6,6,6,6,6,6,6: ರಾಹುಲ್ ಸಿಡಿಲಬ್ಬರ, ಸ್ಫೋಟಕ ಅರ್ಧಶತಕ

ಹಾಂಗ್ ಕಾಂಗ್​ನಲ್ಲಿ ನಡೆಯುತ್ತಿರುವ ಹಾಂಗ್ ಕಾಂಗ್ ಸಿಕ್ಸಸ್ ಟೂರ್ನಿಯಲ್ಲಿ ಭಾರತ ತಂಡ ಹ್ಯಾಟ್ರಿಕ್ ಸೋಲುಂಡಿದೆ. ಮೊದಲ ಮ್ಯಾಚ್​ನಲ್ಲಿ ಪಾಕಿಸ್ತಾನ್ ವಿರುದ್ಧ ಸೋತಿದ್ದ ಟೀಮ್ ಇಂಡಿಯಾ ಇಂದು ಯುಎಇ ವಿರುದ್ಧ 6 ವಿಕೆಟ್​ಗಳಿಂದ ಪರಾಜಯಗೊಂಡಿದೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾ ವಿರುದ್ಧ ಇಂಗ್ಲೆಂಡ್ ತಂಡ ಕೂಡ ರೋಚಕ ಜಯ ಸಾಧಿಸಿದೆ.

6,6,6,6,6,6,6: ರಾಹುಲ್ ಸಿಡಿಲಬ್ಬರ, ಸ್ಫೋಟಕ ಅರ್ಧಶತಕ
Rahul Tripathi
Image Credit source: x.com

Updated on: Oct 31, 2026 | 11:32 AM

ಹಾಂಗ್​ ಕಾಂಗ್​ನಲ್ಲಿ ನಡೆಯುತ್ತಿರುವ ಹಾಂಗ್ ಕಾಂಗ್ ಸಿಕ್ಸಸ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ದಾಂಡಿಗ ರಾಹುಲ್ ತ್ರಿಪಾಠಿ ಸ್ಫೋಟಕ ಅರ್ಧಶತಕ ಸಿಡಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಾಹುಲ್ ಕೇವಲ 12 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿ ಮಿಂಚಿದ್ದಾರೆ.

ಮೌಂಗ್ ಕಾಕ್‌ನ ಮಿಷನ್ ರೋಡ್ ಗ್ರೌಂಡ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಕೃನಾಲ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಪರ ಮಾರ್ಟಿನ್ ಅ್ಯಂಡರ್ಸನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.

ಮೊದಲ ಓವರ್​ನಿಂದಲೇ ಟೀಮ್ ಇಂಡಿಯಾ ಬೌಲರ್​ಗಳನ್ನು ದಂಡಿಸಿದ ಮಾರ್ಟಿನ್ ಕೇವಲ 13 ಎಸೆತಗಳಲ್ಲಿ 6 ಸಿಕ್ಸರ್ ಹಾಗೂ 3 ಫೋರ್​ಗಳೊಂದಿಗೆ 51 ರನ್ ಚಚ್ಚಿದರು. ಇನ್ನು ಎಡ್ ಬರ್ನಾಡ್ 14 ಎಸೆತಗಳಲ್ಲಿ 35 ಸಿಡಿಸಿದರು. ಈ ಮೂಲಕ ಇಂಗ್ಲೆಂಡ್ ತಂಡ ನಿಗದಿತ 6 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ 124 ರನ್ ಕಲೆಹಾಕಿತು.

ರಾಹುಲ್ ಸಿಡಿಲಬ್ಬರ:

125 ರನ್​ಗಳ ಕಠಿಣ ಗುರಿ ಪಡೆದ ಟೀಮ್ ಇಂಡಿಯಾ ಪರ ರಾಹುಲ್ ತ್ರಿಪಾಠಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಮತ್ತೊಂದೆಡೆ ಆರಂಭಿಕನಾಗಿ ಕಣಕ್ಕಿಳಿದ ನಿತೀಶ್ ರಾಣಾ ಕೇವಲ 4 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಇದಾಗ್ಯೂ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ರಾಹುಲ್ ತ್ರಿಪಾಠಿ ಸಿಕ್ಸ್-ಫೋರ್​ಗಳ ಸುರಿಮಳೆಯೊಂದಿಗೆ ಕೇವಲ 12 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಲ್ಲದೆ ಕೇವಲ 14 ಎಸೆತಗಳಲ್ಲಿ 7 ಸಿಕ್ಸರ್ ಹಾಗೂ 2 ಫೋರ್​ಗಳೊಂದಿಗೆ ಅಜೇಯ 56 ರನ್ ಬಾರಿಸಿದರು.

ರಾಹುಲ್ ತ್ರಿಪಾಠಿಗೆ ಉತ್ತಮ ಸಾಥ್ ನೀಡಿದ ಕೃನಾಲ್ ಪಾಂಡ್ಯ 7 ಎಸೆತಗಳಲ್ಲಿ 28 ರನ್ ಚಚ್ಚಿದರು. ಇದಾಗ್ಯೂ ಟೀಮ್ ಇಂಡಿಯಾಗೆ ಗೆಲುವು ತಂದುಕೊಡಲು ಸಾಧ್ಯವಾಗಲಿಲ್ಲ. ಅಂತಿಮ ಓವರ್‌ನಲ್ಲಿ 18 ರನ್‌ಗಳ ಗುರಿ ಪಡೆದ ಭಾರತ ತಂಡವು 6 ಎಸೆತಗಳಲ್ಲಿ 14 ರನ್‌ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಟೀಮ್ ಇಂಡಿಯಾ 3 ರನ್‌ಗಳಿಂದ ಸೋಲೊಪ್ಪಿಕೊಂಡಿದೆ. ಈ ಸೋಲಿನೊಂದಿಗೆ ಟೀಮ್ ಇಂಡಿಯಾ ಹಾಂಗ್ ಕಾಂಗ್ ಸಿಕ್ಸಸ್ ಟೂರ್ನಿಯ ಫೈನಲ್ ರೇಸ್​ನಿಂದ ಹೊರಬಿದ್ದಿದೆ.

ಭಾರತ ತಂಡ: ಕೃನಾಲ್ ಪಾಂಡ್ಯ (ನಾಯಕ), ರಾಹುಲ್ ತ್ರಿಪಾಠಿ (ವಿಕೆಟ್ ಕೀಪರ್) , ನಿತೀಶ್ ರಾಣಾ , ಶಶಾಂಕ್ ಸಿಂಗ್ , ರಾಹುಲ್ ತೆವಾಟಿಯಾ , ಟಿ ನಟರಾಜನ್, ಕುಲ್ವಂತ್ ಖೇಜ್ರೋಲಿಯಾ.

ಇದನ್ನೂ ಓದಿ: ಟೀಮ್ ಇಂಡಿಯಾದಿಂದ ಕನ್ನಡಿಗ ಔಟ್, ಕಾಶ್ಮೀರಿ ವೇಗಿ ಇನ್!

ಇಂಗ್ಲೆಂಡ್ ತಂಡ: ಮಾರ್ಟಿನ್ ಅ್ಯಂಡರ್ಸನ್ , ಲ್ಯೂಕ್ ಹಾಲ್ಮನ್ , ಜ್ಯಾಕ್ ಕಾರ್ಸನ್ , ಫಿನ್ ಹಡ್ಸನ್-ಪ್ರೆಂಟಿಸ್ , ನಾಥನ್ ಗಿಲ್‌ಕ್ರಿಸ್ಟ್ , ಜಾನ್ ಸಿಂಪ್ಸನ್ (ನಾಯಕ), ಡಾನ್ ಮೌಸ್ಲಿ , ಎಡ್ ಬರ್ನಾರ್ಡ್.

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Loading...
Unable to load recommendations.
Follow Us