ಬಿಸಿಸಿಐ ವಿರುದ್ಧ ಗುಡುಗಿದ್ದ ರಮೀಜ್ ರಾಜಾಗೆ ಪಿಸಿಬಿ ಮುಖ್ಯಸ್ಥ ಸ್ಥಾನದಿಂದ ಗೇಟ್​ಪಾಸ್..!

ತನ್ನ ಅಲ್ಪಾವಧಿಯಲ್ಲಿ ಕೆಲಸಕ್ಕಿಂತ ಹೆಚ್ಚು ವಿಲಕ್ಷಣ ಹೇಳಿಕೆಗಳಿಂದ ಸುದ್ದಿಯಲ್ಲಿರುವ ರಮೀಜ್ ರಾಜಾರನ್ನು ಶೀಘ್ರದಲ್ಲೇ ಪಿಸಿಬಿ ಮುಖ್ಯಸ್ಥ ಸ್ಥಾನದಿಂದ ಕಿತ್ತೊಗೆಯುವ ಸಾಧ್ಯತೆಗಳಿವೆ.

ಬಿಸಿಸಿಐ ವಿರುದ್ಧ ಗುಡುಗಿದ್ದ ರಮೀಜ್ ರಾಜಾಗೆ ಪಿಸಿಬಿ ಮುಖ್ಯಸ್ಥ ಸ್ಥಾನದಿಂದ ಗೇಟ್​ಪಾಸ್..!
Rameez Raja
Follow us
TV9 Web
| Updated By: ಪೃಥ್ವಿಶಂಕರ

Updated on:Dec 17, 2022 | 6:15 PM

ಒಂದೆಡೆ, ಕರಾಚಿಯಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯವನ್ನು ಗೆಲ್ಲಲು ಪಾಕಿಸ್ತಾನ ತಂಡ ಹೆಣಗಾಡುತ್ತಿದ್ದರೆ, ಮತ್ತೊಂದೆಡೆ, ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮುಖ್ಯಸ್ಥ (PCB chief) ರಮೀಜ್ ರಾಜಾ (Rameez Raja) ತಮ್ಮ ಕುರ್ಚಿ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ತನ್ನ ಅಲ್ಪಾವಧಿಯಲ್ಲಿ ಕೆಲಸಕ್ಕಿಂತ ಹೆಚ್ಚು ವಿಲಕ್ಷಣ ಹೇಳಿಕೆಗಳಿಂದ ಸುದ್ದಿಯಲ್ಲಿರುವ ರಮೀಜ್ ರಾಜಾರನ್ನು ಶೀಘ್ರದಲ್ಲೇ ಪಿಸಿಬಿ ಮುಖ್ಯಸ್ಥ ಸ್ಥಾನದಿಂದ ಕಿತ್ತೊಗೆಯುವ ಸಾಧ್ಯತೆಗಳಿವೆ. ವಾಸ್ತವವಾಗಿ ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ (Pakistan Prime Minister Shahbaz Sharif) ಅವರು ಕ್ರಿಕೆಟ್ ಮಂಡಳಿಯ ಮಾಜಿ ಅಧ್ಯಕ್ಷ ನಜಮ್ ಸೇಥಿ (Najam Sethi) ಅವರನ್ನು ಮತ್ತೊಮ್ಮೆ ಈ ಹುದ್ದೆಗೆ ನೇಮಿಸಲು ಮನಸ್ಸು ಮಾಡಿದ್ದಾರೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ.

ಕಳೆದ ಕೆಲವು ತಿಂಗಳುಗಳಿಂದ ಬಿಸಿಸಿಐ ವಿರುದ್ಧ ಬಿರುಸಿನ ಹೇಳಿಕೆ ನೀಡುತ್ತಾ ಸದಾ ಸುದ್ದಿಯಲ್ಲಿದ್ದ ರಾಜಾ, ಏಷ್ಯಾಕಪ್ ಆಡಲು ಭಾರತ ಪಾಕಿಸ್ತಾನಕ್ಕೆ ಬರದಿದ್ದರೆ, ನಮ್ಮ ತಂಡ ಕೂಡ ಏಕದಿನ ವಿಶ್ವಕಪ್ ಆಡಲು ಭಾರತಕ್ಕೆ ಹೊಗುವುದಿಲ್ಲ ಎಂದು ಬಿಸಿಸಿಐಗೆ ಬೆದರಿಕೆಯೊಡ್ಡಿದ್ದರು. ಆದರೆ ಈಗ ವಿಶ್ವಕಪ್ ಹಾಗೂ ಏಷ್ಯಾಕಪ್ ಬಗ್ಗೆ ಮಾತನಾಡುವುದಿರಲಿ, ರಮೀಜ್ ರಾಜಾಗೆ ತನ್ನ ಸ್ಥಾನವನ್ನು ಉಳಿಸಿಕೊಳ್ಳುವುದೇ ದೊಡ್ಡ ತಲೆನೋವಾಗಿದೆ. ಪಾಕಿಸ್ತಾನದ ಮಾಧ್ಯಮ ವರದಿಗಳ ಪ್ರಕಾರ, ಪಿಸಿಬಿ ಮಾಜಿ ಅಧ್ಯಕ್ಷ ನಜಮ್ ಸೇಥಿ ಅವರು ಡಿಸೆಂಬರ್ 17 ರಂದು ಲಾಹೋರ್‌ನಲ್ಲಿ ಪಾಕಿಸ್ತಾನದ ಪ್ರಧಾನಿ ಷರೀಫ್ ಅವರನ್ನು ಭೇಟಿ ಮಾಡಿದ್ದು, ಅವರಿಗೆ ಪಾಕ್ ಕ್ರಿಕೆಟ್​ ಮಂಡಳಿ ಮುಖ್ಯಸ್ಥ ಪಟ್ಟ ಕಟ್ಟುವುದು ನಿಶ್ವಿತ ಎಂದು ವರದಿಯಾಗಿದೆ. ಇದಕ್ಕೆ ಪೂರಕವೆಂಬಂತೆ ಪಾಕಿಸ್ತಾನದ ಪ್ರಧಾನಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಪೋಷಕರಾಗಿರುವುದರಿಂದ ಮಂಡಳಿಯ ಅಧ್ಯಕ್ಷರ ನೇಮಕಾತಿಯ ಅಂತಿಮ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಿಯ ತೆಗೆದುಕೊಳ್ಳುತ್ತಾರೆ. ಹೀಗಾಗಿ ಸೇಥಿಯವರ ಪ್ರಧಾನಿ ಭೇಟಿಯೂ ಅಧ್ಯಕ್ಷರ ಬದಲಾವಣೆಗೆ ಪುಷ್ಠಿ ನೀಡಿದೆ.

ಬೆಂಗಳೂರಿನಲ್ಲಿ ಬಾಂಗ್ಲಾ ತಂಡವನ್ನು ಮಣಿಸಿ ಹ್ಯಾಟ್ರಿಕ್ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ..!

2. 2021 ರಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ರಾಜಾ

ರಮೀಜ್ ರಾಜಾ ಅವರನ್ನು 2021 ರಲ್ಲಿ ಪಾಕಿಸ್ತಾನಿ ಮಂಡಳಿಯ ಅಧ್ಯಕ್ಷರನ್ನಾಗಿ ಮಾಡಲಾಯಿತು. ಅಂದಿನ ಪ್ರಧಾನಿ ಮತ್ತು ಪಾಕಿಸ್ತಾನಿ ತಂಡದ ಮಾಜಿ ನಾಯಕ ಇಮ್ರಾನ್ ಖಾನ್, ರಮೀಜ್ ಅವರಿಗೆ ಈ ಜವಾಬ್ದಾರಿಯನ್ನು ವಹಿಸಿದ್ದರು. ಅಂದಿನಿಂದ, ರಮೀಜ್ ರಾಜಾ ನಿರಂತರವಾಗಿ ಭಾರತೀಯ ಕ್ರಿಕೆಟ್ ತಂಡ ಮತ್ತು ಬಿಸಿಸಿಐ ಬಗ್ಗೆ ಹೇಳಿಕೆಗನ್ನು ನೀಡುವುದರೊಂದಿಗೆ ಆಗಾಗ್ಗೆ ಚರ್ಚೆಯಲ್ಲಿದ್ದಾರೆ. ಇದೇ ವೇಳೆ ಪಾಕಿಸ್ತಾನ ಕ್ರಿಕೆಟ್ ತಂಡದ ಆಟಗಾರರ ಆಯ್ಕೆಯಲ್ಲಿ ಅವರ ಇಷ್ಟ-ಅನಿಷ್ಟಗಳ ಆರೋಪಗಳೂ ಕೇಳಿ ಬಂದಿವೆ.

ಈ ವರ್ಷದ ಆರಂಭದಲ್ಲಿ ಇಮ್ರಾನ್ ಖಾನ್ ಪಾಕಿಸ್ತಾನದ ಪ್ರಧಾನಿ ಹುದ್ದೆಯಿಂದ ಕೆಳಗಿಳಿದ ನಂತರ, ರಮೀಜ್ ರಾಜಾ ಅವರನ್ನೂ ಈ ಸ್ಥಾನದಿಂದ ವಜಾ ಮಾಡಲಾಗುತ್ತದೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ರಾಜಾ ಹೇಗೋ ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಪಾಕಿಸ್ತಾನಿ ಮಂಡಳಿಯ ನಿಯಮದ ಪ್ರಕಾರ ಅಧ್ಯಕ್ಷರ ಸೇವಾ ಅವಧಿ 3 ವರ್ಷಗಳಾಗಿದೆ. ಆದರೆ ಈಗ ಹರಿದಾಡುತ್ತಿರುವ ಸುದ್ದಿ ಸತ್ಯವಾದರೆ ರಮೀಜ್ ತಮ್ಮ ಅವಧಿಗೂ ಮುನ್ನ ತನ್ನ ಅಧಿಕಾರವನ್ನು ಕಳೆದುಕೊಳ್ಳಲಿದ್ದಾರೆ.

3. ನಜಮ್ ಸೇಥಿ ಯಾರು?

ನಜಮ್ ಸೇಥಿ ಅವರ ಮಟ್ಟಿಗೆ ಹೇಳುವುದಾದರೆ, ಖ್ಯಾತ ಪತ್ರಕರ್ತ ಪಾಕಿಸ್ತಾನ ಕ್ರಿಕೆಟ್‌ನೊಂದಿಗೆ ಬಹಳ ಹಿಂದಿನಿಂದಲೂ ನಂಟು ಹೊಂದಿದ್ದಾರೆ. ಎರಡು ಬಾರಿ ಪಿಸಿಬಿ ಅಧ್ಯಕ್ಷರೂ ಆಗಿದ್ದರು. ಮೊದಲು 2013 ರಿಂದ 2014 ರವರೆಗೆ ಅಧ್ಯಕ್ಷರಾಗಿದ್ದ ಸೇಥಿ, ನಂತರ 2017 ರಿಂದ 2018 ರವರೆಗೆ ಪಿಸಿಬಿಯ ಮುಖ್ಯಸ್ಥರಾಗಿದ್ದರು. ಅಲ್ಲದೆ ಪಾಕಿಸ್ತಾನದ ಪ್ರೀಮಿಯರ್ ಟಿ20 ಟೂರ್ನಮೆಂಟ್, ಪಾಕಿಸ್ತಾನ್ ಸೂಪರ್ ಲೀಗ್ ಅನ್ನು ಪ್ರಾರಂಭಿಸಿದ ಕೀರ್ತಿ ಸೇಥಿಗೆ ಸಲ್ಲಬೇಕಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:13 pm, Sat, 17 December 22

ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು