AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಭವ್ ಮಾತ್ರ ಅಲ್ಲ, ನಮ್ ಹುಡುಗ್ರು ಆಡ್ತಾರೆ; ಯೂನಿವರ್ಸಲ್ ಬೇಬಿ ಬಾಸ್ ಬಗ್ಗೆ ದ್ರಾವಿಡ್ ಮಾತು

Rahul Dravid Hails Vaibhav Sooryavanshi: ಜೂನ್ 20 ರಿಂದ ಆರಂಭವಾಗಲಿರುವ ಮಹಾರಾಜ ಟಿ20 ಟ್ರೋಫಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಾಹುಲ್ ದ್ರಾವಿಡ್, ಯುವ ಪ್ರತಿಭೆ ವೈಭವ್ ಸೂರ್ಯವಂಶಿಯನ್ನು ಶ್ಲಾಘಿಸಿದ್ದಾರೆ. ವೈಭವ್ ಅಪರೂಪದ ಆಟಗಾರ ಎಂದ ದ್ರಾವಿಡ್, ಸಚಿನ್ ನಂತರ 15ನೇ ವಯಸ್ಸಿಗೆ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಏಕೈಕ ಆಟಗಾರ ಎಂದು ಬಣ್ಣಿಸಿದರು. ಐಪಿಎಲ್ ಆರೆಂಜ್ ಕ್ಯಾಪ್ ಗೆದ್ದು, ಭಾರತ ಎ ತಂಡದಲ್ಲಿ ಸ್ಥಾನ ಪಡೆದಿರುವ ವೈಭವ್, ಭವಿಷ್ಯದ ತಾರೆಯೆಂದು ದ್ರಾವಿಡ್ ಅಭಿಪ್ರಾಯಪಟ್ಟರು.

ವೈಭವ್ ಮಾತ್ರ ಅಲ್ಲ, ನಮ್ ಹುಡುಗ್ರು ಆಡ್ತಾರೆ; ಯೂನಿವರ್ಸಲ್ ಬೇಬಿ ಬಾಸ್ ಬಗ್ಗೆ ದ್ರಾವಿಡ್ ಮಾತು
Vaibhav Sooryavanshi , Rahul DravidImage Credit source: PTI
ಪೃಥ್ವಿಶಂಕರ
|

Updated on:Jun 12, 2026 | 4:26 PM

Share

ಐದನೇ ಆವೃತ್ತಿಯ ಮಹಾರಾಜ ಟಿ20 ಟ್ರೋಫಿ (Maharaja T20 Trophy) ಇದೇ ಜೂನ್ 20 ರಿಂದ ಆರಂಭವಾಗಲಿದ್ದು, ಜುಲೈ 12 ರವರೆಗೆ ನಡೆಯಲಿದೆ. ಈ ಟೂರ್ನಿಗೆ ಈಗಾಗಲೇ ಹರಾಜು ಕೂಡ ನಡೆದಿದೆ. ಈ ಲೀಗ್​ನಲ್ಲಿ ಭಾಗವಹಿಸುತ್ತಿರುವ ಐದು ಫ್ರಾಂಚೈಸಿಗಳು ಕೂಡ ಬಲಿಷ್ಠ ತಂಡಗಳನ್ನು ಕಟ್ಟಿಕೊಂಡು ಅಖಾಡಕ್ಕಿಳಿಯಲು ಸಜ್ಜಾಗಿವೆ. ಅದರ ಭಾಗವಾಗಿ ಈ ಟೂರ್ನಿಗೆ ಆತಿಥ್ಯವಹಿಸುತ್ತಿರುವ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಟೂರ್ನಿಯ ಟ್ರೋಫಿ ಅನಾವರಣ ಕಾರ್ಯಕ್ರಮವನ್ನು ಜೂನ್ 11 ರಂದು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ದಿ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್ (Rahul Dravid) ಕೂಡ ಭಾಗವಹಿಸಿದ್ದರು. ಈ ವೇಳೆ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ದ್ರಾವಿಡ್, ತಮ್ಮ ಶಿಷ್ಯ ವೈಭವ್ ಸೂರ್ಯವಂಶಿಯನ್ನು (Vaibhav Sooryavanshi) ಹೊಗಳಿ ಮಾತನಾಡಿದ್ದಾರೆ.

ಹೋಲಿಕೆ ಮಾಡುವುದು ಸರಿಯಲ್ಲ

ಮೊದಲಿಗೆ ಮಹಾರಾಜ ಟ್ರೋಫಿಗೆ ಸಂಬಂಧಿಸಿದ ಪ್ರಶ್ನೆಗಳಿಗೆ ರಾಹುಲ್ ಉತ್ತರಿಸಿದರು. ಇದೇ ವೇಳೆ ಪತ್ರಕರ್ತರೊಬ್ಬರು, ‘ವೈಭವ್ ಸೂಯವಂಶಿಯಂತಹ ಆಟಗಾರರು ಕರ್ನಾಟಕದಲ್ಲೂ ಹುಟ್ಟಿಕೊಳ್ತಾರಾ ಎಂಬ ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರಿಸಿದ ದ್ರಾವಿಡ್, ಎಲ್ಲಾ ಆಟಗಾರರನ್ನು ವೈಭವ್ ಸೂರ್ಯವಂಶಿಗೆ ಹೋಲಿಕೆ ಮಾಡುವುದು ಸರಿಯಲ್ಲ. ವೈಭವ್ ಒಬ್ಬ ಅಪರೂಪದ ಆಟಗಾರ. ಸಚಿನ್ ತೆಂಡೂಲ್ಕರ್ ಬಳಿಕ 15 ವರ್ಷಕ್ಕೆ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಆಟಗಾರ ವೈಭವ್. ಸಚಿನ್​ ರೀತಿ ಮತ್ತೊಬ್ಬ ಆಟಗಾರ 15 ವರ್ಷಕ್ಕೆ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಲು 40 ವರ್ಷಗಳು ಬೇಕಾಯ್ತು.

ಆತ ವಿಶೇಷ ಪ್ರತಿಭೆ

ಹೀಗಾಗಿ ಮತ್ತೆ 40 ವರ್ಷ ಆದ ಬಳಿಕ ಮತ್ತೊಬ್ಬ ವೈಭವ್ ಸೂರ್ಯವಂಶಿ ಹುಟ್ಟಿಕೊಳ್ತಾನೆ. ಹಾಗಂತ ಯಾರನ್ನು ಹೋಲಿಕೆ ಮಾಡಲು ಹೋಗಬಾರದು. ನಮ್ಮ ಹುಡುಗರು ಕೂಡ ಚೆನ್ನಾಗಿ ಆಡ್ತಾರೆ. ಆದ್ರೆ ವೈಭವ್ ಒಬ್ಬ ಯೂನಿಕ್ ಪ್ಲೇಯರ್ ನಾವು ಅದನ್ನು ಒಪ್ಪಿಕೊಳ್ಳಬೇಕು. ಆತ ಅದ್ಭುತವಾಗಿ ಆಡುತ್ತಿದ್ದಾನೆ. ಆತ ವಿಶೇಷ ಪ್ರತಿಭೆ. ಆತ ಮುಂದೆಯೂ ಇದೇ ರೀತಿಯ ಪ್ರದರ್ಶನವನ್ನು ಮುಂದುವರಿಸುತ್ತಾನೆ ಅಂತ ಭಾವಿಸಿದ್ದೇನೆ. ಆತ ಚೆನ್ನಾಗಿ ಆಡಿ ತಂಡವನ್ನು ಗೆಲ್ಲಿಸಲಿ’ ಎಂದು ದ್ರಾವಿಡ್ ಹೇಳಿದ್ದಾರೆ.

ಸಚಿನ್​ರಂತೆಯೇ ವೈಭವ್ ಸೂರ್ಯವಂಶಿಗೂ ವಿಶೇಷ ವಿನಾಯಿತಿ ನೀಡಿದ ಬಿಸಿಸಿಐ

ತ್ರಿಕೋನ ಸರಣಿಯಲ್ಲಿ ವೈಭವ್ ಪ್ರದರ್ಶನ

ದ್ರಾವಿಡ್ ಹೇಳಿಕೆಯಂತೆ ವೈಭವ್ ಸೂರ್ಯವಂಶಿ ಪ್ರಸ್ತುತ ವಿಶ್ವ ಕ್ರಿಕೆಟ್‌ನಲ್ಲಿ ಸದ್ದು ಮಾಡುತ್ತಿದ್ದಾರೆ. ಈಗಷ್ಟೇ ಮುಗಿದ ಐಪಿಎಲ್‌ನಲ್ಲಿ 776 ರನ್ ಕಲೆಹಾಕಿ ಆರೆಂಜ್ ಕ್ಯಾಪ್ ಕೂಡ ಗೆದ್ದಿದ್ದರು. ಇದರ ಫಲವಾಗಿ ವೈಭವ್​ಗೆ ಭಾರತ ಎ ತಂಡ, ಐರ್ಲೆಂಡ್ ಹಾಗೂ ಇಂಗ್ಲೆಂಡ್‌ ಪ್ರವಾಸಕ್ಕೆ ಭಾರತ ಟಿ20 ತಂಡದಲ್ಲೂ ಅವಕಾಶ ನೀಡಲಾಗಿದೆ. ಪ್ರಸ್ತುತ ಭಾರತ ಎ ತಂಡದೊಂದಿಗೆ ಶ್ರೀಲಂಕಾ ಪ್ರವಾಸ ಮಾಡಿರುವ ವೈಭವ್, ಶ್ರೀಲಂಕಾ ಎ ವಿರುದ್ಧದ ಮೊದಲ ಪಂದ್ಯದಲ್ಲಿ 12 ಎಸೆತಗಳಲ್ಲಿ 14 ರನ್ ಬಾರಿಸಿದರೆ, ಅಫ್ಘಾನಿಸ್ತಾನ ವಿರುದ್ಧದ ಎರಡನೇ ಪಂದ್ಯದಲ್ಲಿ 22 ಎಸೆತಗಳಲ್ಲಿ 44 ರನ್ ಬಾರಿಸಿದರು.

Published On - 4:06 pm, Fri, 12 June 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ