AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy Final: 1 ಶತಕ, 5 ಅರ್ಧಶತಕ; 2ನೇ ದಿನವೂ ಜೆಕೆ ತಂಡದ್ದೇ ಮೇಲುಗೈ

Ranji Trophy Final Hubballi: ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್‌ನ ಎರಡನೇ ದಿನದ ಅಂತ್ಯಕ್ಕೆ ಜಮ್ಮು ಮತ್ತು ಕಾಶ್ಮೀರ ತಂಡ ಕರ್ನಾಟಕದ ವಿರುದ್ಧ 6 ವಿಕೆಟ್ ನಷ್ಟಕ್ಕೆ 527 ರನ್ ಕಲೆಹಾಕಿದೆ. ಮಂದ ಬೆಳಕಿನಿಂದಾಗಿ ಆಟ ಬೇಗನೆ ಅಂತ್ಯಗೊಂಡಿತು. J&K ಪರ ಒಂದು ಶತಕ, ಐದು ಅರ್ಧಶತಕಗಳು ದಾಖಲಾಗಿವೆ. ಕರ್ನಾಟಕದ ಬೌಲರ್‌ಗಳು ಸತತ ಎರಡನೇ ದಿನವೂ ವಿಕೆಟ್‌ಗಾಗಿ ಪರದಾಡಿದರು, J&K ಪಂದ್ಯದ ಮೇಲೆ ಹಿಡಿತ ಸಾಧಿಸಿದೆ.

Ranji Trophy Final: 1 ಶತಕ, 5 ಅರ್ಧಶತಕ; 2ನೇ ದಿನವೂ ಜೆಕೆ ತಂಡದ್ದೇ ಮೇಲುಗೈ
Ranji Trophy 2026 Final
ಪೃಥ್ವಿಶಂಕರ
|

Updated on:Feb 25, 2026 | 6:03 PM

Share

ಕರ್ನಾಟಕದ ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್‌ನಲ್ಲಿ (Ranji Trophy Final) ಕರ್ನಾಟಕ ಹಾಗೂ ಜಮ್ಮು ಮತ್ತು ಕಾಶ್ಮೀರ (Karnataka vs J&K) ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಜಮ್ಮು ಮತ್ತು ಕಾಶ್ಮೀರ ತಂಡ ಎರಡನೇ ದಿನದಾಟದಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 527 ರನ್ ಕಲೆಹಾಕಿದೆ. ಆದಾಗ್ಯೂ ಮಂದ ಬೆಳಕಿನಿಂದಾಗಿ ಎರಡನೇ ದಿನದಾಟವನ್ನು ಬೇಗನೇ ಅಂತ್ಯಗೊಳಿಸಲಾಯಿತು. ಆಟವನ್ನು ನಿಲ್ಲಿಸಿದಾಗ ಜೆಕೆ ತಂಡದ ಪರ ಸಾಹಿಲ್ ಲೋತ್ರಾ ಅಜೇಯ 57 ರನ್ ಬಾರಿಸಿದರೆ, ಅಬಿದ್ ಮುಷ್ತಾಕ್ 20 ರನ್ ಬಾರಿಸಿ ಅಜೇಯರಾಗಿ ಉಳಿದಿದ್ದಾರೆ. ಮೊದಲ ದಿನದಂತೆ ಎರಡನೇ ದಿನವೂ ಕರ್ನಾಟಕ ಬೌಲರ್​ಗಳು ವಿಕೆಟ್​ಗಾಗಿ ಪರದಾಡಬೇಕಾಯಿತು. ಇತ್ತ ಜೆಕೆ ತಂಡದ ಪರ ಇದುವರೆಗೆ 1 ಶತಕ ಹಾಗೂ 5 ಅರ್ಧಶತಕಗಳು ಸಿಡಿದಿದ್ದು ಪಂದ್ಯದ ಮೇಲೆ ಬಿಗಿ ಹಿಡಿದ ಸಾಧಿಸಿದೆ.

ಜೆಕೆ ತಂಡದ ಬ್ಯಾಟಿಂಗ್ ಪಾರುಪತ್ಯ

ಮೊದಲ ದಿನದಾಟದಂತ್ಯಕ್ಕೆ ಕೇವಲ 2 ವಿಕೆಟ್ ಕಳೆದುಕೊಂಡು 284 ರನ್ ಕಲೆಹಾಕಿದ್ದ ಜೆಕೆ ತಂಡ ಇಲ್ಲಿಂದ ತನ್ನ ಎರಡನೇ ದಿನದಾಟವನ್ನು ಮುಂದುವರೆಸಿತು. ಮೊದಲ ದಿನದಾಟದಲ್ಲಿ 117 ರನ್ ಗಳಿಸಿ ಅಜೇಯರಾಗಿ ಉಳಿದಿದ್ದ ಶುಭಂ ಪುಂಡೀರ್ ಹಾಗೂ 52 ರನ್ ಗಳಿಸಿ ಅಜೇಯರಾಗಿದ್ದ ಅಬ್ದುಲ್ ಸಮದ್ ಇನ್ನಿಂಗ್ಸ್ ಮುಗಿಸಿದರು. ಆದಾಗ್ಯೂ ಈ ಜೋಡಿಯ ಜೊತೆಯಾಟ 303 ರನ್​ಗಳಿಗೆ ಅಂತ್ಯವಾಯಿತು. ಶತಕ ಬಾರಿಸಿದ್ದ ಶುಭಂ ಪುಂಡೀರ್ ತಮ್ಮ ಖಾತೆಗೆ 4 ರನ್ ಸೇರಿಸಿ 121 ರನ್​ಗಳಿಗೆ ವಿಕೆಟ್ ಒಪ್ಪಿಸಿದರೆ, ಅಬ್ದುಲ್ ಸಮದ್ ಇನ್ನಿಂಗ್ಸ್ 61 ರನ್​ಗಳಿಗೆ ಅಂತ್ಯವಾಯಿತು.

ಐವರ ಅರ್ಧಶತಕ

ಮೊದಲ ದಿನದಾಟದಂದು ಗಾಯದಿಂದಾಗಿ ಅರ್ಧಕ್ಕೆ ಬ್ಯಾಟಿಂಗ್ ನಿಲ್ಲಿಸಿದ್ದ ನಾಯಕ ಪರಾಸ್ ಡೋಗ್ರಾ ಎರಡನೇ ದಿನದಂದು ಬ್ಯಾಟಿಂಗ್​ಗೆ ಇಳಿದು 70 ರನ್​ಗಳ ಇನ್ನಿಂಗ್ಸ್ ಆಡಿದರು. ಕನ್ಹಯ್ಯಾ ವಾಧವನ್ ಕೂಡ 70 ರನ್​ಗಳ ಕಾಣಿಕೆ ನೀಡಿದರು. ಇವರಿಬ್ಬರ ಆಟದಿಂದಾಗಿ ತಂಡ 400 ರನ್​ಗಳ ಗಡಿ ದಾಟಿತು. ಆ ಬಳಿಕ ಬಂದ ಸಾಹಿಲ್ ಲೋತ್ರಾ ಅಜೇಯ ಅರ್ಧಶತಕ ಬಾರಿಸಿ ತಂಡವನ್ನು 500 ರನ್​ಗಳ ಗಡಿ ದಾಟಿಸಿದ್ದಾರೆ.

ರಣಜಿ ಟ್ರೋಫಿ ಫೈನಲ್: ಕರ್ನಾಟಕದ ಆಟಗಾರನ ಜೊತೆ ಕಾಲ್ಕೆರೆದು ಜಗಳಕ್ಕಿಳಿದ ಜೆಕೆ ನಾಯಕ

ಕರ್ನಾಟಕಕ್ಕೆ ದೊಡ್ಡ ಸವಾಲು

ಇನ್ನು ಮೂರನೇ ದಿನದಾಟದಂದು ಕರ್ನಾಟಕ ತಂಡ ಉಳಿದಿರುವ 4 ವಿಕೆಟ್​ಗಳನ್ನು ಬೇಗನೇ ಉರುಳಿಸಿ ತನ್ನ ಬ್ಯಾಟಿಂಗ್ ಆರಂಭಿಸಬೇಕಿದೆ. ಒಂದು ವೇಳೆ ಜೆಕೆ ತಂಡದ ಕೆಳಕ್ರಮಾಂಕದ ಬ್ಯಾಟ್ಸ್​ಮನ್​ಗಳು ಕೂಡ ಉತ್ತಮವಾಗಿ ಬ್ಯಾಟ್ ಬೀಸಿದರೆ, ಕರ್ನಾಟಕ ತಂಡಕ್ಕೆ ಹಿನ್ನಡೆಯಾಗುವುದು ಖಚಿತ.ಹೀಗಾಗಿ ಈ ಪಂದ್ಯವನ್ನು ಗೆಲ್ಲಬೇಕಾದರೆ, ಕರ್ನಾಟಕ ತಂಡ ಬೇಗನೇ ಜೆಕೆ ತಂಡವನ್ನು ಆಲೌಟ್ ಮಾಡಿ ಮೊದಲ ಇನ್ನಿಂಗ್ಸ್​ನಲ್ಲಿ ಮುನ್ನಡೆ ಸಾಧಿಸಬೇಕಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:49 pm, Wed, 25 February 26

Follow Us
ಭಾವೈಕ್ಯತೆ ಸಾರಿದ ವಿನೋದ್ ರಾಜ್: ಮಸೀದಿಗಳಲ್ಲಿ ಹಣ್ಣು ವಿತರಣೆ: ವಿಡಿಯೋ
ಭಾವೈಕ್ಯತೆ ಸಾರಿದ ವಿನೋದ್ ರಾಜ್: ಮಸೀದಿಗಳಲ್ಲಿ ಹಣ್ಣು ವಿತರಣೆ: ವಿಡಿಯೋ
ಕಾಂಗ್ರೆಸ್​​​ ಹೈಕ,ಮಾಂಡ್​​​ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು!
ಕಾಂಗ್ರೆಸ್​​​ ಹೈಕ,ಮಾಂಡ್​​​ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು!
ರಾಹುಲ್ ಗಾಂಧಿಯನ್ನು ಟಪೋರಿ ಎಂದು ಕರೆದ ಕಂಗನಾ ರಣಾವತ್
ರಾಹುಲ್ ಗಾಂಧಿಯನ್ನು ಟಪೋರಿ ಎಂದು ಕರೆದ ಕಂಗನಾ ರಣಾವತ್
ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಮಕ್ಕಳು ಗ್ರೇಟ್​​ ಎಸ್ಕೇಪ್​​
ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಮಕ್ಕಳು ಗ್ರೇಟ್​​ ಎಸ್ಕೇಪ್​​
ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ
ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ
ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ
ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ
ಎಂಥಾ ಕಾಲ ಬಂತಪ್ಪ: ಪೊಲೀಸ್​​ ಭದ್ರತೆಯಲ್ಲಿ LPG ಸಿಲಿಂಡರ್​​ಗಳ ವಿತರಣೆ!
ಎಂಥಾ ಕಾಲ ಬಂತಪ್ಪ: ಪೊಲೀಸ್​​ ಭದ್ರತೆಯಲ್ಲಿ LPG ಸಿಲಿಂಡರ್​​ಗಳ ವಿತರಣೆ!
ಡಿಜೆ ನಿಷೇಧಿಸುವಂತೆ ಲಾಡ್ ಆಗ್ರಹ: ಆಝಾನ್ ಬ್ಯಾನ್ ಮಾಡಿ ಎಂದು ಬಿಜೆಪಿ ಶಾಸಕ!
ಡಿಜೆ ನಿಷೇಧಿಸುವಂತೆ ಲಾಡ್ ಆಗ್ರಹ: ಆಝಾನ್ ಬ್ಯಾನ್ ಮಾಡಿ ಎಂದು ಬಿಜೆಪಿ ಶಾಸಕ!
ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ
ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ