AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs PBKS: ಮೂರನೇ ಸೋಲಿಗೆ ಕುಂಟು ನೆಪ ಹೇಳಿದ ರಜತ್ ಪಾಟಿದಾರ್

IPL 2025 RCB vs PBKS: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಆರ್​ಸಿಬಿ ಪಡೆ ತವರಿನಲ್ಲಿ ಸತತ ಮೂರು ಪಂದ್ಯಗಳಲ್ಲೂ ಪರಾಜಯಗೊಂಡಂತಾಗಿದೆ. ಅಂದರೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ತಂಡ ಈ ಬಾರಿ ಯಾವುದೇ ಪಂದ್ಯ ಗೆದಿಲ್ಲ.

RCB vs PBKS: ಮೂರನೇ ಸೋಲಿಗೆ ಕುಂಟು ನೆಪ ಹೇಳಿದ ರಜತ್ ಪಾಟಿದಾರ್
Rajat Patidar
Follow us
ಝಾಹಿರ್ ಯೂಸುಫ್
|

Updated on:Apr 19, 2025 | 9:14 AM

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಈ ಬಾರಿ ತವರಿನಲ್ಲಿ ಆಡಿದ ಮೂರು ಪಂದ್ಯಗಳಲ್ಲೂ ಸೋಲನುಭವಿಸಿದೆ. ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ವಿರುದ್ಧ ಸೋತಿದ್ದ ಆರ್​ಸಿಬಿ, ಆ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ (DC) ವಿರುದ್ಧ ಮುಗ್ಗರಿಸಿತ್ತು. ಇದೀಗ ಪಂಜಾಬ್ ಕಿಂಗ್ಸ್ (PBKS) ವಿರುದ್ಧ ಕೂಡ ಸೋಲನುಭವಿಸಿದೆ. ಅದರಲ್ಲೂ ಮೊದಲಾರ್ಧದ ಕೊನೆಯ ಪಂದ್ಯದಲ್ಲಿ ಆರ್​ಸಿಬಿ ನಿರಾಶದಾಯಕ ಪ್ರದರ್ಶನ ನೀಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು.

ಮಳೆಯ ಕಾರಣ 14 ಓವರ್​ಗಳಿಗೆ ಸೀಮಿತವಾಗಿದ್ದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಆರ್​ಸಿಬಿ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ.

ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಟಿಮ್ ಡೇವಿಡ್ ಅಜೇಯ 50 ರನ್ ಬಾರಿಸುವ ಮೂಲಕ ಆರ್​ಸಿಬಿ ತಂಡದ ಸ್ಕೋರ್​ ಅನ್ನು 95 ಕ್ಕೆ ತಂದು ನಿಲ್ಲಿಸಿದರು. ಈ ಸುಲಭ ಗುರಿಯನ್ನು ಪಂಜಾಬ್ ಕಿಂಗ್ಸ್ ತಂಡವು 12.1 ಓವರ್​ಗಳಲ್ಲಿ ಚೇಸ್ ಮಾಡಿ 5 ವಿಕೆಟ್​ಗಳ ಗೆಲುವು ದಾಖಲಿಸಿದೆ.

ಇದನ್ನೂ ಓದಿ
Image
PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು
Image
ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
Image
ಕ್ರಿಸ್​ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
Image
ಉಲ್ಟಾ ಹೊಡೆದ RCB ಕಪ್ ಗೆಲ್ಲಬಾರದು ಎಂದಿದ್ದ ಅಂಬಾಟಿ ರಾಯುಡು

ಈ ಸೋಲಿನ ಬಳಿಕ ಮಾತನಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್, ನಮ್ಮ ಪರಾಜಯಕ್ಕೆ ಪಿಚ್ ಕಾರಣ ಎಂದಿದ್ದಾರೆ. ಏಕೆಂದರೆ ಈ ಪಿಚ್​ನಲ್ಲಿ ಬ್ಯಾಟಿಂಗ್ ಮಾಡುವುದು ತುಂಬಾ ಕಷ್ಟಕರವಾಗಿತ್ತು. ಹೀಗಾಗಿ ನಮ್ಮ ಬ್ಯಾಟರ್​ಗಳು ಕಳಪೆ ಪ್ರದರ್ಶನ ನೀಡಿದ್ದಾರೆ.

ಇಂತಹ ಪಿಚ್​ನಲ್ಲಿ ಜೊತೆಯಾಟವಾಡುವುದು ಮುಖ್ಯವಾಗಿತ್ತು. ಆದರೆ ನಮ್ಮಿಂದ ಅದು ಸಾಧ್ಯವಾಗಲಿಲ್ಲ. ನಾವು ಬೇಗನೆ ವಿಕೆಟ್​ಗಳನ್ನು ಕಳೆದುಕೊಂಡ ಪರಿಣಾಮ, ಉತ್ತಮ ಜೊತೆಯಾಟ ಮೂಡಿಬಂದಿರಲಿಲ್ಲ. ಇದು ಮುಂಬರುವ ಪಂದ್ಯಗಳೀಗೆ ನಮಗೆ ಪಾಠ ಎಂದು ರಜತ್ ಪಾಟಿದಾರ್ ಹೇಳಿದ್ದಾರೆ.

ಇನ್ನು ಈ ಪಂದ್ಯದಲ್ಲಿ ದೇವದತ್ ಪಡಿಕ್ಕಲ್ ಅವರನ್ನು ಕಣಕ್ಕಿಳಿಸದಿರುವ ಬಗ್ಗೆ ಮಾತನಾಡಿದ ರಜತ್ ಪಾಟಿದಾರ್, ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನಾವು ತಂಡದಲ್ಲಿ ಪಡಿಕ್ಕಲ್ ಬದಲಿಗೆ ಬೇರೆಯವನರನ್ನು ಕಣಕ್ಕಿಳಿಸಿದ್ದೆವು. ಆದರೆ ಅದು ಪರಿಣಾಮಕಾರಿಯಾಗಲಿಲ್ಲ ಎಂದರು.

ಇದಾಗ್ಯೂ ಪಂಜಾಬ್ ಕಿಂಗ್ಸ್ ವಿರುದ್ಧ ನಮ್ಮ ಬೌಲರ್​ಗಳನ್ನು ಅತ್ಯುತ್ತಮ ಪ್ರದರ್ಶನವನ್ನೇ ನೀಡಿದ್ದಾರೆ. ನಮ್ಮ ಬೌಲಿಂಗ್ ವಿಭಾಗವು ತುಂಬಾ ಚೆನ್ನಾಗಿ ಆಡಿದ್ದರು. ಇದುವೇ ಈ ಪಂದ್ಯದ ನಮ್ಮ ಪ್ಲಸ್ ಪಾಯಿಂಟ್. ಬೌಲಿಂಗ್​ಗೆ ಪಿಚ್ ಕೂಡ ಸಹಕಾರಿಯಾಗಿತ್ತು. ಇದು ಆರಂಭದಲ್ಲಿ ಬೌಲರ್‌ಗಳಿಗೆ ಸಹಾಯ ಮಾಡಿದೆ.

ಆದರೆ ನಮ್ಮ ಬೌಲರ್​ಗಳ ವಿರುದ್ಧ ಪಂಜಾಬ್ ಕಿಂಗ್ಸ್ ಬ್ಯಾಟರ್​ಗಳು ಉತ್ತಮ ಬ್ಯಾಟಿಂಗ್ ಪ್ರದರ್ಶಿಸುವಲ್ಲಿ ಯಶಸ್ವಿಯಾಗಿದ್ದಾರೆ.  ಈ ಗೆಲುವಿನ ಕೀರ್ತಿ ಅವರಿಗೆ ಸಲ್ಲುತ್ತದೆ. ವಿಕೆಟ್ ಏನೇ ಇರಲಿ, ನಾವು ಚೆನ್ನಾಗಿ ಬ್ಯಾಟಿಂಗ್ ಮಾಡಿ ಗೆಲುವಿನ ಸ್ಕೋರ್ ಗಳಿಸಬೇಕಿತ್ತು. ಮುಂದಿನ ಪಂದ್ಯಕ್ಕೂ ಮುನ್ನ ಬ್ಯಾಟಿಂಗ್ ವಿಭಾಗದಲ್ಲಿನ ಕೆಲವು ತಪ್ಪುಗಳನ್ನು ನಾವು ಸರಿಪಡಿಸಬೇಕಿದೆ ಎಂದು ರಜತ್ ಪಾಟಿದಾರ್ ಇದೇ ವೇಳೆ ಅಭಿಪ್ರಾಯಪಟ್ಟರು.

ಇದನ್ನೂ ಓದಿ: IPL 2025: ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಆಫ್​ಗೇರಲು ಮೂರೇ ಮೂರು ಹೆಜ್ಜೆ ದೂರ

ಅಂದಹಾಗೆ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಟಿಮ್ ಡೇವಿಡ್ (50) ಅವರನ್ನು ಹೊರತುಪಡಿಸಿ ಯಾವುದೇ ಬ್ಯಾಟರ್​ಗಳು ಉತ್ತಮ ಪ್ರದರ್ಶನ ನೀಡಿಲ್ಲ. ಇದಕ್ಕೆ ಸಾಕ್ಷಿ ಒಟ್ಟು ಮೊತ್ತ 95 ರಲ್ಲಿ 50 ರನ್​ಗಳು ಟಿಮ್ ಡೇವಿಡ್​ ಬ್ಯಾಟ್​ನಿಂದ ಮೂಡಿಬಂದಿರುವುದು. ಈ ತಪ್ಪುಗಳನ್ನು ತಿದ್ದಿಕೊಂಡು ಆರ್​ಸಿಬಿ ತಂಡವು ಮುಂಬರುವ ಪಂದ್ಯಗಳಲ್ಲಿ ಜಯಶೀಲರಾಗಲಿದ್ದಾರಾ ಕಾದು ನೋಡಬೇಕಿದೆ.

Published On - 7:53 am, Sat, 19 April 25

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ