VIDEO: ಸಿರಾಜ್​ಗೆ ವಿಕೆಟ್​: ಕೋಚ್ ದ್ರಾವಿಡ್ ಆಕ್ರಮಣಕಾರಿ ಸಂಭ್ರಮ

| Updated By: ಝಾಹಿರ್ ಯೂಸುಫ್

Updated on: Feb 09, 2023 | 4:54 PM

India vs Australia 1st Test: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್​ ದಾಳಿಗೆ ತತ್ತರಿಸಿತು. ಪರಿಣಾಮ ಮೊದಲ ಇನಿಂಗ್ಸ್​ನಲ್ಲಿ ಕೇವಲ 177 ರನ್​ಗಳಿಗೆ ಆಸ್ಟ್ರೇಲಿಯಾ ತಂಡ ಆಲೌಟ್ ಆಗಿದೆ.

VIDEO: ಸಿರಾಜ್​ಗೆ ವಿಕೆಟ್​: ಕೋಚ್ ದ್ರಾವಿಡ್ ಆಕ್ರಮಣಕಾರಿ ಸಂಭ್ರಮ
Rahul Dravid
Follow us on

India vs Australia 1st Test: ನಾಗ್ಪುರದ ವಿದರ್ಭ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ-ಆಸ್ಟ್ರೇಲಿಯಾ (IND vs AUS) ನಡುವಣ ಮೊದಲ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು. ಆದರೆ 2ನೇ ಓವರ್​ನಲ್ಲೇ ಮೊಹಮ್ಮದ್ ಸಿರಾಜ್ ಆಸೀಸ್ ಪಡೆಗೆ ಶಾಕ್ ನೀಡಿದ್ದರು. ಮೊದಲ ಓವರ್ ಎಸೆದ ಮೊಹಮ್ಮದ್ ಶಮಿ ಅತ್ಯುತ್ತಮ ದಾಳಿ ಸಂಘಟಿಸಿದ್ದರು. ಇದಾದ ಬಳಿಕ 2ನೇ ಓವರ್​ ಎಸೆದ ಮೊಹಮ್ಮದ್ ಸಿರಾಜ್ ಉಸ್ಮಾನ್ ಖ್ವಾಜಾರನ್ನು ಎಲ್​ಬಿ ಬಲೆಗೆ ಬೀಸಿದರು.

ಕೆಳ ಹಂತದಲ್ಲಿ ಬಂದ ಸಿರಾಜ್ ಚೆಂಡನ್ನು ಗುರುತಿಸುವಲ್ಲಿ ಆಸೀಸ್ ಬ್ಯಾಟರ್ ಎಡವಿದರು. ಇತ್ತ ಎಲ್​ಬಿಡಬ್ಲ್ಯೂಗೆ ಮನವಿ ಸಲ್ಲಿಸಿದರೂ ಅಂಪೈರ್ ಔಟ್ ನೀಡಿರಲಿಲ್ಲ. ಹೀಗಾಗಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಡಿಆರ್​ಎಸ್ ಮೊರೆ ಹೋದರು.

ಇದನ್ನೂ ಓದಿ
ICC Rankings: ಐಸಿಸಿ ರ‍್ಯಾಂಕಿಂಗ್​ನಲ್ಲಿ ನಂಬರ್ 1 ಸ್ಥಾನ ಅಲಂಕರಿಸಿದ ಭಾರತದ 6 ಬೌಲರ್​ಗಳು ಇವರೇ
ವಿದೇಶದಲ್ಲಿ ಪಂದ್ಯವಾಡುತ್ತಿದ್ದ ಆಟಗಾರನನ್ನು ಕ್ರೀಡಾ ಸಚಿವನಾಗಿ ಆಯ್ಕೆ ಮಾಡಿದ ಪಾಕ್ ಸರ್ಕಾರ
Shubman Gill: ಕಿಂಗ್ ಕೊಹ್ಲಿಯ ಮತ್ತೊಂದು ದಾಖಲೆ ಮುರಿದ ಶುಭ್​ಮನ್ ಗಿಲ್
WIPL 2023: ಮಹಿಳಾ ಐಪಿಎಲ್ 5 ತಂಡಗಳ ಘೋಷಣೆ

ಇತ್ತ ಟೀಮ್ ಇಂಡಿಯಾ ಆಟಗಾರರು ಮೂರನೇ ಅಂಪೈರ್​ನ ತೀರ್ಪನ್ನು ಕುತೂಹಲದಿಂದ ಕಾಯುತ್ತಿದ್ದರು. ರಿಪ್ಲೇ ಪರಿಶೀಲಿಸಿದ ಥರ್ಡ್ ಅಂಪೈರ್ ಔಟ್ ಎಂದು ತೀರ್ಪಿತ್ತರು. ಇದನ್ನು ನೋಡಿ ಟೀಮ್ ಇಂಡಿಯಾ ಆಟಗಾರರು ಸಂಭ್ರಮಿಸಲಾರಂಭಿಸಿದರು.
ಮತ್ತೊಂದೆಡೆ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಕೂಡ ಅಂತಹದೊಂದು ಆರಂಭವನ್ನು ಎದುರು ನೋಡಿದ್ದರು. ಹೀಗಾಗಿಯೇ ಸಿರಾಜ್​ಗೆ ವಿಕೆಟ್​ ಸಿಗುತ್ತಿದ್ದಂತೆ ಆಕ್ರಮಣಕಾರಿಯಾಗಿ ಸಂಭ್ರಮಿಸಿದರು. ಇದೀಗ ಶಾಂತ ಸ್ವಭಾವದ ರಾಹುಲ್ ದ್ರಾವಿಡ್ ಅವರ ಆಕ್ರಮಣಕಾರಿ ಸಂಭ್ರಮದ ವಿಡಿಯೋ ವೈರಲ್ ಆಗಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್​ ದಾಳಿಗೆ ತತ್ತರಿಸಿತು. ಪರಿಣಾಮ ಮೊದಲ ಇನಿಂಗ್ಸ್​ನಲ್ಲಿ ಕೇವಲ 177 ರನ್​ಗಳಿಗೆ ಆಸ್ಟ್ರೇಲಿಯಾ ತಂಡ ಆಲೌಟ್ ಆಗಿದೆ. ಟೀಮ್ ಇಂಡಿಯಾ ಪರ ಜಡೇಜಾ 5 ವಿಕೆಟ್ ಪಡೆದರೆ, ಅಶ್ವಿನ್ 3 ವಿಕೆಟ್ ಕಬಳಿಸಿ ಮಿಂಚಿದರು.

ಇದಾದ ಬಳಿಕ ಪ್ರಥಮ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಮೊದಲ ದಿನದಾಟದ ಮುಕ್ತಾಯಕ್ಕೆ 1 ವಿಕೆಟ್ ಕಳೆದುಕೊಂಡು 77 ರನ್​ ಕಲೆಹಾಕಿದೆ. ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ 20 ರನ್​ಗಳಿಸಿ ಔಟಾದರೆ, ರೋಹಿತ್ ಶರ್ಮಾ (56) ಹಾಗೂ ಅಶ್ವಿನ್ (0) 2ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಇದನ್ನೂ ಓದಿ: Team India: ಭರ್ಜರಿ ಜಯದೊಂದಿಗೆ ಪಾಕಿಸ್ತಾನದ ವಿಶ್ವದಾಖಲೆ ಮುರಿದ ಟೀಮ್ ಇಂಡಿಯಾ

ಟೀಮ್ ಇಂಡಿಯಾ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ) , ಕೆಎಲ್ ರಾಹುಲ್ , ಚೇತೇಶ್ವರ ಪೂಜಾರ , ವಿರಾಟ್ ಕೊಹ್ಲಿ , ಸೂರ್ಯಕುಮಾರ್ ಯಾದವ್ , ಶ್ರೀಕರ್ ಭರತ್ (ವಿಕೆಟ್ ಕೀಪರ್) , ರವೀಂದ್ರ ಜಡೇಜಾ , ರವಿಚಂದ್ರನ್ ಅಶ್ವಿನ್ , ಅಕ್ಷರ್ ಪಟೇಲ್ , ಮೊಹಮ್ಮದ್ ಶಮಿ , ಮೊಹಮ್ಮದ್ ಸಿರಾಜ್.

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಡೇವಿಡ್ ವಾರ್ನರ್ , ಉಸ್ಮಾನ್ ಖವಾಜಾ , ಮಾರ್ನಸ್ ಲಾಬುಶೇನ್ , ಸ್ಟೀವನ್ ಸ್ಮಿತ್ , ಮ್ಯಾಟ್ ರೆನ್ಶಾ , ಪೀಟರ್ ಹ್ಯಾಂಡ್ಸ್ಕಾಂಬ್ , ಅಲೆಕ್ಸ್ ಕ್ಯಾರಿ (ವಿಕೆಟ್​ ಕೀಪರ್) , ಪ್ಯಾಟ್ ಕಮ್ಮಿನ್ಸ್ (ನಾಯಕ) , ನಾಥನ್ ಲಿಯಾನ್ , ಟಾಡ್ ಮರ್ಫಿ , ಸ್ಕಾಟ್ ಬೋಲ್ಯಾಂಡ್.