AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Dravid: ಕರ್ನಾಟಕ ತಂಡಕ್ಕೆ ರಾಹುಲ್ ದ್ರಾವಿಡ್ ಪುತ್ರ ನಾಯಕ..!

Rahul Dravid: ಭಾರತ ತಂಡದ ಮುಖ್ಯ ಕೋಚ್ ಹಾಗೂ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರ ಕಿರಿಯ ಪುತ್ರ 13 ವರ್ಷದ ಅನ್ವಯ್ ದ್ರಾವಿಡ್​ಗೆ ಕರ್ನಾಟಕ ತಂಡದ ನಾಯಕತ್ವ ಒಲಿದು ಬಂದಿದೆ.

Rahul Dravid: ಕರ್ನಾಟಕ ತಂಡಕ್ಕೆ ರಾಹುಲ್ ದ್ರಾವಿಡ್ ಪುತ್ರ ನಾಯಕ..!
ರಾಹುಲ್ ದ್ರಾವಿಡ್, ಮಗ ಅನ್ವಯ್ ದ್ರಾವಿಡ್
TV9 Web
| Edited By: |

Updated on: Jan 19, 2023 | 2:54 PM

Share

ಭಾರತ ತಂಡದ ( Team India) ಮುಖ್ಯ ಕೋಚ್ ಹಾಗೂ ಮಾಜಿ ನಾಯಕ ರಾಹುಲ್ ದ್ರಾವಿಡ್ (Rahul Dravid) ಅವರ ಕಿರಿಯ ಪುತ್ರ 13 ವರ್ಷದ ಅನ್ವಯ್ ದ್ರಾವಿಡ್​ಗೆ (Anvay Dravid) ಕರ್ನಾಟಕ ತಂಡದ ನಾಯಕತ್ವ ಒಲಿದು ಬಂದಿದೆ. 14 ವರ್ಷದೊಳಗಿನವರ ಅಂತರ ವಲಯ ಟೂರ್ನಿಯಲ್ಲಿ ಅವರು ತಂಡವನ್ನು ಮುನ್ನಡೆಸಲಿದ್ದಾರೆ. ಅಪ್ಪನಂತೆ ಮಗ ಕೂಡ ಅದ್ಭುತ ಬ್ಯಾಟ್ಸ್‌ಮನ್ ಆಗಿದ್ದು, ಅವರು ವಿಕೆಟ್ ಕೀಪಿಂಗ್‌ಗೂ ಹೆಸರುವಾಸಿಯಾಗಿದ್ದಾರೆ. ಅನ್ವಯ್ ಅಲ್ಲದೆ ಅವರ ಅಣ್ಣ ಅಂದರೆ, ದ್ರಾವಿಡ್ ಅವರ ಹಿರಿಯ ಪುತ್ರ ಸಮಿತ್ ದ್ರಾವಿಡ್ ಕೂಡ ಕ್ರಿಕೆಟ್​ ಆಡುತ್ತಾರೆ. ಅವರೂ ಕೂಡ ಉತ್ತಮ ಬ್ಯಾಟ್ಸ್‌ಮನ್ ಆಗಿದ್ದಾರೆ. ಇದೀಗ ಮುಂಬರುವ ಅಂತರ ವಲಯ ಟೂರ್ನಿಯಲ್ಲಿ ನಾಯಕತ್ವದ ದೊಡ್ಡ ಜವಾಬ್ದಾರಿಯನ್ನು ಒಹಿಸಿಕೊಂಡಿರುವ ಅನ್ವಯ್ ದ್ರಾವಿಡ್ ತಮ್ಮ ನಾಯಕತ್ವದಲ್ಲಿ ಹೇಗೆ ಪ್ರದರ್ಶನ ನೀಡುತ್ತಾರೆ ಎಂಬುದು ಕಾದುನೋಡಬೇಕಿದೆ.

ಕರ್ನಾಟಕ ತಂಡದ ನಾಯಕತ್ವ

ಇನ್ನು ಮನೆಯಲ್ಲಿ ದ್ರಾವಿಡ್​​ರಂತಹ ಕ್ರಿಕೆಟ್ ಕಲಿಸುವ ಗುರು ಇದ್ದರೆ ಎಂತವರೂ ಕೂಡ ಈ ಆಟದಲ್ಲಿ ನಿಪುಣರಾಗುತ್ತಾರೆ. ತಂದೆಯಿಂದ ಕ್ರಿಕೆಟ್​ನ ಸೂಕ್ಷ್ಮಗಳನ್ನು ಕಲಿತುಕೊಂಡಿರುವ ಅನ್ವಯ್ ದ್ರಾವಿಡ್​ಗೆ ಪ್ರಸ್ತುತ ಕರ್ನಾಟಕದ 14 ವರ್ಷದೊಳಗಿನವರ ತಂಡದ ನಾಯಕತ್ವವಹಿಸಲಾಗಿದೆ.

Big news: ರಾಹುಲ್ ದ್ರಾವಿಡ್ ಆರೋಗ್ಯದಲ್ಲಿ ಏರುಪೇರು! ತಂಡ ತೊರೆದು ಬೆಂಗಳೂರಿಗೆ ವಾಪಸ್

ರಾಹುಲ್ ದ್ರಾವಿಡ್ ಅಂತಾರಾಷ್ಟ್ರೀಯ ವೃತ್ತಿಜೀವನ

ವಿಶ್ವ ಕ್ರಿಕೆಟ್​ನ “ದಿ ವಾಲ್” ಎಂದು ಕರೆಯಲ್ಪಡುವ ಕರ್ನಾಟಕದ ಪ್ರತಿಭೆ ರಾಹುಲ್ ದ್ರಾವಿಡ್ ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಅತ್ಯುತ್ತಮ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿದ್ದಾರೆ. ದ್ರಾವಿಡ್ ತಮ್ಮ ಬ್ಯಾಟಿಂಗ್ ನೆರವಿನಿಂದ ಭಾರತಕ್ಕೆ ಹಲವು ಪಂದ್ಯಗಳನ್ನು ಏಕಾಂಗಿಯಾಗಿ ಗೆಲ್ಲಿಸಿಕೊಟ್ಟಿದ್ದಾರೆ. ಸದ್ಯ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿರುವ ದ್ರಾವಿಡ್, ಟೀಂ ಇಂಡಿಯಾ ಪರ 164 ಟೆಸ್ಟ್, 344 ಏಕದಿನ ಮತ್ತು 1 ಟಿ20 ಪಂದ್ಯವನ್ನು ಆಡಿದ್ದಾರೆ.

164 ಟೆಸ್ಟ್ ಪಂದ್ಯಗಳಲ್ಲಿ 52.3 ಸರಾಸರಿಯಲ್ಲಿ ಬ್ಯಾಟ್ ಬೀಸಿರುವ ದ್ರಾವಿಡ್ 13288 ರನ್ ಗಳಿಸಿದ್ದಾರೆ. ಹಾಗೆಯೇ 344 ಏಕದಿನ ಪಂದ್ಯಗಳಲ್ಲಿ 10889 ರನ್ ಮತ್ತು 1 ಟಿ20 ಪಂದ್ಯದಲ್ಲಿ 31 ರನ್ ಗಳಿಸಿದ್ದಾರೆ. ದ್ರಾವಿಡ್ ತಮ್ಮ ಅಂತರಾಷ್ಟ್ರೀಯ ವೃತ್ತಿಜೀವನದಲ್ಲಿ ಒಟ್ಟು 146 ಅರ್ಧಶತಕಗಳು ಮತ್ತು 48 ಶತಕಗಳನ್ನು ಗಳಿಸಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು