Yashasvi Jaiswal: 53 ಎಸೆತಗಳಲ್ಲಿ ಒಂದೇ ಒಂದು ರನ್ಗಳಿಸಿಲ್ಲ, ಬಳಿಕ ಭರ್ಜರಿ ಸೆಂಚುರಿ ಸಿಡಿಸಿದ ಜೈಸ್ವಾಲ್
Ranji Trophy 2021-22: ಈ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಉತ್ತರ ಪ್ರದೇಶ ತಂಡದ ಲೆಕ್ಕಾಚಾರಗಳನ್ನು ತಲೆಕೆಳಗಾಗುವಂತೆ ಬ್ಯಾಟಿಂಗ್ ಮಾಡಿದ ಮುಂಬೈ ತಂಡವು ಯಶಸ್ವಿ ಜೈಸ್ವಾಲ್ ಅವರ ಶತಕದ ನೆರವಿನಿಂದ ಮೊದಲ ಇನಿಂಗ್ಸ್ನಲ್ಲಿ 393 ರನ್ ಕಲೆಹಾಕಿತು.
ಬೆಂಗಳೂರಿನಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿಯ 2ನೇ ಸೆಮಿಫೈನಲ್‌ನಲ್ಲಿ ಮುಂಬೈ ಹಾಗೂ ಉತ್ತರ ಪ್ರದೇಶ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದ 2ನೇ ಇನಿಂಗ್ಸ್ನಲ್ಲಿ ಮುಂಬೈ ತಂಡದ ಯುವ ಬ್ಯಾಟ್ಸ್ಮನ್ ಯಶಸ್ವಿ ಜೈಸ್ವಾಲ್ (Yashasvi Jaiswal) ಮೊದಲ ರನ್ಗಳಿಸಲು ಬರೋಬ್ಬರಿ 53 ಎಸೆತಗಳನ್ನು ಎದುರಿಸಿ ಸುದ್ದಿಯಾಗಿದ್ದರು. ಆದರೆ ಪಂದ್ಯದ ನಾಲ್ಕನೇ ದಿನ ಜೈಸ್ವಾಲ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಮೂಲಕ ಸೆಮಿಫೈನಲ್‌ನಲ್ಲಿ ಎರಡೂ ಇನ್ನಿಂಗ್ಸ್‌ಗಳಲ್ಲಿ ಶತಕ ಸಿಡಿಸಿದ ವಿಶೇಷ ಸಾಧನೆ ಮಾಡಿದ್ದಾರೆ 20 ರ ಹರೆಯದ ಯಶಸ್ವಿ ಜೈಸ್ವಾಲ್.
ಇದಕ್ಕೂ ಮುನ್ನ ರಣಜಿ ಟ್ರೋಫಿಯ ಕ್ವಾರ್ಟರ್ ಫೈನಲ್‌ನಲ್ಲಿ ಉತ್ತರಾಖಂಡ ವಿರುದ್ಧ 103 ರನ್ ಗಳಿಸಿದ್ದ ಜೈಸ್ವಾಲ್, ಇದೀಗ ಸೆಮಿಫೈನಲ್ನ ಮೊದಲ ಇನಿಂಗ್ಸ್ನಲ್ಲಿ 100 ರನ್ ಬಾರಿಸಿದ್ದರು. ಅಲ್ಲದೆ 2ನೇ ಇನಿಂಗ್ಸ್ನಲ್ಲಿ 115 ರನ್ಗಳೊಂದಿಗೆ ಬ್ಯಾಟಿಂಗ್ ಮುಂದುವರೆಸಿದ್ದಾರೆ. ವಿಶೇಷ ಎಂದರೆ ಇದು ಕಳೆದ ನಾಲ್ಕು ಇನ್ನಿಂಗ್ಸ್‌ಗಳಲ್ಲಿ ಜೈಸ್ವಾಲ್ ಅವರ ಮೂರನೇ ಶತಕವಾಗಿದೆ. ಇನ್ನು ಜೈಸ್ವಾಲ್ಗೆ ಉತ್ತಮ ಸಾಥ್ ನೀಡಿದ ಅರ್ಮಾನ್ ಜಾಫರ್ ಕೂಡ ಶತಕ ಬಾರಿಸಿ ಮಿಂಚಿದರು.
ಈ ಪಂದ್ಯದಲ್ಲಿ 54ನೇ ಎಸೆತದಲ್ಲಿ ಖಾತೆ ತೆರೆದಿದ್ದ ಯಶಸ್ವಿ ಜೈಸ್ವಾಲ್ ಮುಂದಿನ 187 ಎಸೆತಗಳಲ್ಲಿ ಶತಕ ಪೂರೈಸಿ ಬ್ಯಾಟ್ ಮೇಲೆಕ್ಕೆತ್ತಿದರು. ಈ ಮೂಲಕ ಟೆಸ್ಟ್ ಕ್ರಿಕೆಟ್ನಲ್ಲಿ ರಕ್ಷಣಾತ್ಮಕವಾಗಿ ಹೇಗೆ ಆಡಬೇಕೆಂದು ಯುವ ಆಟಗಾರ ತೋರಿಸಿಕೊಟ್ಟರು. ಇದೀಗ ಅರ್ಮಾನ್ ಜಾಫರ್ ಹಾಗೂ ಯಶಸ್ವಿ ಜೈಸ್ವಾಲ್ ಅವರ ಶತಕದ ನೆರವಿನಿಂದ ಮುಂಬೈ ತಂಡವು ಸುಸ್ಥಿತಿಯಲ್ಲಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಉತ್ತರ ಪ್ರದೇಶ ತಂಡದ ಲೆಕ್ಕಾಚಾರಗಳನ್ನು ತಲೆಕೆಳಗಾಗುವಂತೆ ಬ್ಯಾಟಿಂಗ್ ಮಾಡಿದ ಮುಂಬೈ ತಂಡವು ಯಶಸ್ವಿ ಜೈಸ್ವಾಲ್ ಅವರ ಶತಕದ ನೆರವಿನಿಂದ ಮೊದಲ ಇನಿಂಗ್ಸ್ನಲ್ಲಿ 393 ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಉತ್ತರ ಪ್ರದೇಶ ತಂಡವು ಕೇವಲ 180 ರನ್ಗಳಿಗೆ ಆಲೌಟ್ ಆಗಿತ್ತು. ಆ ಬಳಿಕ ಮತ್ತೆ 2ನೇ ಇನಿಂಗ್ಸ್ ಆರಂಭಿಸಿದ ಮುಂಬೈ ತಂಡವು 4ನೇ ದಿನದಾಟದಲ್ಲಿ 1 ವಿಕೆಟ್ ನಷ್ಟಕ್ಕೆ 296 ರನ್ ಗಳಿಸಿದೆ. ಅದರಂತೆ ಮೊದಲ ಇನಿಂಗ್ಸ್ ಮುನ್ನಡೆಯೊಂದಿಗೆ 509 ರನ್ ಕಲೆಹಾಕಿದೆ. ಸದ್ಯ ಅರ್ಮಾನ್ ಜಾಫರ್ ಹಾಗೂ ಯಶಸ್ವಿ ಜೈಸ್ವಾಲ್ ಕ್ರೀಸ್ನಲ್ಲಿದ್ದು, 4ನೇ ದಿನದಾಟದ ಅಂತ್ಯಕ್ಕೆ ಮುಂಬೈ ತಂಡವು ಡಿಕ್ಲೇರ್ ಘೋಷಿಸುವ ಸಾಧ್ಯತೆಯಿದೆ.
ಕ್ರಿಕೆಟ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.