RR vs CSK, IPL 2023: ಐಪಿಎಲ್​ನಲ್ಲಿಂದು ರಾಜಸ್ಥಾನ್- ಚೆನ್ನೈ ನಡುವೆ ಹೈವೋಲ್ಟೇಜ್ ಪಂದ್ಯ

ಇಂದು ಐಪಿಎಲ್ 2023 ರಲ್ಲಿ ನಡೆಯಲಿರುವ 37ನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಎಂಎಸ್ ಧೋನಿ (MS Dhoni) ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ (RR vs CSK) ಅನ್ನು ಎದುರಿಸಲಿದೆ.

RR vs CSK, IPL 2023: ಐಪಿಎಲ್​ನಲ್ಲಿಂದು ರಾಜಸ್ಥಾನ್- ಚೆನ್ನೈ ನಡುವೆ ಹೈವೋಲ್ಟೇಜ್ ಪಂದ್ಯ
RR vs CSK IPL 2023
Follow us
Vinay Bhat
|

Updated on: Apr 27, 2023 | 7:13 AM

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) ರೋಚಕ ಘಟ್ಟದತ್ತ ಸಾಗುತ್ತಿದೆ. ಪ್ರತಿಯೊಂದು ಪಂದ್ಯ ಕೂಡ ಕುತೂಹಲ ಕೆರಳಿಸುತ್ತಿದ್ದು 200+ ರನ್ ಹೊಡೆಯುವುದು ಮಾಮೂಲಾಗಿದೆ. ಅಂತೆಯೆ 200+ ಟಾರ್ಗೆಟ್ ಬೆನ್ನಟ್ಟಿ ಜಯ ಸಾಧಿಸುತ್ತಿರುವುದು ಕೂಡ ಕಂಡುಬರುತ್ತಿದೆ. ಇದರ ನಡುವೆ ಇಂದು ಐಪಿಎಲ್ 2023 ರಲ್ಲಿ ನಡೆಯಲಿರುವ 37ನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಎಂಎಸ್ ಧೋನಿ (MS Dhoni) ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ (RR vs CSK) ಅನ್ನು ಎದುರಿಸಲಿದೆ. ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ಈ ಹೈವೋಲ್ಟೇಜ್ ಪಂದ್ಯ ಏರ್ಪಡಿಸಲಾಗಿದೆ.

ರಾಜಸ್ಥಾನ್:

ರಾಜಸ್ಥಾನ್ ತಂಡ ಪಾಯಿಂಟ್ ಟೇಬಲ್​ನಲ್ಲಿ ಮೂರನೇ ಸ್ಥಾನದಲ್ಲಿದೆ. ಆಡಿರುವ ಏಳು ಪಂದ್ಯಗಳ ಪೈಕಿ ಮೂರರಲ್ಲಿ ಮಾತ್ರ ಸೋತಿದೆ. ಉಳಿದ ನಾಲ್ಕು ಪಂದ್ಯಗಳಲ್ಲಿ ಜಯ ಸಾಧಿಸಿದೆ. ತಂಡಕ್ಕೆ ಯಶಸ್ವಿ ಜೈಸ್ವಾಲ್ ಮತ್ತು ಜೋಸ್ ಬಟ್ಲರ್ ಭರ್ಜರಿ ಆರಂಭ ಒದಗಿಸುತ್ತಿದ್ದಾರೆ. ದೇವದತ್ ಪಡಿಕ್ಕಲ್ ಫಾರ್ಮ್​ಗೆ ಬಂದಿದ್ದು ಹಿಂದಿನ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಅರ್ಧಶತಕ ಸಿಡಿಸಿ ಮಿಂಚಿದ್ದರು. ಸಂಜು ಸ್ಯಾಮ್ಸನ್, ಶಿಮ್ರೋನ್ ಹೆಟ್ಮೇರ್ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಅಸ್ತ್ರ. ಧ್ರುವ್ ಜುರೆಲ್ ಕೂಡ ಭರವಸೆ ಮೂಡಿಸಿದ್ದಾರೆ.

IPL 2023: ಫಿಟ್​ನೆಸ್ ಹೊಂದಿದ್ದರೂ ಜೋಶ್ ಹ್ಯಾಝಲ್​ವುಡ್ ಕಣಕ್ಕಿಳಿಯದಿರಲು ಕಾರಣವೇನು?

ಇದನ್ನೂ ಓದಿ
Image
IPL 2023 Points Table: ಅಂಕಪಟ್ಟಿಯಲ್ಲಿ ಮೂರಕ್ಕೇರದ ಆರಕ್ಕಿಳಿಯದ RCB
Image
IPL 2023 Orange and Purple Cap: ಈ ಸಲ ಕ್ಯಾಪ್ ನಮ್ದೆ..!
Image
IPL 2023: ಕ್ಯಾಚ್​ ಕೈ ಚೆಲ್ಲಿ ಮ್ಯಾಚ್ ಸೋತ RCB
Image
Virat Kohli: ಬೆಂಗಳೂರಿನಲ್ಲಿ ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ

ಜೇಸನ್ ಹೋಲ್ಡರ್ ಮತ್ತು ಆರ್. ಅಶ್ವಿನ್ ಆಲ್ರೌಂಡ್ ಪ್ರದರ್ಶನ ತೋರಬೇಕಿದೆ. ಟ್ರೆಂಟ್ ಬೌಲ್ಟ್ ಪವರ್ ಪ್ಲೇಯಲ್ಲಿ ಮಾರಕವಾಗಿ ಪರಿಣಮಿಸಿದ್ದಾರೆ. ಯುಜ್ವೇಂದ್ರ ಚಹಲ್ ವಿಕೆಟ್ ಟೇಕಿಂಗ್ ಬೌಲರ್ ಆಗಿ ಗುರುತಿಸಿಕೊಂಡಿದ್ದರೆ, ಸಂದೀಪ್ ಶರ್ಮಾ, ಕುಲ್ದೀಪ್ ಸೇನ್ ಸಾಥ್ ನೀಡುತ್ತಿದ್ದಾರೆ. ಭರ್ಜರಿ ರನ್​ರೇಟ್ ಹೊಂದಿರುವ ರಾಜಸ್ಥಾನ್ ರಾಯಲ್ಸ್ ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಅಗ್ರಸ್ಥಾನಕ್ಕೇರಲಿದೆ.

ಚೆನ್ನೈ:

ಸಿಎಸ್​ಕೆ ತಂಡ ಬ್ಯಾಟಿಂಗ್ – ಬೌಲಿಂಗ್ ಎರಡೂ ವಿಭಾಗಗಳಲ್ಲಿ ಬಲಿಷ್ಠವಾಗಿದೆ. ರುತುರಾಯ್ ಗಾಯಕ್ವಾಡ್, ಡೆವೋನ್ ಕಾನ್ವೆ ಭರ್ಜರಿ ಫಾರ್ಮ್​ನಲ್ಲಿದ್ದು ಅತ್ಯುತ್ತಮ ಆರಂಭ ಒದಗಿಸುತ್ತಿದ್ದಾರೆ. ಅಜಿಂಕ್ಯಾ ರಹಾನೆ ಕೂಡ ಸ್ಫೋಟಕ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಶಿವಂ ದುಬೆ ಪ್ರತಿ ಪಂದ್ಯದಲ್ಲಿ ಅಬ್ಬರಿಸುವ ಮೂಲಕ ಗಮನ ಸೆಳೆದಿದ್ದಾರೆ. ಅಂಬಟಿ ರಾಯುಡು ಹಾಗೂ ಮೊಯೀನ್ ಅಲಿ ಕಡೆಯಿಂದ ನಿರೀಕ್ಷೆಗೆ ತಕ್ಕ ಆಟ ಬರುತ್ತಿಲ್ಲ. ಧೋನಿ ಹಾಗೂ ಜಡೇಜಾ ಫಿನಿಶಿಂಗ್ ಜವಾಬ್ದಾರಿ ಹೊತ್ತಿದ್ದಾರೆ. ಬೌಲಿಂಗ್​ನಲ್ಲಿ ಸಿಎಸ್​ಕೆ ಪರ ತುಶಾರ್ ದೇಶ್​ಪಾಂಡೆ, ಮಹೀಶಾ ತೀಕ್ಷಣ, ಮತೀಶಾ ಪತಿರಾನ, ಆಕಾಶ್ ಸಿಂಗ್ ಇದ್ದು ಜಡೇಜಾ, ಅಲಿ ಸಾಥ್ ನೀಡುತ್ತಿದ್ದಾರೆ.

ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (ನಾಯಕ), ಶಿಮ್ರಾನ್ ಹೆಟ್ಮೇರ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಜೇಸನ್ ಹೋಲ್ಡರ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಹಲ್, ಅಬ್ದುಲ್ ಬಸಿತ್, ಆಕಾಶ್ ವಸಿತ್, ಆಕಾಶ್ ವಸಿಶ್ತ್, , ಮುರುಗನ್ ಅಶ್ವಿನ್, ಕೆಎಂ ಆಸಿಫ್, ರಿಯಾನ್ ಪರಾಗ್, ಜೋ ರೂಟ್, ಆಡಮ್ ಝಂಪಾ, ನವದೀಪ್ ಸೈನಿ, ಕೆಸಿ ಕಾರಿಯಪ್ಪ, ಓಬೇದ್ ಮೆಕಾಯ್, ಕುಲದೀಪ್ ಯಾದವ್, ಕುಲದೀಪ್ ಸೇನ್, ಕುನಾಲ್ ಸಿಂಗ್ ರಾಥೋರ್.

ಚೆನ್ನೈ ಸೂಪರ್ ಕಿಂಗ್ಸ್: ಡೆವೊನ್ ಕಾನ್ವೇ, ರುತುರಾಜ್ ಗಾಯಕ್ವಾಡ್, ಅಜಿಂಕ್ಯ ರಹಾನೆ, ಶಿವಂ ದುಬೆ, ಅಂಬಟಿ ರಾಯುಡು, ಮೊಯೀನ್ ಅಲಿ, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ), ಮಹೀಶ್ ತೀಕ್ಷಣ, ತುಷಾರ್ ದೇಶಪಾಂಡೆ, ಮತೀಶ ಪತಿರಾನ, ಆಕಾಶ್ ಸಿಂಗ್, ಡ್ವೈನ್ ಪ್ರಿಟೋರಿಯಸ್, ಸುಭ್ರಾಂಶು ಸೇನಾಪತಿ, ಶೇಕ್ ರಶೀದ್, ಆರ್ ಎಸ್ ಹಂಗರ್ಗೇಕರ್, ಮಿಚೆಲ್ ಸ್ಯಾಂಟ್ನರ್, ಬೆನ್ ಸ್ಟೋಕ್ಸ್, ಅಜಯ್ ಜಾದವ್ ಮಂಡಲ್, ಪ್ರಶಾಂತ್ ಸೋಲಂಕಿ, ಸಿಮರ್ಜೀತ್ ಸಿಂಗ್, ದೀಪಕ್ ಚಾಹರ್, ಭಗತ್ ವರ್ಮಾ, ನಿಶಾಂತ್ ಸಿಂಧು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
Daily horoscope: ಈ ರಾಶಿಯವರು ಇಂದು ಕೆಲಸಗಳಲ್ಲಿ ಯಶಸ್ಸು ಕಾಣುವರು
Daily horoscope: ಈ ರಾಶಿಯವರು ಇಂದು ಕೆಲಸಗಳಲ್ಲಿ ಯಶಸ್ಸು ಕಾಣುವರು
ಹ್ಯಾಟ್ರಿಕ್ ಅರ್ಧಶತಕ ಸಿಡಿಸಿದ ಗ್ಲೆನ್ ಮ್ಯಾಕ್ಸ್‌ವೆಲ್..!
ಹ್ಯಾಟ್ರಿಕ್ ಅರ್ಧಶತಕ ಸಿಡಿಸಿದ ಗ್ಲೆನ್ ಮ್ಯಾಕ್ಸ್‌ವೆಲ್..!