Yashasvi Jaiswal: 53 ಎಸೆತಗಳಲ್ಲಿ ಒಂದೇ ಒಂದು ರನ್​ಗಳಿಸಿಲ್ಲ, ಬಳಿಕ ಭರ್ಜರಿ ಸೆಂಚುರಿ ಸಿಡಿಸಿದ ಜೈಸ್ವಾಲ್

| Updated By: ಝಾಹಿರ್ ಯೂಸುಫ್

Updated on: Jun 17, 2022 | 2:15 PM

Ranji Trophy 2021-22: ಈ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಉತ್ತರ ಪ್ರದೇಶ ತಂಡದ ಲೆಕ್ಕಾಚಾರಗಳನ್ನು ತಲೆಕೆಳಗಾಗುವಂತೆ ಬ್ಯಾಟಿಂಗ್ ಮಾಡಿದ ಮುಂಬೈ ತಂಡವು ಯಶಸ್ವಿ ಜೈಸ್ವಾಲ್ ಅವರ ಶತಕದ ನೆರವಿನಿಂದ ಮೊದಲ ಇನಿಂಗ್ಸ್​ನಲ್ಲಿ 393 ರನ್​ ಕಲೆಹಾಕಿತು.

Yashasvi Jaiswal: 53 ಎಸೆತಗಳಲ್ಲಿ ಒಂದೇ ಒಂದು ರನ್​ಗಳಿಸಿಲ್ಲ, ಬಳಿಕ ಭರ್ಜರಿ ಸೆಂಚುರಿ ಸಿಡಿಸಿದ ಜೈಸ್ವಾಲ್
Yashasvi Jaiswal
Follow us on

ಬೆಂಗಳೂರಿನಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿಯ 2ನೇ ಸೆಮಿಫೈನಲ್​ನಲ್ಲಿ ಮುಂಬೈ ಹಾಗೂ ಉತ್ತರ ಪ್ರದೇಶ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದ 2ನೇ ಇನಿಂಗ್ಸ್​ನಲ್ಲಿ ಮುಂಬೈ ತಂಡದ ಯುವ ಬ್ಯಾಟ್ಸ್​ಮನ್ ಯಶಸ್ವಿ ಜೈಸ್ವಾಲ್ (Yashasvi Jaiswal) ಮೊದಲ ರನ್​ಗಳಿಸಲು ಬರೋಬ್ಬರಿ 53 ಎಸೆತಗಳನ್ನು ಎದುರಿಸಿ ಸುದ್ದಿಯಾಗಿದ್ದರು. ಆದರೆ ಪಂದ್ಯದ ನಾಲ್ಕನೇ ದಿನ ಜೈಸ್ವಾಲ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಮೂಲಕ ಸೆಮಿಫೈನಲ್‌ನಲ್ಲಿ ಎರಡೂ ಇನ್ನಿಂಗ್ಸ್‌ಗಳಲ್ಲಿ ಶತಕ ಸಿಡಿಸಿದ ವಿಶೇಷ ಸಾಧನೆ ಮಾಡಿದ್ದಾರೆ 20 ರ ಹರೆಯದ ಯಶಸ್ವಿ ಜೈಸ್ವಾಲ್.

ಇದಕ್ಕೂ ಮುನ್ನ ರಣಜಿ ಟ್ರೋಫಿಯ ಕ್ವಾರ್ಟರ್ ಫೈನಲ್‌ನಲ್ಲಿ ಉತ್ತರಾಖಂಡ ವಿರುದ್ಧ 103 ರನ್ ಗಳಿಸಿದ್ದ ಜೈಸ್ವಾಲ್, ಇದೀಗ ಸೆಮಿಫೈನಲ್​ನ ಮೊದಲ ಇನಿಂಗ್ಸ್​ನಲ್ಲಿ 100 ರನ್ ಬಾರಿಸಿದ್ದರು. ಅಲ್ಲದೆ 2ನೇ ಇನಿಂಗ್ಸ್​ನಲ್ಲಿ 115 ರನ್​ಗಳೊಂದಿಗೆ ಬ್ಯಾಟಿಂಗ್ ಮುಂದುವರೆಸಿದ್ದಾರೆ. ವಿಶೇಷ ಎಂದರೆ ಇದು ಕಳೆದ ನಾಲ್ಕು ಇನ್ನಿಂಗ್ಸ್‌ಗಳಲ್ಲಿ ಜೈಸ್ವಾಲ್ ಅವರ ಮೂರನೇ ಶತಕವಾಗಿದೆ. ಇನ್ನು ಜೈಸ್ವಾಲ್​ಗೆ ಉತ್ತಮ ಸಾಥ್ ನೀಡಿದ ಅರ್ಮಾನ್ ಜಾಫರ್ ಕೂಡ ಶತಕ ಬಾರಿಸಿ ಮಿಂಚಿದರು.

ಈ ಪಂದ್ಯದಲ್ಲಿ 54ನೇ ಎಸೆತದಲ್ಲಿ ಖಾತೆ ತೆರೆದಿದ್ದ ಯಶಸ್ವಿ ಜೈಸ್ವಾಲ್ ಮುಂದಿನ 187 ಎಸೆತಗಳಲ್ಲಿ ಶತಕ ಪೂರೈಸಿ ಬ್ಯಾಟ್ ಮೇಲೆಕ್ಕೆತ್ತಿದರು. ಈ ಮೂಲಕ ಟೆಸ್ಟ್​ ಕ್ರಿಕೆಟ್​ನಲ್ಲಿ ರಕ್ಷಣಾತ್ಮಕವಾಗಿ ಹೇಗೆ ಆಡಬೇಕೆಂದು ಯುವ ಆಟಗಾರ ತೋರಿಸಿಕೊಟ್ಟರು. ಇದೀಗ ಅರ್ಮಾನ್ ಜಾಫರ್ ಹಾಗೂ ಯಶಸ್ವಿ ಜೈಸ್ವಾಲ್ ಅವರ ಶತಕದ ನೆರವಿನಿಂದ ಮುಂಬೈ ತಂಡವು ಸುಸ್ಥಿತಿಯಲ್ಲಿದೆ.

ಇದನ್ನೂ ಓದಿ
On This Day: ಏಕದಿನ ವಿಶ್ವಕಪ್​: ಕೇವಲ 45 ರನ್​ಗೆ ಆಲೌಟ್..!
Heinrich Klaasen: ಬಡವರ ಧೋನಿ, RCB ಆಟಗಾರ…ಯಾರು ಈ ಹೆನ್ರಿಕ್ ಕ್ಲಾಸೆನ್..?
Hardik Pandya: ದಿನೇಶ್ ಕಾರ್ತಿಕ್ ವಿರುದ್ದ ಸೇಡು ತೀರಿಸಿಕೊಂಡ್ರಾ ಹಾರ್ದಿಕ್ ಪಾಂಡ್ಯ?
Dinesh Karthik: ಟೀಮ್ ಇಂಡಿಯಾ ಪರ ಯಾರೂ ಮಾಡದ ದಾಖಲೆ ಬರೆದ ದಿನೇಶ್ ಕಾರ್ತಿಕ್

ಈ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಉತ್ತರ ಪ್ರದೇಶ ತಂಡದ ಲೆಕ್ಕಾಚಾರಗಳನ್ನು ತಲೆಕೆಳಗಾಗುವಂತೆ ಬ್ಯಾಟಿಂಗ್ ಮಾಡಿದ ಮುಂಬೈ ತಂಡವು ಯಶಸ್ವಿ ಜೈಸ್ವಾಲ್ ಅವರ ಶತಕದ ನೆರವಿನಿಂದ ಮೊದಲ ಇನಿಂಗ್ಸ್​ನಲ್ಲಿ 393 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಉತ್ತರ ಪ್ರದೇಶ ತಂಡವು ಕೇವಲ 180 ರನ್​ಗಳಿಗೆ ಆಲೌಟ್ ಆಗಿತ್ತು. ಆ ಬಳಿಕ ಮತ್ತೆ 2ನೇ ಇನಿಂಗ್ಸ್ ಆರಂಭಿಸಿದ ಮುಂಬೈ ತಂಡವು 4ನೇ ದಿನದಾಟದಲ್ಲಿ 1 ವಿಕೆಟ್ ನಷ್ಟಕ್ಕೆ 296 ರನ್​ ಗಳಿಸಿದೆ. ಅದರಂತೆ ಮೊದಲ ಇನಿಂಗ್ಸ್ ಮುನ್ನಡೆಯೊಂದಿಗೆ 509 ರನ್​ ಕಲೆಹಾಕಿದೆ. ಸದ್ಯ ಅರ್ಮಾನ್ ಜಾಫರ್ ಹಾಗೂ ಯಶಸ್ವಿ ಜೈಸ್ವಾಲ್ ಕ್ರೀಸ್​ನಲ್ಲಿದ್ದು, 4ನೇ ದಿನದಾಟದ ಅಂತ್ಯಕ್ಕೆ ಮುಂಬೈ ತಂಡವು ಡಿಕ್ಲೇರ್ ಘೋಷಿಸುವ ಸಾಧ್ಯತೆಯಿದೆ.

 

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

 

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.