IND vs SA: ಟೀಮ್ ಇಂಡಿಯಾದಲ್ಲಿ ಪಾಂಡ್ಯ ಪಾತ್ರವೇನು? ಈ ಬಗ್ಗೆ ದ್ರಾವಿಡ್ ಹೇಳಿದ್ದೇನು?

| Updated By: ಝಾಹಿರ್ ಯೂಸುಫ್

Updated on: Jun 08, 2022 | 9:53 AM

Hardik Pandya: ಈ ಬಾರಿ ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡದ ನಾಯಕನಾಗಿ ಪದಾರ್ಪಣೆ ಮಾಡಿದ್ದ ಪಾಂಡ್ಯ 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದರು. ಅಲ್ಲದೆ 131 ರ ಸ್ಟ್ರೈಕ್ ರೇಟ್‌ನಲ್ಲಿ 487 ರನ್‌ಗಳನ್ನು ಗಳಿಸಿ ಗುಜರಾತ್ ಪರ ಅತ್ಯಧಿಕ ರನ್​ಗಳಿಸಿದ ಬ್ಯಾಟ್ಸ್​ಮನ್ ಆಗಿ ಹೊರಹೊಮ್ಮಿದ್ದರು.

IND vs SA: ಟೀಮ್ ಇಂಡಿಯಾದಲ್ಲಿ ಪಾಂಡ್ಯ ಪಾತ್ರವೇನು? ಈ ಬಗ್ಗೆ ದ್ರಾವಿಡ್ ಹೇಳಿದ್ದೇನು?
hardik pandya-Rahul dravid
Follow us on

ಭಾರತ-ಸೌತ್ ಆಫ್ರಿಕಾ (India vs South Africa) ನಡುವಣ ಟಿ20 ಸರಣಿ ಜೂನ್ 9 ರಿಂದ ಶುರುವಾಗಲಿದೆ. ಈ ಸರಣಿಯ ಮೂಲಕ ಟೀಮ್ ಇಂಡಿಯಾದ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ಕಂಬ್ಯಾಕ್ ಮಾಡಲಿದ್ದಾರೆ. ಆದರೆ ಇತ್ತ ಐಪಿಎಲ್​ನಲ್ಲಿ ನಾಯಕನಾಗಿ ಮಿಂಚಿರುವ ಪಾಂಡ್ಯ ಟೀಮ್ ಇಂಡಿಯಾ (Team India) ಪರ ಯಾವ ಕ್ರಮಾಂಕದಲ್ಲಿ ಆಡಲಿದ್ದಾರೆ? ಅವರ ಪಾತ್ರವೇನು ಎಂಬ ಪ್ರಶ್ನೆಗಳು ಮೂಡಿವೆ. ಏಕೆಂದರೆ ಗುಜರಾತ್ ಟೈಟಾನ್ಸ್​ ಪರ ಹಾರ್ದಿಕ್ ಪಾಂಡ್ಯ 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದರು. ಹೀಗಾಗಿ ಟೀಮ್ ಇಂಡಿಯಾದಲ್ಲೂ ಪಾಂಡ್ಯಗೆ ಬ್ಯಾಟಿಂಗ್ ಬಡ್ತಿ ಸಿಗಲಿದೆಯಾ ಎಂಬ ಕುತೂಹಲ ಎಲ್ಲರಲ್ಲಿದೆ. ಈ ಬಗ್ಗೆ ಮಾತನಾಡಿರುವ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ (Rahul Dravid), ಟೀಮ್ ಇಂಡಿಯಾ ಪರ ಹಾರ್ದಿಕ್ ಪಾಂಡ್ಯ ಮೂರು ಅಥವಾ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಅಗತ್ಯವಿಲ್ಲ ಎಂದಿದ್ದಾರೆ.

ಹಾರ್ದಿಕ್ ಬ್ಯಾಟಿಂಗ್ ಮತ್ತು ಬೌಲಿಂಗ್​ ಎರಡರಲ್ಲೂ ಅದ್ಭುತ ಆಟಗಾರ ಎಂಬುದರಲ್ಲಿ ಸಂದೇಹವಿಲ್ಲ. ಅವರು ಈ ಹಿಂದೆ ಭಾರತಕ್ಕಾಗಿ ಎರಡೂ ವಿಭಾಗಗಳಲ್ಲಿ ಉತ್ತಮ ಪ್ರದರ್ಶನ ನೀಡಿರುವುದನ್ನು ನೋಡಿದ್ದೇವೆ. ಅವರು ವೈಟ್ ಬಾಲ್ ಕ್ರಿಕೆಟ್‌ನಲ್ಲಿ ಬಹಳ ಯಶಸ್ವಿಯಾಗಿದ್ದಾರೆ. ಇದೀಗ ಐಪಿಎಲ್‌ನಲ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಹಾರ್ದಿಕ್ ಅವರಂತಹ ಗುಣಗಳನ್ನು ಹೊಂದಿರುವ ಆಟಗಾರನನ್ನು ನಾವು ಆರಿಸಿಕೊಳ್ಳುವುದು ನಮಗೆ ತುಂಬಾ ಸಂತೋಷದ ವಿಷಯವಾಗಿದೆ ಎಂದು ದ್ರಾವಿಡ್ ಹೇಳಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಯಲ್ಲಿ ಬ್ಯಾಟಿಂಗ್ ಕ್ರಮಾಂಕದ ಬಗ್ಗೆ ಮಾತನಾಡಿದ ಟೀಮ್ ಇಂಡಿಯಾದ ಮುಖ್ಯ ಕೋಚ್ ಅವರನ್ನು ಕೇಳಿದಾಗ, “ನಾನು ಮೊದಲೇ ಬ್ಯಾಟಿಂಗ್ ಕ್ರಮಾಂಕವನ್ನು ಬಹಿರಂಗಪಡಿಸಲು ಬಯಸುವುದಿಲ್ಲ. ಪಂದ್ಯದ ಆರಂಭಕ್ಕೂ ಮುನ್ನ ಅದನ್ನು ಮಾಡುತ್ತೇನೆ. ಕೆಲವೊಮ್ಮೆ ನಿಮ್ಮ ಫ್ರಾಂಚೈಸಿಗಾಗಿ ನೀವು ವಹಿಸುವ ಪಾತ್ರವು ಭಾರತಕ್ಕಾಗಿ ನೀವು ವಹಿಸುವ ಪಾತ್ರಕ್ಕೆ ಹೊಂದಿಕೆಯಾಗುತ್ತದೆ. ಕೆಲವೊಮ್ಮೆ ನೀವು ಇತರ ತಂಡಗಳ ವಿರುದ್ಧ ವಿಭಿನ್ನ ಪಾತ್ರವನ್ನು ವಹಿಸಬೇಕಾಗುತ್ತದೆ. ಇದು ಹಾರ್ದಿಕ್ ಪಾಂಡ್ಯ ವಿಷಯದಲ್ಲಿ ಮಾತ್ರವಲ್ಲ. ಇದು ಎಲ್ಲಾ ಆಟಗಾರರಿಗೂ ಅನ್ವಯಿಸುತ್ತದೆ. ಅವರ ಫ್ರಾಂಚೈಸ್‌ಗಾಗಿ ಅವರು ಆಡಿದ ಕ್ರಮಾಂಕಗಳು, ನಮ್ಮ ತಂಡದ ಸಂಯೋಜನೆಯನ್ನು ಅವಲಂಬಿಸಿದಾಗ ಇಲ್ಲಿ ಭಿನ್ನವಾಗಿರಬಹುದು ಎಂದು ದ್ರಾವಿಡ್ ಹೇಳಿದ್ದಾರೆ.

ಇದನ್ನೂ ಓದಿ
India vs South Africa T20: ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿ ವೇಳಾಪಟ್ಟಿ ಪ್ರಕಟ
Ashish Nehra: ಎಳನೀರು, ಪೆನ್ನು ಪೇಪರ್​ನಲ್ಲೇ 9 ತಂಡಗಳನ್ನ ಮುಗಿಸಿಬಿಟ್ರು..!
IPL 2022: RCB ತಂಡಕ್ಕೆ ಸಿಡಿಲಮರಿ ABD ರಿ-ಎಂಟ್ರಿ​..!
IPL 2022: ವಿಶ್ವ ದಾಖಲೆ ನಿರ್ಮಿಸಿದ RCB ಅಭಿಮಾನಿಗಳು

ಹೀಗಾಗಿ ಹಾರ್ದಿಕ್ ಪಾಂಡ್ಯ ಟೀಮ್ ಇಂಡಿಯಾದಲ್ಲಿ ಈ ಹಿಂದಿನಂತೆ 6ನೇ ಕ್ರಮಾಂಕದಲ್ಲಿ ಫಿನಿಶರ್​ ಆಗಿ ಕಾಣಿಸಿಕೊಳ್ಳುವ ಸಾಧ್ಯತೆಯೇ ಹೆಚ್ಚು. ಈ ಬಾರಿ ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡದ ನಾಯಕನಾಗಿ ಪದಾರ್ಪಣೆ ಮಾಡಿದ್ದ ಪಾಂಡ್ಯ 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದರು. ಅಲ್ಲದೆ 131 ರ ಸ್ಟ್ರೈಕ್ ರೇಟ್‌ನಲ್ಲಿ 487 ರನ್‌ಗಳನ್ನು ಗಳಿಸಿ ಗುಜರಾತ್ ಪರ ಅತ್ಯಧಿಕ ರನ್​ಗಳಿಸಿದ ಬ್ಯಾಟ್ಸ್​ಮನ್ ಆಗಿ ಹೊರಹೊಮ್ಮಿದ್ದರು. ಅಷ್ಟೇ ಅಲ್ಲದೆ ಬೌಲಿಂಗ್​ನಲ್ಲೂ ಮಿಂಚುವ ಮೂಲಕ ಗುಜರಾತ್ ಟೈಟಾನ್ಸ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ ಕಂಬ್ಯಾಕ್ ಮಾಡಿರುವ ಹಾರ್ದಿಕ್ ಪಾಂಡ್ಯ ಟೀಮ್ ಇಂಡಿಯಾದ ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಬಲ ತುಂಬಲಿದ್ದಾರೆ.

ಸೌತ್ ಆಫ್ರಿಕಾ ವಿರುದ್ಧದ ಸರಣಿಗೆ ಭಾರತ ತಂಡ ಹೀಗಿದೆ: ಲೋಕೇಶ್ ರಾಹುಲ್ (ನಾಯಕ), ರಿಷಬ್ ಪಂತ್ (ಉಪನಾಯಕ, ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಕುಲದೀಪ್ ಯಾದವ್, ಯುಜುವೇಂದ್ರ ಚಹಾಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಷದೀಪ್ ಸಿಂಗ್ ಮತ್ತು ಉಮ್ರಾನ್ ಮಲಿಕ್.

 

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

 

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:52 am, Wed, 8 June 22