Rahul Dravid: ರೋಹಿತ್ ಮನವಿಗೆ ಮನಸ್ಸು ಬದಲಿಸಿದ ರಾಹುಲ್ ದ್ರಾವಿಡ್​ಗೆ ವಿಶ್ವಕಪ್​ ಗಿಫ್ಟ್..!

Rahul Dravid: 2023ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 240 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ತಂಡವು 43 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ 6 ವಿಕೆಟ್​ಗಳ ಜಯ ಸಾಧಿಸಿತ್ತು. ಈ ಸೋಲಿನ ಬೆನ್ನಲ್ಲೇ ರಾಹುಲ್ ದ್ರಾವಿಡ್ ಕೋಚ್ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿದ್ದರು.

Rahul Dravid: ರೋಹಿತ್ ಮನವಿಗೆ ಮನಸ್ಸು ಬದಲಿಸಿದ ರಾಹುಲ್ ದ್ರಾವಿಡ್​ಗೆ ವಿಶ್ವಕಪ್​ ಗಿಫ್ಟ್..!
Rahul Dravid - Rohit Sharma
Follow us
|

Updated on: Jul 02, 2024 | 12:09 PM

ನವೆಂಬರ್ 19, 2023… ಅಹಮದಾಬಾದ್​ನಲ್ಲಿ ನಡೆದ ಏಕದಿನ ವಿಶ್ವಕಪ್ ಫೈನಲ್ ಮೂಲಕ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ (Rahul Dravid) ವಿದಾಯ ಹೇಳಲು ಸಜ್ಜಾಗಿದ್ದರು. ಆದರೆ ಫೈನಲ್ ಪಂದ್ಯದ ಫಲಿತಾಂಶ ಎಲ್ಲವನ್ನು ತಲೆಕೆಳಗಾಗಿಸಿತು. ಅತ್ತ ಅದಗಾಗಲೇ ಕೋಚ್ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿದ್ದ ರಾಹುಲ್ ದ್ರಾವಿಡ್ ತಮ್ಮ ನಿರ್ಧಾರವನ್ನು ಬದಲಿಸಲು ಮುಂದಾಗಿರಲಿಲ್ಲ.

ಈ ವಿಷಯ ತಿಳಿಯುತ್ತಿದ್ದಂತೆ ರಾಹುಲ್ ದ್ರಾವಿಡ್ ಅವರಿಗೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕರೆ ಮಾಡಿದ್ದಾರೆ. ಅಲ್ಲದೆ ಮುಂಬರುವ ಟಿ20 ವಿಶ್ವಕಪ್​ವರೆಗೆ ಕೋಚ್ ಆಗಿ ಇರುವಂತೆ ಮನವಿ ಮಾಡಿದ್ದಾರೆ. ಅಲ್ಲೆ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹೀಗೆ ಟಿ20 ವಿಶ್ವಕಪ್​ವರೆಗೆ ಟೀಮ್ ಇಂಡಿಯಾ ಕೋಚ್ ಆಗಿ ಮುಂದುವರೆದ ರಾಹುಲ್ ದ್ರಾವಿಡ್ ಅವರಿಗೆ ವಿಶ್ವಕಪ್ ಗೆದ್ದುಕೊಡುವಲ್ಲಿ ಕೊನೆಗೂ ಭಾರತೀಯ ಆಟಗಾರರು ಯಶಸ್ವಿಯಾಗಿದ್ದಾರೆ. ಈ ಮೂಲಕ ತಮ್ಮ ಕ್ರಿಕೆಟ್​ ಕೆರಿಯರ್​ನ ದೊಡ್ಡ ಕೊರತೆಯನ್ನು ನೀಗಿಸಿದ್ದಾರೆ.

ರಾಹುಲ್ ದ್ರಾವಿಡ್ ಮೂರು ಏಕದಿನ ವಿಶ್ವಕಪ್​​​ನಲ್ಲಿ ಕಣಕ್ಕಿಳಿದರೂ ಟ್ರೋಫಿ ಎತ್ತಿ ಹಿಡಿಯಲು ಸಾಧ್ಯವಾಗಿರಲಿಲ್ಲ. ಇದೀಗ ಕೋಚ್ ಆಗಿ ಟಿ20 ವಿಶ್ವಕಪ್ ಗೆದ್ದುಕೊಂಡಿದ್ದಾರೆ. ಈ ಮೂಲಕ ಕೊನೆಗೂ ವಿಶ್ವಕಪ್ ಎತ್ತಿ ಹಿಡಿದಿದ್ದಾರೆ.

ಈ ಅಭೂತಪೂರ್ವ ಕ್ಷಣಗಳಿಗೆ ಕಾರಣರಾದ ರೋಹಿತ್ ಶರ್ಮಾಗೆ ಇದೀಗ ರಾಹುಲ್ ದ್ರಾವಿಡ್ ಧನ್ಯವಾದ ತಿಳಿಸಿದ್ದಾರೆ. ನವೆಂಬರ್​ನಲ್ಲಿ ಕರೆ ಮಾಡಿ ಟಿ20 ವಿಶ್ವಕಪ್​ವರೆಗೂ ಕೋಚ್ ಆಗಿ ಮುಂದುವರೆಯುವಂತೆ ತಿಳಿಸಿದಕ್ಕೆ ಧನ್ಯವಾದಗಳು ರೋಹಿತ್ ಎಂದು ದ್ರಾವಿಡ್ ತಮ್ಮ ವಿಶ್ವಕಪ್ ಗೆಲುವಿನ ಖುಷಿಯನ್ನು ಹಂಚಿಕೊಂಡಿದ್ದಾರೆ.

ರಾಹುಲ್ ದ್ರಾವಿಡ್ ಕಾರ್ಯಾವಧಿ ಮುಕ್ತಾಯ:

ಟಿ20 ವಿಶ್ವಕಪ್ ಮುಕ್ತಾಯದೊಂದಿಗೆ ರಾಹುಲ್ ದ್ರಾವಿಡ್ ಅವರ ಕೋಚಿಂಗ್ ಕಾರ್ಯಾವಧಿ ಮುಕ್ತಾಯವಾಗಿದೆ. ಹೀಗಾಗಿ ಮುಂಬರುವ ಸರಣಿಗಳಲ್ಲಿ ಟೀಮ್ ಇಂಡಿಯಾ ಜೊತೆ ಅವರು ಕಾಣಿಸಿಕೊಳ್ಳುವುದಿಲ್ಲ. ಅಲ್ಲದೆ ಭಾರತ ತಂಡದ ಕೋಚ್ ಹುದ್ದೆಗೆ ಮತ್ತೆ ಅರ್ಜಿ ಸಲ್ಲಿಸುವುದಿಲ್ಲ ಎಂದು ರಾಹುಲ್ ದ್ರಾವಿಡ್ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಇದನ್ನೂ ಓದಿ: Virat Kohli: ವಿರಾಟ್ ಕೊಹ್ಲಿ ಪಾಲಿಗೆ ಮರೀಚಿಕೆಯಾಗಿರುವ 2 ಟ್ರೋಫಿ

ಹೀಗಾಗಿ ಶೀಘ್ರದಲ್ಲೇ ಟೀಮ್ ಇಂಡಿಯಾಗೆ ಹೊಸ ಕೋಚ್ ನೇಮಕವಾಗಲಿದ್ದಾರೆ. ಈ ಪಟ್ಟಿಯಲ್ಲಿ ಭಾರತ ತಂಡದ ಮಾಜಿ ಆಟಗಾರ ಗೌತಮ್ ಗಂಭೀರ್ ಹಾಗೂ ಡಬ್ಲ್ಯು.ವಿ ರಾಮನ್ ಹೆಸರು ಮುಂಚೂಣಿಯಲ್ಲಿದೆ. ಈ ಇಬ್ಬರು ಭಾರತದ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಗಾಗಿ ನಡೆಸಲಾದ ಸಂದರ್ಶನದಲ್ಲಿ ಭಾಗವಹಿಸಿದ್ದಾರೆ. ಹೀಗಾಗಿ ಇವರಿಬ್ಬರಲ್ಲಿ ಒಬ್ಬರು ಮುಖ್ಯ ಕೋಚ್ ಆಗುವುದು ಖಚಿತ ಎನ್ನಬಹುದು.  ಅದರಂತೆ ಶ್ರೀಲಂಕಾ ವಿರುದ್ಧದ ಸರಣಿಯೊಂದಿಗೆ ಭಾರತ ತಂಡದ ಹೊಸ ಕೋಚ್ ಕಾರ್ಯಾರಂಭ ಮಾಡಲಿದ್ದಾರೆ.

ತಾಜಾ ಸುದ್ದಿ
Team India: ಟೀಮ್ ಇಂಡಿಯಾದ ಚಾಂಪಿಯನ್ಸ್​ ಜೆರ್ಸಿ ಅನಾವರಣ
Team India: ಟೀಮ್ ಇಂಡಿಯಾದ ಚಾಂಪಿಯನ್ಸ್​ ಜೆರ್ಸಿ ಅನಾವರಣ
ಕೆಅರ್​ಎಸ್ ಗೆ ಹೆಚ್ಚಿದ ಒಳಹರಿವು, ಮಳೆಗಾಲದ ಆರಂಭದಲ್ಲೇ 100 ಅಡಿ ನೀರು!
ಕೆಅರ್​ಎಸ್ ಗೆ ಹೆಚ್ಚಿದ ಒಳಹರಿವು, ಮಳೆಗಾಲದ ಆರಂಭದಲ್ಲೇ 100 ಅಡಿ ನೀರು!
ಮಂಗಳೂರು, ಉಡುಪಿಯಲ್ಲಿ ಮಳೆ, ಕೆಲ ಪ್ರವಾಸಿ ತಾಣಗಳಿಗೆ ತೆರಳದಂತೆ ನಿರ್ಬಂಧ
ಮಂಗಳೂರು, ಉಡುಪಿಯಲ್ಲಿ ಮಳೆ, ಕೆಲ ಪ್ರವಾಸಿ ತಾಣಗಳಿಗೆ ತೆರಳದಂತೆ ನಿರ್ಬಂಧ
ಐಟಿಸಿ ಮೌರ್ಯ ಹೋಟೆಲ್​​ನಲ್ಲಿ ​​ಕೇಕ್​​ ಕತ್ತರಿಸಿದ ರಾಹುಲ್ ದ್ರಾವಿಡ್
ಐಟಿಸಿ ಮೌರ್ಯ ಹೋಟೆಲ್​​ನಲ್ಲಿ ​​ಕೇಕ್​​ ಕತ್ತರಿಸಿದ ರಾಹುಲ್ ದ್ರಾವಿಡ್
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ