AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND A vs NZ A: ಮಿಂಚಿದ ಪಟಿದಾರ್, ಸೌರಭ್: ಭಾರತ ಎ ತಂಡಕ್ಕೆ 113 ರನ್​ಗಳ ಅಮೋಘ ಗೆಲುವು

ರಜತ್ ಪಟಿದಾರ್ (Rajat Patidar) ಅವರ ಬೊಂಬಾಟ್ ಶತಕ ಹಾಗೂ ಎಡಗೈ ಸ್ಪಿನ್ನರ್‌ ಸೌರಭ್‌ ಕುಮಾರ್‌ ಅವರ ಮತ್ತೂಂದು ಘಾತಕ ಬೌಲಿಂಗ್‌ ದಾಳಿಯ ನೆರವಿನಿಂದ ಪ್ರಿಯಾಂಕ್ ಪಡೆ 113 ರನ್ನುಗಳಿಂದ ಜಯಿಸಿದೆ. ಈ ಮೂಲಕ 3 ಪಂದ್ಯಗಳ ಸರಣಿಯನ್ನು 1-0 ಅಂತರದಿಂದ ತನ್ನದಾಗಿಸಿಕೊಂಡಿದೆ.

IND A vs NZ A: ಮಿಂಚಿದ ಪಟಿದಾರ್, ಸೌರಭ್: ಭಾರತ ಎ ತಂಡಕ್ಕೆ 113 ರನ್​ಗಳ ಅಮೋಘ ಗೆಲುವು
Rajat Patidar and Sourabh Kumar
TV9 Web
| Edited By: |

Updated on:Sep 19, 2022 | 10:56 AM

Share

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ನ್ಯೂಜಿಲೆಂಡ್ ಎ ವಿರುದ್ಧದ 3ನೇ ಅನಧಿಕೃತ ಟೆಸ್ಟ್‌ ಪಂದ್ಯದಲ್ಲಿ ಭಾರತ ಎ (India A vs New Zealand A) ತಂಡ ಭರ್ಜರಿ ಗೆಲುವು ಸಾಧಿಸಿದೆ. ರಜತ್ ಪಟಿದಾರ್ (Rajat Patidar) ಅವರ ಬೊಂಬಾಟ್ ಶತಕ ಹಾಗೂ ಎಡಗೈ ಸ್ಪಿನ್ನರ್‌ ಸೌರಭ್‌ ಕುಮಾರ್‌ ಅವರ ಮತ್ತೂಂದು ಘಾತಕ ಬೌಲಿಂಗ್‌ ದಾಳಿಯ ನೆರವಿನಿಂದ ಪ್ರಿಯಾಂಕ್ ಪಡೆ 113 ರನ್ನುಗಳಿಂದ ಜಯಿಸಿದೆ. ಈ ಮೂಲಕ 3 ಪಂದ್ಯಗಳ ಸರಣಿಯನ್ನು 1-0 ಅಂತರದಿಂದ ತನ್ನದಾಗಿಸಿಕೊಂಡಿದೆ.

ಈ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಶತಕ ಗಳಿಸಿದ್ದ ರುತುರಾಜ್ ಗಾಯಕ್ವಾಡ್ ಹಾಗೂ ನಾಯಕ ಪ್ರಿಯಾಂಕ್ ಪಾಂಚಾಲ್ ಎರಡನೇ ಇನ್ನಿಂಗ್ಸ್​ನಲ್ಲಿ ಎರಡನೇ ವಿಕೆಟ್‌ಗೆ 122 ರನ್‌ ಸೇರಿಸಿದರು. ಗಾಯಕ್ವಾಡ್ 164 ಎಸೆತಗಳಲ್ಲಿ 94 ರನ್ ಬಾರಿಸಿ ಶತಕ ವಂಚಿತರಾದರೆ ಪ್ರಿಯಾಂಕ್ 114 ಎಸೆತಗಳಲ್ಲಿ 62 ರನ್ ಗಳಿಸಿದರು. ನಂತರ ಶುರುವಾಗಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರಜತ್ ಪಟಿದಾರ್ ಆಟ. ಕ್ರೀಸ್‌ಗೆ ಬಂದವರೇ ಬೌಲರ್‌ಗಳನ್ನು ದಂಡಿಸಿದ ಇವರು ಅಮೋಘ ಶತಕ ಸಿಡಿಸಿ ಮಿಂಚಿದರು.

ಕಳೆದ 3 ತಿಂಗಳ ಅವಧಿಯಲ್ಲಿ ಪಟಿದಾರ್ ಚಿನ್ನಸ್ವಾಮಿ ಅಂಗಳದಲ್ಲಿ ಬಾರಿಸಿದ 3ನೇ ಶತಕ ಇದಾಗಿದೆ. ರಣಜಿ ಟ್ರೋಫಿ ಫೈನಲ್‌ ಹಾಗೂ ಪ್ರಸಕ್ತ ಸರಣಿಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಪಾಟಿದರ್‌ ಸೆಂಚುರಿ ಸಿಡಿಸಿದ್ದರು. ಇನ್ನು ಸರ್ಫರಾಜ್ ಖಾನ್ ಕೂಡ ರನ್‌ ಗಳಿಕೆಗೆ ವೇಗ ನೀಡಿದರು. ರಜತ್ ಮತ್ತು ಖಾನ್ ಇಬ್ಬರೂ ಸೇರಿ ಚುಟುಕು ಕ್ರಿಕೆಟ್‌ ಮಾದರಿಯ ಬ್ಯಾಟಿಂಗ್ ಮಾಡಿದರು. ಸರ್ಫರಾಜ್ 74 ಎಸೆತಗಳಲ್ಲಿ 63 ರನ್‌ ಗಳಿಸಿದರು. ಇದರಲ್ಲಿ ಏಳು ಫೋರ್, 2 ಸಿಕ್ಸರ್ ಸೇರಿದ್ದವು. ಇತ್ತ ಪಟಿದಾರ್ 135 ಎಸೆತಗಳಲ್ಲಿ 13 ಫೋರ್, 2 ಸಿಕ್ಸರ್ ಸಿಡಿಸಿ ಅಜೇಯ 109 ರನ್ ಕಲೆಹಾಕಿದರು. ಭಾರತ 85 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 359 ರನ್ ಗಳಿಸಿದಾಗ ಡಿಕ್ಲೇರ್ ಘೋಷಿಸಿತು.

ಇದನ್ನೂ ಓದಿ
Image
T20 world cup: 8 ಟಿ20 ವಿಶ್ವಕಪ್​ಗಳಲ್ಲೂ ಜೆರ್ಸಿ ಬದಲಿಸಿದೆ ಟೀಂ ಇಂಡಿಯಾ; ಪ್ರತಿ ಜೆರ್ಸಿಯಲ್ಲೂ ಪ್ರದರ್ಶನ ಹೇಗಿತ್ತು?
Image
ಶಕ ಬೂಮ್ ಹಾಡಿಗೆ ತಮ್ಮದೇ ಸ್ಟೈಲ್​ನಲ್ಲಿ ಸ್ಟೆಪ್ ಹಾಕಿದ ಹಾರ್ದಿಕ್- ಕೊಹ್ಲಿ; ವಿಡಿಯೋ ನೋಡಿ
Image
T20 World Cup: ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾ ಧರಿಸುವ ಹೊಸ ಜೆರ್ಸಿ ಹೇಗಿದೆ ಗೊತ್ತಾ? ಫೋಟೋ ನೋಡಿ
Image
IND vs AUS: ಆಸೀಸ್ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಭರ್ಜರಿ ತಯಾರಿ; ಫೋಟೋ ನೋಡಿ

ಟಾರ್ಗೆಟ್ ಬೆನ್ನಟ್ಟಿದ ನ್ಯೂಜಿಲೆಂಡ್ ಎ ತಂಡ ಮೂರನೇ ದಿನದಾಟದ ಅಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 20 ರನ್ ಗಳಿಸಿತ್ತು. ಕೊನೆಯ ದಿನ ಬೆಳಿಗ್ಗೆ ಜೋ ವಾಕರ್ ಅವರನ್ನು ಬೌಲ್ಡ್‌ ಮಾಡುವಲ್ಲಿ ಶಾರ್ದೂಲ್ ಠಾಕೂರ್ ಯಶಸ್ವಿಯಾದರು. ಈ ಹಂತದಲ್ಲಿ ಕಾರ್ಟರ್ ಜೊತೆಗೂಡಿ ಡೇನ್ ಲ್ಕೀವರ್ ಮೂರನೇ ವಿಕೆಟ್ ಜೊತೆಯಾಟದಲ್ಲಿ 80 ರನ್ ಸೇರಿಸಿದರು. ಡೇನ್ ವಿಕೆಟ್ ಗಳಿಸಿದ ಸೌರಭ್ ಜೊತೆಯಾಟ ಮುರಿದರು. ಚಹಾ ವಿರಾಮಕ್ಕೆ 4 ವಿಕೆಟ್‌ಗಳಿಗೆ 221 ರನ್‌ ಗಳಿಸಿದ್ದ ನ್ಯೂಜಿಲೆಂಡ್ ಮುಂದಿನ 81 ರನ್‌ಗಳ ಅಂತರದಲ್ಲಿ 6 ವಿಕೆಟ್‌ ಕಳೆದುಕೊಂಡು ಸೋಲುಂಡಿತು. ಕಾರ್ಟರ್ 230 ಎಸೆತಗಳಲ್ಲಿ 111 ರನ್ ಗಳಿಸಿದರು. ಸೌರಭ್ ಕುಮಾರ್ 5 ವಿಕೆಟ್ ಕಿತ್ತು ಮಿಂಚಿದರು.

Published On - 10:56 am, Mon, 19 September 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ