IND vs IRE: ಐರ್ಲೆಂಡ್ ವಿರುದ್ಧದ ಸರಣಿಗೂ ಆಯ್ಕೆಯಾಗಿಲ್ಲ: ರಾಹುಲ್ ತೇವಾಟಿಯ ಟ್ವೀಟ್ ವೈರಲ್

India's T20I squad vs Ireland: ಬಿಸಿಸಿಐ ಬುಧವಾರ ಈ ಸರಣಿಗೆ ಭಾರತ ತಂಡವನ್ನು ಕೂಡ ಪ್ರಕಟ ಮಾಡಿದ್ದು ಕೆಲ ಹೊಸ ಮುಖಗಳಿಗೆ ಅವಕಾಶ ಕೂಡ ನೀಡಲಾಗಿದೆ. ಆದರೆ, ರಾಹುಲ್ ತೇವಾಟಿಯ ಅವರಿಗೆ ಇನ್ನೂ ಅದೃಷ್ಟ ಬಾಗಿಲು ತೆರೆದಿಲ್ಲ. ಈ ಬಗ್ಗೆ ಟ್ವೀಟ್ ಮಾಡಿ ಬೇಸರ ಹೊರಹಾಕಿದ್ದಾರೆ.

IND vs IRE: ಐರ್ಲೆಂಡ್ ವಿರುದ್ಧದ ಸರಣಿಗೂ ಆಯ್ಕೆಯಾಗಿಲ್ಲ: ರಾಹುಲ್ ತೇವಾಟಿಯ ಟ್ವೀಟ್ ವೈರಲ್
Team India and Rahul Tewatia
Follow us
TV9 Web
| Updated By: Vinay Bhat

Updated on:Jun 16, 2022 | 8:06 AM

ಭಾರತ ಕ್ರಿಕೆಟ್ ತಂಡ ಸದ್ಯ ರಿಷಭ್ ಪಂತ್ ನಾಯಕತ್ವದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯನ್ನು ಆಡುತ್ತಿದೆ. ಮೂರು ಪಂದ್ಯಗಳು ಮುಕ್ತಾಯಗೊಂಡಿದ್ದು ಮೊದಲೆರಡರಲ್ಲಿ ಹರಿಣಗಳು ಗೆದ್ದರೆ ತೃತೀಯ ಪಂದ್ಯದಲ್ಲಿ ಭಾರತ ಜಯ ಸಾಧಿಸಿತ್ತು. ಉಳಿದಿರುವ ಎರಡು ಕದನ ಕುತೂಹಲ ಕೆರಳಿಸಿದೆ. ಈ ಸರಣಿ ಮುಕ್ತಾಯದ ಬಳಿಕ ಟೀಮ್ ಇಂಡಿಯಾ ಐರ್ಲೆಂಡ್ (India vs Ireland) ಪ್ರವಾಸ ಕೈಗೊಳ್ಳಲಿದ್ದು ಈ ಪ್ರವಾಸದಲ್ಲಿ ಎರಡು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಬಿಸಿಸಿಐ ಬುಧವಾರ ಈ ಸರಣಿಗೆ ಭಾರತ ತಂಡವನ್ನು ಕೂಡ ಪ್ರಕಟ ಮಾಡಿದ್ದು ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ಅವರನ್ನು ನಾಯಕನನ್ನಾಗಿಯೂ, ವೇಗಿ ಭುವನೇಶ್ವರ್ ಕುಮಾರ್ ಅವರನ್ನು ಉಪ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಈ ಬಾರಿ ಕೆಲ ಹೊಸ ಮುಖಗಳಿಗೆ ಅವಕಾಶ ಕೂಡ ನೀಡಲಾಗಿದೆ. ಆದರೆ, ರಾಹುಲ್ ತೇವಾಟಿಯ (Rahul Tewatia) ಅವರಿಗೆ ಇನ್ನೂ ಅದೃಷ್ಟ ಬಾಗಿಲು ತೆರೆದಿಲ್ಲ.

ಕಳೆದ ಎರಡು ವರ್ಷಗಳಿಂದ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಉತ್ತಮ ಪ್ರದರ್ಶನ ತೋರುತ್ತಿದ್ದ ತೇವಾಟಿಯ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆಯಲಿದ್ದಾರೆ ಎಂದು ನಂಬಲಾಗಿತ್ತು. ಅಲ್ಲದೆ ಐಪಿಎಲ್ 2022 ರ ಚಾಂಪಿಯನ್ ತಂಡ ಗುಜರಾತ್ ಟೈಟಾನ್ಸ್ ಪರ ಆಡಿ ಫಿನಿಶರ್ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದರು. ಇದೀಗ ಐರ್ಲೆಂಡ್ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟವಾಗಿದೆ. ಇಂಗ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯ ಇರುವ ಕಾರಣ ಎಲ್ಲ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು ಯುವ ಆಟಗಾರರಿಗೆ ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ
Image
IND vs IRE: ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ; ಹಾರ್ದಿಕ್​ಗೆ ನಾಯಕತ್ವ! ಹೊಸಬರಿಗೆ ಅವಕಾಶ
Image
Indonesia Open 2022: ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯ ಸೇನ್​ಗೆ ಭಾರತೀಯನಿಂದಲೇ ಸೋಲು..!
Image
Ranji Trophy: ಸಂಕಷ್ಟದಲ್ಲಿದ್ದ ತಂಡಕ್ಕೆ ಕ್ರೀಡಾ ಸಚಿವರ ನೆರವು; ರಣಜಿ ಸೆಮಿಫೈನಲ್​ನಲ್ಲಿ ಮನೋಜ್ ಅಬ್ಬರ
Image
India Tour of Ireland: ಟೀಮ್ ಇಂಡಿಯಾ ವಿರುದ್ದದ ಸರಣಿಗೆ ಐರ್ಲೆಂಡ್ ತಂಡ ಪ್ರಕಟ

IND vs IRE: 6 ಎಸೆತಗಳಲ್ಲಿ 6 ಸಿಕ್ಸರ್! ಐಪಿಎಲ್​ನಲ್ಲಿ 413 ರನ್ ಚಚ್ಚಿದ ಬ್ಯಾಟರ್​ಗೆ ಟೀಂ ಇಂಡಿಯಾದಲ್ಲಿ ಸ್ಥಾನ

ರಾಹುಲ್ ತ್ರಿಪಾಠಿಗೆ ಇದೇ ಮೊದಲ ಬಾರಿಗೆ ರಾಷ್ಟ್ರೀಯ ತಂಡದಿಂದ ಬುಲಾವ್ ಬಂದಿದೆ. ಸಂಜು ಸ್ಯಾಮ್ಸನ್ ಕೂಡ ತಂಡದಲ್ಲಿ ಮರಳಿ ಸ್ಥಾನ ಪಡೆದಿದ್ದಾರೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮ, ಕೆಎಲ್ ರಾಹುಲ್, ರಿಷಭ್ ಪಂತ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಸೇರಿದಂತೆ ಹಲವು ಹಿರಿಯ ಆಟಗಾರರಿಗೆ ಐರ್ಲೆಂಡ್ ಪ್ರವಾಸದಿಂದ ವಿಶ್ರಾಂತಿ ನೀಡಲಾಗಿದೆ. ಆದರೆ, ರಾಹುಲ್ ತ್ರಿಪಾಠಿಗೆ ಟೀಮ್ ಇಂಡಿಯಾ ಬಾಗಿಲು ತೆಗೆದಿಲ್ಲ. ಈ ಬಗ್ಗೆ ಟ್ವಿಟರ್​​ನಲ್ಲಿ ಟ್ವೀಟ್ ಮಾಡುವ ಮೂಲಕ ಬೇಸರ ಹೊರಹಾಕಿದ್ದಾರೆ. “ನಿರೀಕ್ಷೆಗಳು ನೋವುಂಟುಮಾಡುತ್ತವೆ” ಎಂದು ಬರೆದುಕೊಂಡಿದ್ದಾರೆ.

ಇನ್ನು ರಿಷಭ್​ ಪಂತ್​ ಇಂಗ್ಲೆಂಡ್​ ವಿರುದ್ಧದ ಏಕೈಕ ಟೆಸ್ಟ್​ ಪಂದ್ಯವನ್ನಾಡಲು ಇಂಗ್ಲೆಂಡ್​ ಪ್ರವಾಸ ಮಾಡಲಿರುವ ಕಾರಣ ಐರ್ಲೆಂಡ್ ಸರಣಿಯಿಂದ ಹೊರಗುಳಿದಿದ್ದಾರೆ. ಐರ್ಲೆಂಡ್​ ವಿರುದ್ಧ ಭಾರತ ಜೂನ್​ 26, 28 ರಂದು ಎರಡು ಪಂದ್ಯಗಳ ಟಿ-20 ಸರಣಿ ನಡೆಯಲಿದೆ. ಟೆಸ್ಟ್​ ಸರಣಿಗೆ ಸಜ್ಜಾಗಲು ಎಲ್ಲ ಹಿರಿಯ ಆಟಗಾರರಿಗೆ ರೆಸ್ಟ್ ನೀಡಲಾಗಿದ್ದು, ಹಾರ್ದಿಕ್​ ಪಾಂಡ್ಯಗೆ ತಂಡದ ನಾಯಕತ್ವ ವಹಿಸಲಾಗಿದೆ. ಇದಲ್ಲದೇ ಈ ಸರಣಿಗೆ ವಿವಿಎಸ್​ ಲಕ್ಷ್ಮಣ್​ ಅವರನ್ನು ಕೋಚ್​ ಆಗಿ ಕೆಲಸ ಮಾಡಲು ಬಿಸಿಸಿಐ ಕೋರಿದೆ. ಇದಕ್ಕೆ ವಿವಿಎಸ್ ಲಕ್ಷ್ಮಣ್​ ಅವರು ಕೂಡ ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಭಾರತ ತಂಡ:

ಹಾರ್ದಿಕ್ ಪಾಂಡ್ಯ (ನಾಯಕ), ಭುವನೇಶ್ವರ್ ಕುಮಾರ್ (ಉಪ ನಾಯಕ), ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಯುಜ್ವೇಂದ್ರ ಚಹಲ್, ಅಕ್ಸರ್ ಪಟೇಲ್, ಆರ್. ಬಿಷ್ಣೋಯಿ, ಹರ್ಷಲ್ ಪಟೇಲ್, ಆರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಆವೇಶ್ ಖಾನ್.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:06 am, Thu, 16 June 22