AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2022: ಏಷ್ಯಾಕಪ್ ಆರಂಭಕ್ಕೂ ಮುನ್ನವೇ ಟೀಮ್ ಇಂಡಿಯಾಗೆ ಬಿಗ್ ಶಾಕ್..!

Asia Cup 2022: ಟೀಮ್ ಇಂಡಿಯಾದ ಪ್ರಮುಖ ಆಟಗಾರರಾದ ಜಸ್​ಪ್ರೀತ್ ಬುಮ್ರಾ ಹಾಗೂ ಹರ್ಷಲ್ ಪಟೇಲ್ ಏಷ್ಯಾಕಪ್​ನಿಂದ ಹೊರಗುಳಿದಿದ್ದಾರೆ.

Asia Cup 2022: ಏಷ್ಯಾಕಪ್ ಆರಂಭಕ್ಕೂ ಮುನ್ನವೇ ಟೀಮ್ ಇಂಡಿಯಾಗೆ ಬಿಗ್ ಶಾಕ್..!
Team India
TV9 Web
| Updated By: ಝಾಹಿರ್ ಯೂಸುಫ್|

Updated on:Aug 23, 2022 | 2:50 PM

Share

ಏಷ್ಯಾಕಪ್ 2022 (Asia Cup 2022) ಆರಂಭಕ್ಕೂ ಮುನ್ನವೇ ಟೀಮ್ ಇಂಡಿಯಾಗೆ (Team India) ಆಘಾತ ಎದುರಾಗಿದೆ. ಮೊದಲ ಪಂದ್ಯಕ್ಕೆ ದಿನಗಳು ಮಾತ್ರ ಉಳಿದಿರುವಾಗ ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ (Rahul Dravid) ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 28 ರಂದು ನಡೆಯಲಿರುವ ಭಾರತ-ಪಾಕಿಸ್ತಾನ್ ನಡುವಣ ಪಂದ್ಯದ ವೇಳೆ ಟೀಮ್ ಇಂಡಿಯಾ ಜೊತೆ ರಾಹುಲ್ ದ್ರಾವಿಡ್ ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗಿದೆ.

ಯುಎಇನಲ್ಲಿ ಆಗಸ್ಟ್ 27 ರಿಂದ ಏಷ್ಯಾಕಪ್ ಶುರುವಾಗಲಿದ್ದು, ಇದೀಗ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಸೋಂಕಿಗೆ ಒಳಗಾಗಿರುವ ಅವರು ಕ್ವಾರಂಟೈನ್​ನಲ್ಲಿ ಉಳಿಯಲ್ಲಿದ್ದಾರೆ. ಅಲ್ಲದೆ ಕೋವಿಡ್ ಟೆಸ್ಟ್​ ನೆಗೆಟಿವ್ ಬಂದರೆ ಮಾತ್ರ ಅವರು ದುಬೈಗೆ ತೆರಳಿದ್ದಾರೆ. ಅತ್ತ ಮುಂದಿನ ಭಾನುವಾರ ಭಾರತ-ಪಾಕಿಸ್ತಾನ್ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಮುಖ್ಯ ಕೋಚ್ ಹೊರಗುಳಿಯುತ್ತಿರುವುದು ಟೀಮ್ ಇಂಡಿಯಾ ಪಾಲಿಗೆ ಹಿನ್ನಡೆಯಾಗಲಿದೆ.

ಈಗಾಗಲೇ ಟೀಮ್ ಇಂಡಿಯಾದ ಪ್ರಮುಖ ಆಟಗಾರರಾದ ಜಸ್​ಪ್ರೀತ್ ಬುಮ್ರಾ ಹಾಗೂ ಹರ್ಷಲ್ ಪಟೇಲ್ ಏಷ್ಯಾಕಪ್​ನಿಂದ ಹೊರಗುಳಿದಿದ್ದಾರೆ. ಇದೀಗ ರಾಹುಲ್ ದ್ರಾವಿಡ್ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಇದನ್ನೂ ಓದಿ
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Team India: ಟೀಮ್ ಇಂಡಿಯಾದ ಸರ್ವಶ್ರೇಷ್ಠ ಆರಂಭಿಕ ಆಟಗಾರ ಯಾರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಏಕೆಂದರೆ ದಿನಗಳ ಹಿಂದೆಯಷ್ಟೇ ಮುಕ್ತಾಯವಾಗಿರುವ ಜಿಂಬಾಬ್ವೆ ವಿರುದ್ದದ ಸರಣಿಯಲ್ಲಿ ಹಾಗೂ ಐರ್ಲೆಂಡ್ ವಿರುದ್ದದ ಸರಣಿಯಲ್ಲಿ ಟೀಮ್ ಇಂಡಿಯಾ ಕೋಚ್ ಆಗಿ ಲಕ್ಷ್ಮಣ್ ಕಾಣಿಸಿಕೊಂಡಿದ್ದರು. ಒಂದು ವೇಳೆ ಏಷ್ಯಾಕಪ್​ನಿಂದ ರಾಹುಲ್ ದ್ರಾವಿಡ್ ಹೊರಗುಳಿದರೆ ಲಕ್ಷ್ಮಣ್ ಭಾರತ ತಂಡದೊಂದಿಗೆ ಪ್ರಯಾಣಿಸಲಿದ್ದಾರೆ.

ಏಷ್ಯಾಕಪ್​ಗಾಗಿ ಟೀಮ್ ಇಂಡಿಯಾ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್ ಅಶ್ವಿನ್, ಯುಜುವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್.

ಮೀಸಲು ಆಟಗಾರರು: ಅಕ್ಷರ್ ಪಟೇಲ್, ಶ್ರೇಯಸ್ ಅಯ್ಯರ್ ಹಾಗೂ ದೀಪಕ್ ಚಹರ್.

ಏಷ್ಯಾ ಕಪ್ ತಂಡಗಳ ಗ್ರೂಪ್​:

  • ಗ್ರೂಪ್ ಎ ತಂಡಗಳು- ಭಾರತ, ಪಾಕಿಸ್ತಾನ, ಕ್ವಾಲಿಫೈಯರ್ ತಂಡ
  • ಗ್ರೂಪ್ ಬಿ ತಂಡಗಳು- ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ

Published On - 10:54 am, Tue, 23 August 22

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್