AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sourav Ganguly: ದ್ರಾವಿಡ್ ಅವರ ಮಗ ಕರೆ ಮಾಡಿ ಅಪ್ಪ ತುಂಬಾ ಕಟ್ಟುನಿಟ್ಟು, ನೀವು ಅವರನ್ನು ಕರ್ಕೊಂಡು ಹೋಗಿ ಎಂದರು..!

ನ್ಯೂಜಿಲೆಂಡ್ ವಿರುದ್ದದ ಸರಣಿಯೊಂದಿಗೆ ರಾಹುಲ್ ದ್ರಾವಿಡ್ ಟೀಮ್ ಇಂಡಿಯಾ ಕೋಚ್ ಆಗಿ ಹೊಸ ಇನಿಂಗ್ಸ್​ ಆರಂಭಿಸಲಿದ್ದಾರೆ. ನವೆಂಬರ್ 17 ರಿಂದ ಕಿವೀಸ್ ವಿರುದ್ದ 3 ಪಂದ್ಯಗಳ ಟಿ20 ಸರಣಿ ಆರಂಭವಾಗಲಿದ್ದು, ಇದರ ಬೆನ್ನಲ್ಲೇ 2 ಟೆಸ್ಟ್ ಪಂದ್ಯಗಳು ಜರುಗಲಿದೆ.

Sourav Ganguly: ದ್ರಾವಿಡ್ ಅವರ ಮಗ ಕರೆ ಮಾಡಿ ಅಪ್ಪ ತುಂಬಾ ಕಟ್ಟುನಿಟ್ಟು, ನೀವು ಅವರನ್ನು ಕರ್ಕೊಂಡು ಹೋಗಿ ಎಂದರು..!
Rahul Dravid-Sourav Ganguly
TV9 Web
| Updated By: ಝಾಹಿರ್ ಯೂಸುಫ್|

Updated on: Nov 14, 2021 | 6:11 PM

Share

ಟೀಮ್ ಇಂಡಿಯಾ (Team India) ನೂತನ ಕೋಚ್ ಆಗಿ ರಾಹುಲ್ ದ್ರಾವಿಡ್ (Rahul Dravid) ಆಯ್ಕೆಯಾಗಿದ್ದಾರೆ. ದ್ರಾವಿಡ್ ಅವರ ಆಯ್ಕೆಯ ಹಿಂದಿನ ಕೆಲ ವಿಷಯಗಳನ್ನು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ (Sourav Ganguly) ಬಹಿರಂಗಪಡಿಸಿದ್ದಾರೆ. ಈ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಗಂಗೂಲಿ, ನನಗೆ ರಾಹುಲ್ ದ್ರಾವಿಡ್ ಅವರ ಮಗನಿಂದ ಕರೆ ಬಂದಿತ್ತು. ಅಪ್ಪ ಮನೆಯಲ್ಲಿ ತುಂಬಾ ಕಟ್ಟುನಿಟ್ಟಾಗಿ ವರ್ತಿಸುತ್ತಿದ್ದಾರೆ. ಅವರನ್ನು ಕರೆದುಕೊಂಡು ಹೋಗಿ ಎಂದು ತಿಳಿಸಿದ್ದ. ಇದನ್ನೇ ಮುಂದಿಟ್ಟು ನಾನು ದ್ರಾವಿಡ್ ಅವರನ್ನು ರಾಷ್ಟ್ರೀಯ ತಂಡ ಸೇರಲು ಇದು ಸರಿಯಾದ ಸಮಯ ಎಂದು ತಿಳಿಸಿದೆ ಗಂಗೂಲಿ ತಮಾಷೆಯಾಗಿ ಹೇಳಿದರು.

ಟಿ20 ವಿಶ್ವಕಪ್ ನಂತರ ಟೀಮ್ ಇಂಡಿಯಾದ ಮುಖ್ಯ ಕೋಚ್ ರವಿಶಾಸ್ತ್ರಿ ಅವರ ಅಧಿಕಾರಾವಧಿ ಕೊನೆಗೊಂಡಿತು. ತಂಡವನ್ನು ಸರಿಯಾದ ದಿಕ್ಕಿನಲ್ಲಿ ಕೊಂಡೊಯ್ಯಲು ಶಾಸ್ತ್ರಿ ಅವರ ಉತ್ತರಾಧಿಕಾರಿಯಾಗಿ ಬಿಸಿಸಿಐ ರಾಹುಲ್ ದ್ರಾವಿಡ್ ನೇಮಕಕ್ಕೆ ಒಲವು ಹೊಂದಿತ್ತು. ದ್ರಾವಿಡ್ ಕಳೆದ ಕೆಲವು ವರ್ಷಗಳಿಂದ ಭಾರತ ಎ ಮತ್ತು ಅಂಡರ್-19 ತಂಡಗಳಿಗೆ ತರಬೇತುದಾರರಾಗಿ ಯಶಸ್ವಿಯಾಗಿದ್ದರು. ಹೀಗಾಗಿ ಅವರನ್ನು ಒಪ್ಪಿಸಲು ನಿರ್ಧರಿಸಿದ್ದೆವು ಎಂದು ಗಂಗೂಲಿ ತಿಳಿಸಿದರು.

ಇದೇ ವೇಳೆ ದ್ರಾವಿಡ್ ನೇಮಕದ ಬಗ್ಗೆ ಮಾತನಾಡಿದ ಗಂಗೂಲಿ, ನನ್ನ ಹಾಗೂ ದ್ರಾವಿಡ್ ಅವರ ಸ್ನೇಹ ಹಲವು ವರ್ಷಗಳದ್ದು. ಅದು ಮೈದಾನದಲ್ಲೂ ಇತ್ತು. ಹೊರಗೆ ಕೂಡ ಮುಂದುವರೆದಿತ್ತು. ಏಕೆಂದರೆ ನಾವು ಒಟ್ಟಿಗೆ ಬೆಳೆದಿದ್ದೇವೆ. ಜೊತೆಗೆ ಕ್ರಿಕೆಟ್ ಕೆರಿಯರ್​ ಪ್ರಾರಂಭಿಸಿದ್ದೇವೆ ಮತ್ತು ಹೆಚ್ಚಿನ ಸಮಯವನ್ನು ಒಟ್ಟಿಗೆ ಆಡುತ್ತಿದ್ದೆವು. ಹೀಗಾಗಿ ಅವರನ್ನು ಕೋಚ್​ ಹುದ್ದೆಗೆ ಒಪ್ಪಿಸುವುದು ಸುಲಭವಾಗಿತ್ತು ಎಂದು ಗಂಗೂಲಿ ತಿಳಿಸಿದ್ದಾರೆ.

ನ್ಯೂಜಿಲೆಂಡ್ ವಿರುದ್ದದ ಸರಣಿಯೊಂದಿಗೆ ರಾಹುಲ್ ದ್ರಾವಿಡ್ ಟೀಮ್ ಇಂಡಿಯಾ ಕೋಚ್ ಆಗಿ ಹೊಸ ಇನಿಂಗ್ಸ್​ ಆರಂಭಿಸಲಿದ್ದಾರೆ. ನವೆಂಬರ್ 17 ರಿಂದ ಕಿವೀಸ್ ವಿರುದ್ದ 3 ಪಂದ್ಯಗಳ ಟಿ20 ಸರಣಿ ಆರಂಭವಾಗಲಿದ್ದು, ಇದರ ಬೆನ್ನಲ್ಲೇ 2 ಟೆಸ್ಟ್ ಪಂದ್ಯಗಳು ಜರುಗಲಿದೆ. ಈ ಸರಣಿಯೊಂದಿಗೆ ರಾಹುಲ್ ದ್ರಾವಿಡ್ ಭಾರತ ಹಿರಿಯರ ತಂಡದ ಮುಖ್ಯ ಕೋಚ್ ಆಗಿ ಹೊಸ ಜವಾಬ್ದಾರಿ ನಿಭಾಯಿಸಲಿದ್ದಾರೆ.

ಇದನ್ನೂ ಓದಿ: Explained: ನ್ಯೂಜಿಲೆಂಡ್-ಆಸ್ಟ್ರೇಲಿಯಾ ಮತ್ತೊಂದು ಭಾರತ-ಪಾಕಿಸ್ತಾನ್…ಆದರೆ

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಈ ಜೋಡಿ ವಿಶ್ವಕಪ್ ಗೆದ್ದು ಕೊಡಲಿದೆ ಎಂದ ಮಾಜಿ ಕ್ರಿಕೆಟಿಗ

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಮುಂದಿನ ಸರಣಿಗಳ ವೇಳಾಪಟ್ಟಿ ಹೀಗಿದೆ

(Rahul Dravid’s son said his father was being too strict, he needed to be taken away: Sourav Ganguly)

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ