AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Dravid: ಜಸ್ಪ್ರೀತ್ ಬುಮ್ರಾ ಫಿಟ್ನೆಸ್ ಬಗ್ಗೆ ಕೊನೆಗೂ ಮೌನ ಮುರಿದ ಕೋಚ್ ದ್ರಾವಿಡ್; ಹೇಳಿದ್ದೇನು?

T20 World Cup 2022:

Rahul Dravid: ಜಸ್ಪ್ರೀತ್ ಬುಮ್ರಾ ಫಿಟ್ನೆಸ್ ಬಗ್ಗೆ ಕೊನೆಗೂ ಮೌನ ಮುರಿದ ಕೋಚ್ ದ್ರಾವಿಡ್; ಹೇಳಿದ್ದೇನು?
Dravid, Bumrah
TV9 Web
| Updated By: ಪೃಥ್ವಿಶಂಕರ|

Updated on:Oct 01, 2022 | 8:22 PM

Share

ಜಸ್ಪ್ರೀತ್ ಬುಮ್ರಾ (Jasprit Bumrah) ಟಿ20 ವಿಶ್ವಕಪ್‌ನಲ್ಲಿ (T20 World Cup) ಆಡುತ್ತಾರಾ ಅಥವಾ ಇಲ್ಲವಾ? ಇದೀಗ ಭಾರತೀಯ ಕ್ರಿಕೆಟ್‌ನಲ್ಲಿ ಕೇಳಿ ಬರುತ್ತಿರುವ ಪ್ರಶ್ನೆ ಇದೇ. ಬುಮ್ರಾ ಬೆನ್ನು ಮೂಳೆಯ ಇಂಜುರಿಯಿಂದಾಗಿ ಟಿ20 ವಿಶ್ವಕಪ್‌ನಲ್ಲಿ ಆಡಲು ಸಾಧ್ಯವಾಗುವುದಿಲ್ಲ ಎಂದು ಸುದ್ದಿ ಸಂಸ್ಥೆ ಪಿಟಿಐ ಸೆಪ್ಟೆಂಬರ್ 29 ರ ಗುರುವಾರ ವರದಿಯಲ್ಲಿ ಹೇಳಿಕೊಂಡಿತ್ತು. ಆದರೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು ಈ ಬಗ್ಗೆ ಅಧಿಕೃತವಾಗಿ ಇನ್ನೂ ಏನನ್ನೂ ಹೇಳಿಲ್ಲ. ಮಂಡಳಿಯ ಅಧ್ಯಕ್ಷ ಸೌರವ್ ಗಂಗೂಲಿ (Sourav Ganguly) ಮಾತ್ರ ನಿನ್ನೆ ಬುಮ್ರಾ ಚೇತರಿಸಿಕೊಳ್ಳುವ ಭರವಸೆಯನ್ನು ವ್ಯಕ್ತಪಡಿಸಿದ್ದರು. ಇದೀಗ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ (Rahul Dravid) ಕೂಡ ಬುಮ್ರಾ ಲಭ್ಯತೆಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಯ ಮೊದಲ ಪಂದ್ಯವು ಸೆಪ್ಟೆಂಬರ್ 28 ರಂದು ತಿರುವನಂತಪುರದಲ್ಲಿ ನಡೆದಿತ್ತು. ಈ ಪಂದ್ಯದಲ್ಲಿ ಬುಮ್ರಾ ಆಡಲು ಸಾಧ್ಯವಾಗಲಿಲ್ಲ. ಟಾಸ್ ವೇಳೆ ಬುಮ್ರಾ ಅಲಭ್ಯತೆಯ ಬಗ್ಗೆ ಮಾತನಾಡಿದ್ದ ನಾಯಕ ರೋಹಿತ್ ಶರ್ಮಾ, ಬುಮ್ರಾಗೆ ಸ್ವಲ್ಪ ಬೆನ್ನು ನೋವು ಕಾಣಿಸಿಕೊಂಡಿದೆ. ಹಾಗಾಗಿ ಅವರು ಈ ಪಂದ್ಯದಲ್ಲಿ ಆಡುತ್ತಿಲ್ಲ ಎಂದಿದ್ದರು. ಅದರ ನಂತರ ಈ ಬಗ್ಗೆ ಪ್ರತಿಕ್ರಿಯಿಸಿದ್ದ ಬಿಸಿಸಿಐ, ಬುಮ್ರಾ ಬೆನ್ನುನೋವಿನಿಂದ ನರಳುತ್ತಿದ್ದು ಅವರನ್ನು ಪಂದ್ಯದಿಂದ ಹೊರಗಿಡಲಾಗಿದೆ ಎಂದಿತ್ತು.

ಮುಂದೆ ಗೊತ್ತಾಗಲಿದೆ

ಆದಾಗ್ಯೂ, ಶುಕ್ರವಾರ ಸೆಪ್ಟೆಂಬರ್ 30 ರಂದು, ಮಂಡಳಿಯು ಮತ್ತೊಮ್ಮೆ ಈ ಬಗ್ಗೆ ಮಾಹಿತಿ ನೀಡಿ, ದಕ್ಷಿಣ ಆಫ್ರಿಕಾ ವಿರುದ್ಧದ T20 ಸರಣಿಯಿಂದ ಬುಮ್ರಾರನ್ನು ಹೊರಗಿಡಲಾಗಿದೆ ಎಂದು ಹೇಳಿತ್ತು. ಆ ಬಳಿಕ ಊಹಾಪೋಹಗಳ ಮಾರುಕಟ್ಟೆ ಬಿಸಿಯಾಗಿದ್ದು, ಬಿಸಿಸಿಐ ಸ್ವತಃ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮುನ್ನ ಕಾದು ನೋಡುವ ತಂತ್ರಕ್ಕೆ ಮುಂದಾಗಿದೆ. ಶನಿವಾರ, ಗುವಾಹಟಿಯಲ್ಲಿ ಎರಡನೇ ಟಿ20 ಪಂದ್ಯಕ್ಕೂ ಮುನ್ನ, ನಾಯಕ ರಾಹುಲ್ ದ್ರಾವಿಡ್ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಈ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ದ್ರಾವಿಡ್, ನಾನು ವೈದ್ಯಕೀಯ ವರದಿಗಳನ್ನು ವಿಸ್ತೃತವಾಗಿ ನೋಡಿಲ್ಲ. ಈ ಎಲ್ಲದಕ್ಕೂ ನಾನು ತಜ್ಞರನ್ನು ಅವಲಂಬಿಸಿದ್ದೇನೆ. ತಜ್ಞರು, ಬುಮ್ರಾರನ್ನು ಈ ಸರಣಿಯಿಂದ ಮಾತ್ರ ಕೈಬಿಡಿ ಎಂದಿದ್ದಾರೆ. ಈಗ ಪ್ರಸ್ತುತ ಬುಮ್ರಾ ಇಂಜುರಿಯ ಬಗ್ಗೆ ತಜ್ಞರು ತನಿಖೆ ಮಾಡುತ್ತಿದ್ದಾರೆ. ಹೀಗಾಗಿ ತಜ್ಞರ ವರದಿ ಹೊರಬಂದ ಬಳಿಕವೇ ನಾವು ಸರಿಯಾದ ನಿರ್ಧಾರ ತೆಗೆದುಕೊಳ್ಳಲು ಸಾಧ್ಯ ಎಂದಿದ್ದಾರೆ.

ತಜ್ಞರ ವರದಿಯಲ್ಲಿ ಬುಮ್ರಾ ಟಿ20 ವಿಶ್ವಕಪ್​ನಿಂದ ಹೊರಗುಳಿಯಬೇಕು ಎಂಬುದು ಖಚಿತವಾಗುವವರೆಗೂ ನಾವು ಬುಮ್ರಾ ಟಿ20 ವಿಶ್ವಕಪ್​ನಲ್ಲಿ ಆಡುವ ಬಗ್ಗೆ ಭರವಸೆ ಹೊಂದಿದ್ದೇವೆ. ತಂಡವಾಗಿ ಮತ್ತು ಆಟಗಾರನಾಗಿ ಬುಮ್ರಾಗೆ ಯಾವುದೇ ತೊಂದರೆಯಾಗದಿರಲಿ ಎಂದು ನಾವು ಯಾವಾಗಲೂ ಆಶಿಸುತ್ತೇವೆ ಎಂದು ರಾಹುಲ್ ಹೇಳಿದ್ದಾರೆ.

ಬುಮ್ರಾ ಅವರ ಸ್ಥಿತಿಯ ಬಗ್ಗೆ ಮಾತನಾಡಿದ ಕೋಚ್ ದ್ರಾವಿಡ್, ಬುಮ್ರಾ ಪ್ರಸ್ತುತ ಎನ್‌ಸಿಎಯಲ್ಲಿದ್ದಾರೆ. ತಜ್ಞರು ನೀಡುವ ಅಧಿಕೃತ ಮಾಹಿತಿಗಾಗಿ ನಾವು ಕಾಯುತ್ತಿದ್ದೇವೆ. ಹಾಗಾಗಿ ಬುಮ್ರಾ ಸದ್ಯಕ್ಕೆ ಈ ಸರಣಿಯಿಂದ ಹೊರಗುಳಿದಿದ್ದಾರೆ. ಆದರೆ ಮುಂದೆ ಏನಾಗುತ್ತದೆ ಎಂಬುದನ್ನು ನಾವು ಸಹ ಕಾದು ನೋಡುತ್ತಿದ್ದೇವೆ. ಅಧಿಕೃತ ದೃಢೀಕರಣವನ್ನು ಪಡೆದಾಗ ಮಾತ್ರ ನಾವು ನಿಮಗೆ ಏನನ್ನಾದರೂ ಹೇಳಲು ಸಾಧ್ಯವಾಗುತ್ತದೆ ಎಂದು ದ್ರಾವಿಡ್ ಹೇಳಿದ್ದಾರೆ.

ಈಗಾಗಲೇ ಬುಮ್ರಾ ಬದಲಿಗೆ ಮೊಹಮ್ಮದ್ ಸಿರಾಜ್ ಅವರನ್ನು ಟಿ20 ಸರಣಿಗೆ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಒಂದು ವೇಳೆ ಬುಮ್ರಾ ಸರಣಿಯಿಂದ ಹೊರಗುಳಿದರೆ, ಅವರ ಸ್ಥಾನದಲ್ಲಿ ತಂಡದಲ್ಲಿ ಯಾರು ಬರುತ್ತಾರೆ ಎಂಬ ಪ್ರಶ್ನೆಯೂ ಇದೆ. ಒಂದು ವೇಳೆ ಸ್ಟ್ಯಾಂಡ್‌ಬೈನಲ್ಲಿ ಆಯ್ಕೆಯಾದ ಮೊಹಮ್ಮದ್ ಶಮಿ ಮತ್ತು ದೀಪಕ್ ಚಹಾರ್‌, ಈ ಇಬ್ಬರ ನಡುವೆ ಯಾರನ್ನಾದರೂ ಒಬ್ಬರನ್ನು ಆಯ್ಕೆ ಮಾಡಲಾಗುತ್ತದೆಯೇ ಅಥವಾ ಆಯ್ಕೆ ಸಮಿತಿ ಮತ್ತು ತಂಡದ ಆಡಳಿತವು ಹೊಸ ಆಯ್ಕೆಗೆ ಮುಂದಾಗುತ್ತದೆಯೋ ಎಂಬುದನ್ನು ಕಾದುನೋಡಬೇಕಾಗಿದೆ.

Published On - 8:22 pm, Sat, 1 October 22

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ