Ramiz Raja: ಭಾರತದಲ್ಲಿ ನಮಗೂ ಅಪಾಯವಿದೆ, ಹಾಗಾಗಿ ಏಕದಿನ ವಿಶ್ವಕಪ್ ಆಡಲ್ಲಾಂದ್ರೆ ಹೇಗೆ?

India vs Pakistan: 2023ರ ಏಷ್ಯಾಕಪ್ ಆತಿಥ್ಯದ ಹಕ್ಕನ್ನು ಪಾಕಿಸ್ತಾನ್ ಹೊಂದಿದೆ. ಆದರೆ ಭದ್ರತಾ ಕಾರಣಗಳಿಂದಾಗಿ ಟೂರ್ನಿಯಲ್ಲಿ ಭಾಗವಹಿಸಲು ಭಾರತ ಹಿಂದೇಟು ಹಾಕಿದೆ.

Ramiz Raja: ಭಾರತದಲ್ಲಿ ನಮಗೂ ಅಪಾಯವಿದೆ, ಹಾಗಾಗಿ ಏಕದಿನ ವಿಶ್ವಕಪ್ ಆಡಲ್ಲಾಂದ್ರೆ ಹೇಗೆ?
ramiz raja
Follow us
TV9 Web
| Updated By: ಝಾಹಿರ್ ಯೂಸುಫ್

Updated on: Dec 06, 2022 | 8:31 PM

Asia Cup 2023: ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯಲಿರುವ ಏಷ್ಯಾಕಪ್‌ ಹೊಸ ಚರ್ಚೆಗೆ ಕಾರಣವಾಗಿದೆ. ಭಾರತ ಏಷ್ಯಾಕಪ್ 2023 ರನ್ನು ತಟಸ್ಥ ಸ್ಥಳದಲ್ಲಿ ಆಯೋಜಿಸುವಂತೆ ಮನವಿ ಮಾಡಿದೆ. ಇದರ ಬೆನ್ನಲ್ಲೇ ಏಷ್ಯಾಕಪ್‌ನ ಆತಿಥ್ಯವನ್ನು ಕಿತ್ತುಕೊಂಡರೆ ಪಾಕಿಸ್ತಾನ ಕ್ರಿಕೆಟ್ ತಂಡ 2023ರ ಏಕದಿನ ವಿಶ್ವಕಪ್‌ನಿಂದ ಹಿಂದೆ ಸರಿಯಬಹುದು ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮುಖ್ಯಸ್ಥ ರಮೀಜ್ ರಾಜಾ ಸ್ಪಷ್ಟಪಡಿಸಿದ್ದಾರೆ.

ಒಂದು ವೇಳೆ ಐಸಿಸಿ ಟೂರ್ನಿಯಿಂದ ಪಾಕ್ ಹೊರಗುಳಿದರೆ ಪರಿಣಾಮ ಎದುರಿಸಬೇಕಾಗುತ್ತದೆ. ಆದರೆ ಇದಕ್ಕಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಬಿಸಿಸಿಐ ಹೇಳಿಕೆಯನ್ನು ತಿರುಮಂತ್ರ ಮಾಡಲು ಮುಂದಾಗಿದೆ. ಅಂದರೆ ಭಾರತ ತಂಡವು ಆಟಗಾರರ ಸುರಕ್ಷತೆಯ ದೃಷ್ಟಿಯಿಂದ ಪಾಕ್ ಪ್ರವಾಸ ಕೈಗೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದೆ. ಇದೀಗ ಇದೇ ಹೇಳಿಕೆಯ ಮೂಲಕ ಪಾಕ್ ಕ್ರಿಕೆಟ್ ಮಂಡಳಿ ಏಕದಿನ ವಿಶ್ವಕಪ್ ಬಹಿಷ್ಕರಿಸುವ ಸುಳಿವು ನೀಡಿದೆ.

ಈ ಬಗ್ಗೆ ಮಾತನಾಡಿದ ಪಾಕ್ ಕ್ರಿಕೆಟ್ ಮಂಡಳಿ ಮುಖ್ಯಸ್ಥ ರಮೀಜ್ ರಾಜಾ, ಭಾರತದಲ್ಲಿನ ಭದ್ರತಾ ಸಮಸ್ಯೆಯಿಂದ ಪಾಕ್ ತಂಡಕ್ಕೂ ಅಪಾಯವಿದೆ. ಆಟಗಾರರ ಸುರಕ್ಷತಾ ದೃಷ್ಟಿಯಿಂದ ನಾವು ಏಕದಿನ ವಿಶ್ವಕಪ್​ನಿಂದ ಹೊರಗುಳಿದರೆ ಏನಾಗಬಹುದು? ಎಂದು ಪ್ರಶ್ನಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್​ನಿಂದ ಹೊರಗುಳಿದರೆ, ಪಾಕಿಸ್ತಾನ್ ತಂಡವು ಭದ್ರತಾ ಸಮಸ್ಯೆಯ ಕಾರಣ ನೀಡಿ ಏಕದಿನ ವಿಶ್ವಕಪ್​ನಿಂದ ಹೊರಗುಳಿಯುವ ಸುಳಿವು ನೀಡಿದೆ.

ಇದನ್ನೂ ಓದಿ
Image
IPL 2023: RCB ಈ ನಾಲ್ವರು ಆಟಗಾರರ ಖರೀದಿಗೆ ಮುಂದಾಗಬಹುದು..!
Image
IPL 2023: ಈ ಬಾರಿಯ ಐಪಿಎಲ್​ನಿಂದ 5 ಆಟಗಾರರು ಔಟ್..!
Image
IPL 2023 Mini Auction: ಐಪಿಎಲ್ ಮಿನಿ ಹರಾಜು ಲೀಸ್ಟ್ ಔಟ್: ಯಾವ ದೇಶದಿಂದ ಎಷ್ಟು ಆಟಗಾರರು?
Image
New Record: ಅತ್ಯಧಿಕ ಟೆಸ್ಟ್ ಶತಕ: ಕೊಹ್ಲಿ, ರೂಟ್​ರನ್ನು ಹಿಂದಿಕ್ಕಿದ ಸ್ಟೀವ್ ಸ್ಮಿತ್

ಭಾರತವು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಮುಂದಿನ ವರ್ಷ ಏಷ್ಯಾಕಪ್​ಗಾಗಿ ಪಾಕಿಸ್ತಾನಕ್ಕೆ ಪ್ರಯಾಣಿಸಬೇಕೆಂದು ನಾವು ಬಯಸುತ್ತೇವೆ. ಕ್ರೀಡೆಯ ಮೂಲಕ ಹಲವು ಸಮಸ್ಯೆಗಳಿಗೆ ಪರಿಹಾರ ಕಾಣಬಹುದು. ಕ್ರೀಡೆಯಲ್ಲೂ ರಾಜಕೀಯ ಮಾಡಬಾರದು. ಟಿ20 ವಿಶ್ವಕಪ್​ನಲ್ಲೇ ನಾವೆಲ್ಲರೂ ಗಮನಿಸಿದ್ದೇವೆ. ಭಾರತ-ಪಾಕ್ ಪಂದ್ಯಕ್ಕಾಗಿ 90 ಸಾವಿರ ಅಭಿಮಾನಿಗಳು ಸೇರಿದ್ದಾರೆ. ಅಂದರೆ ಅಂತಹ ಪಂದ್ಯಗಳು ಅಭಿಮಾನಿಗಳಿಗೆ ಬೇಕಾಗಿದೆ. ಹೀಗಾಗಿ ಕ್ರೀಡೆಗಾಗಿ ನಮ್ಮ ಮನಸ್ಥಿತಿಯನ್ನು ಬದಲಿಸಿಕೊಳ್ಳಬೇಕಾಗಿದೆ ಎಂದು ರಮೀಜ್ ರಾಜಾ ಹೇಳಿದ್ದಾರೆ.

2023ರ ಏಷ್ಯಾಕಪ್ ಆತಿಥ್ಯದ ಹಕ್ಕನ್ನು ಪಾಕಿಸ್ತಾನ್ ಹೊಂದಿದೆ. ಆದರೆ ಭದ್ರತಾ ಕಾರಣಗಳಿಂದಾಗಿ ಟೂರ್ನಿಯಲ್ಲಿ ಭಾಗವಹಿಸಲು ಭಾರತ ಹಿಂದೇಟು ಹಾಕಿದೆ. ಅಲ್ಲದೆ ತಟಸ್ಥ ಸ್ಥಳದಲ್ಲಿ ಏಷ್ಯಾಕಪ್ ಆಯೋಜಿಸುವಂತೆ ಕೇಳಿಕೊಳ್ಳಲಾಗಿದೆ. ಆದರೆ ಏಷ್ಯಾಕಪ್ ಅನ್ನು ಪಾಕಿಸ್ತಾನದಲ್ಲೇ ಆಯೋಜಿಸುವುದಾಗಿ ಪಾಕ್ ಕ್ರಿಕೆಟ್ ಮಂಡಳಿ ಪಟ್ಟು ಹಿಡಿದಿದೆ. ಇತ್ತ ಪಾಕ್​ನಲ್ಲಿ ಟೂರ್ನಿ ನಡೆದರೆ ಭಾರತ ಭಾಗವಹಿಸುವುದು ಅನುಮಾನ. ಇದೇ ಕಾರಣದಿಂದಾಗಿ  ಇದೀಗ ಭಾರತ ಏಷ್ಯಾಕಪ್ ಆಡದಿದ್ರೆ, ಪಾಕ್ ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್​ನಿಂದ ಹಿಂದೆ ಸರಿಯುವುದಾಗಿ ಪಿಸಿಬಿ ಮುಖ್ಯಸ್ಥ ರಮೀಜ್ ರಾಜಾ ಪುನರುಚ್ಚರಿಸಿದ್ದಾರೆ.

ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು