
ಏಷ್ಯಾಕಪ್ 2022 (Asia Cup 2022) ಆರಂಭಕ್ಕೂ ಮುನ್ನವೇ ಟೀಮ್ ಇಂಡಿಯಾಗೆ (Team India) ಆಘಾತ ಎದುರಾಗಿದೆ. ಮೊದಲ ಪಂದ್ಯಕ್ಕೆ ದಿನಗಳು ಮಾತ್ರ ಉಳಿದಿರುವಾಗ ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ (Rahul Dravid) ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 28 ರಂದು ನಡೆಯಲಿರುವ ಭಾರತ-ಪಾಕಿಸ್ತಾನ್ ನಡುವಣ ಪಂದ್ಯದ ವೇಳೆ ಟೀಮ್ ಇಂಡಿಯಾ ಜೊತೆ ರಾಹುಲ್ ದ್ರಾವಿಡ್ ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗಿದೆ.
ಯುಎಇನಲ್ಲಿ ಆಗಸ್ಟ್ 27 ರಿಂದ ಏಷ್ಯಾಕಪ್ ಶುರುವಾಗಲಿದ್ದು, ಇದೀಗ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಸೋಂಕಿಗೆ ಒಳಗಾಗಿರುವ ಅವರು ಕ್ವಾರಂಟೈನ್ನಲ್ಲಿ ಉಳಿಯಲ್ಲಿದ್ದಾರೆ. ಅಲ್ಲದೆ ಕೋವಿಡ್ ಟೆಸ್ಟ್ ನೆಗೆಟಿವ್ ಬಂದರೆ ಮಾತ್ರ ಅವರು ದುಬೈಗೆ ತೆರಳಿದ್ದಾರೆ. ಅತ್ತ ಮುಂದಿನ ಭಾನುವಾರ ಭಾರತ-ಪಾಕಿಸ್ತಾನ್ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಮುಖ್ಯ ಕೋಚ್ ಹೊರಗುಳಿಯುತ್ತಿರುವುದು ಟೀಮ್ ಇಂಡಿಯಾ ಪಾಲಿಗೆ ಹಿನ್ನಡೆಯಾಗಲಿದೆ.
ಈಗಾಗಲೇ ಟೀಮ್ ಇಂಡಿಯಾದ ಪ್ರಮುಖ ಆಟಗಾರರಾದ ಜಸ್ಪ್ರೀತ್ ಬುಮ್ರಾ ಹಾಗೂ ಹರ್ಷಲ್ ಪಟೇಲ್ ಏಷ್ಯಾಕಪ್ನಿಂದ ಹೊರಗುಳಿದಿದ್ದಾರೆ. ಇದೀಗ ರಾಹುಲ್ ದ್ರಾವಿಡ್ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.
ಏಕೆಂದರೆ ದಿನಗಳ ಹಿಂದೆಯಷ್ಟೇ ಮುಕ್ತಾಯವಾಗಿರುವ ಜಿಂಬಾಬ್ವೆ ವಿರುದ್ದದ ಸರಣಿಯಲ್ಲಿ ಹಾಗೂ ಐರ್ಲೆಂಡ್ ವಿರುದ್ದದ ಸರಣಿಯಲ್ಲಿ ಟೀಮ್ ಇಂಡಿಯಾ ಕೋಚ್ ಆಗಿ ಲಕ್ಷ್ಮಣ್ ಕಾಣಿಸಿಕೊಂಡಿದ್ದರು. ಒಂದು ವೇಳೆ ಏಷ್ಯಾಕಪ್ನಿಂದ ರಾಹುಲ್ ದ್ರಾವಿಡ್ ಹೊರಗುಳಿದರೆ ಲಕ್ಷ್ಮಣ್ ಭಾರತ ತಂಡದೊಂದಿಗೆ ಪ್ರಯಾಣಿಸಲಿದ್ದಾರೆ.
ಏಷ್ಯಾಕಪ್ಗಾಗಿ ಟೀಮ್ ಇಂಡಿಯಾ:
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್ ಅಶ್ವಿನ್, ಯುಜುವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್.
ಮೀಸಲು ಆಟಗಾರರು: ಅಕ್ಷರ್ ಪಟೇಲ್, ಶ್ರೇಯಸ್ ಅಯ್ಯರ್ ಹಾಗೂ ದೀಪಕ್ ಚಹರ್.
ಏಷ್ಯಾ ಕಪ್ ತಂಡಗಳ ಗ್ರೂಪ್:
Published On - 10:54 am, Tue, 23 August 22