AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ‘ಬಾದ್​​ಶಾ’ ಸುದೀಪ್​ ಜನ್ಮದಿನಕ್ಕೆ ಕನ್ನಡದಲ್ಲಿ ಶುಭಾಶಯ ತಿಳಿಸಿದ ರಾಜಸ್ಥಾನ ರಾಯಲ್ಸ್

Kichcha Sudeep: ರಾಜಸ್ಥಾನ ರಾಯಲ್ಸ್ ತನ್ನ ಟ್ವೀಟ್​ನಲ್ಲಿ, ಸುದೀಪ್ ರಾಜಸ್ಥಾನ ರಾಯಲ್ಸ್ ತಂಡದ ಜೆರ್ಸಿ ಹಿಡಿದಿರುವ ಫೋಟೋ ಹಂಚಿಕೊಂಡಿದೆ. ಜೊತೆಗೆ ಟ್ವೀಟ್​ನ ಶೀರ್ಷಿಕೆಯಲ್ಲಿ, ಜನ್ಮದಿನದ ಶುಭಾಶಯಗಳು ದಂತಕಥೆ ಎಂದು ಬರದುಕೊಂಡಿದೆ.

Kichcha Sudeep: ‘ಬಾದ್​​ಶಾ’ ಸುದೀಪ್​ ಜನ್ಮದಿನಕ್ಕೆ ಕನ್ನಡದಲ್ಲಿ ಶುಭಾಶಯ ತಿಳಿಸಿದ ರಾಜಸ್ಥಾನ ರಾಯಲ್ಸ್
TV9 Web
| Edited By: |

Updated on:Sep 02, 2022 | 3:47 PM

Share

ಕಿಚ್ಚ ಸುದೀಪ್ (Kichcha Sudeep) ಅವರು ಇಂದು (ಸೆಪ್ಟೆಂಬರ್ 2) ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ಎರಡು ವರ್ಷಗಳಿಂದ ಕೊವಿಡ್ ಕಾಟ ಜೋರಾಗಿತ್ತು. ಈ ಕಾರಣದಿಂದ ಕಿಚ್ಚನ ಬರ್ತ್​ಡೇ ಆಚರಿಸಲು ಸಾಧ್ಯವಾಗಿರಲಿಲ್ಲ. ಆದರೆ, ಈ ವರ್ಷ ಬರ್ತ್​​ಡೇ ಜೋರಾಗಿದೆ. ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಸುದೀಪ್​ಗೆ ನಾನಾ ಕಡೆಗಳಿಂದ ಬರ್ತ್​ಡೇ ವಿಶ್ ಬರುತ್ತಿದೆ. ವಿವಿಧ ಊರುಗಳಲ್ಲಿ ಸುದೀಪ್​ ಫೋಟೋ ಹಾಗೂ ಕಟೌಟ್ ಹಾಕಿ ಹುಟ್ಟುಹಬ್ಬ ಆಚರಿಸಲಾಗುತ್ತಿದೆ. ಜೊತೆಗೆ ಕ್ರಿಕೆಟ್​ನಲ್ಲೂ ಸಾಕಷ್ಟು ಹೆಸರು ಮಾಡಿರುವ ಕಿಚ್ಚನಿಗೆ ಐಪಿಎಲ್​ನ ಯಶಸ್ವಿ ಫ್ರಾಂಚೈಸಿಯಾದ ರಾಜಸ್ಥಾನ ರಾಯಲ್ಸ್ (Rajastan Royals) ತನ್ನ ಟ್ವಿಟರ್ ಖಾತೆಯಲ್ಲಿ ಜನ್ಮದಿನದ ಶುಭಾಶಯ ತಿಳಿಸಿದೆ.

49ನೇ ವಯಸ್ಸಿಗೆ ಕಾಲಿಟ್ಟಿರುವ ಅಭಿನಯ ಚಕ್ರವರ್ತಿ ಸುದೀಪ್​ಗೆ ಕನ್ನಡದಲ್ಲಿ ಜನ್ಮದಿನದ ಶುಭಾಶಯ ತಿಳಿಸಿರುವ ರಾಜಸ್ಥಾನ ರಾಯಲ್ಸ್ ತನ್ನ ಟ್ವೀಟ್​ನಲ್ಲಿ, ಸುದೀಪ್ ರಾಜಸ್ಥಾನ ರಾಯಲ್ಸ್ ತಂಡದ ಜೆರ್ಸಿ ಹಿಡಿದಿರುವ ಫೋಟೋ ಹಂಚಿಕೊಂಡಿದೆ. ಜೊತೆಗೆ ಟ್ವೀಟ್​ನ ಶೀರ್ಷಿಕೆಯಲ್ಲಿ, ಜನ್ಮದಿನದ ಶುಭಾಶಯಗಳು ದಂತಕಥೆ ಎಂದು ಬರದುಕೊಂಡಿದೆ.

ಸುದೀಪ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡದ ನಂಟು ಇಂದು ನಿನ್ನೆಯದಲ್ಲ. ಈ ಹಿಂದೆಯೂ ರಾಜಸ್ಥಾನ ರಾಯಲ್ಸ್ ತಂಡ ಕಿಚ್ಚ ಸುದೀಪ್ ಬರ್ತ್​ ಡೇಗೆ ಶುಭಾಷಯಗಳನ್ನು ತಿಳಿಸಿತ್ತು. ಈ ಹಿಂದೆ ಕಿಚ್ಚನ ಜನ್ಮದಿನಕ್ಕೆ ಜೆರ್ಸಿಯೊಂದನ್ನು ರಾಜಸ್ಥಾನ ರಾಯಲ್ಸ್ ತಂಡ ಗಿಫ್ಟ್ ಆಗಿ ಕಳುಹಿಸಿಕೊಟ್ಟಿತ್ತು. ಜೊತೆಗೆ ವಿಶೇಷ ಸಂದೇಶವನ್ನು ಟ್ವೀಟ್​ನಲ್ಲಿ ಬರೆದುಕೊಂಡಿತ್ತು.

ಅಲ್ಲದೆ ಇಂಡಿಯನ್ ಪ್ರೀಮಿಯರ್ ಲೀಗ್ 2022 ರಲ್ಲಿ (IPL 2022) ಅತಿ ಹೆಚ್ಚು ರನ್ ಕಲೆಹಾಕಿ ಆರೆಂಜ್ ಕ್ಯಾಪ್ ತೊಟ್ಟಿದ ರಾಜಸ್ಥಾನ್ ರಾಯಲ್ಸ್ ತಂಡದ ಬ್ಯಾಟರ್ ಜೋಸ್ ಬಟ್ಲರ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ಗೆ ತಮ್ಮ ನೆಚ್ಚಿನ ಬ್ಯಾಟ್ ಅನ್ನು ಉಡುಗೊರೆಯಾಗಿ ನೀಡಿದ್ದರು. ಐಪಿಎಲ್ 2022 ರಲ್ಲಿ ತಾವು ಆಡಿದ್ದ ಬ್ಯಾಟ್ ಅನ್ನು ಸುದೀಪ್​​ಗೆ ಬಟ್ಲರ್ ಉಡುಗೊರೆಯಾಗಿ ನೀಡಿದ್ದು, ಅವರ ಸಹಿ ಕೂಡ ಆ ಬ್ಯಾಟ್​ ಮೇಲ್ಲಿತ್ತು. ಕಿಚ್ಚ ಸುದೀಪ್ (Kiccha Sudeep) ಕೂಡ ಈ ಕುರಿತಾಗಿ ಟ್ವಿಟರ್​​ನಲ್ಲಿ ವಿಡಿಯೋ ಪೋಸ್ಟ್ ಮಾಡುವ ಮೂಲಕ ಖುಷಿ ಹಂಚಿಕೊಂಡಿದ್ದರು.

ಬಟ್ಲರ್‌ ನೀಡಿದ ಬ್ಯಾಟ್‌ ಅನ್ನು ಹಿಡಿದು ಸೋಷಿಯಲ್‌ ಮೀಡಿಯಾದಲ್ಲಿ ವಿಡಿಯೋ ಒಂದನ್ನು ಪೋಸ್ಟ್‌ ಮಾಡಿದ್ದ ಸುದೀಪ್, “ಇದು ನನಗೆ ಬಹುದೊಡ್ಡ ಅಚ್ಚರಿಯ ಉಡುಗೊರೆ. ಇದನ್ನು ನಾನು ಖಂಡಿತಾ ನಿರೀಕ್ಷೆ ಮಾಡಿರಲಿಲ್ಲ. ಮೊದಲಿಗೆ ರಾಜಸ್ಥಾನ್‌ ರಾಯಲ್ಸ್‌ ಮತ್ತು ನನ್ನ ಪ್ರೀತಿಯ ಮಿತ್ರ ಕಾರಿಯಪ್ಪ ಅವರಿಗೆ ಧನ್ಯವಾದ ಹೇಳುತ್ತೇನೆ. ಅವರಿಂದಲೇ ಇದು ಸಾಧ್ಯವಾಗಿರುವುದು,” ಎಂದು ಹೇಳಿಕೊಂಡಿದ್ದರು.

Published On - 3:11 pm, Fri, 2 September 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ