Rahul Dravid Video: ಸೂರ್ಯಕುಮಾರ್ ಔಟ್ ಆಗುತ್ತಿದ್ದಂತೆ ಅಸಮಾಧಾನ ಹೊರಹಾಕಿದ ರಾಹುಲ್ ದ್ರಾವಿಡ್
ಶ್ರೀಲಂಕಾ ವಿರುದ್ದ ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 38 ರನ್ಗಳಿಂದ ಭರ್ಜರಿ ಜಯ ಸಾಧಿಸಿತು. ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತದ ಬ್ಯಾಟ್ಸ್ಮನ್ಗಳಿಂದ ನಿರೀಕ್ಷಿತ ಮಟ್ಟದ ಪ್ರದರ್ಶನ ಮೂಡಿಬಂದಿರಲಿಲ್ಲ. ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಭರ್ಜರಿಯಾಗಿ ಬ್ಯಾಟ್ ಬೀಸಿದ ಸೂರ್ಯಕುಮಾರ್ ಯಾದವ್ (Suryakumar Yadav) ಆಕರ್ಷಕ ಅರ್ಧಶತಕ ಬಾರಿಸಿದ್ದರು. 34 ಎಸೆತಗಳನ್ನು ಎದುರಿಸಿದ್ದ ಸೂರ್ಯಕುಮಾರ್ 2 ಸೂಪರ್ ಸಿಕ್ಸ್ ಹಾಗೂ 5 ಭರ್ಜರಿ ಬೌಂಡರಿ ಸಿಡಿಸಿ 50 ರನ್ […]
ಶ್ರೀಲಂಕಾ ವಿರುದ್ದ ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 38 ರನ್ಗಳಿಂದ ಭರ್ಜರಿ ಜಯ ಸಾಧಿಸಿತು. ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತದ ಬ್ಯಾಟ್ಸ್ಮನ್ಗಳಿಂದ ನಿರೀಕ್ಷಿತ ಮಟ್ಟದ ಪ್ರದರ್ಶನ ಮೂಡಿಬಂದಿರಲಿಲ್ಲ. ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಭರ್ಜರಿಯಾಗಿ ಬ್ಯಾಟ್ ಬೀಸಿದ ಸೂರ್ಯಕುಮಾರ್ ಯಾದವ್ (Suryakumar Yadav) ಆಕರ್ಷಕ ಅರ್ಧಶತಕ ಬಾರಿಸಿದ್ದರು. 34 ಎಸೆತಗಳನ್ನು ಎದುರಿಸಿದ್ದ ಸೂರ್ಯಕುಮಾರ್ 2 ಸೂಪರ್ ಸಿಕ್ಸ್ ಹಾಗೂ 5 ಭರ್ಜರಿ ಬೌಂಡರಿ ಸಿಡಿಸಿ 50 ರನ್ ಕಲೆಹಾಕಿದ್ದರು.
ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಸೂರ್ಯಕುಮಾರ್ ಯಾದವ್ (Suryakumar Yadav) ನಾಯಕ ಶಿಖರ್ ಧವನ್ (Shikhar Dhawan) ಜೊತೆಗೂಡಿ 62 ರನ್ ಪಾಲುದಾರಿಕೆ ನೀಡಿದ್ದರು. ಆದರೆ ಹಾಫ್ ಸೆಂಚುರಿ ಬೆನ್ನಲ್ಲೇ ವನಿಂದು ಹಸರಂಗ ಎಸೆತದಲ್ಲಿ ರಮೇಶ್ ಮೆಂಡಿಸ್ಗೆ ಸುಲಭ ಕ್ಯಾಚ್ ನೀಡಿ ನಿರಾಸೆ ಮೂಡಿಸಿದರು. ಇತ್ತ ಸೂರ್ಯಕುಮಾರ್ ಸುಲಭವಾಗಿ ವಿಕೆಟ್ ಒಪ್ಪಿಸುತ್ತಿದ್ದಂತೆ ಕೋಚ್ ರಾಹುಲ್ ದ್ರಾವಿಡ್ (Rahul Dravid) ಬೇಸರದ ಪ್ರತಿಕ್ರಿಯೆ ನೀಡಿದ್ದರು.
ಉತ್ತಮ ಫಾರ್ಮ್ ಪ್ರದರ್ಶಿಸಿದ್ದ ಸೂರ್ಯಕುಮಾರ್ ದೊಡ್ಡ ಮೊತ್ತ ಪೇರಿಸುವ ನಿರೀಕ್ಷೆ ಇಡಲಾಗಿತ್ತು. ಅಲ್ಲದೆ ಮುಂಬೈ ದಾಂಡಿಗ ಕ್ರೀಸ್ನಲ್ಲಿದ್ದ ವೇಳೆ ಟೀಮ್ ಇಂಡಿಯಾ ಮೊತ್ತ 200ರ ಗಡಿ ದಾಟಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಸುಲಭ ಕ್ಯಾಚ್ ನೀಡುತ್ತಿದ್ದಂತೆ ಡಗೌಟ್ನಲ್ಲಿ ಕೂತಿದ್ದ ರಾಹುಲ್ ಸಪ್ಪೆ ಮುಖದೊಂದಿಗೆ ನಿರಾಸೆ ವ್ಯಕ್ತಪಡಿಸಿದ್ದರು.
ರಾಹುಲ್ ದ್ರಾವಿಡ್ ಅವರ ಈ ಮೌನ ಪ್ರತಿಕ್ರಿಯೆಯ ವಿಡಿಯೋ ಇದೀಗ ವೈರಲ್ ಆಗಿದೆ. ಆಟಗಾರ ವಿನಾಕಾರಣ ವಿಕೆಟ್ ಒಪ್ಪಿಸಿದಾಗ ಕೋಚ್ ಆಗುವ ಬೇಸರ ಹೇಗಿರುತ್ತೆ ಎಂಬುದನ್ನು ದ್ರಾವಿಡ್ (Rahul Dravid) ಅವರ ಮುಖದಲ್ಲಿ ಕಾಣಬಹುದು ಎಂದು ಹಲವರು ಪ್ರತಿಕ್ರಿಯಿಸಿದ್ದಾರೆ. ಇದಾಗ್ಯೂ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಶ್ರೀಲಂಕಾಗೆ 165 ರನ್ಗಳ ಟಾರ್ಗೆಟ್ ನೀಡಿತು.
— Maqbool (@im_maqbool) July 25, 2021
ಈ ಟಾರ್ಗೆಟ್ನ್ನು ಬೆನ್ನತ್ತಿದ ಶ್ರೀಲಂಕಾ ತಂಡವು 18.3 ಓವರ್ನಲ್ಲಿ 126 ರನ್ಗಳಿಗೆ ಸರ್ವಪತನ ಕಂಡಿತು. ಟೀಮ್ ಇಂಡಿಯಾ ಪರ ಭುವನೇಶ್ವರ್ ಕುಮಾರ್ 4 ವಿಕೆಟ್ ಉರುಳಿಸಿ ಮಿಂಚಿದರೆ, ದೀಪಕ್ ಚಹರ್ 2 ವಿಕೆಟ್ ಕಬಳಿಸಿದರು. ಈ ಜಯದೊಂದಿಗೆ ಟೀಮ್ ಇಂಡಿಯಾ 3 ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. 2ನೇ ಪಂದ್ಯವು ಮಂಗಳವಾರ (ಜು.27) ನಡೆಯಲಿದ್ದು, ಈ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿ ವಶಪಡಿಸಿಕೊಳ್ಳುವ ವಿಶ್ವಾಸದಲ್ಲಿದೆ ದ್ರಾವಿಡ್ ಗರಡಿ ಹುಡುಗರು.
ಇದನ್ನೂ ಓದಿ: ಟೀಮ್ ಇಂಡಿಯಾ ಟೆಸ್ಟ್ ತಂಡಕ್ಕೆ ಭುವನೇಶ್ವರ್ ಆಯ್ಕೆಯಾಗದಿರಲು ಇದುವೇ ಅಸಲಿ ಕಾರಣ
ಇದನ್ನೂ ಓದಿ: ಕೊಹ್ಲಿ ಪಡೆಯ ಎದುರಾಳಿಗಳು ಯಾರು? ಇಲ್ಲಿದೆ RCBಯ ಸಂಪೂರ್ಣ ವೇಳಾಪಟ್ಟಿ
(Rahul Dravid Upset after Suryakumar Yadav Dismiss in the First T20I)
Published On - 2:40 pm, Mon, 26 July 21