VIDEO: ಕೋಚಿಂಗ್​ಗೂ ಸೈ, ಬೌಲಿಂಗ್​​ಗೂ ಜೈ: ರಾಹುಲ್ ದ್ರಾವಿಡ್ ವಿಡಿಯೋ ವೈರಲ್

| Updated By: ಝಾಹಿರ್ ಯೂಸುಫ್

Updated on: Dec 27, 2023 | 11:15 AM

India vs South Africa: ಭಾರತ-ಸೌತ್ ಆಫ್ರಿಕಾ ನಡುವಣ ಟೆಸ್ಟ್ ಸರಣಿ ಶುರುವಾಗಿದೆ. ಸೆಂಚುರಿಯನ್​ನಲ್ಲಿನ ಸೂಪರ್​ಸ್ಪೋರ್ಟ್​ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಸೌತ್ ಆಫ್ರಿಕಾ ಬೌಲಿಂಗ್ ಆಯ್ದುಕೊಂಡಿದೆ. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆಯಲಿಲ್ಲ. 5ನೇ ಓವರ್​ನಲ್ಲೇ ರೋಹಿತ್ ಶರ್ಮಾ (5) ವಿಕೆಟ್ ಪಡೆಯುವ ಮೂಲಕ ಕಗಿಸೊ ರಬಾಡ ಮೊದಲ ಯಶಸ್ಸು ತಂದುಕೊಟ್ಟರೆ, ಇದರ ಬೆನ್ನಲ್ಲೇ ಯಶಸ್ವಿ ಜೈಸ್ವಾಲ್ (17) ಹಾಗೂ ಶುಭ್​ಮನ್ ಗಿಲ್ (2) ಗೆ ನಾಂಡ್ರೆ ಬರ್ಗರ್ ಪೆವಿಲಿಯನ್ ಹಾದಿ ತೋರಿಸಿದರು.

VIDEO: ಕೋಚಿಂಗ್​ಗೂ ಸೈ, ಬೌಲಿಂಗ್​​ಗೂ ಜೈ: ರಾಹುಲ್ ದ್ರಾವಿಡ್ ವಿಡಿಯೋ ವೈರಲ್
Rahul Dravid
Follow us on

ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ (Rahul Dravid) ಅತ್ಯದ್ಭುತ ಬ್ಯಾಟರ್ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಇದೇ ದ್ರಾವಿಡ್ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಬೌಲಿಂಗ್ ಮಾಡಿದ್ದಾರೆ ಎಂಬುದು ಅನೇಕರಿಗೆ ತಿಳಿದಿಲ್ಲ. ಹೌದು, ದ್ರಾವಿಡ್ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಒಟ್ಟು 51 ಓವರ್​ಗಳನ್ನು ಎಸೆದಿದ್ದಾರೆ. ಟೆಸ್ಟ್ ಕ್ರಿಕೆಟ್​ನಲ್ಲಿ 120 ಎಸೆತಗಳನ್ನು ಎಸೆದಿದ್ದ ದ್ರಾವಿಡ್ 39 ರನ್ ನೀಡಿ 1 ವಿಕೆಟ್ ಪಡೆದಿದ್ದರು. ಹಾಗೆಯೇ ಏಕದಿನ ಕ್ರಿಕೆಟ್​ನಲ್ಲಿ 31 ಓವರ್​ಗಳನ್ನು ಮಾಡಿದ್ದಾರೆ. ಈ ವೇಳೆ ಒಟ್ಟು 170 ರನ್ ನೀಡಿ 4 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದೀಗ ಮತ್ತೊಮ್ಮೆ ರಾಹುಲ್ ದ್ರಾವಿಡ್ ಬೌಲಿಂಗ್ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಆದರೆ ಈ ಬಾರಿ ಚೆಂಡೆಸೆದಿದ್ದು ನೆಟ್ಸ್​ನಲ್ಲಿ ಎಂಬುದಷ್ಟೇ ವ್ಯತ್ಯಾಸ.
ಹೌದು, ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಬ್ಯಾಟರ್​ಗಳು ಅಭ್ಯಾಸದಲ್ಲಿ ನಿರತರಾಗಿದ್ದರು. ಈ ವೇಳೆ ಬೌಲಿಂಗ್ ರಾಹುಲ್ ದ್ರಾವಿಡ್ ಬೌಲಿಂಗ್ ಮಾಡಿದ್ದಾರೆ. ಪುಲ್​ ಓವರ್ ಧರಿಸಿ ಮಧ್ಯಮ ವೇಗದಲ್ಲಿ ಬೌಲಿಂಗ್ ಮಾಡುತ್ತಿರುವ ದ್ರಾವಿಡ್ ವಿಡಿಯೋವನ್ನು ಕ್ಯಾಮೆರಾಮೆನ್ ಸೆರೆ ಹಿಡಿದಿದ್ದಾರೆ. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಭಾರತ-ಸೌತ್ ಆಫ್ರಿಕಾ ಮೊದಲ ಟೆಸ್ಟ್​:

ಭಾರತ-ಸೌತ್ ಆಫ್ರಿಕಾ ನಡುವಣ ಟೆಸ್ಟ್ ಸರಣಿ ಶುರುವಾಗಿದೆ. ಸೆಂಚುರಿಯನ್​ನಲ್ಲಿನ ಸೂಪರ್​ಸ್ಪೋರ್ಟ್​ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಸೌತ್ ಆಫ್ರಿಕಾ ಬೌಲಿಂಗ್ ಆಯ್ದುಕೊಂಡಿದೆ. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆಯಲಿಲ್ಲ. 5ನೇ ಓವರ್​ನಲ್ಲೇ ರೋಹಿತ್ ಶರ್ಮಾ (5) ವಿಕೆಟ್ ಪಡೆಯುವ ಮೂಲಕ ಕಗಿಸೊ ರಬಾಡ ಮೊದಲ ಯಶಸ್ಸು ತಂದುಕೊಟ್ಟರೆ, ಇದರ ಬೆನ್ನಲ್ಲೇ ಯಶಸ್ವಿ ಜೈಸ್ವಾಲ್ (17) ಹಾಗೂ ಶುಭ್​ಮನ್ ಗಿಲ್ (2) ಗೆ ನಾಂಡ್ರೆ ಬರ್ಗರ್ ಪೆವಿಲಿಯನ್ ಹಾದಿ ತೋರಿಸಿದರು.

ಈ ಹಂತದಲ್ಲಿ ಜೊತೆಗೂಡಿದ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ 68 ರನ್​ಗಳ ಜೊತೆಯಾಟವಾಡಿದರು. ಈ ವೇಳೆ ಮತ್ತೆ ದಾಳಿಗಿಳಿದ ರಬಾಡ ಶ್ರೇಯಸ್ ಅಯ್ಯರ್ (31) ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ (38) ಕೂಡ ರಬಾಡಗೆ ವಿಕೆಟ್ ಒಪ್ಪಿಸಿದರು. ಕೇವಲ 107 ರನ್​ಗಳಿಗೆ 5 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಟೀಮ್ ಇಂಡಿಯಾಗೆ ಕೆಎಲ್ ರಾಹುಲ್ ಆಸರೆಯಾಗಿದ್ದಾರೆ.

ಇದನ್ನೂ ಓದಿ: Virat Kohli: ಭರ್ಜರಿ ದಾಖಲೆ ಬರೆದ ಕಿಂಗ್ ಕೊಹ್ಲಿ

6ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ರಾಹುಲ್​​ ಜವಾಬ್ದಾರಿಯುತ ಇನಿಂಗ್ಸ್​ನೊಂದಿಗೆ ಅರ್ಧಶತಕ ಪೂರೈಸಿದರು. ಆದರೆ ಮತ್ತೊಂದೆಡೆ ರವಿಚಂದ್ರನ್ ಅಶ್ವಿನ್ (8) ಹಾಗೂ ಶಾರ್ದೂಲ್ ಠಾಕೂರ್ (24), ಜಸ್​ಪ್ರೀತ್ ಬುಮ್ರಾ (1) ವಿಕೆಟ್ ಒಪ್ಪಿಸಿದರು. ಇದಾಗ್ಯೂ ಮೊದಲ ದಿನದಾಟದ ಅಂತಿಮದವರೆಗೂ ಬ್ಯಾಟಿಂಗ್ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿರುವ ಕೆಎಲ್ ರಾಹುಲ್ ಅಜೇಯ 70 ರನ್ ಬಾರಿಸಿದ್ದಾರೆ. ಅದರಂತೆ ಮೊದಲ ದಿನದಾಟದ ಅಂತ್ಯಕ್ಕೆ ಟೀಮ್ ಇಂಡಿಯಾ 8 ವಿಕೆಟ್ ಕಳೆದುಕೊಂಡು 208 ರನ್ ಕಲೆಹಾಕಿದೆ.