AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವೈಭವ್​ನ ಕಾಪಾಡಿಕೊಳ್ಳುವುದು ನಮ್ಮೆಲ್ಲರ ಹೊಣೆ’; ರಾಹುಲ್ ದ್ರಾವಿಡ್

Rahul Dravid on Vaibhav Sooryavanshi: ವೈಭವ್ ಸೂರ್ಯವಂಶಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲು ಸಜ್ಜಾಗಿದ್ದಾರೆ. ರಾಹುಲ್ ದ್ರಾವಿಡ್ ವೈಭವ್‌ರನ್ನು ರಕ್ಷಿಸಲು ಮತ್ತು ಮುಕ್ತವಾಗಿ ಆಡಲು ಅವಕಾಶ ನೀಡಲು ಸಲಹೆ ನೀಡಿದ್ದಾರೆ. ಆದಾಗ್ಯೂ, ಐರ್ಲೆಂಡ್ ಅಥವಾ ಇಂಗ್ಲೆಂಡ್ ಸರಣಿಯಲ್ಲಿ ಅವರಿಗೆ ಪ್ಲೇಯಿಂಗ್ 11 ರಲ್ಲಿ ಸ್ಥಾನ ಸಿಗುವುದು ಸವಾಲಾಗಿದೆ. ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ ಮತ್ತು ಇಶಾನ್ ಕಿಶನ್ ಅವರಂತಹ ಪ್ರಬಲ ಸ್ಪರ್ಧಿಗಳ ನಡುವೆ ವೈಭವ್ ಅವಕಾಶಕ್ಕಾಗಿ ಕಾಯಬೇಕಾಗಿದೆ.

‘ವೈಭವ್​ನ ಕಾಪಾಡಿಕೊಳ್ಳುವುದು ನಮ್ಮೆಲ್ಲರ ಹೊಣೆ’; ರಾಹುಲ್ ದ್ರಾವಿಡ್
Rahul DravidImage Credit source: PTI
ಪೃಥ್ವಿಶಂಕರ
|

Updated on:Jun 26, 2026 | 5:01 PM

Share

ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಲು ಸಜ್ಜಾಗಿರುವ ವೈಭವ್ ಸೂರ್ಯವಂಶಿಗೆ (Vaibhav Sooryavanshi) ಯಾವ ಸರಣಿಯಲ್ಲಿ ತಂಡದಲ್ಲಿ ಆಡುವ ಅವಕಾಶ ಸಿಗುತ್ತದೆ ಎಂಬುದು ಇದುವರೆಗೆ ಖಚಿತವಾಗಿಲ್ಲ. ಆದರೆ ಐರ್ಲೆಂಡ್ ಅಥವಾ ಇಂಗ್ಲೆಂಡ್‌ ವಿರುದ್ಧದ ಯಾವುದಾದರೂ ಒಂದು ಸರಣಿಯಲ್ಲಾದರೂ ವೈಭವ್ ಆಡುವುದು ಖಚಿತ. ಹೀಗಾಗಿ ವೈಭವ್​ಗೆ ಎಲ್ಲೆಡೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಈಗಾಗಲೇ ಕ್ರಿಕೆಟ್ ಪಂಡಿತರು ವೈಭವ್​ಗೆ ಸಲಹೆಗಳನ್ನು ನೀಡುವುದರ ಜೊತೆಗೆ ಕೆಲವು ಎಚ್ಚರಿಕೆಗಳನ್ನು ನೀಡಿದ್ದಾರೆ. ಈ ನಡುವೆ, ವೈಭವ್ ಸೂರ್ಯವಂಶಿನ ಐಪಿಎಲ್‌ಗೆ ಪರಿಚಯಿಸಿದ ರಾಹುಲ್ ದ್ರಾವಿಡ್, ಸೂರ್ಯವಂಶಿ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ವೈಭವ್ ಈ ಮಟ್ಟವನ್ನು ತಲುಪಲು ಸಾಕಷ್ಟು ಶ್ರಮಿಸಿದ್ದಾರೆ. ಆದರೆ ಅವರನ್ನು ರಕ್ಷಿಸುವುದು ಬಹಳ ಮುಖ್ಯ. ಅವನಿಗೆ ಮುಕ್ತವಾಗಿ ಆಡುವ ಸ್ವಾತಂತ್ರ್ಯವನ್ನು ನೀಡಬೇಕು ಎಂದಿದ್ದಾರೆ.

ವೈಭವ್ ಬಗ್ಗೆ ದ್ರಾವಿಡ್ ಹೇಳಿದ್ದೇನು?

ವೈಭವ್ ಸೂರ್ಯವಂಶಿ ಅವರ ಚೊಚ್ಚಲ ಪಂದ್ಯಕ್ಕೂ ಮುನ್ನ ಬಿಬಿಸಿ ಜೊತೆ ಮಾತನಾಡಿದ ರಾಹುಲ್ ದ್ರಾವಿಡ್, ‘ವೈಭವ್ ಅವರನ್ನು ಸುರಕ್ಷಿತವಾಗಿಡುವುದು ಮುಖ್ಯ. ಅವರಿಗೆ ಬೆಂಬಲ ಮತ್ತು ಸಹಾಯ ಬೇಕು. ಆದಾಗ್ಯೂ, ಅವರಿಗೆ ಮುಕ್ತವಾಗಿ ಆಡಲು ಸ್ವಾತಂತ್ರ್ಯ ನೀಡಬೇಕು. ವೈಭವ್ ತುಂಬಾ ವಿಶೇಷ ವ್ಯಕ್ತಿ ಮತ್ತು ಅವರಂತಹ ಕ್ರಿಕೆಟಿಗನನ್ನು ಹುಟ್ಟಿಹಾಕಲು ಯಾವುದೇ ಸೂತ್ರವಿಲ್ಲ . ಅವರು ಅಸಾಧಾರಣ ಪ್ರತಿಭೆ. ಅವರು ಬೌಲರ್‌ಗಳ ಚಲನವಲನಗಳನ್ನು ಸುಲಭವಾಗಿ ಅರ್ಥೈಸಿಕೊಳ್ಳಬಲ್ಲರು ಮತ್ತು ಅವರ ಕ್ರಿಕೆಟ್ ತಿಳುವಳಿಕೆ ಮತ್ತು ನಿರ್ಭೀತ ವರ್ತನೆ ಅದ್ಭುತವಾಗಿದೆ. ಸೂರ್ಯವಂಶಿಯಂತಹ ಆಟಗಾರನನ್ನು ಸೃಷ್ಟಿಸಲು ಯಾವುದಾದರೂ ಸಿದ್ಧ ಅಸ್ತ್ರವಿದೆ ಎಂದು ನಾನು ಭಾವಿಸುವುದಿಲ್ಲ. ನೀವು ಯಾವುದೇ ಮಗುವನ್ನು ತೆಗೆದುಕೊಂಡು ಅವನಿಗೆ ಎಲ್ಲಾ ರೀತಿಯ ತರಬೇತಿಯನ್ನು ನೀಡಿದರು ಅವನು ಇಷ್ಟು ಒಳ್ಳೆಯ ಆಟಗಾರನಾಗುತ್ತಾನೆ ಎಂದು ಹೇಳಲು ಸಾಧ್ಯವಿಲ್ಲ ಎಂದು ನಾನು ಭಾವಿಸುತ್ತೇನೆ’ ಎಂದಿದ್ದಾರೆ.

ಐರ್ಲೆಂಡ್ ವಿರುದ್ಧ ಅಬ್ಬರಿಸುವ ಮುನ್ನವೇ ಭಾರತದ ಬೌಲರ್​ಗಳ ಬೆಂಡೆತ್ತಿದ ವೈಭವ್; ವಿಡಿಯೋ

ಸೂರ್ಯವಂಶಿಗೆ ಅವಕಾಶ ಸಿಗುತ್ತಾ?

ವೈಭವ್ ಸೂರ್ಯವಂಶಿ ಐರ್ಲೆಂಡ್ ಸರಣಿಯಲ್ಲಿ ಪಾದಾರ್ಪಣೆ ಮಾಡುವುದು ಸ್ವಲ್ಪ ಕಷ್ಟ. ಇಲ್ಲಿ ದೊಡ್ಡ ಪ್ರಶ್ನೆ ಏನೆಂದರೆ, ವೈಭವ್ ಸೂರ್ಯವಂಶಿಗೆ ಅವಕಾಶ ನೀಡಿದರೆ, ಪ್ಲೇಯಿಂಗ್​ 11ನಿಂದ ಯಾರನ್ನು ಕೈಬಿಡಲಾಗುತ್ತದೆ ಎಂಬುದು. ಏಕೆಂದರೆ ವಿಶ್ವದ ನಂ. 1 ಟಿ20 ಆಟಗಾರ ಅಭಿಷೇಕ್ ಶರ್ಮಾ ಮತ್ತು ಟಿ20 ವಿಶ್ವಕಪ್‌ನಲ್ಲಿ ಭಾರತವನ್ನು ಗೆಲುವಿನತ್ತ ಮುನ್ನಡೆಸಿದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಅವರನ್ನು ಪ್ಲೇಯಿಂಗ್ 11ನಿಂದ ಹೊರಗಿಡುವುದು ಕಷ್ಟ. ನಂ. 3 ರಲ್ಲಿ, ಇಶಾನ್ ಕಿಶನ್ ಅವರಂತಹ ಬ್ಯಾಟ್ಸ್‌ಮನ್ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಹೀಗಾಗಿ ಸೂರ್ಯವಂಶಿ ಯಾವಾಗ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:42 pm, Fri, 26 June 26

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’