ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2025) 23ನೇ ಪಂದ್ಯದ ಬೆನ್ನಲ್ಲೇ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ಆಟಗಾರರಿಗೆ ಬಿಸಿಸಿಐ ದಂಡ ವಿಧಿಸಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ (GT) ವಿರುದ್ಧದ ಈ ಪಂದ್ಯದಲ್ಲಿ ನಿಗದಿತ ಸಮಯದೊಳಗೆ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್ಗಳನ್ನು ಪೂರ್ಣಗೊಳಿಸಿರಲಿಲ್ಲ. ಹೀಗಾಗಿ ಆರ್ಆರ್ ತಂಡದ ನಾಯಕ ಸಂಜು ಸ್ಯಾಮ್ಸನ್ಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ.
ಐಪಿಎಲ್ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಬೌಂಡರಿ ಲೈನ್ನಿಂದ ಒರ್ವ ಫೀಲ್ಡರ್ನನ್ನು ಕಡಿತ ಮಾಡಿ ಥರ್ಟಿ ಯಾರ್ಡ್ ಸರ್ಕಲ್ನಲ್ಲಿ ನಿಲ್ಲಿಸಬೇಕಾಗುತ್ತದೆ. ಅಲ್ಲದೆ ಹಾಗೆಯೇ ಈ ತಪ್ಪನ್ನು ಮಾಡಿದ ತಂಡದ ನಾಯಕನಿಗೆ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.
ಇದೇ ತಪ್ಪನ್ನು 2ನೇ ಬಾರಿ ಪುನರಾವರ್ತಿಸಿದರೆ, ನಾಯಕನಿಗೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಅದರಂತೆ ಇದೀಗ ರಾಜಸ್ಥಾನ್ ರಾಯಲ್ಸ್ ತಂಡವು ಎರಡನೇ ಬಾರಿ ನಿಗದಿತ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸಿಲ್ಲ. ಹೀಗಾಗಿ ಸಂಜು ಸ್ಯಾಮ್ಸನ್ಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ.
ರಾಜಸ್ಥಾನ್ ರಾಯಲ್ಸ್ ಆಟಗಾರರಿಗೆ ದಂಡ:
ಐಪಿಎಲ್ ನಿಯಮದ ಪ್ರಕಾರ, 2 ಬಾರಿ ಸ್ಲೋ ಓವರ್ ತಪ್ಪು ಮಾಡಿದರೆ, ಆ ತಂಡದ ನಾಯಕನಿಗೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ಲೇಯಿಂಗ್ ಇಲೆವೆನ್ನ 10 ಆಟಗಾರರಿಗೆ ತಲಾ 6 ಲಕ್ಷ ಅಥವಾ ಪಂದ್ಯದ ಶುಲ್ಕದ 25% ದಂಡವನ್ನು ವಿಧಿಸಲಾಗುತ್ತದೆ.
ಅದರಂತೆ ಇದೀಗ ರಾಜಸ್ಥಾನ್ ರಾಯಲ್ಸ್ ಪರ ಪ್ಲೇಯಿಂಗ್ ಇಲೆವೆನ್ನ ಭಾಗವಾಗಿದ್ದ ಎಲ್ಲಾ ಆಟಗಾರರು 6 ಲಕ್ಷ ರೂ. ದಂಡ ಕಟ್ಟಬೇಕು. ಅಥವಾ ಪಂದ್ಯದ ಶುಲ್ಕದ 25% ರಷ್ಟು ದಂಡವನ್ನು ಪಾವತಿಸಬೇಕು ಎಂದು ಬಿಸಿಸಿಐ ತನ್ನ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
ಇನ್ನು ಮೂರನೇ ಬಾರಿ ಸ್ಲೋ ಓವರ್ ತಪ್ಪು ಮಾಡಿದರೆ, ಆ ತಂಡದ ನಾಯಕನಿಗೆ 30 ಲಕ್ಷ ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ಲೇಯಿಂಗ್ ಇಲೆವೆನ್ನ 10 ಆಟಗಾರರು ತಲಾ 12 ಲಕ್ಷ ರೂ. ಅಥವಾ ಪಂದ್ಯದ ಶುಲ್ಕದ ಶೇ. 50 ರಷ್ಟು ದಂಡವನ್ನು ಪಾವತಿಸಬೇಕಾಗುತ್ತದೆ.
ಇದನ್ನೂ ಓದಿ: PSL 2025: ಪಾಕಿಸ್ತಾನ್ ಸೂಪರ್ ಲೀಗ್ನಲ್ಲಿ RCB ಮಾಜಿ ಆಟಗಾರರು
ಹೀಗಾಗಿ ರಾಜಸ್ಥಾನ್ ರಾಯಲ್ಸ್ ತಂಡವು ಮುಂದಿನ ಪಂದ್ಯಗಳಲ್ಲಿ 1 ಗಂಟೆ 30 ನಿಮಿಷಗಳಲ್ಲಿ 20 ಓವರ್ಗಳನ್ನು ಪೂರ್ಣಗೊಳಿಸಲೇಬೇಕು. ಇಲ್ಲದಿದ್ದರೆ ಆರ್ಆರ್ ಪಡೆ ಮತ್ತೊಮ್ಮೆ ದಂಡದ ಶಿಕ್ಷೆಗೆ ಒಳಗಾಗಲಿದ್ದಾರೆ.