AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೀವ ಉಳಿಸಿಕೊಳ್ಳಲು 1.65 ಕೋಟಿ ಮೌಲ್ಯದ ಕಾರು ಖರೀದಿಸಿದೆ’; ರಮೀಜ್ ರಾಜಾ

Ramiz Raja: ನಾನು ಮಂಡಳಿ ಅಧ್ಯಕ್ಷನಾಗಿದ್ದಾಗ ನನಗೆ ಕೊಲೆ ಬೆದರಿಕೆಗಳು ಬಂದಿದ್ದವು. ನಿಮಗೆ ಕೊಲೆ ಬೆದರಿಕೆ ಬರದ ಹೊರತು ಬುಲೆಟ್ ಪ್ರೂಫ್ ಕಾರನ್ನು ಖರೀದಿಸಲು ಸಾಧ್ಯವಿಲ್ಲ. ಅದಕ್ಕಾಗಿಯೇ ನಾನು ಆ ಕಾರನ್ನು ಖರೀದಿಸಿದೆ ಎಂದಿದ್ದಾರೆ.

‘ಜೀವ ಉಳಿಸಿಕೊಳ್ಳಲು 1.65 ಕೋಟಿ ಮೌಲ್ಯದ ಕಾರು ಖರೀದಿಸಿದೆ’; ರಮೀಜ್ ರಾಜಾ
ರಮೀಜ್ ರಾಜಾ
TV9 Web
| Updated By: ಪೃಥ್ವಿಶಂಕರ|

Updated on:Jan 01, 2023 | 12:26 PM

Share

ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (PCB) ಅಧ್ಯಕ್ಷ ಸ್ಥಾನದಿಂದ ವಜಾಗೊಂಡಿರುವ ಪಾಕ್ ತಂಡದ ಮಾಜಿ ಬ್ಯಾಟ್ಸ್‌ಮನ್ ರಮೀಜ್ ರಾಜಾ (Ramiz Raja) ದಿನಕ್ಕೊಂದು ಸ್ಫೋಟಕ ಹೇಳಿಕೆ ಮೂಲಕ ಸುದ್ದಿಯಾಗುತ್ತಿದ್ದಾರೆ. ಈ ಹಿಂದೆ ಮಂಡಳಿ ಅಧ್ಯಕ್ಷರಾಗಿದ್ದಾಗ ಬಿಸಿಸಿಐ (BCCI) ವಿರುದ್ಧ ಕಾಲ್ಕೆರೆದು ಜಗಳಕ್ಕಿಳಿಯುತ್ತಿದ್ದ ರಾಜಾ, ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಬಳಿಕ ಟೀಂ ಇಂಡಿಯಾ (Team India) ಹಾಗೂ ಪಾಕ್ ಕ್ರಿಕೆಟ್ ಮಂಡಳಿ ವಿರುದ್ಧವೆ ತಿರುಗಿ ಬಿದ್ದಿದ್ದರು. ಈಗ ಹೊಸ ವಿವಾದವೊಂದನ್ನು ಹುಟ್ಟು ಹಾಕಿರುವ ರಾಜಾ, ಪಿಸಿಬಿಯಲ್ಲಿದ್ದಾಗ ತನಗೆ ಕೊಲೆ ಬೆದರಿಕೆಗಳು ಬಂದಿದ್ದವು. ಹೀಗಾಗಿ ಅಂದಿನಿಂದ ನಾನು ಬುಲೆಟ್ ಪ್ರೂಫ್ ಕಾರನ್ನು (bullet proof car) ಬಳಸಲು ಆರಂಭಿಸಿದೆ ಎಂದು ಹೇಳಿದ್ದಾರೆ.

ಕೆಲವು ದಿನಗಳ ಹಿಂದೆ ಪಾಕಿಸ್ತಾನ ಸರ್ಕಾರವು ರಾಜಾ ಅವರನ್ನು ಪಿಸಿಬಿ ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕಿತು. ಅವರ ಬದಲಿಗೆ ನಜಮ್ ಸೇಥಿ ಅವರನ್ನು ಹೊಸ ಅಧ್ಯಕ್ಷರನ್ನಾಗಿ ನೇಮಿಸಿತು. ಈ ಹುದ್ದೆಯನ್ನು ವಹಿಸಿಕೊಂಡಿದ್ದ ಸೇಥಿ ಮಂಡಳಿಯಲ್ಲಿ ಹಲವು ಬದಲಾವಣೆಗಳನ್ನು ಮಾಡಿದ್ದರು. ಅದರಲ್ಲಿ ಮೊಹಮ್ಮದ್ ವಾಸಿಂ ನೇತೃತ್ವದ ಆಯ್ಕೆ ಸಮಿತಿಯನ್ನು ತೆಗೆದುಹಾಕಿದ್ದ ಸೇಥಿ, ಶಾಹಿದ್ ಅಫ್ರಿದಿ ನೇತೃತ್ವದ ಮೂರು ಸದಸ್ಯರ ಆಯ್ಕೆ ಸಮಿತಿಯನ್ನು ಹೊಸದಾಗಿ ರಚಿಸಿದ್ದರು.

‘ನಮ್ಮ ಯಶಸ್ಸನ್ನು ಭಾರತಕ್ಕೆ ಅರಗಿಸಿಕೊಳ್ಳಲಾಗುತ್ತಿಲ್ಲ’; ಮತ್ತೊಮ್ಮೆ ಗುಡುಗಿದ ರಮೀಜ್ ರಾಜಾ

ಜೀವ ಉಳಿಸಲು ಕೋಟಿ ಮೌಲ್ಯದ ಕಾರು ಖರೀದಿಸಿದೆ

ಈ ಹಿಂದೆ ರಮೀಜ್ ರಾಜಾ ಪಿಸಿಬಿ ಅಧ್ಯಕ್ಷರಾಗಿದ್ದಾಗ 1.65 ಕೋಟಿ ಮೌಲ್ಯದ ಕಾರು ಖರೀದಿಸಿದ್ದರು. ಈಗ ಆ ವಿಚಾರದ ಬಗ್ಗೆ ರಾಜಾ ಅವರನ್ನು ಪ್ರಶ್ನಿಸಲಾಗಿದೆ. ಅದಕ್ಕೆ ಉತ್ತರಿಸಿರುವ ರಾಜಾ, ಆ ಕಾರನ್ನು ನಾನು ವೈಯಕ್ತಿಕವಾಗಿ ಖರೀದಿಸಿರಲಿಲ್ಲ. ಆ ಕಾರು ಈಗ ಪಿಸಿಬಿ ಬಳಿ ಇದೆ. ಈಗ ನನ್ನ ನಂತರ ಬಂದವರೂ ಅದನ್ನು ಬಳಸಬಹುದು. ವಾಸ್ತವವಾಗಿ ನಾನು ಮಂಡಳಿ ಅಧ್ಯಕ್ಷನಾಗಿದ್ದಾಗ ನನಗೆ ಕೊಲೆ ಬೆದರಿಕೆಗಳು ಬಂದಿದ್ದವು. ನಿಮಗೆ ಕೊಲೆ ಬೆದರಿಕೆ ಬರದ ಹೊರತು ಬುಲೆಟ್ ಪ್ರೂಫ್ ಕಾರನ್ನು ಖರೀದಿಸಲು ಸಾಧ್ಯವಿಲ್ಲ. ಅದಕ್ಕಾಗಿಯೇ ನಾನು ಆ ಕಾರನ್ನು ಖರೀದಿಸಿದೆ.

ಆದರೆ ಈಗ ನಾನು ಅದರ ಬಗ್ಗೆ ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲು ಸಾಧ್ಯವಿಲ್ಲ. ಆದರೆ ನನಗೆ ಮಾರ್ಚ್-2022 ರಲ್ಲಿ ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವಿನ ಸರಣಿಯಲ್ಲಿ ಕೊಲೆ ಬೆದರಿಕೆಯ ಕರೆ ಬಂದಿತ್ತು. ಆ ವೇಳೆ ನನ್ನ ಮನೆಗೆ ಬಂದಿದ್ದ ಡಿಐಜಿ ಸಾಹೇಬರು ನನ್ನಿಂದ ಪೂರ್ಣ ವಿವರ ತಿಳಿದುಕೊಂಡಿದ್ದರು ಎಂದಿದ್ದಾರೆ.

ಕಾನೂನು ಕ್ರಮ ಕೈಗೊಳ್ಳುವ ಬೆದರಿಕೆ ಹಾಕಿದ ಪಿಸಿಬಿ

ಈಗ ಪಿಸಿಬಿ ಅಧ್ಯಕ್ಷ ಸ್ಥಾನವನ್ನು ಕಳೆದುಕೊಂಡಿರುವ ರಮೀಜ್ ರಾಜಾ ನಿರಂತರವಾಗಿ ಪಿಸಿಬಿ ವಿರುದ್ಧ ಆರೋಪಗಳ ಸುರಿಮಳೆಗೈಯುತ್ತಿದ್ದಾರೆ. ಅಲ್ಲದೆ ನಾನು ಅಧ್ಯಕ್ಷ ಸ್ಥಾನ ಕಳೆದುಕೊಂಡ ಮೇಲೆ ಆಡಳಿತ ಮಂಡಳಿ ಕಚೇರಿಯಲ್ಲಿದ್ದ ನನ್ನ ಸಾಮಾನುಗಳನ್ನು ತರಲೂ ಅವಕಾಶ ನೀಡುತ್ತಿಲ್ಲ ಎಂದಿದ್ದರು. ಇದಾದ ನಂತರ ಪಿಸಿಬಿ ರಮೀಜ್ ರಾಜಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಮಾತನಾಡಿತ್ತು. ಬಳಿಕ ನೂತನ ಅಧ್ಯಕ್ಷ ನಜಮ್ ಸೇಥಿ, ಈ ಹಿಂದೆ ರಾಜಾ ತೆಗೆದುಕೊಂಡಿದ್ದ ಅನೇಕ ನಿರ್ಧಾರಗಳನ್ನು ರದ್ದುಗೊಳಿಸಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:24 pm, Sun, 1 January 23

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್