ಶ್ರೇಯಸ್ ಅಯ್ಯರ್ ಇನ್ – ಕೆಎಲ್ ರಾಹುಲ್ ಔಟ್: ವಿಕೆಟ್ ಕೀಪರ್ ಯಾರು?

Asia Cup 2023: ನಾಳೆಯಿಂದ (ಆಗಸ್ಟ್​ 30) ಏಷ್ಯಾಕಪ್ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಸೆಪ್ಟೆಂಬರ್ 2 ರಂದು ಪಾಕಿಸ್ತಾನ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ. ಹಾಗೆಯೇ ಫೈನಲ್ ಪಂದ್ಯ ಸೆಪ್ಟೆಂಬರ್ 17 ರಂದು ನಡೆಯಲಿದೆ.

ಶ್ರೇಯಸ್ ಅಯ್ಯರ್ ಇನ್ - ಕೆಎಲ್ ರಾಹುಲ್ ಔಟ್: ವಿಕೆಟ್ ಕೀಪರ್ ಯಾರು?
Rahul Dravid - Shreyas Iyer
Follow us
TV9 Web
| Updated By: ಝಾಹಿರ್ ಯೂಸುಫ್

Updated on:Aug 29, 2023 | 3:09 PM

ಏಷ್ಯಾಕಪ್ ಆರಂಭಕ್ಕೂ ಮುನ್ನವೇ ಟೀಮ್ ಇಂಡಿಯಾ ಸಂಕಷ್ಟಕ್ಕೆ ಸಿಲುಕಿದೆ. ಹೀಗೆ ಸಮಸ್ಯೆಗೆ ಸಿಲುಕಲು ಮುಖ್ಯ ಕಾರಣ ಕೆಎಲ್ ರಾಹುಲ್ ಮೊದಲೆರಡು ಪಂದ್ಯಗಳಿಂದ ಹೊರಗುಳಿಯುತ್ತಿರುವುದು. ಏಕೆಂದರೆ ತಂಡದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಕೇವಲ ಇಬ್ಬರು ಆಟಗಾರರು ಮಾತ್ರ ಸ್ಥಾನ ಪಡೆದಿದ್ದಾರೆ. ಇದೀಗ ಫಿಟ್​ನೆಸ್ ಸಮಸ್ಯೆಯ ಕಾರಣ ರಾಹುಲ್ ಮೊದಲೆರಡು ಪಂದ್ಯಗಳಲ್ಲಿ ಕಣಕ್ಕಿಳಿಯುತ್ತಿಲ್ಲ.

ಹೀಗಾಗಿ ಬದಲಿ ವಿಕೆಟ್ ಕೀಪರ್ ಅನ್ನು ಕಣಕ್ಕಿಳಿಸಬೇಕಾಗಿದೆ. ಆದರೆ 17 ಸದಸ್ಯರ ಬಳಗದಲ್ಲಿ ಬದಲಿ ವಿಕೆಟ್ ಕೀಪರ್ ಆಗಿ ಇರುವುದು ಇಶಾನ್ ಕಿಶನ್ ಮಾತ್ರ. ಒಂದು ವೇಳೆ ಯುವ ಎಡಗೈ ದಾಂಡಿಗನನ್ನು ಕೀಪರ್ ಆಗಿ ಕಣಕ್ಕಿಳಿಸಿದರೆ ಟೀಮ್ ಇಂಡಿಯಾದ ಬ್ಯಾಟಿಂಗ್ ಕ್ರಮಾಂಕ ಕೂಡ ಬದಲಾಗಬಹುದು.

ಏಕೆಂದರೆ ಇಶಾನ್ ಕಿಶನ್ ಆರಂಭಿಕ ಆಟಗಾರ. ಆದರೆ ಪ್ಲೇಯಿಂಗ್ ಇಲೆವೆನ್​ನಿಂದ ಹೊರಗುಳಿದಿರುವ ಕೆಎಲ್ ರಾಹುಲ್ ಮಧ್ಯಮ ಕ್ರಮಾಂಕದ ಬ್ಯಾಟರ್. ಇಲ್ಲಿ ಕಿಶನ್ ಅವರನ್ನು 3ನೇ ಕ್ರಮಾಂಕದಲ್ಲಿ ಆಡಿಸಿದರೆ ವಿರಾಟ್ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬೇಕಾಗುತ್ತದೆ.

ಅಂದರೆ ವಿಕೆಟ್ ಕೀಪರ್ ಬ್ಯಾಟರ್ ಆಗಿ ಇಲ್ಲಿ ಟೀಮ್ ಇಂಡಿಯಾ ಮುಂದೆ ಇಶಾನ್ ಕಿಶನ್ ಎಂಬ ಆಯ್ಕೆಯಿದ್ದರೂ, ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಲಿದೆ.

ಶ್ರೇಯಸ್ ಅಯ್ಯರ್ ಇನ್:

ಪಾಕಿಸ್ತಾನ್ ವಿರುದ್ಧದ ಪಂದ್ಯದ ಮೂಲಕ ಶ್ರೇಯಸ್ ಅಯ್ಯರ್ ಕಂಬ್ಯಾಕ್ ಮಾಡುವುದು ಖಚಿತವಾಗಿದೆ. ಎಲ್ಲಾ ರೀತಿಯ ಫಿಟ್​ನೆಸ್ ಟೆಸ್ಟ್​ನಲ್ಲೂ ಅಯ್ಯರ್ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ ಎಂದು ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ತಿಳಿಸಿದ್ದಾರೆ.

ಇದರೊಂದಿಗೆ ಏಷ್ಯಾಕಪ್​ನಲ್ಲಿ ಶ್ರೇಯಸ್ ಅಯ್ಯರ್ ಕಣಕ್ಕಿಳಿಯುವುದು ಖಚಿತವಾಗಿದೆ. ಆದರೀಗ ವಿಕೆಟ್ ಕೀಪರ್ ಆಗಿ ಇಶಾನ್ ಕಿಶನ್ ಕಾಣಿಸಿಕೊಂಡರೆ, ಶ್ರೇಯಸ್ ಅಯ್ಯರ್ ಅವರ ಬ್ಯಾಟಿಂಗ್ ಕ್ರಮಾಂಕದಲ್ಲೂ ಬದಲಾವಣೆ ಕಂಡು ಬರಬಹುದು. ಹೀಗಾಗಿ ಪಾಕಿಸ್ತಾನ್ ವಿರುದ್ಧ ಅಯ್ಯರ್ ಯಾವ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ ಎಂಬುದು ಇನ್ನಷ್ಟೇ ನಿರ್ಧಾರವಾಗಲಿದೆ.

ಒಟ್ಟಿನಲ್ಲಿ ಮಹತ್ವದ ಟೂರ್ನಿಯ ಮೊದಲೆರಡು ಪಂದ್ಯಗಳಿಂದ ಕೆಎಲ್ ರಾಹುಲ್ ಹೊರಗುಳಿದಿರುವುದು ಟೀಮ್ ಇಂಡಿಯಾ ಪಾಲಿಗೆ ಹೊಸ ತಲೆನೋವಾಗಿ ಪರಿಣಮಿಸಿದೆ.

ಏಷ್ಯಾಕಪ್ ಯಾವಾಗ ಶುರು?

ನಾಳೆಯಿಂದ (ಆಗಸ್ಟ್​ 30) ಏಷ್ಯಾಕಪ್ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಸೆಪ್ಟೆಂಬರ್ 2 ರಂದು ಪಾಕಿಸ್ತಾನ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ. ಹಾಗೆಯೇ ಫೈನಲ್ ಪಂದ್ಯ ಸೆಪ್ಟೆಂಬರ್ 17 ರಂದು ನಡೆಯಲಿದೆ.

ಇದನ್ನೂ ಓದಿ: RCB ಯಿಂದ ಇಬ್ಬರು, CSK ಯಿಂದ ಒಬ್ಬರು: ತಂಡದಲ್ಲಿ ಮುಂಬೈ ಅವರದ್ದೇ ದರ್ಬಾರು..!

ಏಷ್ಯಾಕಪ್​ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).

Published On - 3:07 pm, Tue, 29 August 23

ಅಮೆರಿಕ ಅಧ್ಯಕ್ಷರಾಗಿ ಪದಗ್ರಹಣ ಬಳಿಕ ಸಖತ್​ ಸ್ಟೆಪ್​​​ ಹಾಕಿದ ಟ್ರಂಪ್
ಅಮೆರಿಕ ಅಧ್ಯಕ್ಷರಾಗಿ ಪದಗ್ರಹಣ ಬಳಿಕ ಸಖತ್​ ಸ್ಟೆಪ್​​​ ಹಾಕಿದ ಟ್ರಂಪ್
ಬೆಳಗಾವಿ ಅಧಿವೇಶನ ನಿಸ್ಸಂದೇಹವಾಗಿ ಕಾಂಗ್ರೆಸ್ ಪಕ್ಷದ ಜಾತ್ರೆ: ಶಿವಕುಮಾರ್
ಬೆಳಗಾವಿ ಅಧಿವೇಶನ ನಿಸ್ಸಂದೇಹವಾಗಿ ಕಾಂಗ್ರೆಸ್ ಪಕ್ಷದ ಜಾತ್ರೆ: ಶಿವಕುಮಾರ್
ಕರ್ತವ್ಯನಿರತ ಪೊಲೀಸರ ಮೇಲೆ ಜೋರು ಮಾಡಲು ಮುಂದಾದ ಕಾಂಗ್ರೆಸ್ಸಿಗರು
ಕರ್ತವ್ಯನಿರತ ಪೊಲೀಸರ ಮೇಲೆ ಜೋರು ಮಾಡಲು ಮುಂದಾದ ಕಾಂಗ್ರೆಸ್ಸಿಗರು
ಕಾಂಗ್ರೆಸ್ ಅಧಿವೇಶನದಲ್ಲಿ ಭಾಗಿಯಾಗಲು ಸೋಮಶೇಖರ್ ಬಂದಿರುವರೇ?
ಕಾಂಗ್ರೆಸ್ ಅಧಿವೇಶನದಲ್ಲಿ ಭಾಗಿಯಾಗಲು ಸೋಮಶೇಖರ್ ಬಂದಿರುವರೇ?
Video: ಪ್ರಬಲ ಭೂಕಂಪಕ್ಕೆ ನಲುಗಿದ ತೈವಾನ್
Video: ಪ್ರಬಲ ಭೂಕಂಪಕ್ಕೆ ನಲುಗಿದ ತೈವಾನ್
‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
ಕೊಪ್ಪಳ: ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಗೆ‌ ಬೋರ್​ವೆಲ್ ಕೊರೆಸಿದ ರೈತ
ಕೊಪ್ಪಳ: ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಗೆ‌ ಬೋರ್​ವೆಲ್ ಕೊರೆಸಿದ ರೈತ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು