VIDEO: ಕೋಚಿಂಗ್ಗೂ ಸೈ, ಬೌಲಿಂಗ್ಗೂ ಜೈ: ರಾಹುಲ್ ದ್ರಾವಿಡ್ ವಿಡಿಯೋ ವೈರಲ್
India vs South Africa: ಭಾರತ-ಸೌತ್ ಆಫ್ರಿಕಾ ನಡುವಣ ಟೆಸ್ಟ್ ಸರಣಿ ಶುರುವಾಗಿದೆ. ಸೆಂಚುರಿಯನ್ನಲ್ಲಿನ ಸೂಪರ್ಸ್ಪೋರ್ಟ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಸೌತ್ ಆಫ್ರಿಕಾ ಬೌಲಿಂಗ್ ಆಯ್ದುಕೊಂಡಿದೆ. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆಯಲಿಲ್ಲ. 5ನೇ ಓವರ್ನಲ್ಲೇ ರೋಹಿತ್ ಶರ್ಮಾ (5) ವಿಕೆಟ್ ಪಡೆಯುವ ಮೂಲಕ ಕಗಿಸೊ ರಬಾಡ ಮೊದಲ ಯಶಸ್ಸು ತಂದುಕೊಟ್ಟರೆ, ಇದರ ಬೆನ್ನಲ್ಲೇ ಯಶಸ್ವಿ ಜೈಸ್ವಾಲ್ (17) ಹಾಗೂ ಶುಭ್ಮನ್ ಗಿಲ್ (2) ಗೆ ನಾಂಡ್ರೆ ಬರ್ಗರ್ ಪೆವಿಲಿಯನ್ ಹಾದಿ ತೋರಿಸಿದರು.
ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ (Rahul Dravid) ಅತ್ಯದ್ಭುತ ಬ್ಯಾಟರ್ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಇದೇ ದ್ರಾವಿಡ್ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಬೌಲಿಂಗ್ ಮಾಡಿದ್ದಾರೆ ಎಂಬುದು ಅನೇಕರಿಗೆ ತಿಳಿದಿಲ್ಲ. ಹೌದು, ದ್ರಾವಿಡ್ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಒಟ್ಟು 51 ಓವರ್ಗಳನ್ನು ಎಸೆದಿದ್ದಾರೆ. ಟೆಸ್ಟ್ ಕ್ರಿಕೆಟ್ನಲ್ಲಿ 120 ಎಸೆತಗಳನ್ನು ಎಸೆದಿದ್ದ ದ್ರಾವಿಡ್ 39 ರನ್ ನೀಡಿ 1 ವಿಕೆಟ್ ಪಡೆದಿದ್ದರು. ಹಾಗೆಯೇ ಏಕದಿನ ಕ್ರಿಕೆಟ್ನಲ್ಲಿ 31 ಓವರ್ಗಳನ್ನು ಮಾಡಿದ್ದಾರೆ. ಈ ವೇಳೆ ಒಟ್ಟು 170 ರನ್ ನೀಡಿ 4 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದೀಗ ಮತ್ತೊಮ್ಮೆ ರಾಹುಲ್ ದ್ರಾವಿಡ್ ಬೌಲಿಂಗ್ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಆದರೆ ಈ ಬಾರಿ ಚೆಂಡೆಸೆದಿದ್ದು ನೆಟ್ಸ್ನಲ್ಲಿ ಎಂಬುದಷ್ಟೇ ವ್ಯತ್ಯಾಸ. ಹೌದು, ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಬ್ಯಾಟರ್ಗಳು ಅಭ್ಯಾಸದಲ್ಲಿ ನಿರತರಾಗಿದ್ದರು. ಈ ವೇಳೆ ಬೌಲಿಂಗ್ ರಾಹುಲ್ ದ್ರಾವಿಡ್ ಬೌಲಿಂಗ್ ಮಾಡಿದ್ದಾರೆ. ಪುಲ್ ಓವರ್ ಧರಿಸಿ ಮಧ್ಯಮ ವೇಗದಲ್ಲಿ ಬೌಲಿಂಗ್ ಮಾಡುತ್ತಿರುವ ದ್ರಾವಿಡ್ ವಿಡಿಯೋವನ್ನು ಕ್ಯಾಮೆರಾಮೆನ್ ಸೆರೆ ಹಿಡಿದಿದ್ದಾರೆ. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.
Rahul Dravid Sir Bowling 🫡 pic.twitter.com/J1fPAON4EG
— HIMANSHU ANAND 👨⚕️ (@here4anand) December 26, 2023
ಭಾರತ-ಸೌತ್ ಆಫ್ರಿಕಾ ಮೊದಲ ಟೆಸ್ಟ್:
ಭಾರತ-ಸೌತ್ ಆಫ್ರಿಕಾ ನಡುವಣ ಟೆಸ್ಟ್ ಸರಣಿ ಶುರುವಾಗಿದೆ. ಸೆಂಚುರಿಯನ್ನಲ್ಲಿನ ಸೂಪರ್ಸ್ಪೋರ್ಟ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಸೌತ್ ಆಫ್ರಿಕಾ ಬೌಲಿಂಗ್ ಆಯ್ದುಕೊಂಡಿದೆ. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆಯಲಿಲ್ಲ. 5ನೇ ಓವರ್ನಲ್ಲೇ ರೋಹಿತ್ ಶರ್ಮಾ (5) ವಿಕೆಟ್ ಪಡೆಯುವ ಮೂಲಕ ಕಗಿಸೊ ರಬಾಡ ಮೊದಲ ಯಶಸ್ಸು ತಂದುಕೊಟ್ಟರೆ, ಇದರ ಬೆನ್ನಲ್ಲೇ ಯಶಸ್ವಿ ಜೈಸ್ವಾಲ್ (17) ಹಾಗೂ ಶುಭ್ಮನ್ ಗಿಲ್ (2) ಗೆ ನಾಂಡ್ರೆ ಬರ್ಗರ್ ಪೆವಿಲಿಯನ್ ಹಾದಿ ತೋರಿಸಿದರು.
ಈ ಹಂತದಲ್ಲಿ ಜೊತೆಗೂಡಿದ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ 68 ರನ್ಗಳ ಜೊತೆಯಾಟವಾಡಿದರು. ಈ ವೇಳೆ ಮತ್ತೆ ದಾಳಿಗಿಳಿದ ರಬಾಡ ಶ್ರೇಯಸ್ ಅಯ್ಯರ್ (31) ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ (38) ಕೂಡ ರಬಾಡಗೆ ವಿಕೆಟ್ ಒಪ್ಪಿಸಿದರು. ಕೇವಲ 107 ರನ್ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಟೀಮ್ ಇಂಡಿಯಾಗೆ ಕೆಎಲ್ ರಾಹುಲ್ ಆಸರೆಯಾಗಿದ್ದಾರೆ.
ಇದನ್ನೂ ಓದಿ: Virat Kohli: ಭರ್ಜರಿ ದಾಖಲೆ ಬರೆದ ಕಿಂಗ್ ಕೊಹ್ಲಿ
6ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ರಾಹುಲ್ ಜವಾಬ್ದಾರಿಯುತ ಇನಿಂಗ್ಸ್ನೊಂದಿಗೆ ಅರ್ಧಶತಕ ಪೂರೈಸಿದರು. ಆದರೆ ಮತ್ತೊಂದೆಡೆ ರವಿಚಂದ್ರನ್ ಅಶ್ವಿನ್ (8) ಹಾಗೂ ಶಾರ್ದೂಲ್ ಠಾಕೂರ್ (24), ಜಸ್ಪ್ರೀತ್ ಬುಮ್ರಾ (1) ವಿಕೆಟ್ ಒಪ್ಪಿಸಿದರು. ಇದಾಗ್ಯೂ ಮೊದಲ ದಿನದಾಟದ ಅಂತಿಮದವರೆಗೂ ಬ್ಯಾಟಿಂಗ್ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿರುವ ಕೆಎಲ್ ರಾಹುಲ್ ಅಜೇಯ 70 ರನ್ ಬಾರಿಸಿದ್ದಾರೆ. ಅದರಂತೆ ಮೊದಲ ದಿನದಾಟದ ಅಂತ್ಯಕ್ಕೆ ಟೀಮ್ ಇಂಡಿಯಾ 8 ವಿಕೆಟ್ ಕಳೆದುಕೊಂಡು 208 ರನ್ ಕಲೆಹಾಕಿದೆ.