ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ (Team india) ಬಿಸಿಸಿಐ 125 ಕೋಟಿ ರೂ. ಬಹುಮಾನ ಮೊತ್ತ ನೀಡಿದೆ. ಈ ಬಹುಮಾನ ಮೊತ್ತವನ್ನು ಆಟಗಾರರು ಹಾಗೂ ಸಿಬ್ಬಂದಿಗಳಿಗೆ ಹಂಚಲಾಗಿದೆ. ಇಲ್ಲಿ ಟೀಮ್ ಇಂಡಿಯಾ ಆಟಗಾರರಿಗೆ ಹಾಗೂ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ತಲಾ 5 ಕೋಟಿ ರೂ. ನೀಡಲಾಗಿದೆ. ಇನ್ನುಳಿದ ಸಿಬ್ಬಂದಿಗಳಿಗೆ ತಲಾ 2.5 ಕೋಟಿ ರೂ. ನಿಗದಿ ಮಾಡಲಾಗಿದೆ.
ಆದರೆ ಸಿಬ್ಬಂದಿ ವರ್ಗಗಳ ಭಾಗವಾಗಿರುವ ಕೋಚ್ ರಾಹುಲ್ ದ್ರಾವಿಡ್ ಇದೀಗ ಹೆಚ್ಚುವರಿ ಬಹುಮಾನ ಮೊತ್ತವನ್ನು ಪಡೆಯಲು ನಿರಾಕರಿಸಿದ್ದಾರೆ. ಇತರೆ ಸಿಬ್ಬಂದಿಗಳಂತೆ ತಾನು ಸಹ 2.5 ಕೋಟಿ ರೂ. ಬಹುಮಾನ ಮೊತ್ತವನ್ನು ತೆಗೆದುಕೊಳ್ಳುತ್ತೇನೆ ಎಂದು ಬಿಸಿಸಿಐಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಬಿಸಿಸಿಐ ಸಿದ್ಧಪಡಿಸಿದ ಬಹುಮಾನ ಮೊತ್ತ ವಿತರಣಾ ಸೂತ್ರದ ಪ್ರಕಾರ, ರಾಹುಲ್ ದ್ರಾವಿಡ್ ಜೊತೆಗೆ ಭಾರತ ತಂಡದ 15 ಆಟಗಾರರು ತಲಾ 5 ಕೋಟಿ ರೂ. ಪಡೆದಿದ್ದಾರೆ. ಹಾಗೆಯೇ ಸಹಾಯಕ ಸಿಬ್ಬಂದಿಗಳಿಗೆ ತಲಾ 2.5 ಕೋಟಿ ರೂ. ನಿಗದಿ ಮಾಡಲಾಗಿದೆ.
ಇಲ್ಲಿ ರಾಹುಲ್ ದ್ರಾವಿಡ್ ಜೊತೆ ಕಾರ್ಯ ನಿರ್ವಹಿಸಿದ ಟೀಮ್ ಇಂಡಿಯಾದ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್, ಬೌಲಿಂಗ್ ಕೋಚ್ ಪರಾಸ್ ಮಾಂಬ್ರೆ ಮತ್ತು ಫೀಲ್ಡಿಂಗ್ ಕೋಚ್ ಟಿ. ದಿಲೀಪ್ ಅವರಿಗೆ ತಲಾ 2.5 ಕೋಟಿ ರೂ. ನಿಗದಿ ಮಾಡಲಾಗಿದೆ.
ಈ ಅಸಮಾನತೆಯನ್ನು ಹೋಗಲಾಡಿಸಲು ಖುದ್ದು ರಾಹುಲ್ ದ್ರಾವಿಡ್ 2.5 ಕೋಟಿ ರೂ. ಕಡಿತಗೊಳಿಸಲು ಮುಂದಾಗಿದ್ದಾರೆ. ಅಲ್ಲದೆ ಇತರೆ ಸಿಬ್ಬಂದಿಗಳಂತೆ ನಾನು ಸಹ 2.5 ಕೋಟಿ ರೂ. ಬಹುಮಾನವನ್ನು ತೆಗೆದುಕೊಳ್ಳುತ್ತೇನೆ ಎಂದು ಬಿಸಿಸಿಐ ಅಧಿಕಾರಿಗೆ ರಾಹುಲ್ ದ್ರಾವಿಡ್ ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಅಂದಹಾಗೆ ರಾಹುಲ್ ದ್ರಾವಿಡ್ ಸಮಬಾಳು-ಸಮಪಾಲು ಸಿದ್ಧಾಂತವನ್ನು ಪಾಲಿಸುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ 2018 ರಲ್ಲಿ ಭಾರತ ಅಂಡರ್-19 ವಿಶ್ವಕಪ್ ಗೆದ್ದಾಗ ದ್ರಾವಿಡ್ ಮುಖ್ಯ ಕೋಚ್ ಆಗಿದ್ದರು.
ಈ ವಿಶ್ವಕಪ್ ವಿಜೇತ ತಂಡಕ್ಕೆ ಬಿಸಿಸಿಐ ಬಹುಮಾನ ಮೊತ್ತವನ್ನು ಘೋಷಿಸಿದ್ದರು. ಈ ವೇಳೆ ಕೋಚ್ ರಾಹುಲ್ ದ್ರಾವಿಡ್ ಅವರಿಗೆ 50 ಲಕ್ಷ ರೂ. ನಿಗದಿ ಮಾಡಿದರೆ, ಇತರೆ ಸಿಬ್ಬಂದಿಗಳಿಗೆ 20 ಲಕ್ಷ ರೂ. ಫಿಕ್ಸ್ ಮಾಡಲಾಗಿತ್ತು.
ಆದರೆ 50 ಲಕ್ಷ ರೂ. ಬಹುಮಾನ ಮೊತ್ತವನ್ನು ಪಡೆಯಲು ನಿರಾಕರಿಸಿದ ರಾಹುಲ್ ದ್ರಾವಿಡ್ ತನಗೂ ಸೇರಿದಂತೆ ಕೋಚಿಂಗ್ ಸಿಬ್ಬಂದಿಯ ಪ್ರತಿಯೊಬ್ಬ ಸದಸ್ಯರಿಗೆ 25 ಲಕ್ಷ ರೂ. ಸಿಗುವಂತೆ ನೋಡಿಕೊಂಡಿದ್ದರು. ಇದೀಗ ಮತ್ತೊಮ್ಮೆ ರಾಹುಲ್ ದ್ರಾವಿಡ್ ತಮ್ಮ ಬಹುಮಾನ ಮೊತ್ತ ಕಡಿತಗೊಳಿಸಿ ಸಮಪಾಲಿನ ಸಿದ್ಧಾಂತವನ್ನು ಸಾರಿದ್ದಾರೆ.
ಇದನ್ನೂ ಓದಿ: Gautam Gambhir: ಕೋಚ್ ಹುದ್ದೆಗಾಗಿಯೇ ಮೆಂಟರ್ ಆದ್ರಾ ಗಂಭೀರ್?
125 ಕೋಟಿ ರೂ. ಬಹುಮಾನ ಮೊತ್ತದ ಹಂಚಿಕೆ: