: Team India: ಭರ್ಜರಿ ಜಯದೊಂದಿಗೆ ಪಾಕಿಸ್ತಾನದ ವಿಶ್ವದಾಖಲೆ ಮುರಿದ ಟೀಮ್ ಇಂಡಿಯಾ
ಟೀಮ್ ಇಂಡಿಯಾ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ) , ಕೆಎಲ್ ರಾಹುಲ್ , ಚೇತೇಶ್ವರ ಪೂಜಾರ , ವಿರಾಟ್ ಕೊಹ್ಲಿ , ಸೂರ್ಯಕುಮಾರ್ ಯಾದವ್ , ಶ್ರೀಕರ್ ಭರತ್ (ವಿಕೆಟ್ ಕೀಪರ್) , ರವೀಂದ್ರ ಜಡೇಜಾ , ರವಿಚಂದ್ರನ್ ಅಶ್ವಿನ್ , ಅಕ್ಷರ್ ಪಟೇಲ್ , ಮೊಹಮ್ಮದ್ ಶಮಿ , ಮೊಹಮ್ಮದ್ ಸಿರಾಜ್.
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಡೇವಿಡ್ ವಾರ್ನರ್ , ಉಸ್ಮಾನ್ ಖವಾಜಾ , ಮಾರ್ನಸ್ ಲಾಬುಶೇನ್ , ಸ್ಟೀವನ್ ಸ್ಮಿತ್ , ಮ್ಯಾಟ್ ರೆನ್ಶಾ , ಪೀಟರ್ ಹ್ಯಾಂಡ್ಸ್ಕಾಂಬ್ , ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) , ಪ್ಯಾಟ್ ಕಮ್ಮಿನ್ಸ್ (ನಾಯಕ) , ನಾಥನ್ ಲಿಯಾನ್ , ಟಾಡ್ ಮರ್ಫಿ , ಸ್ಕಾಟ್ ಬೋಲ್ಯಾಂಡ್.