Ranji Trophy 2022: ರಣಜಿ ಟ್ರೋಫಿಯನ್ನು ಮುಂದೂಡಲು ನಿರ್ಧಾರ: ಐಪಿಎಲ್​ಗೂ ಕಂಟಕ

Ranji Trophy 2022: ಭಾರತದಲ್ಲಿ ಕೊರೋನಾ ಓಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಗಳು ರಾತ್ರಿ ಕರ್ಫ್ಯೂ, ನಿರ್ಬಂಧಗಳು ಮತ್ತು ಕಟ್ಟುನಿಟ್ಟಾದ ಕೋವಿಡ್ ನಿಯಮಗಳನ್ನು ಜಾರಿಗೊಳಿಸಲು ಮುಂದಾಗುತ್ತಿದ್ದಾರೆ.

Ranji Trophy 2022: ರಣಜಿ ಟ್ರೋಫಿಯನ್ನು ಮುಂದೂಡಲು ನಿರ್ಧಾರ: ಐಪಿಎಲ್​ಗೂ ಕಂಟಕ
Ranji Trophy 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 04, 2022 | 10:06 PM

ಜನವರಿ 13 ರಿಂದ ಶುರುವಾಗಬೇಕಿದ್ದ ರಣಜಿ ಟ್ರೋಫಿಯನ್ನು ಅನಿರ್ದಿಷ್ಟವಾಗಿ ಮುಂದೂಡಲಾಗಿದೆ ಎಂದು ವರದಿಯಾಗಿದೆ. ದೇಶದಲ್ಲಿ ಕೊರೋನಾಂತಕ ಎದುರಾದ ಹಿನ್ನೆಲೆಯಲ್ಲಿ ಟೂರ್ನಿಯನ್ನು ಮುಂದೂಡಲು ಬಿಸಿಸಿಐ ನಿರ್ಧರಿಸಿದೆ. ಹೀಗಾಗಿ ಈ ಹಿಂದಿನ ವೇಳಾಪಟ್ಟಿಯಂತೆ ಟೂರ್ನಿ ಆರಂಭವಾಗುವುದಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ. ರಣಜಿ ಟ್ರೋಫಿ ಅಲ್ಲದೆ ಇತರ ದೇಶೀಯ ಪಂದ್ಯಾವಳಿಗಳಾದ ಕರ್ನಲ್ ಸಿಕೆ ನಾಯ್ಡು ಟೂರ್ನಿ ಮತ್ತು ಹಿರಿಯ ಮಹಿಳಾ ಟಿ20 ಲೀಗ್ ಅನ್ನು ಸಹ ಮುಂದೂಡಲಾಗಿದೆ. ಹಾಗೆಯೇ ಪ್ರಸ್ತುತ ನಡೆಯುತ್ತಿರುವ U-19 ಪ್ರಿ-ಕ್ವಾರ್ಟರ್ ಫೈನಲ್ ಪಂದ್ಯದ ಬಳಿಕ ಉಳಿದ ಪಂದ್ಯಗಳನ್ನು ಕೂಡ ಮುಂದೂಡಲಾಗುತ್ತಿದೆ.

ಆಟಗಾರರು, ಸಹಾಯಕ ಸಿಬ್ಬಂದಿ, ಪಂದ್ಯಗಳ ಅಧಿಕಾರಿಗಳು ಮತ್ತು ಭಾಗವಹಿಸುವವರ ಸುರಕ್ಷತೆ ಬಗ್ಗೆ ರಾಜಿ ಮಾಡಿಕೊಳ್ಳಲು ಬಿಸಿಸಿಐ ಬಯಸುವುದಿಲ್ಲ. ಆದ್ದರಿಂದ ಮುಂದಿನ ಸೂಚನೆಯವರೆಗೆ ಮೂರು ಪಂದ್ಯಾವಳಿಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲು ನಿರ್ಧರಿಸಲಾಗಿದೆ. ಬಿಸಿಸಿಐ ಪರಿಸ್ಥಿತಿಯನ್ನು ಗಮನಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಹೇಳಿದ್ದಾರೆ. ಇತ್ತ ರಣಜಿ ಟೂರ್ನಿ ಅನಿರ್ದಿಷ್ಟಾವಧಿಗೆ ಮುಂದೂಡಿರುವ ಬೆನ್ನಲ್ಲೇ ಐಪಿಎಲ್​ ಟೂರ್ನಿ ಭಾರತದಲ್ಲಿ ನಡೆಯಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಏಕೆಂದರೆ ಬಿಸಿಸಿಐ ಈಗಾಗಲೇ ಇಂಡಿಯನ್ ಪ್ರೀಮಿಯರ್​ ಲೀಗ್​ಗೆ ಪರ್ಯಾಯ ವ್ಯವಸ್ಥೆ ಮಾಡುವ ಬಗ್ಗೆ ಕೂಡ ಚರ್ಚಿಸಿದೆ. ಇದರ ಬೆನ್ನಲ್ಲೇ ದೇಶೀಯ ಟೂರ್ನಿಗಳನ್ನು ಮುಂದೂಡಿರುವುದು ಐಪಿಎಲ್​ ಮೇಲೆ ಮತ್ತೆ ಕರಿಛಾಯೆ ಆವರಿಸುವ ಸೂಚನೆ ನೀಡಿದೆ.  ಕೆಲ ದಿನಗಳ ಹಿಂದೆಯಷ್ಟೇ ಕೊಲ್ಕತ್ತಾದಲ್ಲಿ ನಡೆದ ಬಿಸಿಸಿಐ ಸಭೆಯಲ್ಲಿ ಐಪಿಎಲ್ ಸಂದರ್ಭದಲ್ಲಿ ಕೊರೋನಾಂತಕ ಎದುರಾದರೆ ಮುಂದಿನ ವ್ಯವಸ್ಥೆಯ ಬಗ್ಗೆ ಚರ್ಚಿಸಲಾಗಿತ್ತು. ಈ ವೇಳೆ ಟೂರ್ನಿಯನ್ನು ವಿದೇಶಕ್ಕೆ ಸ್ಥಳಾಂತರಿಸಬಾರದೆಂಬ ಅಭಿಪ್ರಾಯಗಳು ಕೇಳಿ ಬಂದಿದ್ದವು.

ಹೀಗಾಗಿ ಬಿಸಿಸಿಐ ಅತೀ ಹೆಚ್ಚು ಕ್ರಿಕೆಟ್ ಸ್ಟೇಡಿಯಂ ಇರುವ ರಾಜದ್ಯದಲ್ಲಿ ಟೂರ್ನಿ ಆಯೋಜಿಸಲು ಪ್ಲ್ಯಾನ್ ರೂಪಿಸಿದೆ. ಅದರಂತೆ ಬಿಸಿಸಿಐ ಐಪಿಎಲ್​ ಟೂರ್ನಿಗಾಗಿ ಪರ್ಯಾಯ ವ್ಯವಸ್ಥೆ ಮಾಡಲು ಮಹಾರಾಷ್ಟ್ರ ಹಾಗೂ ಗುಜರಾತ್ ರಾಜ್ಯಗಳನ್ನು ಆಯ್ಕೆ ಮಾಡಿಕೊಂಡಿದೆ ಎಂದು ವರದಿಯಾಗಿತ್ತು. ಏಕೆಂದರೆ ಮಹಾರಾಷ್ಟ್ರದಲ್ಲಿ ವಾಂಖೆಡೆ ಹಾಗೂ ಪುಣೆ ಕ್ರಿಕೆಟ್ ಸ್ಟೇಡಿಯಂ ಇದ್ದು,  ಗುಜರಾತ್ ರಾಜ್ಯದಲ್ಲಿ ಅಹಮದಾಬಾದ್ ಹಾಗೂ ಬರೋಡಾ ಸ್ಟೇಡಿಯಂ ಗಳಿವೆ. ಈ ರಾಜ್ಯಗಳ ಎರಡು ಸ್ಟೇಡಿಯಂನಲ್ಲಿ ಐಪಿಎಲ್ ಟೂರ್ನಿಯನ್ನು ಆಯೋಜಿಸುವುದರಿಂದ ಪ್ರಯಾಣ ಸಮಸ್ಯೆಯನ್ನು ದೂರ ಮಾಡಬಹುದು. ಹಾಗೆಯೇ ಬಯೋ ಬಬಲ್ ವ್ಯವಸ್ಥೆಯನ್ನು ಸುರಕ್ಷಾವಾಗಿಡಬಹುದು ಎಂಬ ಅಭಿಪ್ರಾಯಕ್ಕೆ ಬರಲಾಗಿತ್ತು.

ಇದೀಗ ರಣಜಿ ಟೂರ್ನಿಗಳನ್ನು ಅನಿರ್ದಿಷ್ಠವಧಿಗೆ ಮುಂದೂಡಲಾಗಿದೆ. ಅತ್ತ ದಿನ ಕಳೆದಂತೆ ದೇಶದಲ್ಲಿ ಕೊರೋನಾ ಒಮಿಕ್ರಾನ್ ಭೀತಿ ಹೆಚ್ಚಾಗುತ್ತಿದ್ದು, ಹೀಗಾಗಿ ಐಪಿಎಲ್ 2022 ಕ್ಕೆ ಈ ಆತಂಕ ಎದುರಾಗುವ ಸಾಧ್ಯತೆಯಿದೆ. ಸದ್ಯ ರಣಜಿ ಟೂರ್ನಿಯನ್ನು ಮುಂದೂಡುವ ನಿರ್ಧಾರಕ್ಕೆ ಬಂದಿರುವ ಬಿಸಿಸಿಐ ಇದೀಗ ಐಪಿಎಲ್ ಮೆಗಾ ಹರಾಜು ಹಾಗೂ ಟೂರ್ನಿಯ ರೂಪುರೇಷೆಗಳ ಬಗ್ಗೆ ಚರ್ಚಿಸಲು ಮತ್ತೊಮ್ಮೆ ಸಭೆ ನಡೆಸಲಿದೆ ಎಂದು ತಿಳಿದು ಬಂದಿದೆ.

ಭಾರತದಲ್ಲಿ ಕೊರೋನಾ ಓಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಗಳು ರಾತ್ರಿ ಕರ್ಫ್ಯೂ, ನಿರ್ಬಂಧಗಳು ಮತ್ತು ಕಟ್ಟುನಿಟ್ಟಾದ ಕೋವಿಡ್ ನಿಯಮಗಳನ್ನು ಜಾರಿಗೊಳಿಸಲು ಮುಂದಾಗುತ್ತಿದ್ದಾರೆ. ದೆಹಲಿಯಲ್ಲಿ ಮಂಗಳವಾರ 5,481 ಹೊಸ ಕೋವಿಡ್ -19 ಪ್ರಕರಣಗಳನ್ನು ವರದಿತಾಗಿದ್ದು, ಮಹಾರಾಷ್ಟ್ರದಲ್ಲಿ ಸೋಮವಾರ 12,160 ಹೊಸ ಕೊರೋನವೈರಸ್ ಪ್ರಕರಣಗಳನ್ನು ಕಂಡು ಬಂದಿವೆ. ಅಲ್ಲದೆ ಮಹಾರಾಷ್ಟ್ರದ ಸಕ್ರಿಯ ಪ್ರಕರಣಗಳ ಸಂಖ್ಯೆ 50,000 ದಾಟಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.

ಇದನ್ನೂ ಓದಿ:  Virat Kohli: ವಿರಾಟ್ ಕೊಹ್ಲಿಯ ಗಾಯ, ರಾಹುಲ್ ದ್ರಾವಿಡ್ ಹೇಳಿಕೆ ಮತ್ತು 100ನೇ ಟೆಸ್ಟ್​..!

ಇದನ್ನೂ ಓದಿ:  Ravindra Jadeja: ಸ್ಟಾರ್ ಆಲ್​ರೌಂಡರ್ ಜಡೇಜಾರನ್ನು ಆಯ್ಕೆ ಮಾಡದಿರಲು ಇದುವೇ ಕಾರಣ..!

ಇದನ್ನೂ ಓದಿ: Rohit Sharma: ಫಿಟ್​ನೆಸ್​ ಅಥವಾ ಇನ್ನೇನಾದರೂ? ರೋಹಿತ್ ಶರ್ಮಾ ಕೈ ಬಿಡಲು ಕಾರಣವೇನು?

ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!

(Ranji Trophy 2022 Indefinitely Postponed Due to Rise in Covid-19 Cases)

ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’