AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Dravid: 5 ಕೋಟಿ ರೂ. ಬಹುಮಾನ ಮೊತ್ತ ನಿರಾಕರಿಸಿದ ರಾಹುಲ್ ದ್ರಾವಿಡ್

T20 World Cup 2024: ಟಿ20 ವಿಶ್ವಕಪ್​ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲುತ್ತಿದ್ದಂತೆ ಬಿಸಿಸಿಐ 125 ಕೋಟಿ ರೂ. ಬಹುಮಾನ ಮೊತ್ತವನ್ನು ಘೋಷಿಸಿದ್ದರು. ಈ ಬಹುಮಾನ ಮೊತ್ತವನ್ನು ಭಾರತೀಯ ಆಟಗಾರರಿಗೆ ಮತ್ತು ಸಿಬ್ಬಂದಿ ವರ್ಗಗಳಿಗೆ ಹಂಚಲಾಗಿದೆ. ಅದರಂತೆ 5 ಕೋಟಿ ರೂ. ಬಹುಮಾನ ಮೊತ್ತ ಪಡೆದಿರುವ ರಾಹುಲ್ ದ್ರಾವಿಡ್ ತಮ್ಮ ಹಣದಲ್ಲಿ ಕಡಿತ ಮಾಡುವಂತೆ ಬಿಸಿಸಿಐಗೆ ಮನವಿ ಮಾಡಿದ್ದಾರೆ.

Rahul Dravid: 5 ಕೋಟಿ ರೂ. ಬಹುಮಾನ ಮೊತ್ತ ನಿರಾಕರಿಸಿದ ರಾಹುಲ್ ದ್ರಾವಿಡ್
Rahul Dravid
ಝಾಹಿರ್ ಯೂಸುಫ್
|

Updated on: Jul 10, 2024 | 11:09 AM

Share

ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ (Team india) ಬಿಸಿಸಿಐ 125 ಕೋಟಿ ರೂ. ಬಹುಮಾನ ಮೊತ್ತ ನೀಡಿದೆ. ಈ ಬಹುಮಾನ ಮೊತ್ತವನ್ನು ಆಟಗಾರರು ಹಾಗೂ ಸಿಬ್ಬಂದಿಗಳಿಗೆ ಹಂಚಲಾಗಿದೆ. ಇಲ್ಲಿ ಟೀಮ್ ಇಂಡಿಯಾ ಆಟಗಾರರಿಗೆ ಹಾಗೂ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ತಲಾ 5 ಕೋಟಿ ರೂ. ನೀಡಲಾಗಿದೆ. ಇನ್ನುಳಿದ ಸಿಬ್ಬಂದಿಗಳಿಗೆ ತಲಾ 2.5 ಕೋಟಿ ರೂ. ನಿಗದಿ ಮಾಡಲಾಗಿದೆ.

ಆದರೆ ಸಿಬ್ಬಂದಿ ವರ್ಗಗಳ ಭಾಗವಾಗಿರುವ ಕೋಚ್ ರಾಹುಲ್ ದ್ರಾವಿಡ್ ಇದೀಗ ಹೆಚ್ಚುವರಿ ಬಹುಮಾನ ಮೊತ್ತವನ್ನು ಪಡೆಯಲು ನಿರಾಕರಿಸಿದ್ದಾರೆ. ಇತರೆ ಸಿಬ್ಬಂದಿಗಳಂತೆ ತಾನು ಸಹ 2.5 ಕೋಟಿ ರೂ. ಬಹುಮಾನ ಮೊತ್ತವನ್ನು ತೆಗೆದುಕೊಳ್ಳುತ್ತೇನೆ ಎಂದು ಬಿಸಿಸಿಐಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಬಿಸಿಸಿಐ ಸಿದ್ಧಪಡಿಸಿದ ಬಹುಮಾನ ಮೊತ್ತ ವಿತರಣಾ ಸೂತ್ರದ ಪ್ರಕಾರ, ರಾಹುಲ್ ದ್ರಾವಿಡ್ ಜೊತೆಗೆ ಭಾರತ ತಂಡದ 15 ಆಟಗಾರರು ತಲಾ 5 ಕೋಟಿ ರೂ. ಪಡೆದಿದ್ದಾರೆ. ಹಾಗೆಯೇ ಸಹಾಯಕ ಸಿಬ್ಬಂದಿಗಳಿಗೆ ತಲಾ 2.5 ಕೋಟಿ ರೂ. ನಿಗದಿ ಮಾಡಲಾಗಿದೆ.

ಇಲ್ಲಿ ರಾಹುಲ್ ದ್ರಾವಿಡ್ ಜೊತೆ ಕಾರ್ಯ ನಿರ್ವಹಿಸಿದ ಟೀಮ್ ಇಂಡಿಯಾದ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್, ಬೌಲಿಂಗ್ ಕೋಚ್ ಪರಾಸ್ ಮಾಂಬ್ರೆ ಮತ್ತು ಫೀಲ್ಡಿಂಗ್ ಕೋಚ್ ಟಿ. ದಿಲೀಪ್ ಅವರಿಗೆ ತಲಾ 2.5 ಕೋಟಿ ರೂ. ನಿಗದಿ ಮಾಡಲಾಗಿದೆ.

ಈ ಅಸಮಾನತೆಯನ್ನು ಹೋಗಲಾಡಿಸಲು ಖುದ್ದು ರಾಹುಲ್ ದ್ರಾವಿಡ್ 2.5 ಕೋಟಿ ರೂ. ಕಡಿತಗೊಳಿಸಲು ಮುಂದಾಗಿದ್ದಾರೆ. ಅಲ್ಲದೆ ಇತರೆ ಸಿಬ್ಬಂದಿಗಳಂತೆ ನಾನು ಸಹ 2.5 ಕೋಟಿ ರೂ. ಬಹುಮಾನವನ್ನು ತೆಗೆದುಕೊಳ್ಳುತ್ತೇನೆ ಎಂದು ಬಿಸಿಸಿಐ ಅಧಿಕಾರಿಗೆ ರಾಹುಲ್ ದ್ರಾವಿಡ್ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಅಂದಹಾಗೆ ರಾಹುಲ್ ದ್ರಾವಿಡ್ ಸಮಬಾಳು-ಸಮಪಾಲು ಸಿದ್ಧಾಂತವನ್ನು ಪಾಲಿಸುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ 2018 ರಲ್ಲಿ ಭಾರತ ಅಂಡರ್-19 ವಿಶ್ವಕಪ್​ ಗೆದ್ದಾಗ ದ್ರಾವಿಡ್ ಮುಖ್ಯ ಕೋಚ್ ಆಗಿದ್ದರು.

ಈ ವಿಶ್ವಕಪ್ ವಿಜೇತ ತಂಡಕ್ಕೆ ಬಿಸಿಸಿಐ ಬಹುಮಾನ ಮೊತ್ತವನ್ನು ಘೋಷಿಸಿದ್ದರು. ಈ ವೇಳೆ ಕೋಚ್ ರಾಹುಲ್ ದ್ರಾವಿಡ್ ಅವರಿಗೆ 50 ಲಕ್ಷ ರೂ. ನಿಗದಿ ಮಾಡಿದರೆ, ಇತರೆ ಸಿಬ್ಬಂದಿಗಳಿಗೆ 20 ಲಕ್ಷ ರೂ. ಫಿಕ್ಸ್ ಮಾಡಲಾಗಿತ್ತು.

ಆದರೆ 50 ಲಕ್ಷ ರೂ. ಬಹುಮಾನ ಮೊತ್ತವನ್ನು ಪಡೆಯಲು ನಿರಾಕರಿಸಿದ ರಾಹುಲ್ ದ್ರಾವಿಡ್ ತನಗೂ ಸೇರಿದಂತೆ ಕೋಚಿಂಗ್ ಸಿಬ್ಬಂದಿಯ ಪ್ರತಿಯೊಬ್ಬ ಸದಸ್ಯರಿಗೆ 25 ಲಕ್ಷ ರೂ. ಸಿಗುವಂತೆ ನೋಡಿಕೊಂಡಿದ್ದರು. ಇದೀಗ ಮತ್ತೊಮ್ಮೆ ರಾಹುಲ್ ದ್ರಾವಿಡ್ ತಮ್ಮ ಬಹುಮಾನ ಮೊತ್ತ ಕಡಿತಗೊಳಿಸಿ ಸಮಪಾಲಿನ ಸಿದ್ಧಾಂತವನ್ನು ಸಾರಿದ್ದಾರೆ.

ಇದನ್ನೂ ಓದಿ: Gautam Gambhir: ಕೋಚ್ ಹುದ್ದೆಗಾಗಿಯೇ ಮೆಂಟರ್ ಆದ್ರಾ ಗಂಭೀರ್?

125 ಕೋಟಿ ರೂ. ಬಹುಮಾನ ಮೊತ್ತದ ಹಂಚಿಕೆ:

  • ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡ 15 ಆಟಗಾರರಿಗೆ ತಲಾ 5 ಕೋಟಿ ರೂ.
  • ಟೀಮ್ ಇಂಡಿಯಾದ ಮೀಸಲು ಆಟಗಾರರಾಗಿದ್ದ ರಿಂಕು ಸಿಂಗ್, ಶುಭಮನ್ ಗಿಲ್, ಅವೇಶ್ ಖಾನ್ ಮತ್ತು ಖಲೀಲ್ ಅಹ್ಮದ್ ತಲಾ 1 ಕೋಟಿ ರೂ.
  • ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್​ಗೆ 5 ಕೋಟಿ ರೂ. (ಇದನ್ನ ಈಗ 2.5 ಕೋಟಿ ರೂ. ಮಾಡುವಂತೆ ದ್ರಾವಿಡ್ ಮನವಿ).
  • ಟೀಮ್ ಇಂಡಿಯಾದ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್, ಬೌಲಿಂಗ್ ಕೋಚ್ ಪರಾಸ್ ಮಾಂಬ್ರೆ ಮತ್ತು ಫೀಲ್ಡಿಂಗ್ ಕೋಚ್ ಟಿ. ದಿಲೀಪ್ ಅವರಿಗೆ ತಲಾ 2.5 ಕೋಟಿ ರೂ.
  • ಟೀಮ್ ಇಂಡಿಯಾ ಫಿಸಿಯೋಥೆರಪಿಸ್ಟ್‌ಗಳಾದ ಕಮಲೇಶ್ ಜೈನ್, ಯೋಗೇಶ್ ಪರ್ಮಾರ್ ಮತ್ತು ತುಳಸಿ ರಾಮ್ ಯುವರಾಜ್​ಗೆ ತಲಾ 2 ಕೋಟಿ ರೂ.
  • ಭಾರತ ತಂಡ ಥ್ರೋಡೌನ್ ಸ್ಪೆಷಲಿಸ್ಟ್​ಗಳಾದ ರಾಘವಿಂದ್ರ ದಿವಿಗಿ, ನುವಾನ್ ಉದೆನೆಕೆ ಮತ್ತು ದಯಾನಂದ್ ಗರಾನಿಗೆ ತಲಾ 2 ಕೋಟಿ ರೂ.
  • ಟೀಮ್ ಇಂಡಿಯಾ ಮಸಾಜ್ ಥೆರಪಿಸ್ಟ್‌ಗಳಾದ ರಾಜೀವ್ ಕುಮಾರ್ ಮತ್ತು ಅರುಣ್ ಕಾನಡೆಗೆ ತಲಾ 2 ಕೋಟಿ ರೂ.
  • ಭಾರತ ತಂಡದ ಸ್ಟ್ರೆಂಗ್ತ್ ಅ್ಯಂಡ್ ಕಂಡೀಷನಿಂಗ್ ಕೋಚ್ ಸೋಹಮ್ ದೇಸಾಯಿಗೆ 2 ಕೋಟಿ ರೂ.
  • ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಸೇರಿದಂತೆ ಆಯ್ಕೆ ಸಮಿತಿಯ ಸದಸ್ಯರಿಗೆ ತಲಾ 1 ಕೋಟಿ ರೂ.
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ