IND vs SA: ಐಪಿಎಲ್​ನಲ್ಲಿ ಮಿಂಚಿ ಭರ್ಜರಿ ಫಾರ್ಮ್​ನಲ್ಲಿದ್ದರೂ ಇವರಿಗಿಲ್ಲ ಅವಕಾಶ

India's T20I squad vs South Africa: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಟೀಮ್ ಇಂಡಿಯಾಕ್ಕೆ (Team India) ಆಯ್ಕೆಯಾಗುವ ಅರ್ಹತೆಯನ್ನು ಹೊಂದಿದ್ದ ಕೆಲ ಆಟಗಾರರಿಗೆ ಮಾತ್ರ ಸ್ಥಾನ ಸಿಕ್ಕಿಲ್ಲ.

IND vs SA: ಐಪಿಎಲ್​ನಲ್ಲಿ ಮಿಂಚಿ ಭರ್ಜರಿ ಫಾರ್ಮ್​ನಲ್ಲಿದ್ದರೂ ಇವರಿಗಿಲ್ಲ ಅವಕಾಶ
Rahul tripathi
Follow us
TV9 Web
| Updated By: Vinay Bhat

Updated on:May 23, 2022 | 11:34 AM

ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆಯಲಿರುವ ಟಿ20 ಸರಣಿಗೆ ಭಾರತದ (India vs South Africa) 18 ಮಂದಿ ಆಟಗಾರರ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಪ್ರಕಟಿಸಿದೆ. ಖಾಯಂ ನಾಯಕ ರೋಹಿತ್‌ ಶರ್ಮ ವಿಶ್ರಾಂತಿ ಹಿನ್ನೆಲೆಯಲ್ಲಿ ಕನ್ನಡಿಗ ಕೆಎಲ್ ‌ರಾಹುಲ್‌ಗೆ ತಂಡವನ್ನು ಮುನ್ನಡೆಸುವ ಜವಾಬ್ದಾರಿ ನೀಡಲಾಗಿದೆ. ರಿಷಬ್ ಪಂತ್ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ. 5 ಪಂದ್ಯಗಳ ಈ ಚುಟುಕು ಸಮರಕ್ಕೆ ಹಿರಿಯ ಆಟಗಾರರಾದ ವಿರಾಟ್‌ ಕೊಹ್ಲಿ (Virat Kohli), ಜಸ್​ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್‌ ಶಮಿ ಅವರುಗಳಿಗೆ ವಿಶ್ರಾಂತಿ ನೀಡಲಾಗಿದೆ. ಆಲ್ರೌಂಡರ್‌ ಹಾರ್ದಿಕ್‌ ಪಾಂಡ್ಯ ಮತ್ತು ವಿಕೆಟ್‌-ಬ್ಯಾಟ್ಸ್‌ಮನ್‌ ಕೀಪರ್‌ ದಿನೇಶ್‌ ಕಾರ್ತಿಕ್‌ ತಂಡಕ್ಕೆ ಕಮ್‌ಬ್ಯಾಕ್‌ ಮಾಡಿದ್ದಾರೆ. ಇವರ ಜೊತೆಗೆ ವೇಗಿ ಅರ್ಶದೀಪ್‌ ಸಿಂಗ್‌ ಹಾಗೂ ಉಮ್ರಾನ್‌ ಮಲ್ಲಿಕ್‌ ಮೊದಲ ಬಾರಿ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ, ಟೀಮ್ ಇಂಡಿಯಾಗೆ (Team India) ಆಯ್ಕೆಯಾಗುವ ಅರ್ಹತೆಯನ್ನು ಹೊಂದಿದ್ದ ಕೆಲ ಆಟಗಾರರಿಗೆ ಮಾತ್ರ ಸ್ಥಾನ ಸಿಕ್ಕಿಲ್ಲ.

ಟಿ20 ತಂಡದಲ್ಲಿ ರುತುರಾಜ್‌ ಗಾಯಕ್ವಾಡ್‌ ಹಾಗೂ ಇಶಾನ್‌ ಕಿಶನ್‌ ಅವರು ಸ್ಥಾನ ಪಡೆದಿದ್ದಾರೆ. ಇವರೊಂದಿಗೆ ಐಪಿಎಲ್‌ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾದ ಆಲ್ರೌಂಡರ್‌ ವೆಂಕಟೇಶ್‌ ಅಯ್ಯರ್‌ ಸಹ ತಂಡದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ. ಶ್ರೇಯಸ್‌ ಅಯ್ಯರ್‌, ದೀಪಕ್‌ ಹೂಡ ಕೂಡ ಕಮ್​ಬ್ಯಾಕ್ ಮಾಡಿದ್ದಾರೆ. ಆದರೆ, ಈ ಬಾರಿ ಸನ್​ರೈಸರ್ಸ್​ ಹೈದರಾಬಾದ್ ಪರ ಸತತವಾಗಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿರುವ ರಾಹುಲ್ ತ್ರಿಪಾಠಿಗೆ ಬಿಸಿಸಿಐ ಅವಕಾಶ ನೀಡಿಲ್ಲ.

ಇದನ್ನೂ ಓದಿ
Image
Liam Livingstone: ಐಪಿಎಲ್ 2022 ಬೆಸ್ಟ್ ಕ್ಯಾಚ್ ಇದೇ ಆಗುತ್ತಾ?: ಲಿವಿಂಗ್​ಸ್ಟೋನ್ ಹಿಡಿದ ರೋಚಕ ಕ್ಯಾಚ್ ನೋಡಿ
Image
IND vs SA: ಟಿ20 ಸರಣಿಗೆ ಆಯ್ಕೆಯಾದ ಬೆನ್ನಲ್ಲೇ ದಿನೇಶ್ ಕಾರ್ತಿಕ್ ಮಾಡಿದ ಟ್ವೀಟ್ ಏನು ನೋಡಿ
Image
SRH vs PBKS Highlights, IPL 2022: ಗೆಲುವಿನೊಂದಿಗೆ ಐಪಿಎಲ್ ಪ್ರಯಾಣ ಮುಗಿಸಿದ ಪಂಜಾಬ್
Image
IND vs SA: ಟೀಂ ಇಂಡಿಯಾದಲ್ಲಿ ಕಾಶ್ಮೀರ್ ಫೈಯರ್, ಪಂಜಾಬ್ ಪವರ್; ಡಿಕೆ​ಗೂ ಸಿಕ್ತು ಅವಕಾಶ..!

ಈ ಬಾರಿಯ ಆವೃತ್ತಿಯಲ್ಲಿ 14 ಪಂದ್ಯಗಳನ್ನಾಡಿರುವ ರಾಹುಲ್ ತ್ರಿಪಾಠಿ 413 ರನ್ ಕಲೆಹಾಕಿ ಮೂರು ಬಾರಿ ಅರ್ಧಶತಕವನ್ನೂ ಸಹ ಬಾರಿಸಿದ್ದಾರೆ. ಹೀಗೆ ಸಾಲು ಸಾಲು ಆವೃತ್ತಿಗಳಲ್ಲಿ ಮಿಂಚಿರುವ ರಾಹುಲ್ ತ್ರಿಪಾಠಿಗೆ ಅವಕಾಶ ಸಿಗದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಇವರ ಜೊತೆಗೆ ಸಂಜು ಸ್ಯಾಮ್ಸನ್​​ಗೆ ಕೂಡ ಅವಕಾಶ ಸಿಕ್ಕಿಲ್ಲ. ರಾಜಸ್ಥಾನ್ ರಾಯಲ್ಸ್ ತಂಡವನ್ನು ನಾಯಕನಾಗಿ ಪ್ಲೇ ಆಫ್ ವರೆಗೆ ಕೊಂಡೊಯ್ಯಿದಿರುವ ಸ್ಯಾಮ್ಸನ್​ಗೆ ಯಾಕೆ ಅವಕಾಶ ನೀಡಿಲ್ಲ ಎಂದು ಪ್ರಶ್ನಿಸುತ್ತಿದ್ದಾರೆ.

IPL 2022 Points Table: ಲೀಗ್ ಪಂದ್ಯಗಳು ಮುಕ್ತಾಯ: ಪಾಯಿಂಟ್ ಟೇಬಲ್, ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿ ಇದೆ?

ಜೂನ್ 9 ರಿಂದ ಆರಂಭಗೊಳ್ಳುವ ಮೊದಲ ಟಿ20 ಪಂದ್ಯವು ದೆಹಲಿಯಲ್ಲಿ ನಡೆಯಲಿದ್ದು, ಜೂನ್ 12 ಎರಡನೇ ಟಿ20 ಕಟಕ್, ಜೂನ್ 14 ಮೂರನೇ ಟಿ20 ವಿಶಾಖಪಟ್ಟಣಂ, ಜೂನ್ 17 ನಾಲ್ಕನೇ ಟಿ20 ರಾಜ್‌ಕೋಟ್‌, ಜೂನ್ 19 ಐದನೇ ಟಿ20 ಬೆಂಗಳೂರಿನಲ್ಲಿ ನಡೆಯಲಿದೆ.

ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ:

ಕೆಎಲ್ ರಾಹುಲ್ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ಉಪ ನಾಯಕ) (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜುವೇಂದ್ರ ಚಾಹಲ್, ಕುಲ್‌ದೀಪ್ ಯಾದವ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್ , ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಆವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:34 am, Mon, 23 May 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್