ಇಂಡಿಯನ್ ಪ್ರೀಮಿಯರ್ ಲೀಗ್ನ 64ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ತಂಡದ ಹಂಗಾಮಿ ನಾಯಕ ಯಶಸ್ವಿ ಜೈಸ್ವಾಲ್ ಬೌಲಿಂಗ್ ಆಯ್ದುಕೊಂಡಿದಗದರು ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡ 20 ಓವರ್ಗಳಲ್ಲಿ 220 ರನ್ ಕಲೆಹಾಕಿತು. ಈ ಗುರಿಯನ್ನು ರಾಜಸ್ಥಾನ್ ರಾಯಲ್ಸ್ ತಂಡ 19.1 ಓವರ್ಗಳಲ್ಲಿ ಚೇಸ್ ಮಾಡಿ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ರಾಜಸ್ಥಾನ್ ರಾಯಲ್ಸ್ (ಪ್ಲೇಯಿಂಗ್ XI): ಯಶಸ್ವಿ ಜೈಸ್ವಾಲ್ (ನಾಯಕ), ಲುವಾನ್-ಡ್ರೆ ಪ್ರಿಟೋರಿಯಸ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಡೊನೊವನ್ ಫೆರೇರಾ, ಶುಭಂ ದುಬೆ, ದಸುನ್ ಶಾನಕ, ಜೋಫ್ರಾ ಆರ್ಚರ್, ಸುಶಾಂತ್ ಮಿಶ್ರಾ, ಸಂದೀಪ್ ಶರ್ಮಾ, ಬ್ರಿಜೇಶ್ ಶರ್ಮಾ, ಯಶ್ ರಾಜ್ ಪುಂಜಾ.
ಲಕ್ನೋ ಸೂಪರ್ ಜೈಂಟ್ಸ್ (ಪ್ಲೇಯಿಂಗ್ XI): ಮಿಚೆಲ್ ಮಾರ್ಷ್, ಜೋಶ್ ಇಂಗ್ಲಿಸ್, ನಿಕೋಲಸ್ ಪೂರನ್, ರಿಷಭ್ ಪಂತ್ (ನಾಯಕ), ಆಯುಷ್ ಬದೋನಿ, ಅಬ್ದುಲ್ ಸಮದ್, ಶಹಬಾಝ್ ಅಹ್ಮದ್, ಮೊಹ್ಸಿನ್ ಖಾನ್, ಮಯಾಂಕ್ ಯಾದವ್, ಆಕಾಶ್ ಮಹಾರಾಜ್ ಸಿಂಗ್, ಪ್ರಿನ್ಸ್ ಯಾದವ್.
38 ಎಸೆತಗಳಲ್ಲಿ 93 ರನ್ ಬಾರಿಸಿ ಕ್ಯಾಚ್ ನೀಡಿದ ವೈಭವ್ ಸೂರ್ಯವಂಶಿ.
38 ಎಸೆತಗಳಲ್ಲಿ 10 ಭರ್ಜರಿ ಸಿಕ್ಸ್ ಹಾಗೂ 7 ಫೋರ್ ಬಾರಿಸಿದ ವೈಭವ್.
ಮೊಹ್ಸಿನ್ ಎಸೆತದಲ್ಲಿ ಕ್ಯಾಚ್ ನೀಡಿ ಹೊರ ನಡೆದ ಯುವ ಎಡಗೈ ದಾಂಡಿಗ.
14 ಓವರ್ಗಳ ಮುಕ್ತಾಯದ ವೇಳೆಗೆ ರಾಜಸ್ಥಾನ್ ರಾಯಲ್ಸ್ ಸ್ಕೋರ್ 180/2
ಕ್ರೀಸ್ನೊಂದಿಗೆ ಧ್ರುವ್ ಜುರೆಲ್ ಹಾಗೂ ಲುವಾನ್-ಡ್ರೆ ಪ್ರಿಟೋರಿಯಸ್ ಬ್ಯಾಟಿಂಗ್.
ಪ್ರಿನ್ಸ್ ಯಾದವ್ ಎಸೆದ 11ನೇ ಓವರ್ನ 5ನೇ ಮತ್ತು 6ನೇ ಎಸೆತಗಳಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ವೈಭವ್.
ಈ ಎರಡು ಸಿಕ್ಸರ್ಗಳೊಂದಿಗೆ ಐಪಿಎಲ್ 2026 ರಲ್ಲಿ 50 ಸಿಕ್ಸ್ ಪೂರೈಸಿದ ವೈಭವ್ ಸೂರ್ಯವಂಶಿ.
ಈ ಸಾಧನೆ ಮಾಡಿದ ಭಾರತದ ಮೊದಲ ಬ್ಯಾಟರ್ ವೈಭವ್.
11 ಓವರ್ಗಳ ಮುಕ್ತಾಯದ ವೇಳೆಗೆ ರಾಜಸ್ಥಾನ್ ರಾಯಲ್ಸ್ ಸ್ಕೋರ್ 137/1
23 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ವೈಭವ್ ಸೂರ್ಯವಂಶಿ.
23 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 6 ಫೋರ್ಗಳನ್ನು ಬಾರಿಸಿರುವ ವೈಭವ್.
10 ಓವರ್ಗಳ ಮುಕ್ತಾಯದ ವೇಳೆಗೆ 121 ರನ್ ಕಲೆಹಾಕಿದ ರಾಜಸ್ಥಾನ್ ರಾಯಲ್ಸ್.
ಕ್ರೀಸ್ನಲ್ಲಿ ವೈಭವ್ ಸೂರ್ಯವಂಶಿ ಹಾಗೂ ಧ್ರುವ್ ಜುರೆಲ್ ಬ್ಯಾಟಿಂಗ್.
ಆಕಾಶ್ ಸಿಂಗ್ ಎಸೆದ 9ನೇ ಓವರ್ನಲ್ಲಿ 6, 4, 0, 4, 6, 4 ಚಚ್ಚಿದ ವೈಭವ್ ಸೂರ್ಯವಂಶಿ
ಒಂದೇ ಓವರ್ನಲ್ಲಿ 24 ರನ್ ಚಚ್ಚಿದ ವೈಭವ್ ಸೂರ್ಯವಂಶಿ.
9 ಓವರ್ಗಳಲ್ಲಿ 110 ರನ್ ಕಲೆಹಾಕಿದ ರಾಜಸ್ಥಾನ್ ರಾಯಲ್ಸ್.
ಕ್ರೀಸ್ನಲ್ಲಿ ವೈಭವ್ ಸೂರ್ಯವಂಶಿ ಹಾಗೂ ಧ್ರುವ್ ಜುರೆಲ್ ಬ್ಯಾಟಿಂಗ್.
ಆಕಾಶ್ ಸಿಂಗ್ ಎಸೆದ 7ನೇ ಓವರ್ನ ಮೂರನೇ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿದ ಯಶಸ್ವಿ ಜೈಸ್ವಾಲ್.
23 ಎಸೆತಗಳಲ್ಲಿ 43 ರನ್ ಬಾರಿಸಿ ಔಟಾದ ಯಶಸ್ವಿ ಜೈಸ್ವಾಲ್.
ಕ್ರೀಸ್ನಲ್ಲಿ ವೈಭವ್ ಸೂರ್ಯವಂಶಿ ಹಾಗೂ ಧ್ರುವ್ ಜುರೆಲ್ ಬ್ಯಾಟಿಂಗ್.
ಪ್ರಿನ್ಸ್ ಯಾದವ್ ಎಸೆದ 6ನೇ ಓವರ್ನಲ್ಲಿ ಒಂದು ಸಿಕ್ಸ್, 2 ಫೋರ್ಗಳನ್ನು ಬಾರಿಸಿದ ವೈಭವ್ ಸೂರ್ಯವಂಶಿ.
ಪವರ್ಪ್ಲೇ ಮುಕ್ತಾಯದ ವೇಳೆಗೆ ರಾಜಸ್ಥಾನ್ ರಾಯಲ್ಸ್ ತಂಡದ ಸ್ಕೋರ್ 71 ರನ್ಗಳು.
ಕ್ರೀಸ್ನಲ್ಲಿ ವೈಭವ್ ಸೂರ್ಯವಂಶಿ ಹಾಗೂ ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್.
221 ರನ್ಗಳ ಗುರಿ ಬೆನ್ನತ್ತುತ್ತಿರುವ ರಾಜಸ್ಥಾನ್ ರಾಯಲ್ಸ್.
ಮೊಹ್ಸಿನ್ ಖಾನ್ ಎಸೆದ 4ನೇ ಓವರ್ನಲ್ಲಿ ಮೂರು ಫೋರ್, ಒಂದು ಸಿಕ್ಸ್ ಬಾರಿಸಿದ ಯಶಸ್ವಿ ಜೈಸ್ವಾಲ್.
4ನೇ ಓವರ್ನಲ್ಲಿ 19 ರನ್ ಚಚ್ಚಿದ ಯಶಸ್ವಿ ಜೈಸ್ವಾಲ್.
4 ಓವರ್ಗಳ ಮುಕ್ತಾಯದ ವೇಳೆಗೆ ಆರ್ಆರ್ ಸ್ಕೋರ್ 49 ರನ್ಗಳು.
ಕ್ರೀಸ್ನಲ್ಲಿ ವೈಭವ್ ಸೂರ್ಯವಂಶಿ ಹಾಗೂ ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್.
ಮೂರನೇ ಓವರ್ನಲ್ಲಿ ಕೇವಲ 5 ರನ್ ಮಾತ್ರ ನೀಡಿದ ಮಯಾಂಕ್ ಯಾದವ್.
3 ಓವರ್ಗಳಲ್ಲಿ 30 ರನ್ ಕಲೆಹಾಕಿರುವ ರಾಜಸ್ಥಾನ್ ರಾಯಲ್ಸ್.
ಕ್ರೀಸ್ನಲ್ಲಿ ವೈಭವ್ ಸೂರ್ಯವಂಶಿ ಹಾಗೂ ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್.
ಆಕಾಶ್ ಸಿಂಗ್ ಎಸೆದ ಮೊದಲ ಓವರ್ನ ಮೊದಲ ಮೂರು ಎಸೆತಗಳಲ್ಲಿ ಹ್ಯಾಟ್ರಿಕ್ ಫೋರ್ ಬಾರಿಸಿದ ಯಶಸ್ವಿ ಜೈಸ್ವಾಲ್.
4ನೇ ಎಸೆತದಲ್ಲಿ ವೈಡ್ ಎಸೆದ ಆಕಾಶ್… ಚೆಂಡು ಬೌಂಡರಿ ಲೈನ್ ದಾಟಿ ಮತ್ತೊಂದು ಫೋರ್.
ಕೊನೆಯ ಎಸೆತದಲ್ಲಿ ಆಫ್ ಸೈಡ್ನತ್ತ ಫೋರ್ ಬಾರಿಸಿದ ಜೈಸ್ವಾಲ್.
ಮೊದಲ ಓವರ್ನಲ್ಲಿ 23 ರನ್ ಕಲೆಹಾಕಿದ ರಾಜಸ್ಥಾನ್ ರಾಯಲ್ಸ್.
ಕ್ರೀಸ್ನಲ್ಲಿ ಯಶಸ್ವಿ ಜೈಸ್ವಾಲ್ ಹಾಗೂ ವೈಭವ್ ಸೂರ್ಯವಂಶಿ ಬ್ಯಾಟಿಂಗ್.
ರಾಜಸ್ಥಾನ್ ರಾಯಲ್ಸ್ಗೆ 221 ರನ್ಗಳ ಗುರಿ ನೀಡಿರುವ ಲಕ್ನೋ ಸೂಪರ್ ಜೈಂಟ್ಸ್.
17.5 ಓವರ್ಗಳಲ್ಲಿ 200 ರನ್ ಪೂರೈಸಿದ ಲಕ್ನೋ ಸೂಪರ್ ಜೈಂಟ್ಸ್.
ಕ್ರೀಸ್ನಲ್ಲಿ ಮಿಚೆಲ್ ಮಾರ್ಷ್ ಹಾಗೂ ರಿಷಭ್ ಪಂತ್ ಬ್ಯಾಟಿಂಗ್.
18 ಓವರ್ಗಳ ಮುಕ್ತಾಯದ ವೇಳೆಗೆ ಲಕ್ನೋ ಸೂಪರ್ ಜೈಂಟ್ಸ್ ಸ್ಕೋರ್ 204/2
ಕೊನೆಯ ಎರಡು ಓವರ್ಗಳಲ್ಲಿ ಬೃಹತ್ ಮೊತ್ತ ಪೇರಿಸುವ ನಿರೀಕ್ಷೆಯಲ್ಲಿ ಎಲ್ಎಸ್ಜಿ.
ಬ್ರಿಜೇಶ್ ಶರ್ಮಾ ಎಸೆದ 16ನೇ ಓವರ್ನ 4ನೇ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ರಿಷಭ್ ಪಂತ್.
16 ಓವರ್ಗಳ ಮುಕ್ತಾಯದ ವೇಳೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಸ್ಕೋರ್ 182/2
ಕ್ರೀಸ್ನಲ್ಲಿ ಮಿಚೆಲ್ ಮಾರ್ಷ್ ಹಾಗೂ ರಿಷಭ್ ಪಂತ್ ಬ್ಯಾಟಿಂಗ್.
ಯಶ್ ರಾಜ್ ಪೂಂಜಾ ಎಸೆದ 13ನೇ ಓವರ್ನ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ಕ್ಯಾಚ್ ನೀಡಿದ ನಿಕೋಲಸ್ ಪೂರನ್.
11 ಎಸೆತಗಳಲ್ಲಿ ಕೇವಲ 16 ರನ್ಗಳಿಸಿ ಔಟಾದ ಪೂರನ್.
ಕ್ರೀಸ್ನಲ್ಲಿ ಮಿಚೆಲ್ ಮಾರ್ಷ್ ಹಾಗೂ ರಿಷಭ್ ಪಂತ್ ಬ್ಯಾಟಿಂಗ್.
ಔಟಾದ ಬ್ಯಾಟರ್:
ಸ್ಪಿನ್ನರ್ ಯಶ್ ರಾಜ್ ಪೂಂಜಾ ಎಸೆದ 9ನೇ ಓವರ್ನ 2ನೇ ಎಸೆತದಲ್ಲಿ ಜೋಶ್ ಇಂಗ್ಲಿಸ್ ಕ್ಲೀನ್ ಬೌಲ್ಡ್.
29 ಎಸೆತಗಳಲ್ಲಿ 60 ರನ್ ಸಿಡಿಸಿ ಪೆವಿಲಿಯನ್ಗೆ ಮರಳಿದ ಜೋಶ್ ಇಂಗ್ಲಿಸ್.
109 ರನ್ಗೆ ಮೊದಲ ವಿಕೆಟ್ ಕಳೆದುಕೊಂಡ ಲಕ್ನೋ ಸೂಪರ್ ಜೈಂಟ್ಸ್.
ಕ್ರೀಸ್ನಲ್ಲಿ ಮಿಚೆಲ್ ಮಾರ್ಷ್ ಹಾಗೂ ನಿಕೋಲಸ್ ಪೂರನ್ ಬ್ಯಾಟಿಂಗ್.
ಯಶ್ ರಾಜ್ ಎಸೆದ 7ನೇ ಓವರ್ನ ಮೊದಲ ಎಸೆತದಲ್ಲಿ ಆಫ್ ಸೈಡ್ನತ್ತ ಫೋರ್ ಬಾರಿಸಿದ ಜೋಶ್ ಇಂಗ್ಲಿಸ್.
ಈ ಫೋರ್ನೊಂದಿಗೆ 23 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಜೋಶ್ ಇಂಗ್ಲಿಸ್.
7 ಓವರ್ಗಳಲ್ಲಿ 95 ರನ್ ಕಲೆಹಾಕಿದ ಲಕ್ನೋ ಸೂಪರ್ ಜೈಂಟ್ಸ್.
ಕ್ರೀಸ್ನಲ್ಲಿ ಜೋಶ್ ಇಂಗ್ಲಿಸ್ ಹಾಗೂ ಮಿಚೆಲ್ ಮಾರ್ಷ್ ಬ್ಯಾಟಿಂಗ್.
ಬ್ರಿಜೇಶ್ ಶರ್ಮಾ ಎಸೆದ 5ನೇ ಓವರ್ನ 4ನೇ ಎಸೆತದಲ್ಲಿ ಆಫ್ ಸೈಡ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಮಿಚೆಲ್ ಮಾರ್ಷ್.
5ನೇ ಓವರ್ನಲ್ಲಿ 14 ರನ್ ಕಲೆಹಾಕಿದ ಲಕ್ನೋ ಸೂಪರ್ ಜೈಂಟ್ಸ್ ಆರಂಭಿಕರು.
5 ಓವರ್ಗಳಲ್ಲಿ 68 ರನ್ ಗಳಿಸಿದ ಲಕ್ನೋ ಸೂಪರ್ ಜೈಂಟ್ಸ್.
ಕ್ರೀಸ್ನಲ್ಲಿ ಜೋಶ್ ಇಂಗ್ಲಿಸ್ ಹಾಗೂ ಮಿಚೆಲ್ ಮಾರ್ಷ್ ಬ್ಯಾಟಿಂಗ್.
3.3 ಓವರ್ಗಳಲ್ಲಿ ಅರ್ಧಶತಕ ಪೂರೈಸಿದ ಲಕ್ನೋ ಸೂಪರ್ ಜೈಂಟ್ಸ್.
ಸಂದೀಪ್ ಶರ್ಮಾ ಎಸೆದ 4ನೇ ಓವರ್ನಲ್ಲಿ 16 ರನ್ ಚಚ್ಚಿದ ಲಕ್ನೋ ಬ್ಯಾಟರ್ಸ್.
ಕ್ರೀಸ್ನಲ್ಲಿ ಜೋಶ್ ಇಂಗ್ಲಿಸ್ ಹಾಗೂ ಮಿಚೆಲ್ ಮಾರ್ಷ್ ಬ್ಯಾಟಿಂಗ್.
4 ಓವರ್ಗಳ ಮುಕ್ತಾಯದ ವೇಳೆಗೆ ಲಕ್ನೋ ಸೂಪರ್ ಜೈಂಟ್ಸ್ ಸ್ಕೋರ್ 54/0
ಸುಶಾಂತ್ ಮಿಶ್ರಾ ಎಸೆದ 2ನೇ ಓವರ್ನ ಮೊದಲ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಜೋಶ್ ಇಂಗ್ಲಿಸ್.
5ನೇ ಎಸೆತದಲ್ಲಿ ಆಫ್ ಸೈಡ್ನತ್ತ ಇಂಗ್ಲಿಸ್ ಬ್ಯಾಟ್ನಿಂದ ಮತ್ತೊಂದು ಫೋರ್.
ಕ್ರೀಸ್ನಲ್ಲಿ ಜೋಶ್ ಇಂಗ್ಲಿಸ್ ಹಾಗೂ ಮಿಚೆಲ್ ಮಾರ್ಷ್ ಬ್ಯಾಟಿಂಗ್.
2 ಓವರ್ಗಳ ಮುಕ್ತಾಯದ ವೇಳೆಗೆ ಲಕ್ನೋ ಸೂಪರ್ ಜೈಂಟ್ಸ್ ಸ್ಕೋರ್ 25/0
ಜೋಫ್ರಾ ಆರ್ಚರ್ ಎಸೆದ ಮೊದಲ ಓವರ್ನ 5ನೇ ಎಸೆತದಲ್ಲಿ ಡೀಪ್ ಎಕ್ಸ್ಟ್ರಾ ಕವರ್ನತ್ತ ಫೋರ್ ಬಾರಿಸಿದ ಮಿಚೆಲ್ ಮಾರ್ಷ್.
6ನೇ ಎಸೆತದಲ್ಲಿ ಲಾಂಗ್ ಆಫ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಮಾರ್ಷ್.
ಮೊದಲ ಓವರ್ನಲ್ಲಿ 12 ರನ್ ಕಲೆಹಾಕಿದ ಲಕ್ನೋ ಸೂಪರ್ ಜೈಂಟ್ಸ್.
ಕ್ರೀಸ್ನಲ್ಲಿ ಜೋಶ್ ಇಂಗ್ಲಿಸ್ ಹಾಗೂ ಮಿಚೆಲ್ ಮಾರ್ಷ್ ಬ್ಯಾಟಿಂಗ್.
ಲಕ್ನೋ ಸೂಪರ್ ಜೈಂಟ್ಸ್ (ಪ್ಲೇಯಿಂಗ್ XI): ಮಿಚೆಲ್ ಮಾರ್ಷ್, ಜೋಶ್ ಇಂಗ್ಲಿಸ್, ನಿಕೋಲಸ್ ಪೂರನ್, ರಿಷಭ್ ಪಂತ್ (ನಾಯಕ), ಆಯುಷ್ ಬದೋನಿ, ಅಬ್ದುಲ್ ಸಮದ್, ಶಹಬಾಝ್ ಅಹ್ಮದ್, ಮೊಹ್ಸಿನ್ ಖಾನ್, ಮಯಾಂಕ್ ಯಾದವ್, ಆಕಾಶ್ ಮಹಾರಾಜ್ ಸಿಂಗ್, ಪ್ರಿನ್ಸ್ ಯಾದವ್.
ರಾಜಸ್ಥಾನ್ ರಾಯಲ್ಸ್ (ಪ್ಲೇಯಿಂಗ್ XI): ಯಶಸ್ವಿ ಜೈಸ್ವಾಲ್ (ನಾಯಕ), ಲುವಾನ್-ಡ್ರೆ ಪ್ರಿಟೋರಿಯಸ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಡೊನೊವನ್ ಫೆರೇರಾ, ಶುಭಂ ದುಬೆ, ದಸುನ್ ಶಾನಕ, ಜೋಫ್ರಾ ಆರ್ಚರ್, ಸುಶಾಂತ್ ಮಿಶ್ರಾ, ಸಂದೀಪ್ ಶರ್ಮಾ, ಬ್ರಿಜೇಶ್ ಶರ್ಮಾ, ಯಶ್ ರಾಜ್ ಪುಂಜಾ.
ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ತಂಡದ ಹಂಗಾಮಿ ನಾಯಕ ಯಶಸ್ವಿ ಜೈಸ್ವಾಲ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮೊದಲು ಬ್ಯಾಟ್ ಮಾಡಲಿದೆ.
ರಾಜಸ್ಥಾನ್ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಈವರೆಗೆ 7 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ರಾಜಸ್ಥಾನ್ ರಾಯಲ್ಸ್ 5 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಲಕ್ನೋ ಸೂಪರ್ ಜೈಂಟ್ಸ್ 2 ಬಾರಿ ಗೆಲುವು ದಾಖಲಿಸಿದೆ.
One plays for Survival 🩷
The other plays for Pride 💙❤️Will #LSG spoil #RR‘s party in Jaipur? 🏟️#TATAIPL | #KhelBindaas | #RRvLSG | @rajasthanroyals | @LucknowIPL pic.twitter.com/QKR3cned5c
— IndianPremierLeague (@IPL) May 19, 2026
Published On - 6:38 pm, Tue, 19 May 26