AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy: ರಣಜಿಯಲ್ಲಿ ಬಾಲಿವುಡ್ ನಿರ್ಮಾಪಕನ ಮಗನ ಆರ್ಭಟ; ಸತತ 2ನೇ ದ್ವಿಶತಕ

Agni Chopra's Double Century: ರಣಜಿ ಟ್ರೋಫಿಯಲ್ಲಿ ಮಿಜೋರಾಂ ಪರ ಆಡುತ್ತಿರುವ ಅಗ್ನಿ ಚೋಪ್ರಾ ಅವರು ಸತತ ಎರಡನೇ ದ್ವಿಶತಕ ಸಿಡಿಸಿ ಮಿಂಚಿದ್ದಾರೆ. ಮಣಿಪುರ ವಿರುದ್ಧದ ಪಂದ್ಯದಲ್ಲಿ 218 ರನ್ ಗಳಿಸಿದ ಅವರು, ಈ ಹಿಂದೆ ಅರುಣಾಚಲ ಪ್ರದೇಶ ವಿರುದ್ಧವೂ ಅದ್ಭುತ ಪ್ರದರ್ಶನ ನೀಡಿದ್ದರು. ಬಾಲಿವುಡ್ ನಿರ್ಮಾಪಕ ವಿಧು ವಿನೋದ್ ಚೋಪ್ರಾ ಅವರ ಪುತ್ರನಾಗಿರುವ ಅಗ್ನಿ, ತಮ್ಮ ಕ್ರಿಕೆಟ್ ಪ್ರತಿಭೆಯಿಂದ ಎಲ್ಲರ ಗಮನ ಸೆಳೆದಿದ್ದಾರೆ.

Ranji Trophy: ರಣಜಿಯಲ್ಲಿ ಬಾಲಿವುಡ್ ನಿರ್ಮಾಪಕನ ಮಗನ ಆರ್ಭಟ; ಸತತ 2ನೇ ದ್ವಿಶತಕ
ಅಗ್ನಿ ಚೋಪ್ರಾ
ಪೃಥ್ವಿಶಂಕರ
|

Updated on: Oct 27, 2024 | 4:58 PM

Share

ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿಯಲ್ಲಿ ಮಿಜೋರಾಂ ಪರ ಆಡುತ್ತಿರುವ ಯುವ ಬ್ಯಾಟ್ಸ್‌ಮನ್ ಅಗ್ನಿ ಚೋಪ್ರಾ ಸತತ ಎರಡನೇ ದ್ವಿಶತಕ ಸಿಡಿಸಿ ಮಿಂಚಿದ್ದಾರೆ. ನಿನ್ನೆಯಿಂದ ಅಂದರೆ ಅಕ್ಟೋಬರ್ 26 ರಿಂದ ಆರಂಭವಾಗಿರುವ ಮಿಜೋರಾಂ ಹಾಗೂ ಮಣಿಪುರ ನಡುವಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಮಿಜೋರಾಂ ತಂಡ 536 ರನ್​ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ. ತಂಡದ ಪರ 218 ರನ್​ಗಳ ದ್ವಿಶತಕದ ಇನ್ನಿಂಗ್ಸ್ ಆಡಿದ ಅಗ್ನಿ ಚೋಪ್ರಾ ಪಂದ್ಯಾವಳಿಯಲ್ಲಿ ಸತತ ಎರಡನೇ ದ್ವಿಶತಕ ಪೂರೈಸಿದರು. ತಮ್ಮ ಇನ್ನಿಂಗ್ಸ್​ನಲ್ಲಿ 269 ಎಸೆತಗಳನ್ನು ಎದುರಿಸಿದ ಅಗ್ನಿ, 29 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ218 ರನ್ ಬಾರಿಸಿದರು.

ಸತತ 2ನೇ ದ್ವಿಶತಕ

ಈ ವರ್ಷದ ಆರಂಭದಲ್ಲಿ ಪ್ರಥಮ ದರ್ಜೆಗೆ ಪಾದಾರ್ಪಣೆ ಮಾಡಿದ ಅಗ್ನಿ ಚೋಪ್ರಾ, ಆರಂಭದಲ್ಲೇ ತಮ್ಮ ಛಾಪು ಮೂಡಿಸಿದ್ದಾರೆ. ಈ ಪಂದ್ಯಕ್ಕೂ ಮುನ್ನ ನಡೆದ ಅರುಣಾಚಲ ಪ್ರದೇಶ ವಿರುದ್ಧದ ಪಂದ್ಯದಲ್ಲೂ ಅಗ್ನಿ ಚೋಪ್ರಾ ಕೂಡ ದಿಟ್ಟ ಪ್ರದರ್ಶನ ತೋರಿದ್ದರು. ಆ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ 110 ರನ್​ಗಳ ಇನ್ನಿಂಗ್ಸ್ ಆಡಿದ್ದ ಅಗ್ನಿ ಚೋಪ್ರಾ, ಎರಡನೇ ಇನ್ನಿಂಗ್ಸ್‌ನಲ್ಲಿ 238 ರನ್ ಬಾರಿಸಿ ಅಜೇಯರಾಗಿ ಉಳಿದಿದ್ದರು. ಇದಲ್ಲದೆ, ಅವರು ಈ ಆವೃತ್ತಿಯ ರಣಜಿ ಟ್ರೋಫಿ ಆರಂಭಿಕ ಪಂದ್ಯದಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದ್ದರು. ಅಂದರೆ ಅಗ್ನಿ ಚೋಪ್ರಾ ಈ ಬಾರಿಯ ಪ್ರತಿ ಪಂದ್ಯದಲ್ಲೂ ಬಿಗ್ ಇನ್ನಿಂಗ್ಸ್ ಆಡಿದ್ದು, ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಬಾಲಿವುಡ್‌ ಹಿರಿಯ ನಿರ್ಮಾಪಕರ ಮಗ

ಅಗ್ನಿ ಚೋಪ್ರಾ ಬಾಲಿವುಡ್‌ನ ಹಿರಿಯ ನಿರ್ಮಾಪಕ ಮತ್ತು ನಿರ್ದೇಶಕ ವಿಧು ವಿನೋದ್ ಚೋಪ್ರಾ ಅವರ ಪುತ್ರ. ವಿಧು ವಿನೋದ್ ಚೋಪ್ರಾ ಬಾಲಿವುಡ್‌ನಲ್ಲಿ ಅತ್ಯಂತ ಹಿರಿಯ ನಿರ್ಮಾಪಕರಲ್ಲಿ ಒಬ್ಬರು. ಅವರು 3 ಈಡಿಯಟ್ಸ್‌ನಂತಹ ಬ್ಲಾಕ್​ಬಾಸ್ಟರ್ ಚಿತ್ರವನ್ನು ನಿರ್ಮಿಸಿದ್ದರು. ಇದಲ್ಲದೆ 2023 ರಲ್ಲಿ ತೆರೆಕಂಡು ಸೂಪರ್ ಹಿಟ್ ಆಗಿದ್ದ 12th ಫೇಲ್ ಚಿತ್ರವನ್ನು ನಿರ್ದೇಶಿಸಿ ನಿರ್ಮಾಣ ಕೂಡ ಮಾಡಿದ್ದರು. ಇದೀಗ ಅವರ ಮಗ ಕ್ರಿಕೆಟ್ ಲೋಕದಲ್ಲಿ ಹೆಸರು ಮಾಡಲು ಹೊರಟಿದ್ದಾರೆ. ಅಗ್ನಿ ಚೋಪ್ರಾ ಕೇವಲ 9 ಪ್ರಥಮ ದರ್ಜೆ ಪಂದ್ಯಗಳಲ್ಲಿ 8 ಬಾರಿ 100+ ರನ್ ಗಳಿಸಿದ್ದಾರೆ. ಇದರ ಹೊರತಾಗಿ ಅವರ ಹೆಸರಿನಲ್ಲಿ 4 ಅರ್ಧ ಶತಕಗಳಿವೆ. ಅವರು ಲಿಸ್ಟ್ ಎ ಮತ್ತು ಟಿ20 ಕ್ರಿಕೆಟ್‌ನಲ್ಲಿ 3 ಅರ್ಧ ಶತಕಗಳನ್ನು ಸಹ ಸಿಡಿಸಿದ್ದಾರೆ. ಅಗ್ನಿ ಚೋಪ್ರಾ ಮುಂಬೈ ಪರ ಜೂನಿಯರ್ ಕ್ರಿಕೆಟ್ ಕೂಡ ಆಡಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?