Rahul Dravid: ಸಾಹ ಶಾಕಿಂಗ್ ಹೇಳಿಕೆಗೆ ದ್ರಾವಿಡ್ ಕೂಲ್ ರಿಪ್ಲೇ: ಏನಂದ್ರು ನೋಡಿ

Wriddhiman Saha: ರಾಹುಲ್ ದ್ರಾವಿಡ್ ಅವರು ನನ್ನ ಬಳಿ ನೀನು ನಿವೃತ್ತಿ ಬಗ್ಗೆ ಯೋಚಿಸು ಎಂಬ ಮಾತು ಹೇಳಿದರು ಎಂದು ವೃದ್ದಿಮಾನ್ ಸಾಹ ಬಹಿರಂಗ ಪಡಿಸಿದ್ದರು. ಸದ್ಯ ಈ ಹೇಳಿಕೆ ಬಗ್ಗೆ ಸ್ವತಃ ದ್ರಾವಿಡ್ ಮಾತನಾಡಿದ್ದಾರೆ.

Rahul Dravid: ಸಾಹ ಶಾಕಿಂಗ್ ಹೇಳಿಕೆಗೆ ದ್ರಾವಿಡ್ ಕೂಲ್ ರಿಪ್ಲೇ: ಏನಂದ್ರು ನೋಡಿ
Wriddhiman Saha and Rahul Dravid
Follow us
| Updated By: Vinay Bhat

Updated on:Feb 22, 2022 | 7:18 AM

ಕಳೆದ ಕೆಲವು ದಿನಗಳಿಂದ ಕ್ರಿಕೆಟ್ ವಲಯದಲ್ಲಿ ಭಾರೀ ಸುದ್ದಿಯಲ್ಲಿರುವ ವೃದ್ದಿಮಾನ್ ಸಾಹ ನೀಡಿರುವ ಹೇಳಿಕೆ ಬಗ್ಗೆ ಸ್ವತಃ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ (Rahul Dravid) ಸ್ಪಷ್ಟನೆ ನೀಡಿದ್ದಾರೆ. ಮೊನ್ನೆಯಷ್ಟೆ ಬಿಸಿಸಿಐ ಶ್ರೀಲಂಕಾ (India vs Sri Lanka) ವಿರುದ್ಧದ ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡಿತ್ತು. ಇದರಲ್ಲಿ ರಹಾನೆ, ಪೂಜಾರ, ಇಶಾಂತ್ ಶರ್ಮಾ ಮತ್ತು ವೃದ್ದಿಮಾನ್ ಸಾಹ (Wriddhiman Saha) ಅವರನ್ನು ಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗಿಡಲಾಗಿದೆ. ಈ ಬೆಳವಣಿಗೆ ಬೆನ್ನಲ್ಲೇ  ವೃದ್ದಿಮಾನ್ ಸಾಹ ಶಾಕಿಂಗ್ ಹೇಳಿಕೆಯನ್ನು ನೀಡಿದ್ದರು. ಟೈಮ್ಸ್ ಆಫ್ ಇಂಡಿಯಾ ಜೊತೆ ಮಾತನಾಡಿದ್ದಇವರು, ಟೆಸ್ಟ್ ಸರಣಿಯಿಂದ ನನ್ನನ್ನು ಹೊರಗಿಡುವ ಬಗ್ಗೆ ಮೊದಲ ತಿಳಿಸಿದ್ದರು, ಆದರೆ ಈ ಬಗ್ಗೆ ತುಟಿಬಿಚ್ಚುವಂತಿರಲಿಲ್ಲ, ರಾಹುಲ್ ದ್ರಾವಿಡ್ ಅವರು ನನ್ನ ಬಳಿ ನೀನು ನಿವೃತ್ತಿ ಬಗ್ಗೆ ಯೋಚಿಸು ಎಂಬ ಮಾತು ಹೇಳಿದರು ಎಂದು ಬಹಿರಂಗ ಪಡಿಸಿದ್ದರು. ಸದ್ಯ ಈ ಹೇಳಿಕೆ ಬಗ್ಗೆ ದ್ರಾವಿಡ್ ಮಾತನಾಡಿದ್ದಾರೆ.

ಸಾಹ ಮಾತಿನಿಂದ ನನಗೆ ಯಾವುದೇ ನೋವಾಗಿಲ್ಲ. ವೃದ್ದಿಮಾನ್ ಸಾಹಾ ಮತ್ತು ಅವರ ಸಾಧನೆಗಳು ಹಾಗೂ ಭಾರತೀಯ ಕ್ರಿಕೆಟ್‌ಗೆ ಅವರ ಕೊಡುಗೆ ಬಗ್ಗೆ ನನಗೆ ಗೌರವವಿದೆ. ಹೀಗಾಗಿ ಈ ಗೌರವದಿಂದಲೇ ಅವರೊಂದಿಗೆ ನಾನು ಸಂಭಾಷಣೆ ನಡೆಸಿದ್ದು. ಅವರು ಪ್ರಾಮಾಣಿಕತೆ ಮತ್ತು ಸ್ಪಷ್ಟತೆಗೆ ಅರ್ಹರು ಎಂದು ನಾನು ಭಾವಿಸುತ್ತೇನೆ. ನಾನು ಆಟಗಾರರೊಂದಿಗೆ ನಿರಂತರವಾಗಿ ಮಾತುಕತೆ ನಡೆಸುತ್ತೇನೆ. ಆಟಗಾರರು ಅವರ ಬಗ್ಗೆ ನಾನು ಹೇಳುವ ಎಲ್ಲವನ್ನೂ ಒಪ್ಪಿಕೊಳ್ಳುತ್ತಾರೆ ಎಂದು ನಾನು ನಿರೀಕ್ಷಿಸುವುದಿಲ್ಲ” ಎಂದು ದ್ರಾವಿಡ್ ಸ್ಪಷ್ಟಪಡಿಸಿದ್ದಾರೆ.

ವಿಕೆಟ್ ಕೀಪರ್ ರಿಷಭ್ ಪಂತ್ ಈಗಾಗಲೇ ತಮ್ಮ ಸಾಮರ್ಥ್ಯ ಸಾಬೀತು ಮಾಡಿದ್ದಾರೆ. ಎಲ್ಲ ಮಾದರಿಯಲ್ಲೂ ಅತ್ಯುತ್ತಮ ವಿಕೆಟ್ ಕೀಪರ್ ಎಂದೆನಿಸಿಕೊಂಡಿದ್ದಾರೆ. ಆದ್ದರಿಂದ ವೃದ್ಧಿಮಾನ್‌ಗೆ ಅವಕಾಶಗಳು ಸಿಗುವುದು ಕಷ್ಟ ಎಂಬುದು ಸ್ಪಷ್ಟ. ಇದೇ ವೇಳೆ ಕೋನಾ ಭರತ್‌ ಕೂಡ ಭರವಸೆ ಮೂಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾನು ಸಲಹೆ ನೀಡಿದ್ದೆ ಎಂದು ರಾಹುಲ್ ತಿಳಿಸಿದರು.

ಸಾಹ ಹೇಳಿದ್ದೇನು?:

“ಹೌದು, ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್​​ನ ಆಯ್ಕೆ ಸಮಿತಿಯವರು ನನ್ನನ್ನು ಮುಂದಿನ ಸರಣಿಗೆ ಆಯ್ಕೆ ಮಾಡುತ್ತಿಲ್ಲ ಎಂದು ಮೊದಲೇ ಹೇಳಿದ್ದರು. ಹೀಗಾಗಿ ತಂಡ ಪ್ರಕಟವಾಗುವ ಮುನ್ನ ಈ ಬಗ್ಗೆ ನಾನು ಎಲ್ಲಿಯೂ ಮಾತನಾಡುವಂತ್ತಿರಲಿಲ್ಲ. ಮುಖ್ಯ ಕೋಚ್‌ ರಾಹುಲ್‌ ದ್ರಾವಿಡ್‌ ಕೂಡ ನನಗೆ ನಿವೃತ್ತಿ ತೆಗೆದುಕೊಳ್ಳುವಂತೆ ಸಲಹೆ ನೀಡಿದ್ದರು. ನ್ಯೂಜಿಲೆಂಡ್‌ ವಿರುದ್ಧ ಕಳೆದ ನವೆಂಬರ್‌ನಲ್ಲಿ ನಡೆದ ಕಾನ್ಪುರ ಟೆಸ್ಟ್‌ ಪಂದ್ಯದಲ್ಲಿ ನೋವಿನ ನಡುವೆಯೂ ಪೇಯ್ನ್‌ ಕಿಲ್ಲರ್‌ಗಳನ್ನು ತೆಗೆದುಕೊಂಡು ಬ್ಯಾಟ್‌ ಮಾಡಿ 61 ರನ್‌ ಗಳಿಸಿದ್ದಾಗ ಸೌರವ್ ಗಂಗೂಲಿ ನನಗೆ ವಾಟ್ಸ್‌ಆಪ್‌ ಮೂಲಕ ಶುಭ ಕೋರಿ ಉತ್ತಮ ಆಟ ಆಡಿದ್ದೀರಿ ಎಂದು ಪ್ರಶಂಸಿಸಿದ್ದರು. ಬಿಸಿಸಿಐನ ಪ್ರಧಾನ ಹುದ್ದೆಯಲ್ಲಿ ತಾವು ಇರುವವರೆಗೂ ಭಾರತ ತಂಡದಲ್ಲಿನ ಸ್ಥಾನದ ಬಗ್ಗೆ ಚಿಂತಿಸಬೇಡ ಎಂದಿದ್ದರು. ಬಿಸಿಸಿಐ ಅಧ್ಯಕ್ಷರಿಂದ ಈ ಮಾತುಗಳನ್ನು ಕೇಳಿ ನನ್ನ ಆತ್ಮವಿಶ್ವಾಸ ಹೆಚ್ಚಾಗಿತ್ತು. ಆದರೆ, ಇವೆಲ್ಲವೂ ಶೀಘ್ರವೇ ಬದಲಾಗಲಿದೆ ಎಂಬುದನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ,” ಎಂದು ಸಾಹ ಹೇಳಿದ್ದರು.

ಶ್ರೀಲಂಕಾ ವಿರುದ್ಧದ ಟೆಸ್ಟ್​ಗೆ ವೃದ್ದಿಮಾನ್ ಸಾಹ ಜಾಗದಲ್ಲಿ ಕೆಎಸ್ ಭರತ್ ಅವರನ್ನು ಆಯ್ಕೆ ಮಾಡಲಾಗಿದೆ. 2010ರಲ್ಲೇ ಭಾರತ ಟೆಸ್ಟ್‌ ತಂಡಕ್ಕೆ ಪದಾರ್ಪಣೆ ಮಾಡಿದ ಸಹಾ, 2014ರ ಆಸ್ಟ್ರೇಲಿಯಾ ಪ್ರವಾಸದಲ್ಲಿ ಎಂಎಸ್‌ ಧೋನಿ ಹಠಾತ್‌ ನಿವೃತ್ತಿ ಘೋಷಿಸಿದ ಬಳಿಕ ಭಾರತ ಟೆಸ್ಟ್‌ ತಂಡದ ಖಾಯಂ ವಿಕೆಟ್‌ಕೀಪರ್‌ ಬ್ಯಾಟ್ಸ್‌ಮನ್‌ ಆಗಿ ಕಾಣಿಸಿಕೊಂಡರು. ಬಳಿಕ ರಿಷಭ್ ಪಂತ್‌ ಆಗಮನ ನಂತರ ಅವರಿಗೆ ಅವಕಾಶಗಳು ಸಿಗದಂತಾಯಿತು. ವೃದ್ದಿಮಾನ್ ಸಾಹಾ ಭಾರತದ ಪರ 40 ಟೆಸ್ಟ್‌ಗಳನ್ನು ಆಡಿದ್ದಾರೆ ಮತ್ತು 29.4 ರ ಸರಾಸರಿಯಲ್ಲಿ 1,353 ರನ್ ಗಳಿಸಿದ್ದಾರೆ.

Bengaluru Bulls: ಭರ್ಜರಿ ಜಯದೊಂದಿಗೆ ಸೆಮಿಫೈನಲ್​ಗೆ ನುಗ್ಗಿದ ಬೆಂಗಳೂರು ಬುಲ್ಸ್

Published On - 7:17 am, Tue, 22 February 22

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು