Team India Head Coach: ಟೀಮ್ ಇಂಡಿಯಾ ಪೂರ್ಣಾವಧಿ ಕೋಚ್ ಆಗಲು ರಾಹುಲ್ ದ್ರಾವಿಡ್ ಒಪ್ಪಿಗೆ, 10 ಕೋಟಿ ಸಂಭಾವನೆ: ವರದಿ
Rahul Dravid: ಐಸಿಸಿ ಟಿ20 ವಿಶ್ವಕಪ್ 2021 ಟೂರ್ನಿ ಮುಗಿದ ಬೆನ್ನಲ್ಲೇ ರವಿಶಾಸ್ತ್ರಿ ಅವರ ಅವಧಿ ಮುಕ್ತಾಯಗೊಳ್ಳಲಿದೆ. ಆ ಬಳಿಕ ದ್ರಾವಿಡ್ ಅವರು ಟೀಮ್ ಇಂಡಿಯಾ ಮುಖ್ಯ ಕೋಚ್ ಹುದ್ದೆ ಸ್ವೀಕರಿಸಲಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.
ರಾಹುಲ್ ದ್ರಾವಿಡ್ (Rahul Dravid) ಅವರನ್ನು ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ (Team India Coach) ಆಗಿ ನೇಮಕ ಮಾಡಲಾಗಿದೆ ಎಂದು ಎಎನ್‌ಐ ವರದಿ ಬಿತ್ತರಿಸಿದೆ. ಹಾಲಿ ಕೋಚ್ ರವಿ ಶಾಸ್ತ್ರಿ (Ravi Shastri) ಅವರ ಅವಧಿ ಮುಕ್ತಾಯವಾದ ಬಳಿಕ ದ್ರಾವಿಡ್ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ. ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ (ICC T20 World Cup) ಮುಗಿದ ಬೆನ್ನಲ್ಲೇ ಸದ್ಯ ಭಾರತದ ಮುಖ್ಯ ಕೋಚ್ ಆಗಿರುವ ರವಿಶಾಸ್ತ್ರಿ ಅವರ ಅವಧಿ ಮುಕ್ತಾಯಗೊಳ್ಳಲಿದೆ. ಆ ಬಳಿಕ ದ್ರಾವಿಡ್ ಅವರು ಟೀಮ್ ಇಂಡಿಯಾ ಮುಖ್ಯ ಕೋಚ್ ಹುದ್ದೆ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಆದರೆ, ಕೋಚ್ ನೇಮಕ ವಿಚಾರವಾಗಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಇನ್ನೂ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ.
ಟಿ20 ವಿಶ್ವಕಪ್ ಟೂರ್ನಿ ಮುಗಿದ ಬಳಿಕ ನವೆಂಬರ್‌ನಲ್ಲಿ ಭಾರತ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ಸರಣಿ ನಡೆಯಲಿದ್ದು, ಕೋಚ್ ಆಗಿ ದ್ರಾವಿಡ್ ಅವರು ತಂಡವನ್ನು ಸೇರಿಕೊಳ್ಳಲಿರುವುದು ಬಹುತೇಕ ಖಚಿತವಾಗಿದೆ ಎಂದು ‘ಇಎಸ್‌ಪಿಎನ್ ಕ್ರಿಕ್ ಇನ್ಫೊ’ ವರದಿ ಮಾಡಿದೆ.
ಇದರ ಬೆನ್ನಲ್ಲೇ ಟೈಮ್ಸ್ ಆಫ್ ಇಂಡಿಯಾ ಕೂಡ ಈ ಬಗ್ಗೆ ವರದಿ ಮಾಡಿದ್ದು, ರಾಹುಲ್ ದ್ರಾವಿಡ್ ಅವರಿಗೆ ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಎರಡು ವರ್ಷಗಳ ಗುತ್ತಿಗೆ ನೀಡಲಾಗಿದೆ. ದ್ರಾವಿಡ್ ಅವರು 10 ಕೋಟಿ ರೂ. ಸಂಭಾವನೆ ಪಡೆಯಲಿದ್ದಾರೆ ಎಂದು ಹೇಳಿದೆ. ಆದರೆ, ಈ 10 ಕೋಟಿ ರೂ. ಸಂಭಾವನೆ ಎರಡು ವರ್ಷಕ್ಕಾ ಅಥವಾ ಒಂದು ವರ್ಷಕ್ಕಾ ಎಂಬ ಬಗ್ಗೆ ಮಾಹಿತಿಯಿಲ್ಲ.
ಟಿ20 ವಿಶ್ವಕಪ್ ನಂತರ ಪ್ರಸ್ತುತ ಕೋಚ್ ರವಿಶಾಸ್ತ್ರಿ ಮತ್ತು ಅವರ ಸಹಾಯಕ ಸಿಬ್ಬಂದಿಯ ಅಧಿಕಾರಾವಧಿ ಕೊನೆಗೊಳ್ಳುವುದು ಗಮನಾರ್ಹವಾಗಿದೆ. ಟಿ20 ವಿಶ್ವಕಪ್ ನಂತರ ಮೂರು ದಿನಗಳ ನಂತರ ನವೆಂಬರ್ 17ರಂದು ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧ ತವರಿನ ಸರಣಿಗೆ ರಾಹುಲ್ ದ್ರಾವಿಡ್ ತಂಡದ ಉಸ್ತುವಾರಿ ವಹಿಸಲಿದ್ದಾರೆ.
ಕೆಲವು ಆಸ್ಟ್ರೇಲಿಯಾದ ತರಬೇತುದಾರರು ಈ ಪಾತ್ರದಲ್ಲಿ ಆಸಕ್ತಿ ತೋರಿಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಬಿಸಿಸಿಐ ಬೇರೆ ಕಡೆಗೆ ತಿರುಗುವ ಮೊದಲು ಈ ಸ್ಥಾನಕ್ಕಾಗಿ ಭಾರತ ಕೋಚ್ ಅನ್ನು ನೋಡುತ್ತಿದೆ. ಈ ಮೊದಲು ಇದೇ ಸ್ಥಾನಕ್ಕೆ ದ್ರಾವಿಡ್ ಅವರನ್ನು ಸಂಪರ್ಕಿಸಿದಾಗ ಅವರು ಈ ಹುದ್ದೆಯನ್ನು ತಿರಸ್ಕರಿಸಿದ್ದರು ಎಂದು ಹೇಳಲಾಗಿತ್ತು. ಅಲ್ಲದೆ ಮತ್ತೊಬ್ಬ ಕನ್ನಡಿಗ ಅನಿಲ್ ಕುಂಬ್ಳೆ ಹೆಸರು ಕೂಡ ಈ ಹಿಂದೆ ಕೇಳಿಬಂದಿತ್ತು.
MS Dhoni: ಧೋನಿಯ ಪ್ರಕಾರ ಈ ವರ್ಷ ಐಪಿಎಲ್ ಪ್ರಶಸ್ತಿ ಗೆಲ್ಲಲು ಅರ್ಹವಾದ ತಂಡ ಸಿಎಸ್ಕೆ ಅಲ್ಲವಂತೆ: ಮತ್ಯಾವುದು?
(Rahul Dravid has agreed to take over as the head coach of the Team India)
Published On - 8:29 am, Sat, 16 October 21