AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs RR Playing XI: ತವರಿನಲ್ಲಿ ಚೊಚ್ಚಲ ಗೆಲುವಿಗೆ ಬಲಿಷ್ಠ ಪ್ಲೇಯಿಂಗ್ XI ಕಣಕ್ಕಿಳಿಸಿದ ಆರ್​ಸಿಬಿ

Royal Challengers Bengaluru vs Rajasthan Royals: ಐಪಿಎಲ್ 2025 ರಲ್ಲಿ ಆರ್‌ಸಿಬಿ ತಂಡವು ನಾಲ್ಕನೇ ಬಾರಿಗೆ ತನ್ನ ತವರು ಮೈದಾನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡುತ್ತಿದೆ. ಇದಕ್ಕೂ ಮೊದಲು, ರಜತ್ ಪಾಟಿದಾರ್ ಪಡೆ ಇಲ್ಲಿ ಆಡಿದ ಮೂರು ಪಂದ್ಯಗಳಲ್ಲಿ ಸೋಲನ್ನು ಎದುರಿಸಬೇಕಾಯಿತು. ತವರಿನಲ್ಲಿನ ಚೊಚ್ಚಲ ಗೆಲುವಿಗಾಗಿ, ಆರ್‌ಸಿಬಿ ತಂಡವು ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಅನ್ನೇ ಕಣಕ್ಕಿಳಿಸಿದೆ.

RCB vs RR Playing XI: ತವರಿನಲ್ಲಿ ಚೊಚ್ಚಲ ಗೆಲುವಿಗೆ ಬಲಿಷ್ಠ ಪ್ಲೇಯಿಂಗ್ XI ಕಣಕ್ಕಿಳಿಸಿದ ಆರ್​ಸಿಬಿ
Rcb Playing Xi Vs Rr
Follow us
Vinay Bhat
| Updated By: ಪೃಥ್ವಿಶಂಕರ

Updated on:Apr 24, 2025 | 7:32 PM

ಬೆಂಗಳೂರು (ಏ. 24): ಇಂಡಿಯನ್ ಪ್ರೀಮಿಯರ್ ಲೀಗ್ 2025 ರ 42 ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ ರಾಯಲ್ಸ್ (Royal Challengers Bengaluru vs Rajasthan Royals) ನಡುವೆ ನಡೆಯಲಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ಬೆಂಗಳೂರಿನ ತವರು ಮೈದಾನವಾದ ಎಂ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಈ ಋತುವಿನಲ್ಲಿ, ಆರ್‌ಸಿಬಿ ತಂಡವು ನಾಲ್ಕನೇ ಬಾರಿಗೆ ತವರಿನಲ್ಲಿ ಆಡುತ್ತಿದೆ. ಇದಕ್ಕೂ ಮೊದಲು, ಆರ್‌ಸಿಬಿ ಇಲ್ಲಿ ಆಡಿದ ಮೂರು ಪಂದ್ಯಗಳಲ್ಲಿ ಸೋಲನ್ನು ಎದುರಿಸಬೇಕಾಯಿತು. ತವರಿನಲ್ಲಿನ ಚೊಚ್ಚಲ ಗೆಲುವಿಗಾಗಿ, ರಜತ್ ಪಟಿದಾರ್ ನೇತೃತ್ವದ ಆರ್‌ಸಿಬಿ ತಂಡವು ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಅನ್ನೇ ಕಣಕ್ಕಿಳಿಸಿದೆ.

ಈಗಾಗಲೇ ಟಾಸ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಟಾಸ್ ಗೆದ್ದ ರಾಜಸ್ಥಾನ್ ತಂಡದ ನಾಯಕ ರಿಯಾನ್ ಪರಾಗ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಬೆಂಗಳೂರು ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಕಳೆದ ಪಂಜಾಬ್ ಕಿಂಗ್ಸ್ ವಿರುದ್ಧ ಆಡಿದ ಆಟಗಾರರೇ ಇಂದುಕೂಡ ಕಣಕ್ಕಿಳಿಯುತ್ತಿದ್ದಾರೆ. ಅತ್ತ ರಾಜಸ್ಥಾನ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಮಹೀಶ್ ತೀಕ್ಷಣ ಹೊರಗುಳಿದಿದ್ದು, ಫಾರೂಕಿ ಆಡುವ ಬಳಗ ಸೇರಿಕೊಂಡಿದ್ದಾರೆ.

ಉಭಯ ತಂಡಗಳ ಪ್ಲೇಯಿಂಗ್-11

ಇದನ್ನೂ ಓದಿ
Image
ಭವಿಷ್ಯದಲ್ಲಿಯೂ ಪಾಕ್ ವಿರುದ್ಧ ದ್ವಿಪಕ್ಷೀಯ ಸರಣಿ ಆಡುವುದಿಲ್ಲ; ಬಿಸಿಸಿಐ
Image
ವೇಳಾಪಟ್ಟಿ ಡಿಲೀಟ್; ಭಾರತದಲ್ಲಿ ಪಿಎಸ್​ಎಲ್ ಪ್ರಸಾರ ರದ್ದು
Image
Rohit Sharma: ಹಿಟ್​ಮ್ಯಾನ್ ಧೂಮ್ ಧಮಾಕಾ: ಭರ್ಜರಿ ದಾಖಲೆ ನಿರ್ಮಾಣ
Image
IPL 2025: RCB ಪಾಲಿಗೆ ಕಂಟಕವಾಗಿರುವ 6ನೇ ಪಿಚ್

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಲ್.

ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಶುಭಮ್ ದುಬೆ, ರಿಯಾನ್ ಪರಾಗ್ (ನಾಯಕ), ನಿತೀಶ್ ರಾಣಾ, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮೈಯರ್, ವಂನಿಂದು ಹಸರಂಗ, ಜೋಫ್ರಾ ಆರ್ಚರ್, ಫಝಲ್​ಹಖ್ ಫಾರೂಕಿ, ಸಂದೀಪ್ ಶರ್ಮಾ, ತುಷಾರ್ ದೇಶಪಾಂಡೆ.

ರಾಜಸ್ಥಾನಕ್ಕೆ ಆರ್‌ಸಿಬಿ ವಿರುದ್ಧ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ತಂಡದ ಖಾಯಂ ನಾಯಕ ಸಂಜು ಸ್ಯಾಮ್ಸನ್ ತಂಡದೊಂದಿಗೆ ಇಲ್ಲ. ಅಂತಹ ಪರಿಸ್ಥಿತಿಯಲ್ಲಿ, ರಿಯಾನ್ ಪರಾಗ್ ತಂಡವನ್ನು ಹೇಗೆ ನಿಭಾಯಿಸುತ್ತಾರೆ ಎಂಬುದನ್ನು ನೋಡಬೇಕಿದೆ. ಈ ಋತುವಿನಲ್ಲಿ ರಾಜಸ್ಥಾನ ತಂಡ 8 ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಕೇವಲ 2 ಪಂದ್ಯಗಳನ್ನು ಮಾತ್ರ ಗೆದ್ದಿದೆ. ಪ್ಲೇಆಫ್ ತಲುಪುವ ಸಾಧ್ಯತೆಗಳು ಈಗ ತುಂಬಾ ಕಡಿಮೆ, ಆದರೆ ತಂಡ ಇಲ್ಲಿಂದ ಮತ್ತೆ ಕಮ್​ಬ್ಯಾಕ್ ಮಾಡಿ ಮತ್ತು ಉಳಿದ ಎಲ್ಲಾ ಪಂದ್ಯಗಳನ್ನು ಗೆದ್ದರೆ, ಪ್ಲೇ ಆಫ್​ಗೆ ಫೈಟ್ ನೀಡಬಹುದು.

IND vs PAK: ಭಾರತ- ಪಾಕ್ ನಡುವೆ ದ್ವಿಪಕ್ಷೀಯ ಸರಣಿ ಸಾಧ್ಯವೇ ಇಲ್ಲ ಎಂದ ಬಿಸಿಸಿಐ

ಮತ್ತೊಂದೆಡೆ, ಆರ್‌ಸಿಬಿ ತಂಡವು ಈ ಋತುವಿನಲ್ಲಿ ಉತ್ತಮ ಪ್ರದರ್ಶನ ನೀಡಿದ್ದು, ಇದುವರೆಗೆ 8 ಪಂದ್ಯಗಳಲ್ಲಿ 5 ರಲ್ಲಿ ಗೆದ್ದು 10 ಅಂಕಗಳನ್ನು ಗಳಿಸಿದೆ. ಪ್ಲೇ ಆಫ್​ಗೆ ಹತ್ತಿರವಾಗಲು ಆರ್​ಸಿಬಿಗೆ ಈ ಪಂದ್ಯ ಗೆಲ್ಲುವ ಪ್ಲ್ಯಾನ್​ನಲ್ಲಿದೆ. ಅಲ್ಲದೆ ತವರಿನಲ್ಲಿ ಈ ಬಾರಿ ಒಂದೇ ಒಂದು ಗೆಲುವು ಕಾಣದ ರಜತ್ ಪಡೆಗೆ ಈ ಜಯ ಅನಿವಾರ್ಯವಾಗಿದೆ.

ಇಂದು ಬೆಂಗಳೂರಿನ ಹವಾಮಾನ ಹೇಗಿರುತ್ತದೆ?:

ಎಂ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಕೊನೆಯ ಪಂದ್ಯವು ಆರ್‌ಸಿಬಿ ಮತ್ತು ಪಂಜಾಬ್ ಕಿಂಗ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಮಳೆಯಿಂದಾಗಿ ಕೇವಲ 14-14 ಓವರ್‌ಗಳನ್ನು ಮಾತ್ರ ಆಡಲು ಸಾಧ್ಯವಾಯಿತು, ಆದರೆ ಆರ್‌ಸಿಬಿ ಮತ್ತು ರಾಜಸ್ಥಾನ ನಡುವೆ ನಡೆಯಲಿರುವ ಈ ಪಂದ್ಯದಲ್ಲಿ ಮಳೆ ಬರುವ ಸಾಧ್ಯತೆಯಿಲ್ಲ. ಅಕ್ಯೂವೆದರ್ ವರದಿಯ ಪ್ರಕಾರ, ಪಂದ್ಯದ ಸಮಯದಲ್ಲಿ ತಾಪಮಾನವು 32 ಡಿಗ್ರಿ ಸೆಲ್ಸಿಯಸ್ ಆಗುವ ನಿರೀಕ್ಷೆಯಿದೆ. ರಾತ್ರಿಯಾಗುತ್ತಿದ್ದಂತೆ, ಇಲ್ಲಿನ ತಾಪಮಾನವು ಕಡಿಮೆಯಾಗುತ್ತದೆ. ಮಳೆ ಇಲ್ಲದ ಕಾರಣ ಅಭಿಮಾನಿಗಳು ಪೂರ್ಣ 40 ಓವರ್‌ಗಳನ್ನು ವೀಕ್ಷಿಸಬಹುದು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:08 pm, Thu, 24 April 25

ಪಾಟ್ನಾದಲ್ಲಿ 1,200 ಕೋಟಿ ವೆಚ್ಚದ ಟರ್ಮಿನಲ್ ಉದ್ಘಾಟಿಸಿದ ಮೋದಿ
ಪಾಟ್ನಾದಲ್ಲಿ 1,200 ಕೋಟಿ ವೆಚ್ಚದ ಟರ್ಮಿನಲ್ ಉದ್ಘಾಟಿಸಿದ ಮೋದಿ
ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು