AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್‌ನ ಸಾರ್ವಕಾಲಿಕ ಪ್ಲೇಯಿಂಗ್ 11 ಹೆಸರಿಸಿದ ಆರ್​ಸಿಬಿ ನಾಯಕ

Rajat Patidar All-Time IPL XI: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ರಜತ್ ಪಾಟಿದಾರ್ ತಮ್ಮ ಸಾರ್ವಕಾಲಿಕ ಐಪಿಎಲ್ ಪ್ಲೇಯಿಂಗ್ 11 ಅನ್ನು ಹೆಸರಿಸಿದ್ದಾರೆ. ಈ ತಂಡದಲ್ಲಿ ವಿರಾಟ್ ಕೊಹ್ಲಿ, ಕ್ರಿಸ್ ಗೇಲ್, ಎಬಿ ಡಿವಿಲಿಯರ್ಸ್, ಯುಜ್ವೇಂದ್ರ ಚಾಹಲ್ ಮತ್ತು ಡೇಲ್ ಸ್ಟೇಯ್ನ್ ಸೇರಿದಂತೆ ಐವರು ಆರ್‌ಸಿಬಿ ಆಟಗಾರರು ಸೇರಿದ್ದಾರೆ. ಎಂಎಸ್ ಧೋನಿ, ಸೂರ್ಯಕುಮಾರ್, ಸುರೇಶ್ ರೈನಾ, ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ ಮತ್ತು ಸುನಿಲ್ ನರೈನ್ ಅವರಂತಹ ಸ್ಟಾರ್ ಆಟಗಾರರಿಗೂ ಸ್ಥಾನ ನೀಡಲಾಗಿದೆ.

ಐಪಿಎಲ್‌ನ ಸಾರ್ವಕಾಲಿಕ ಪ್ಲೇಯಿಂಗ್ 11 ಹೆಸರಿಸಿದ ಆರ್​ಸಿಬಿ ನಾಯಕ
Rajat Patidar
ಪೃಥ್ವಿಶಂಕರ
|

Updated on:Aug 25, 2026 | 9:45 PM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಸತತ ಎರಡು ಬಾರಿ ಚಾಂಪಿಯನ್‌ ಪಟ್ಟಕ್ಕೇರಿಸಿರುವ ನಾಯಕ ರಜತ್ ಪಾಟಿದಾರ್ ( Rajat Patidar) ತಮ್ಮ ಸಾರ್ವಕಾಲಿಕ ಐಪಿಎಲ್ (IPL) ಪ್ಲೇಯಿಂಗ್ 11 ಹೆಸರಿಸಿದ್ದಾರೆ. ರಜತ್ ಪಾಟಿದಾರ್ ಆಯ್ಕೆ ಮಾಡಿರುವ ಈ ತಂಡದಲ್ಲಿ ಆರ್‌ಸಿಬಿ ತಂಡದ ಐವರು ಆಟಗಾರರಿದ್ದಾರೆ. ಅವರಲ್ಲಿ ವಿರಾಟ್ ಕೊಹ್ಲಿ, ಕ್ರಿಸ್ ಗೇಲ್, ಎಬಿ ಡಿವಿಲಿಯರ್ಸ್, ಯುಜ್ವೇಂದ್ರ ಚಾಹಲ್ ಮತ್ತು ಡೇಲ್ ಸ್ಟೇಯ್ನ್ ಸೇರಿದ್ದಾರೆ. ಹಾಗೆಯೇ ಸಿಎಸ್‌ಕೆ ತಂಡದಿಂದ ಎಂಎಸ್ ಧೋನಿ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಬ್ಯಾಟಿಂಗ್ ವಿಭಾಗ ಹೇಗಿದೆ?

ಪಾಟಿದರ್ ತಮ್ಮ ಸಾರ್ವಕಾಲಿಕ ಐಪಿಎಲ್ ಪ್ಲೇಯಿಂಗ್ 11ನಲ್ಲಿ ವಿರಾಟ್ ಕೊಹ್ಲಿ ಜೊತೆಗೆ ವೆಸ್ಟ್ ಇಂಡೀಸ್ ದಂತಕಥೆ ಕ್ರಿಸ್ ಗೇಲ್ ಅವರನ್ನು ಆರಂಭಿಕ ಆಟಗಾರನಾಗಿ ಆಯ್ಕೆ ಮಾಡಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಮಾಜಿ ಆರ್​ಸಿಬಿ ಆಟಗಾರ ಎಬಿ ಡಿವಿಲಿಯರ್ಸ್‌ಗೆ ಅವಕಾಶ ನೀಡಿದ್ದಾರೆ. ಮಧ್ಯಮ ಕ್ರಮಾಂಕವನ್ನು ಮತ್ತಷ್ಟು ಬಲಪಡಿಸಲು ಎಂಎಸ್ ಧೋನಿ ಜೊತೆಗೆ ಸೂರ್ಯಕುಮಾರ್, ಸುರೇಶ್ ರೈನಾ ಮತ್ತು ಹಾರ್ದಿಕ್ ಪಾಂಡ್ಯ ಅವರನ್ನು ಆಯ್ಕೆ ಮಾಡಿದ್ದಾರೆ.

ಮಧ್ಯಮ, ಬೌಲಿಂಗ್ ವಿಭಾಗ ಹೇಗಿದೆ?

ಐದು ಬಾರಿ ಐಪಿಎಲ್ ವಿಜೇತ ಸಿಎಸ್‌ಕೆ ನಾಯಕ ಎಂಎಸ್ ಧೋನಿ ಅವರನ್ನು ರಜತ್ ಪಾಟಿದಾರ್ ತಮ್ಮ ತಂಡದಲ್ಲಿ 7 ನೇ ಬ್ಯಾಟ್ಸ್‌ಮನ್ ಆಗಿ ಆಯ್ಕೆ ಮಾಡಿದ್ದರೆ, ಹಾರ್ದಿಕ್ ಪಾಂಡ್ಯ ಅವರನ್ನು ವೇಗದ ಬೌಲಿಂಗ್ ಆಲ್‌ರೌಂಡರ್ ಆಗಿ ಆಯ್ಕೆ ಮಾಡಿದ್ದಾರೆ. ಹಾಗೆಯೇ ವೇಗದ ಬೌಲರ್​ ಆಗಿ ಜಸ್ಪ್ರೀತ್ ಬುಮ್ರಾ ಜೊತೆಗೆ ಆಫ್ರಿಕಾದ ಮಾಜಿ ವೇಗಿ ಡೇಲ್ ಸ್ಟೈನ್​ಗೆ ಅವಕಾಶ ನೀಡಿದ್ದಾರೆ. ಆದರೆ ಪಾಟಿದರ್, ಹಾಲಿ ತಂಡದಲ್ಲಿರುವ ಭುವನೇಶ್ವರ್ ಕುಮಾರ್​ಗೆ ಅವಕಾಶ ನೀಡದಿರುವುದು ಆಶ್ಚರ್ಯಕರವಾಗಿದೆ. ಇನ್ನು ಸ್ಪಿನ್ ಆಲ್‌ರೌಂಡರ್ ಆಗಿ ಸುನಿಲ್ ನರೈನ್ ತಂಡದಲ್ಲಿದ್ದರೆ, ಅವರ ಜೊತೆಗೆ ಯುಜ್ವೇಂದ್ರ ಚಾಹಲ್​ಗೂ ತಂಡದಲ್ಲಿ ಸ್ಥಾನ ನೀಡಲಾಗಿದೆ.

IND vs SL: ಐಪಿಎಲ್‌ನಲ್ಲಿ ಆಡಿಸುವ ಆಮಿಷ; ವಿಕೆಟ್ ಕೈಚೆಲ್ಲಿದ ಲಂಕಾ ಬ್ಯಾಟರ್

ರಜತ್ ಪಾಟಿದಾರ್ ಅವರ ಸಾರ್ವಕಾಲಿಕ ಐಪಿಎಲ್ XI: ಕ್ರಿಸ್ ಗೇಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಸುರೇಶ್ ರೈನಾ, ಎಬಿ ಡಿವಿಲಿಯರ್ಸ್, ಹಾರ್ದಿಕ್ ಪಾಂಡ್ಯ, ಎಂಎಸ್ ಧೋನಿ, ಡೇಲ್ ಸ್ಟೇಯ್ನ್, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಹಾಲ್, ಸುನಿಲ್ ನರೈನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:43 pm, Tue, 25 August 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!