IND vs ENG 5th Test: ಐದನೇ ಟೆಸ್ಟ್​ನಲ್ಲಿ ಪಾಟಿದಾರ್​ಗೆ ಮತ್ತೊಮ್ಮೆ ಅವಕಾಶ: ದೇವದತ್ ಪಡಿಕ್ಕಲ್ ಕೂಡ ಕಣಕ್ಕೆ?

India Playing XI vs England 5th Test: ಈ ಹಿಂದೆ ರಜತ್ ಪಾಟಿದರ್ ಜಾಗದಲ್ಲಿ ಕರ್ನಾಟಕದ ದೇವದತ್ ಪಡಿಕ್ಕಲ್ ಟೆಸ್ಟ್ ಕ್ರಿಕೆಟಿಗೆ ಪಾದಾರ್ಪಣೆ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ, ಪಾಟಿದಾರ್​ಗೆ ಮತ್ತೊಂದು ಅವಕಾಶ ಕೊಟ್ಟು ಪಡಿಕ್ಕಲ್ ಕೂಡ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸುಕೊಳ್ಳುವ ಸಾಧ್ಯತೆ ಇದೆ.

IND vs ENG 5th Test: ಐದನೇ ಟೆಸ್ಟ್​ನಲ್ಲಿ ಪಾಟಿದಾರ್​ಗೆ ಮತ್ತೊಮ್ಮೆ ಅವಕಾಶ: ದೇವದತ್ ಪಡಿಕ್ಕಲ್ ಕೂಡ ಕಣಕ್ಕೆ?
Rajat Patidar and devdutt padikkal
Follow us
Vinay Bhat
|

Updated on: Mar 04, 2024 | 9:38 AM

ರೋಹಿತ್ ಶರ್ಮಾ (Rohit Sharma) ನೇತೃತ್ವದ ಟೀಮ್ ಇಂಡಿಯಾ ಮಧ್ಯಮ ಕ್ರಮಾಂಕದ ಬ್ಯಾಟರ್ ರಜತ್ ಪಾಟಿದಾರ್ ಅವರನ್ನು ಮತ್ತೊಂದು ಪರೀಕ್ಷೆಗೆ ಇಳಿಸಲು ನಿರ್ಧರಿಸಿದ್ದು, ಅವರು ಧರ್ಮಶಾಲಾದಲ್ಲಿ ಆಡುವ XI ನಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ ಎಂದು ವರದಿ ಆಗಿದೆ. ಐದನೇ ಟೆಸ್ಟ್ ಪಂದ್ಯ ಮಾರ್ಚ್ 7 ರಿಂದ ಶುರುವಾಗಲಿದೆ. ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿಯ ಪ್ರಕಾರ, ಟೀಮ್ ಮ್ಯಾನೇಜ್‌ಮೆಂಟ್ ಪಾಟಿದಾರ್ ಅವರನ್ನು ಅಂತಿಮ ಟೆಸ್ಟ್‌ನಲ್ಲಿ ಆಡಿಸಲಿದೆ.

ಈ ಹಿಂದೆ ಪಾಟಿದರ್ ಜಾಗದಲ್ಲಿ ಕರ್ನಾಟಕದ ದೇವದತ್ ಪಡಿಕ್ಕಲ್ ಟೆಸ್ಟ್ ಕ್ರಿಕೆಟಿಗೆ ಪಾದಾರ್ಪಣೆ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ, ಪಾಟಿದಾರ್​ಗೆ ಮತ್ತೊಂದು ಅವಕಾಶ ಕೊಟ್ಟು ಪಡಿಕ್ಕಲ್ ಕೂಡ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸುಕೊಳ್ಳುವ ಸಾಧ್ಯತೆ ಇದೆ. ಐದನೇ ಟೆಸ್ಟ್​ನಲ್ಲಿ ಸತತವಾಗಿ ಕ್ರಿಕೆಟ್ ಆಡುತ್ತಿರುವ ಶುಭ್​ಮನ್ ಗಿಲ್ ಅವರಿಗೆ ವಿಶ್ರಾಂತಿ ನೀಡಿ ಅವರ ಜಾಗಕ್ಕೆ ದೇವದತ್ ಪಡಿಕ್ಕಲ್ ಅವರನ್ನು ಕರೆತಂದರೆ ಆಶ್ಚರ್ಯ ಪಡಬೇಕಿಲ್ಲ. ಇದರ ನಡುವೆ ಪಾಟಿದಾರ್​ಗೆ ಅವಕಾಶ ನೀಡುತ್ತಿರುವುದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.

ಒಂದಲ್ಲ, ಎರಡಲ್ಲ: ಐದನೇ ಟೆಸ್ಟ್​ನಲ್ಲಿ ಯಶಸ್ವಿ ಜೈಸ್ವಾಲ್ ಸೃಷ್ಟಿಸಲಿರುವ ದಾಖಲೆಗಳು ನೋಡಿ

ಪಾಟಿದಾರ್ ಅವರು ಈ ಸರಣಿಯ ಮೂರು ಟೆಸ್ಟ್ ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಆರು ಇನ್ನಿಂಗ್ಸ್‌ಗಳಲ್ಲಿ ಎರಡು ಡಕ್‌ಗಳೊಂದಿಗೆ 32 ರನ್ ಗಳಿಸಿದ್ದಾರಷ್ಟೆ. “ಪಾಟಿದಾರ್‌ಗೆ ಪ್ರತಿಭೆ ಇದೆ. ಅವರಿಗೆ ಇನ್ನೂ ಒಂದು ಅವಕಾಶವನ್ನು ನೀಡಲು ಮ್ಯಾನೇಜ್ಮೆಂಟ್ ಬಯಸುತ್ತಿದೆ. ಭಾರತ ಈಗಾಗಲೇ ಸರಣಿಯನ್ನು ಗೆದ್ದಿರುವುದರಿಂದ, ಪಾಟಿದರ್​ಗೆ ಅವಕಾಶ ಸಿಗಲಿದೆ, ”ಎಂದು ಮೂಲವನ್ನು ಉಲ್ಲೇಖಿಸಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಪಾಟಿದಾರ್ ಅವರು ವಿರಾಟ್ ಕೊಹ್ಲಿ ಬದಲಿಗೆ ಸ್ಥಾನ ಪಡೆದರು. ಆದಾಗ್ಯೂ, ಕೆಎಲ್ ರಾಹುಲ್ ಗಾಯಗೊಂಡ ನಂತರ ವಿಶಾಖಪಟ್ಟಣಂನಲ್ಲಿ ನಡೆದ ಎರಡನೇ ಟೆಸ್ಟ್​ನಲ್ಲಿ ಅವರಿಗೆ ಅವಕಾಶ ಸಿಕ್ಕಿತು. ವಿದರ್ಭ ವಿರುದ್ಧದ ರಣಜಿ ಟ್ರೋಫಿ ಸೆಮಿಫೈನಲ್‌ನಲ್ಲಿ ಮಧ್ಯಪ್ರದೇಶದ ಪರವಾಗಿ ದೇಶೀಯ ಕ್ರಿಕೆಟ್‌ನಲ್ಲಿ ಪಾಟಿದಾರ್ ಅಮೋಘ ಪ್ರದರ್ಶನ ನೀಡಿದ್ದರು.

ಸಂಕಷ್ಟದಲ್ಲಿ ಭಾರತ-ಇಂಗ್ಲೆಂಡ್ 5ನೇ ಟೆಸ್ಟ್: ಧರ್ಮಶಾಲಾದಲ್ಲಿ ಪಂದ್ಯ ನಡೆಯುವುದು ಅನುಮಾನ

ಬುಮ್ರಾ 5ನೇ ಟೆಸ್ಟ್‌ಗೆ ಕಮ್​ಬ್ಯಾಕ್:

ಕೆಲಸದ ಹೊರೆ ನಿರ್ವಹಣೆಯ ಭಾಗವಾಗಿ ರಾಂಚಿಯಲ್ಲಿ ನಡೆದ ನಾಲ್ಕನೇ ಟೆಸ್ಟ್‌ನಿಂದ ವಿಶ್ರಾಂತಿ ಪಡೆದಿದ್ದ ಭಾರತದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಅವರನ್ನು ಧರ್ಮಶಾಲಾದ ಐದನೇ ಟೆಸ್ಟ್‌ಗೆ ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ ಮತ್ತು ಅವರು ಆಡಲು ಸಿದ್ಧರಾಗಿದ್ದಾರೆ. ಬುಮ್ರಾ ವಾಪಸಾತಿಯಿಂದಾಗಿ ಆಕರ್ಷಕ ಚೊಚ್ಚಲ ಪಂದ್ಯದ ಹೊರತಾಗಿಯೂ ಆಕಾಶ್ ದೀಪ್ ತನ್ನ ಸ್ಥಾನವನ್ನು ಕಳೆದುಕೊಳ್ಳಲಿದ್ದಾರೆ.

ಐದನೇ ಟೆಸ್ಟ್​ಗೆ ಭಾರತದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್- ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್/ ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ರವೀಂದ್ರ ಜಡೇಜಾ, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಸರ್ಫರಾಜ್ ಖಾನ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ